For Quick Alerts
ALLOW NOTIFICATIONS  
For Daily Alerts

ಮಹಾ ಶಿವರಾತ್ರಿ ಆಚರಣೆಯ ಪ್ರಾಮುಖ್ಯತೆಗಳು

By Super
|

ಶಿವರಾತ್ರಿಗೆ ಹಿಂದೂ ಧರ್ಮದಲ್ಲಿ ಅದರದ್ದೇ ಆದ ಮಹತ್ವವಿದೆ. ಶಿವನು ಪಾರ್ವತಿ ದೇವಿಯನ್ನು ವಿವಾಹವಾದ ದಿನವಾಗಿ ಶಿವರಾತ್ರಿಯಂದು ಪರಿಗಣಿಸಲಾಗುತ್ತದೆ. ಕೈಲಾಸ ನಾಥನು ಈ ದಿನದಂದು ಭೂಮಿಗೆ ಆಗಮಿಸಿ ಸಕಲ ಇಷ್ಟಾರ್ಥಗಳನ್ನು ಪೂರೈಸುತ್ತಾನೆಂಬ ನಂಬಿಕೆ ಹಿಂದೂ ಭಕ್ತರಲ್ಲಿದೆ. ಶಿವರಾತ್ರಿಗೆ ಹೆಚ್ಚು ಪಾವಿತ್ರ್ಯತೆ ಪ್ರಾಮುಖ್ಯತೆ ಇರುವುದು ಅಂದು ಆಚರಿಸುವ ಉಪವಾಸದಲ್ಲಿ. ಶುಚಿರ್ಭೂತರಾಗಿ ಶಿವನನ್ನು ಧ್ಯಾನಿಸುತ್ತಾ ದಿನಪೂರ್ತಿ ಭಕ್ತರು ಆಹಾರ ನೀರು ಮುಟ್ಟದೆ ಉಪವಾಸ ಕೈಗೊಳ್ಳುತ್ತಾರೆ.

ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ: ಶಿವೈಕ್ಯಕ್ಕಾಗಿ ಶಿವರಾತ್ರಿ ಆಚರಣೆಗಳು

ಈ ಉಪವಾಸವು ಮಾನವನಲ್ಲಿ ರಜ ಮತ್ತು ತಾಮಸ ಗುಣಗಳನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ದೇಹಕ್ಕೆ ಆರೋಗ್ಯದೊಂದಿಗೆ ರಜ ತಾಮಸ ಗುಣಗಳನ್ನು ನಿಯಂತ್ರಣದಲ್ಲಿಡುವ ವಿಶೇಷ ಸಿದ್ಧಿ ಶಿವರಾತ್ರಿ ವೃತಾ ಆಚರಣೆಯಿಂದ ಲಭ್ಯ. ರಜ ಗುಣಗಳೆಂದರೆ ಸಿಟ್ಟು, ಅಸೂಯೆ, ಮುಂತಾದುವು ತಾಮಸ ಗುಣಗಳೆಂದರೆ ಅಂಧಕಾರ, ಅಜ್ಞಾನ, ಪ್ರತಿರೋಧ, ಸಾವು ಮತ್ತು ವಿನಾಶ.

ಶಿವರಾತ್ರಿಯ ಉಪವಾಸವು ಈ ಎರಡೂ ಕೆಟ್ಟ ಗುಣಗಳ ಮೇಲೆ ಹತೋಟಿಯನ್ನಿಡುವ ಶಕ್ತಿಯನ್ನು ನಮಲ್ಲಿ ಉತ್ಪಾದಿಸುತ್ತದೆ. ವೃತಾಚರಣೆ ಮಾಡುವಾಗ ಕೆಲವೊಂದು ಸಿದ್ಧಾಂತಗಳನ್ನು ಅನುಸರಿಸಬೇಕಾಗುತ್ತದೆ.

Stories Associated With Maha Shivratri

ಶಿವ ಅಂದ್ರೆ ಕಲ್ಯಾಣ ಎಂದು ಅರ್ಥ. ಲೋಕ ಕಲ್ಯಾಣಕ್ಕಾಗಿ ಮತ್ತು ಕುಟುಂಬದ ಕಲ್ಯಾಣಕ್ಕಾಗಿ ರಾತ್ರಿ ಇಡೀ ಆ ಪರಶಿವನ ಧ್ಯಾನ ಮಾಡುವುದು. ಇದು ಮಾಘ ಮಾಸದ ಬಹುಳ ಚತುರ್ದಶಿಯಂದು ಬರುವುದು. ಇದರ ಬಗ್ಗೆ ಒಂದು ಸಣ್ಣ ಕಥೆ ಇದೆ. ಶಿವಪುರಾಣದಲ್ಲಿ ಹೇಳಿರುವಂತೆ, ಒಮ್ಮೆ ಬ್ರಹ್ಮ ಮತ್ತು ವಿಷ್ಣು ಅವರುಗಳಲ್ಲಿ ಯಾರು ಶ್ರೇಷ್ಠರು ಎಂಬ ಬಗ್ಗೆ ಜಗಳವಾಯಿತು.

ಇವರಿಬ್ಬರ ಜಗಳದಿಂದ ಬೇಸತ್ತ ಇತರ ದೇವರುಗಳು, ಮಧ್ಯಸ್ಥಿಕೆ ವಹಿಸಲು ಶಿವನನ್ನು ಕೇಳಿಕೊಂಡರು. ಆಗ ಶಿವನು ಉದ್ದನೆಯ ಬೆಂಕಿಯ ಕಂಬದಂತೆ ಇವರಿಬ್ಬರ ಮಧ್ಯೆ ನಿಂತನು. ಬೆಂಕಿಯ ತೀಕ್ಷಣತೆಯನ್ನು ಕಂಡು ಇವರಿಬ್ಬರೂ ಇದರ ಮೂಲವನ್ನು ಹುಡುಕಲು ಹೊರಟರು. ಬ್ರಹ್ಮನು ಹಂಸದ ರೂಪವಾಗಿ ಆಕಾಶಕ್ಕೂ, ವಿಷ್ಣುವು ವರಾಹ ರೂಪದಲ್ಲಿ ಭೂಮಿಯೊಳಗೂ ಹೊರಟರು.

ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ: ವಿಶೇಷ ಮಹತ್ವ ಹೊಂದಿರುವ ಶಿವನ ಆಭರಣಗಳು

ಸಾವಿರಾರು ಮೈಲುಗಳನ್ನು ಕ್ರಮಿಸಿದರೂ ಇದರ ಮೂಲ ತಿಳಿಯದಾಯಿತು. ಇವರಿಬ್ಬರ ಪರದಾಟವನ್ನು ಕಂಡು ಶಿವನು ಮುಗುಳ್ನಕ್ಕನು. ಆತನ ನಗುವಿನಿಂದ ಅಲ್ಲಿಯೇ ಇದ್ದ ಕೇತಕಿ ಪುಷ್ಪವು ಬೆಂಕಿಯ ಕಂಬದಿಂದ ಕೆಳಗೆ ಇಳಿದು ಬರತೊಡಗಿತು. ಅಂತಹ ಸಂದರ್ಭದಲ್ಲಿ ಅಲ್ಲಿಯೇ ಬರುತ್ತಿದ್ದ ಬ್ರಹ್ಮನಿಗೆ ಇದು ಗೋಚರವಾಯಿತು. ಆತನು ಆ ಪುಷ್ಪವನ್ನು ಎಲ್ಲಿಂದ ಬಂದೆಯೆಂದು ಕೇಳಿದಾಗ, ಅದು ಈ ಬೆಂಕಿಯ ಕಂಬದ ಮೇಲ್ಭಾಗದಿಂದ ಕೆಳಗಿಳಿದು ಬರುತ್ತಿದ್ದೇನೆಂದು ಕೇತಕಿ ಪುಷ್ಟವು ತಳಿಸಿದಾಗ, ಕುಪಿತನಾದ ಬ್ರಹ್ಮನು, ಅಲ್ಲಿಯವರೆವಿಗೆ ಬೆಂಕಿಯ ಮೂಲವನ್ನು ತಿಳಿಯದೇ ಬೇಸತ್ತಿರುವ ಬ್ರಹ್ಮ ಪುಷ್ಪವನ್ನೇ ಸಾಕ್ಷಿಯನ್ನಾಗಿ ತೆಗೆದುಕೊಂಡನು. ಆಗ ಕುಪಿತಗೊಂಡ ಶಿವನು ತನ್ನ ಮೂಲ ಸ್ವರೂಪವನ್ನು ತೋರಿದನು. ಮತ್ತು ಬ್ರಹ್ಮನನ್ನು ಯಾರೂ ಪೂಜಿಸಬಾರದೆಂದೂ, ಕಪಟತನ ತೋರಿದ ಕೇತಕಿ ಪುಷ್ಪವನ್ನು ಯಾರೂ ಪೂಜೆಗೆ ಬಳಸಬಾರದೆಂದೂ ಶಾಪವನ್ನಿತ್ತನು.

ಜಾಗರಣೆ ಎಂದರೆ, ಜಾಗೃತರಾಗಿರೋದು ಎಂದು. ರಾತ್ರಿಯಲ್ಲಿ ಜಾಗರಣೆ ಮಾಡುವುದರ ಅರ್ಥವೇನು? ರಾತ್ರಿ ಎನ್ನುವುದು ತಮೋ ಗುಣದ ಪ್ರತೀಕ. ಆಲಸ್ಯ, ನಿದ್ರೆ, ಅಹಂಕಾರ, ಅಜ್ಞಾನಗಳ ದ್ಯೋತಕ ನಿಶೆ. ಆ ಸಮಯದಲ್ಲಿ ಜಾಗೃತರಾಗಿರಬೆಕು ಎಂದರೆ, ಅವುಗಳಿಂದ ಜಾಗೃತರಾಗಿರಬೇಕು ಎಂಬರ್ಥ. ಹಾಗೆ ಜಾಗೃತರಾಗಿರುವುದಕ್ಕೆ ನಮಗೆ ಸಹಾಯವನ್ನು ಮಾಡುವವನು ದೇವರು. ಆ ದೇವರನ್ನು ಸ್ಮರಿಸುತ್ತ ಈ ತಮೋ ಗುಣಗಳಿಂದ ಜಾಗೃತರಾಗಿರಬೇಕು ಎನ್ನುವುದರ ಪ್ರತೀಕ ಶಿವರಾತ್ರಿಯ ಜಾಗರಣೆ.

ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ: ಭಾರತದಲ್ಲಿರುವ 10 ಪ್ರಸಿದ್ಧ ಶಿವನ ದೇವಾಲಯಗಳು

ಆ ದಿನ ಬೆಳಗ್ಗೆ ಬೇಗ ಎದ್ದು ಅಭ್ಯಂಜನ ಮಾಡಿ ಶಿವನಿಗೆ ಅಭಿಷೇಕ ಮಾಡುವುದು ರೂಢಿ. ಇಲ್ಲಿ ದಿನವನ್ನು ಮೂರು ಭಾಗಗಳನ್ನಾಗಿ ಮಾಡಿ ರುದ್ರಾಭಿಷೇಕಯುಕ್ತ ಪೂಜೆಯನ್ನು ಮಾಡುವುದು ವಾಡಿಕೆ. ರುದ್ರ ನಮಕ ಚಮಕಗಳನ್ನು ಉಚ್ಚರಿಸುವುದರಿಂದ ಉಸಿರಾಟಕ್ಕೂ ಹೆಚ್ಚಿನ ಶಕ್ತಿ ಬರುವುದು ಮತ್ತು ಬಾಯಿಯಿಂದ ಹೊರ ಹೊಮ್ಮುವ ತರಂಗಗಳಿಂದ ಸುತ್ತ ಮುತ್ತಲಿನ ಪರಿಸರ ಶಕ್ತಿಯುತವಾಗುವುದು.

ಮೊದಲಿಗೆ ಶಿವಲಿಂಗಕ್ಕೆ ಪಂಚಾಮೃತ ಅಭಿಷೇಕವನ್ನೂ ಮಾಡುವರು. ಇದಕ್ಕೆಂದೇ ಮಹಾನ್ಯಾಸವೆಂಬ ಪ್ರಕಾರವಿದೆ. ನಂತರ ನೀರಿನ ಅಭಿಷೇಕವನ್ನು ನಿರಂತರವಾಗಿ ಮಾಡುವರು. ಅಭಿಷೇಕ್ಕಾಗಿಯೇ ಪ್ರತ್ಯೇಕವಾದ ಪಾತ್ರೆ ಇರುವುದು. ಅದರ ತಳಭಾಗದಲ್ಲಿ ರಂದ್ರವಿದ್ದು ಅದನ್ನು ಲಿಂಗದ ಮೇಲೆ ತೂಗು ಬಿಟ್ಟಿರುವರು. ಅದರೊಳಗೆ ನೀರು ತುಂಬಿಸಿದರೆ, ಸಣ್ಣದಾಗಿ ನೀರು ಲಿಂಗದ ಮೇಲೆ ಬೀಳುವುದು. ಕೃಷ್ಣ ಯಜುರ್ವೇದದ ಪ್ರಕಾರವಾದ ರುದ್ರ ನಮಕ ಮತ್ತು ಚಮಕಗಳನ್ನು ಅಭಿಷೇಕದ ಸಂದರ್ಭದಲ್ಲಿ ಪಠಿಸುತ್ತಾರೆ.

ಶಿವರಾತ್ರಿ ಉಪವಾಸ: ಶಿವರಾತ್ರಿ ಉಪವಾಸವು ಹಗಲಿನಿಂದ ಪ್ರಾರಂಭಗೊಂಡು ರಾತ್ರಿ ಪೂರ್ತಿ ನಡೆದು ಮರುದಿನ ಪ್ರಾತಃ ಕಾಲಕ್ಕೆ ಕೊನೆಗೊಳ್ಳುತ್ತದೆ. ವೃತದ ಸಮಯದಲ್ಲಿ ಆಹಾರವಿಲ್ಲದೆ ಕಟ್ಟುನಿಟ್ಟಾಗಿ ದೇವರಲ್ಲಿ ಐಕ್ಯಗೊಳ್ಳಬೇಕು. ವೃತಾಧಾರಿಯು ಹಣ್ಣಿನ ರಸ, ಹಣ್ಣುಗಳು ಮತ್ತು ವಿಶೇಷ ವೃತ ಆಹಾರಗಳಾದ ಕುಟ್ಟು ಚಪಾತಿ, ವೃತದ ಅನ್ನ, ಬೀಜಗಳು, ಈರುಳ್ಳಿ ಬೆಳ್ಳುಳ್ಳಿ ಇಲ್ಲದ ಪದಾರ್ಥಗಳನ್ನು ಸೇವಿಸಬಹುದು. ಸೂರ್ಯಾಸ್ತದ ನಂತರವಷ್ಟೇ ಊಟವನ್ನು ಸೇವಿಸಬೇಕು.

ಮರುದಿನ ಮುಂಜಾನೆ ಲಿಂಗಕ್ಕೆ ಅಭಿಷೇಕವನ್ನು ಪೂರೈಸಿ ಪ್ರಾರ್ಥನೆಗಳನ್ನು ಸಲ್ಲಿಸಿದ ನಂತರವಷ್ಟೇ ವೃತವನ್ನು ಸಂಪನ್ನಗೊಳಿಸಬೇಕು. ವೃತ ಸಂಪನ್ನಗೊಳಿಸುವಾಗ ಪ್ರಸಾದ ಇಲ್ಲವೇ, ಶಿವನಿಗೆ ಅರ್ಪಿಸಿದ ಆಹಾರವನ್ನು ಮೊದಲು ತೆಗೆದುಕೊಳ್ಳಬೇಕು.

English summary

Stories Associated With Maha Shivratri

Shivratri is one of the most important festivals for the devotees of Lord Shiva. It is the festival in which the devotees fast and stay awake to get blessings from the Lord. This festival is celebrated with great fervour all over India as it is believed to mark the wedding of Lord Shiva with Goddess Parvati.
Story first published: Thursday, February 27, 2014, 11:18 [IST]
X
Desktop Bottom Promotion