Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಗೋಬಿಯಷ್ಟೇ ರುಚಿಕರವಾದ ಸೋಯಾ ಚಿಲ್ಲಿ

ಬೇಕಾಗುವ ಸಾಮಾಗ್ರಿಗಳು:
* 1 ಕಪ್ ಬೇಯಸದ ಸೋಯಾ
* ದೊಡ್ಡ ಮೆಣಸಿನ ಕಾಯಿ 1 (ಕ್ಯಾಪ್ಸಿಕಂ)
* 1 ಕತ್ತರಿಸಿದ ಈರುಳ್ಳಿ
* 1 ಚಮಚ ಬೆಳ್ಳುಳ್ಳಿ ಪೇಸ್ಟ್
* 1 ಚಮಚ ಶುಂಠಿ ಪೇಸ್ಟ್
* 1/ 2 ಚಮಚ ಕಾಳುಮೆಣಸಿನ ಪುಡಿ
* 1 ಚಮಚ ಸೋಯಾ ಸಾಸ್
* 1 ಚಮಚ ವಿನಿಗರ್
1 ಚಮಚ ಮೆಣಸಿನ ಕಾಯಿ ಸಾಸ್
* 2 ಚಮಚ ಎಣ್ಣೆ
* ಸ್ವಲ್ಪ ಕೊತ್ತಂಬರಿ ಸೊಪ್ಪು
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. 4 ಕಪ್ ನೀರಿಗೆ 2 ಚಮಚ ಉಪ್ಪು ಹಾಕಿ ಕುದಿಸಬೇಕು. ನಂತರ ಅದ್ನನು ಉರಿಯಿಂದ ತೆಗೆದು ಅದಕ್ಕೆ ಸೋಯಾ ಹಾಕಿ 15 ನಿಮಿಷ ಮುಚ್ಚಿಡಬೇಕು.
2. ನಂತರ ಸೋಯಾವನ್ನು ತೆಗೆದು ಅದರಿಂದ ನೀರನ್ನು ಹಿಂಡಿ ಒಂದು ಪಾತ್ರೆಯಲ್ಲಿ ಹಾಕಿಡಬೇಕು.
3. ಈಗ ಬಾಣಲೆಯನ್ನು ಬಿಸಿ ಮಾಡಿ ಅದಕ್ಕೆ ಎಣ್ಣೆ ಹಾಕಿ , ಎಣ್ಣೆ ಬಿಸಿಯಾದಾಗ ಕತ್ತರಿಸಿದ ಈರುಳ್ಳಿ ಹಾಕಿ ಶುಂಠಿ ಮತ್ತು ಬೆಳ್ಳುಳ್ಳಿ ಪೇಸ್ಟ್ ಹಾಕಿ ಸಾಧಾರಣ ಉರಿಯಲ್ಲಿ ಬಿಸಿ ಮಾಡಬೇಕು.
4. ನಂತರ ಕತ್ತರಿಸಿದ ಕ್ಯಾಪ್ಸಿಕಂ ಹಾಕಿ ಅದು ಬೇಯುವವರೆಗೆ ಹುರಿಯಬೇಕು.
5. ಈ ಮಿಶ್ರಣವನ್ನು ಒಂದು ಪಾತ್ರೆಯಲ್ಲಿ ಹಾಕಿ , ಬಾಣಲೆಯನ್ನು ಪುನಃ ಉರಿಯಲ್ಲಿಟ್ಟು ಸ್ವಲ್ಪ ಎಣ್ಣೆ ಹಾಕಿ ಸೋಯಾ ಸಾಸ್ ಮತ್ತು ವಿನಿಗರ್ ಹಾಕಿ ಮಿಶ್ರ ಮಾಡಬೇಕು. ನಂತರ ಮೆನಸಿನ ಕಾಯಿ ಸಾಸ್ ಸೇರಿಸಿ, ಇದಕ್ಕೆ ಈರುಳ್ಳಿ ಮಿಶ್ರಣವನ್ನು ಸೇರಿಸಿ ಒಮ್ಮೆ ಆಡಿಸಬೇಕು.
6. ಈಗ ಈ ಮಿಶ್ರಣವನ್ನು ಸೋಯಾ ಜೊತೆ ಬೆರೆಸಿ ಕಾಳು ಮೆಣಸಿನ ಪುಡಿ ಹಾಕಿ ಚೆನ್ನಾಗಿ ಮಿಶ್ರ ಮಾಡಬೇಕು. ಖಾರ ಸೋಯಾಕ್ಕೆ ಸರಿಯಾಗಿ ಮಿಶ್ರವಾಗುವವರೆಗೆ ಸ್ವಲ್ಪ ಹೊತ್ತು ಇಟ್ಟು, ನಂತರ ಕತ್ತರಿಸಿದ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ರುಚಿಕರವಾದ ಸೋಯಾ ಚಿಲ್ಲಿ ರೆಡಿ.



Click it and Unblock the Notifications