For Quick Alerts
ALLOW NOTIFICATIONS  
For Daily Alerts

ಹಲಸಿನ ಹಣ್ಣಿನಲ್ಲಿರುವ ಟಾಪ್10 ಆರೋಗ್ಯಕರ ಗುಣಗಳು

|

ಕೆಲವೊಂದು ಹಣ್ಣುಗಳು ವರ್ಷಪೂರ್ತಿ ಸಿಗುವುದಿಲ್ಲ, ಸೀಸನ್ ಸಮಯದಲ್ಲಿ ಮಾತ್ರ ದೊರೆಯುತ್ತದೆ, ಅಂತಹ ಸೀಸನ್ ಹಣ್ಣಾದ ಹಲಸಿನ ಹಣ್ಣು ಏಪ್ರಿಲ್ ತಿಂಗಳಿನಿಂದ ಜುಲೈ ಅಥವಾ ಆಗಸ್ಟ್ ತಿಂಗಳವರೆಗೆ ಸಿಗುತ್ತದೆ. ಲೇಟಾಗಿ ಕಾಯಿ ಬಿಟ್ಟಿದ್ದ ಮರದಲ್ಲಿ ಮಾತ್ರ ಹಲಸಿನ ಹಣ್ಣುಗಳು ಸೆಪ್ಟಂಬರ್ ತಿಂಗಳಿನವರೆಗೆ ಇರುತ್ತದೆ, ನಂತರ ತಿನ್ನಬೇಕೆಂದರೆ ಮುಂದಿನ ವರ್ಷ ಏಪ್ರಿಲ್ ವರೆಗೂ ಕಾಯಬೇಕು.

ಈ ಸಿಹಿ ಹಣ್ಣನ್ನು ಫೋಷಕಾಂಶಗಳ ಆಗಾರ ಎಂದೇ ಹೇಳಬಹುದು. ಇದರಲ್ಲಿ ವಿಟಮಿನ್ ಸಿ, ನಾರಿನಂಶ, ವಿಟಮಿನ್ ಎ, ಪೊಟಾಷ್ಯಿಯಂ, ಮ್ಯಾಗ್ನಿಷ್ಯಿಯಂ, Phytonutrients ಪೋಷಕಾಂಶಗಳು ಹೆಚ್ಚಾಗಿ ಕಂಡು ಬರುತ್ತದೆ.

ಹಲಸಿ ಹಣ್ಣನ್ನು ತಿಂದರೆ ಜ್ವರ ಬರುತ್ತದೆ, ಹೊಟ್ಟೆ ನೋವು ಬರುತ್ತದೆ ಎಂಬ ಭಯ ಅನೇಕರಲ್ಲಿದೆ. ಈ ಹಣ್ಣು ಜುಲೈ ತಿಂಗಳವರೆಗೆ ದೊರೆಯುತ್ತದೆ, ಆದರೆ ಮಳೆ ಸೀಸನ್ ನಲ್ಲಿ ಇದನ್ನು ತಿನ್ನಬಾರದು ಎಂದು ಹೇಳುತ್ತಾರೆ. ಹಾಗೇನಿಲ್ಲ, ಜ್ವರ ಬಂದಾಗ ಮಾತ್ರ ತಿನ್ನಬೇಡಿ ಅಷ್ಟೇ.

ಈ ಹಣ್ಣಿನಲ್ಲಿ ಈ ಕೆಳಗಿನ ಆರೋಗ್ಯಕರ ಗುಣಗಳಿವೆ:

1.ರೋಗನಿರೋದಕ ಶಕ್ತಿ ಹೆಚ್ಚು ಮಾಡುತ್ತದೆ

1.ರೋಗನಿರೋದಕ ಶಕ್ತಿ ಹೆಚ್ಚು ಮಾಡುತ್ತದೆ

ಹಲಸಿನ ಹಣ್ಣು ತಿಂದರೆ ಕಾಯಿಲೆ ಬರುತ್ತದೆ ಎಂದು ತಿನ್ನಲು ಭಯಪಡುವಾಗ ಇದನ್ನು ತಿಂದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಅಂದರೆ ಆಶ್ಚರ್ಯವಾಗುವುದು ಸಹಜ. ಹಲಸಿನ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಉತ್ತಮ ಪೋಷಕಾಂಶಗಳಿದ್ದು ಶೀತ, ಸೋಂಕು ಇವುಗಳನ್ನು ತಪ್ಪಿಸಲು ಸಹಕಾರಿಯಾಗಿದೆ. ಇದರಲ್ಲಿ antioxidant ಪ್ರಮಾಣ ಅಧಿಕವಾಗಿದೆ.

2. ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಿಸುತ್ತದೆ:

2. ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಿಸುತ್ತದೆ:

ದೇಹದಲ್ಲಿ ಖನಿಜಾಂಶಗಳ ಕೊರತೆ ಉಂಟಾದರೆ ದೇಹದಲ್ಲಿ ಸಕ್ಕರೆ ಪ್ರಮಾಣ ಅಧಿಕವಾಗುತ್ತದೆ. ಹಲಸಿನ ಹಣ್ಣಿನಲ್ಲಿ ಖನಿಜಾಂಶಗಳು ಅಧಿಕವಾಗಿ ಇರುವುದರಿಂದ ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ.

3. ಮೂಳೆ ಸವೆತವನ್ನು ತಡೆಗಟ್ಟುತ್ತದೆ

3. ಮೂಳೆ ಸವೆತವನ್ನು ತಡೆಗಟ್ಟುತ್ತದೆ

ಈ ಹಣ್ಣಿನಲ್ಲಿ ಅಧಿಕ ಮ್ಯಾಗ್ನಿಷಿಯಂ ಮತ್ತು ಕ್ಯಾಲ್ಸಿಯಂ ಅಂಶವಿರುವುದರಿಂದ ಮೂಳೆಗಳನ್ನು ಬಲಪಡಿಸಲು ಸಹಕಾರಿಯಾಗಿದೆ. ಮ್ಯಾಗ್ನಿಷಿಯಂ, ಕ್ಯಾಲ್ಸಿಯಂ, ಪೊಟಾಷ್ಯಿಯಂ ಅಧಿಕವಿರುವ ಆಹಾರ ತಿಂದರೆ ಮೂಳೆಗಳು ಗಟ್ಟಿಯಾಗುವುದು.

4. ಥೈರಾಯ್ಡ್ ಗ್ರಂಥಿಯನ್ನು ಆರೋಗ್ಯಕರವಾಗಿ ಇಡುತ್ತದೆ

4. ಥೈರಾಯ್ಡ್ ಗ್ರಂಥಿಯನ್ನು ಆರೋಗ್ಯಕರವಾಗಿ ಇಡುತ್ತದೆ

ಹಲಸಿನ ಹಣ್ಣಿನಲ್ಲಿರುವ ಖನಿಜಂಶಗಳು (micromineral) ಥೈರಾಯ್ಡ್ ಗ್ರಂಥಿಯ ಆರೋಗ್ಯವನ್ನು ಕಾಪಾಡುತ್ತದೆ. ದೇಹದಲ್ಲಿ ಹಾರ್ಮೋನ್ ಗಳ ಉತ್ಪತ್ತಿಯನ್ನು ಸರಿ ಪ್ರಮಾಣದಲ್ಲಿ ಇಡಲು ಥೈರಾಯ್ಡ್ ಗ್ರಂಥಿ ಮುಖ್ಯ ಪಾತ್ರವಹಿಸುತ್ತದೆ.

 5. ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ

5. ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ

ಒಂದು ಹಲಸಿನ ಹಣ್ಣಿನಲ್ಲಿ ಬಾಳೆಹಣ್ಣಿನಲ್ಲಿರುವಷ್ಟು ಪೊಟಾಷ್ಯಿಯಂ ಅಂಶವಿರುತ್ತದೆ. ಪೊಟಾಷ್ಯಿಯಂ ದೇಹದಲ್ಲಿ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವಲ್ಲಿ ಸಹಕಾರಿಯಾಗಿದೆ.

6. ಜೀರ್ಣಶಕ್ತಿ

6. ಜೀರ್ಣಶಕ್ತಿ

ಇದರಲ್ಲಿ ನಾರಿನಂಶವಿರುವುದರಿಂದ ಮಲಬದ್ಧತೆ ಸಮಸ್ಯೆ ಇರುವವರು ಇದನ್ನು ತಿನ್ನುವುದು ಒಳ್ಳೆಯದು.

7. ಇರುಳು ಕುರುಡುತನ ನಿವಾರಣೆಗೆ ಸಹಕಾರಿಯಾಗಿದೆ

7. ಇರುಳು ಕುರುಡುತನ ನಿವಾರಣೆಗೆ ಸಹಕಾರಿಯಾಗಿದೆ

ಇದರಲ್ಲಿ ಕ್ಯಾರೆಟ್ ನಲ್ಲಿರುವ ಕಾಲು ಭಾಗದಷ್ಟು ವಿಟಮಿನ್ ಎ ಅಂಶವಿರುವುದರಿಂದ ಹಣ್ಣಿನ ದೃಷ್ಟಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ವಿಟಮಿನ್ ಎ ಕೊರತೆ ಉಂಟಾದರೆ ಇರುಳು ಕುರುಡುತನ ಉಂಟಾಗುವುದು. 8.ಹೃದಯದ ಸ್ವಾಸ್ಥ್ಯ ಹೆಚ್ಚಿಸುತ್ತದೆ: ಇದರಲ್ಲಿ ವಿಟಮಿನ್ ಬಿ6 ಅಂಶವಿರುವುದರಿಂದ ರಕ್ತದಲ್ಲಿರುವ homocystein ಪ್ರಮಾಣ ಕಡಿಮೆ ಮಾಡಿ ಹೃದಯದ ಸ್ವಾಸ್ಥ್ಯ ಹೆಚ್ಚಿಸಲು ಸಹಕಾರಿಯಾಗಿದೆ.

 9. ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ

9. ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ

ಇದರಲ್ಲಿರುವ ವಿಟಮಿನ್ ಮತ್ತು ಖನಿಜಾಂಶಗಳು ದೇಹದಲ್ಲಿ ರಕ್ತ ಸರಾಗವಾಗಿ ಹರಿಯಲು ಸಹಕಾರಿಯಾಗಿದೆ. ಮೂಳೆಗಳನ್ನು ಬಲಪಡಿಸಿ ಶರೀರದಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆಯನ್ನು ತಡೆಗಟ್ಟುತ್ತದೆ.

10. ರಕ್ತ ಹೀನತೆಯನ್ನು ತಡೆಗಟ್ಟುತ್ತದೆ

10. ರಕ್ತ ಹೀನತೆಯನ್ನು ತಡೆಗಟ್ಟುತ್ತದೆ

ಇದರಲ್ಲಿ ಕಬ್ಬಿಣದಂಶ ಕೂಡ ಇರುವುದರಿಂದ ರಕ್ತ ಹೀನತೆ ಸಮಸ್ಯೆ ನಿವಾರಣೆಗೆ ಇದನ್ನು ತಿನ್ನುವುದು ಒಳ್ಳೆಯದು.

English summary

Nutritional Benefits Of Jackfruit | Tips For Health | ಹಲಸಿನ ಹಣ್ಣಿನಲ್ಲದೆ ಹಲವಾರು ಆರೋಗ್ಯವರ್ಧಕ ಗುಣಗಳು | ಆರೋಗ್ಯಕ್ಕಾಗಿ ಕೆಲ ಸಲಹೆಗಳು

Jackfruit is the seasonal fruit. Every street is filled with the aroma of this sweet fruit. The yellow coloured aromatic and tasty fruit is not just delicious, but healthy too. Jackfruit is a rich source of fiber, vitamins and proteins. Take a look at the nutritional benefits of jackfruit.
X
Desktop Bottom Promotion