Latest Updates
-
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್ -
ಮಳೆಗಾಲದಲ್ಲಿ ನಿಮ್ಮ ಮನೆಯ ಗಿಡಗಳು ಸಾಯುತ್ತಿವೆಯೇ? ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಮಳೆಗಾಲದಲ್ಲಿ ಕರೆಂಟ್ ಹೋದರೆ ಫ್ರಿಜ್ ಆಹಾರ ಹಾಳಾಗುತ್ತಾ? ಸುರಕ್ಷಿತವಾಗಿಡಲು ಇಲ್ಲಿವೆ ಸರಳ ಟಿಪ್ಸ್ -
ಐಟಿಆರ್ ಸಲ್ಲಿಕೆಗೆ ಇನ್ನು 4 ದಿನ ಬಾಕಿ: ಭಾರಿ ದಂಡದಿಂದ ಪಾರಾಗಲು ಈ ಕೆಲಸಗಳನ್ನು ಇಂದೇ ಮಾಡಿ! -
IMD ಮಳೆ ಎಚ್ಚರಿಕೆ: ಹೊರಗೆ ಹೋಗಬೇಡಿ, ಮನೆಯಲ್ಲೇ ಈ 12 ನಿಮಿಷದ ವರ್ಕೌಟ್ ಮಾಡಿ ಫಿಟ್ ಆಗಿರಿ! -
ಭಾರತ-ಜಿಂಬಾಬ್ವೆ ಟಿ20 ಪಂದ್ಯದ ಮಜಾ ಸವಿಯುತ್ತಲೇ ಮನೆಯ ಜವಾಬ್ದಾರಿ ನಿಭಾಯಿಸುವುದು ಹೇಗೆ? ಸ್ಮಾರ್ಟ್ ಟಿಪ್ಸ್ ಇಲ್ಲಿದೆ! -
IMD ರೆಡ್ ಅಲರ್ಟ್: ಭಾರಿ ಮಳೆಯಿಂದ ಮನೆಯನ್ನು ರಕ್ಷಿಸಲು ಈ 5 ಮುನ್ನೆಚ್ಚರಿಕೆಗಳು ಕಡ್ಡಾಯ! -
ಗುರು ಪೂರ್ಣಿಮಾ ಉಪವಾಸ: ಮಧುಮೇಹಿಗಳು ಆರೋಗ್ಯವಾಗಿರಲು ಈ ಸಾತ್ವಿಕ ಆಹಾರ ಕ್ರಮ ಪಾಲಿಸಿ -
ಪೇಪರ್ ಸೋರಿಕೆ ಮಾಡಿದ್ರೆ 10 ವರ್ಷ ಜೈಲು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಿಗಲಿದೆ ಹೊಸ ಭದ್ರತೆ! -
ಕಾರ್ಗಿಲ್ ವಿಜಯ್ ದಿವಸ್: ದೇಶಭಕ್ತಿಯ ನಡಿಗೆಯಲ್ಲಿ ಪಾಲ್ಗೊಳ್ಳುವ ಮುನ್ನ ಈ ಆರೋಗ್ಯ ಟಿಪ್ಸ್ ಮರೆಯದಿರಿ
ವ್ಯಾಲೆಂಟೈನ್ಸ್ ವೀಕ್‌ನಲ್ಲಿ ದ್ವಾದಶ ರಾಶಿಗಳ ಪ್ರೀತಿ ಭವಿಷ್ಯ ಹೇಗಿರಲಿದೆ?
ಹೇಳಿ ಕೇಳಿ ಇದು ಪ್ರೇಮಿಗಳ ವಾರ, ಈ ವಾರದಲ್ಲಿ ವಾರ ರಾಶಿಫಲ ಪ್ರಕಾರ ನಿಮ್ಮ ಪ್ರೀತಿ ಭವಿಷ್ಯ ಹೇಗಿದೆ ನೋಡೋಣ:
ಮೇಷ ರಾಶಿ
ಪ್ರೇಮಿಗಳಿಗೆ ಈ ವಾರ ಉತ್ತಮವಾಗಿರಲಿದೆ, ವೈವಾಹಿಕ ಬದುಕು ಕೂಡ ರೊಮ್ಯಾಂಟಿಕ್ ಆಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಕುಟುಂಬ ವಾತಾವರಣ ತುಂಬಾ ಚೆನ್ನಾಗಿರಲಿದೆ.

ವೃಷಭ ರಾಶಿ
ಸಂಬಂಧದ ದೃಷ್ಟಿಯಿಂದ ನೋಡುವುದಾದರೆ ಈ ವಾರ ಮಿಶ್ರಫಲ. ನೀವು ನಿಮ್ಮ ಸಂಗಾತಿಯ ಭಾವನೆಗಳನ್ನು ಗೌರವಿಸಬೇಕು. ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯ ಉಂಟಾಗಿದ್ದರೆ ಅದನ್ನು ಮುಕ್ತವಾಗಿ ಮಾತನಾಡುವುದರ ಮೂಲಕ ಬಗೆಹರಿಸಲು ಪ್ರಯತ್ನಿಸಿ. ಕೋಪವನ್ನು ನಿಯಂತ್ರಿಸುವುದು ಒಳ್ಳೆಯದು.
ಮಿಥುನ ರಾಶಿ
ಪ್ರೇಮಿಗಳಿಗೆ ಈ ಅವಧಿ ಅನುಕೂಲಕರವಾಗಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ, ವೈವಾಹಿಕ ಜೀವನದಲ್ಲಿ ಬಾಂಧವ್ಯ ಚೆನ್ನಾಗಿರಲಿದೆ. ಪ್ರೇಮಿಗಳಿಗೆ ವಿಶೇಷವಾಗಿರಲಿದೆ.
ಕರ್ಕ ರಾಶಿ
ಸಂಬಂಧದ ವಿಷಯದಲ್ಲಿ ಈ ವಾರ ಮಿಶ್ರಫಲ, ನೀವು ಈ ವಾರ ನೀವಾಡುವ ಮಾತುಗಳ ಕಡೆಗೆ ಹೆಚ್ಚಿನ ಗಮನಹರಿಸಬೇಕು, ಕೋಪ ನಿಯಂತ್ರಿಸಿದರೆ ಒಳ್ಳೆಯದು. ಸಂಬಂಧದಲ್ಲಿ ಭಿನ್ನಾಭಿಪ್ರಾಯ ಉಂಟಾಗದಂತೆ ಜಾಗ್ರತೆವಹಿಸಿ, ಈ ವಾರ ಪ್ರಪೋಸ್ ಮಾಡಬೇಕೆಂದಿದ್ದರೆ ಈ ಅವಧಿ ಅಷ್ಟೊಂದು ಸೂಕ್ತವಲ್ಲ.
ಸಿಂಹ ರಾಶಿ
ಕುಟುಂಬ ಬದುಕು ತುಂಬಾ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ತುಂಬಾ ಚನ್ನಾಗಿರಲಿದೆ, ವೈವಾಹಿಕ ಬದುಕಿನಲ್ಲಿ ಉತ್ತಮ ಬಾಂಧವ್ಯ ಇರಲಿದೆ. ಪ್ರೇಮಿಗಳಿಗೆ ಈ ವಾರ ಉತ್ತಮವಾಗಿರಲಿದೆ.
ಕನ್ಯಾ ರಾಶಿ
ಸಂಬಂಧದ ವಿಷಯದಲ್ಲಿ ಈ ವಾರ ಉತ್ತಮವಾಗಿದೆ, ಪ್ರತಿಕೂಲ ಸಂದರ್ಭದಲ್ಲಿ ಮನೆಯವರು ನಿಮ್ಮ ಜೊತೆ ನಿಲ್ಲುತ್ತಾರೆ, ನಿಮ್ಮ ಕೆಲಸ ಕಾರ್ಯಗಳಿಗೆ ಸಂಗಾತಿಯ ಬೆಮಬಲ ಸಿಗಲಿದೆ, ಪ್ರೇಮಿಗಳಿಗೆ ಈ ಅವಧಿ ಉತ್ತಮವಾಗಿರಲಿದೆ.
ತುಲಾ ರಾಶಿ
ಪ್ರೇಮಿಗಳಿಗೆ ಈ ವಾರ ಉತ್ತಮವಾಗಿದೆ, ನಿಮ್ಮ ಪ್ರೀತಿಗೆ ಮನೆಯವರ ಒಪ್ಪಿಗೆ ಸಿಗಬಹುದು, ದಾಂಪತ್ಯ ಬದುಕು ತುಂಬಾ ಚೆನ್ನಾಗಿರಲಿದೆ, ಕುಟುಂಬದ ವಾತಾವರಣ ತುಂಬಾ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ಈ ವಾರ ತುಂಬಾ ಚೆನ್ನಾಗಿರಲಿದೆ, ಆದರೆ ಅನಗ್ಯತ ವಾದ ತಪ್ಪಿಸಿ,ಕುಟುಂಬದಲ್ಲಿನ ಸಮಸ್ಯೆ ನೀವೇ ಬಗೆಹರಿಸಲು ಪ್ರಯತ್ನಿಸಿ. ಪ್ರೇಮಿಗಳು ಕೂಡ ಈ ವಾರ ಯಾವುದೇ ನಿರ್ಧಾರವಾದರು ಆತುರದಿಂದ ತೆಗೆದುಕೊಳ್ಳಬೇಡಿ.
ಧನು ರಾಶಿ
ಪ್ರೇಮಿಗಳಿಗೆ ಈ ಅವಧಿ ವಿಶೇಷವಾಗಿರಲಿದೆ, ಅವಾಹಿತರಿಗೆ ಮದುವೆ ಸಂಬಂಧ ಬರಬಹುದು, ವಿವಾಹಿತರ ವೈವಾಹಿಕ ಬದುಕು ರೊಮ್ಯಾಂಟಿಕ್ ಆಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಉತ್ತಮ ಹೊಂದಾಣಿಕೆ ಇರಲಿದೆ.
ಮಕರ ರಾಶಿ
ಸಂಬಂಧದ ವಿಷಯದಲ್ಲಿ ಜಾಗ್ರತೆವಹಿಸಿ, ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯ ಬರಬಹುದು, ಪ್ರೇಮಿಗಳು ಕೂಡ ಯಾವುದೇ ನಿರ್ಧಾರವಾದರೂ ಆಲೋಚಿಸಿ ತೆಗೆದುಕೊಳ್ಳುವುದು ಒಳ್ಳೆಯದು.
ಕುಂಭ ರಾಶಿ
ನೀವು ಕೋಪವನ್ನು ನಿಯಂತ್ರಿಸುವುದು ಸಂಬಂಧದ ದೃಷ್ಟಿಯಿಂದ ತುಂಬಾ ಮುಖ್ಯವಾಗಿದೆ, ನಿಮ್ಮ ಕೋಪವೇ ನಿಮ್ಮಿಬ್ಬರ ನಡುವೆ ಸಮಸ್ಯೆ ಹೆಚ್ಚಿಸಬಹುದು, ಸಂಗಾತಿಯನ್ನು ಅರ್ಥ ಮಾಡಕೊಳ್ಳಲು ಪ್ರಯತ್ನಿಸಬೇಕು.
ಮೀನ ರಾಶಿ
ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ತುಂಬಾ ಚೆನ್ನಗಿರಲಿದೆ, ವೈವಾಹಿಕ ಬದುಕಿನ ಕಡೆಗೆ ಗಮನಹರಿಸಿ, ಸಂಗಾತಿ ಜೊತೆಗೆ ಹೆಚ್ಚು ಸಮಯ ಕಳೆಯಲು ಪ್ರಯತ್ನಿಸಿ, ಅವರ ಭಾವನೆಗಳನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications