Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಅಜೀರ್ಣ ಸಮಸ್ಯೆಯಿದ್ದರೆ ಗರ್ಭಧಾರಣೆ ಕಷ್ಟ!

ಆದರೆ ಈ ಸಮಸ್ಯೆಗಳಲ್ಲದೆ ಅಜೀರ್ಣ ಸಮಸ್ಯೆಯಿದ್ದರೆ ಕೂಡ ಗರ್ಭಧಾರಣೆಯಲ್ಲಿ ತೊಂದರೆ ಕಾಣಿಸಿಕೊಳ್ಳಬಹುದು. ಅಜೀರ್ಣ ಸಮಸ್ಯೆ ಗರ್ಭಧಾರಣೆಗೆ ಹೇಗೆ ತಡೆಯೊಡ್ಡುತ್ತದೆ ಎಂದು ನೋಡೋಣ ಬನ್ನಿ:
ಪೋಷಕಾಂಶದ ಕೊರತೆ: ಅಜೀರ್ಣ ಸಮಸ್ಯೆಯಿದ್ದರೆ ದೇಹದಲ್ಲಿ ಆಹಾರದಲ್ಲಿರುವ ಪೋಷಕಾಂಶಗಳನ್ನು ಹೀರಿಕೊಳ್ಳುವ ಸಾಮರ್ಥ್ಯ ಕಡಿಮೆಯಾಗುತ್ತದೆ. ಆದ್ದರಿಂದ ಮಲಬದ್ಧತೆ ಸಮಸ್ಯೆಯಿದ್ದು ಒಂದು ವೇಳೆ ಗರ್ಭಿಣಿಯಾದರೂ ಮಗುವಿಗೆ ಅಗತ್ಯದ ಪೋಷಕಾಂಶ ದೊರೆಯುವುದಿಲ್ಲ. ಇದರಿಂದ ಮಗುವಿನ ಆರೋಗ್ಯಕ್ಕೆ ಅಪಾಯ ಉಂಟಾಗುತ್ತದೆ.
ಹಾರ್ಮೋನ್ ಗಳು ಕಡಿಮೆಯಾಗುತ್ತದೆ: ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯದಿದ್ದಾಗ ಹಾರ್ಮೋನ್ ಗಳ ಚಟುಚಟಿಕೆಗಳು ಕೂಡ ಕಡಿಮೆಯಾಗುತ್ತದೆ. ವಿಟಮಿನ್ ಗಳು ಹಾಗೂ ಖನಿಜಾಂಶಗಳ ಕೊರತೆ ಉಂಟಾದರೆ ಓವ್ಯೂಲೇಷನ್ ಸರಿಯಾಗಿ ಆಗುವುದಿಲ್ಲ. ಇದರಿಂದ ಗರ್ಭಧಾರಣೆಗೆ ತೊಂದರೆ ಉಂಟಾಗುವುದು.
ದೇಹದ ತೂಕ ಕಡಿಮೆಯಾಗುವುದು: ಮಲಬದ್ಧತೆ ಸಮಸ್ಯೆ ಇದ್ದರೆ ದೇಹದ ತೂಕ ಕಡಿಮೆಯಾಗುವುದು. ತುಂಬಾ ತೆಳ್ಳಗಾಗಿ, ದೇಹಕ್ಕೆ ಅಗತ್ಯವಾದ ಪೋಷಕಂಶಗಳು ದೊರೆಯದಿದ್ದಾಗ ನಿಯಮಿತ ಮುಟ್ಟು ಕಂಡು ಬರುವುದಿಲ್ಲ. ಮುಟ್ಟು ನಿಯಮಿತವಿಲ್ಲದಿದ್ದರೆ ಗರ್ಭಧಾರಣೆಯಾಗುವುದಿಲ್ಲ.
ರಕ್ತಹೀನತೆ: ಪೋಷಕಾಂಶಗಳ ಕೊರತೆಯಿಂದ ರಕ್ತ ಹೀನತೆ ಉಂಟಾಗುತ್ತದೆ. ಮಹಿಳೆ ಆರೋಗ್ಯವಾಗಿದ್ದರೆ ಮಾತ್ರ ಆರೋಗ್ಯವಂತ ಮಗುವಿಗೆ ಜನ್ಮ ಕೊಡಲು ಸಾಧ್ಯ.
ಆದ್ದರಿಂದ ಅಜೀರ್ಣ ಸಮಸ್ಯೆ ಇದ್ದರೆ ಗರ್ಭಧಾರೆಯ ಮೊದಲು ವೈದ್ಯರನ್ನು ಕಂಡು ಸೂಕ್ತ ಸಲಹೆಗಳನ್ನು ತೆಗೆದುಕೊಳ್ಳುವುದು ಒಳ್ಳೆಯದು.



Click it and Unblock the Notifications