Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಏಪ್ರಿಲ್ ತಿಂಗಳಿನ ಪ್ರೀತಿ ಭವಿಷ್ಯ: ಈ ತಿಂಗಳು ಪ್ರೇಮ ಹಾಗೂ ವೈವಾಹಿಕ ಜೀವನ ಹೇಗಿರಲಿದೆ?
ಏಪ್ರಿಲ್ ತಿಂಗಳ ಪ್ರೀತಿ ಭವಿಷ್ಯ: ಗ್ರಹಗಳು ನಿಮ್ಮ ಕುಟುಂಬ ಜೀವನದ ಮೇಲೆ ಹೇಗೆ ಪ್ರಭಾವ ಬೀರಿದೆ, ಪ್ರೇಮಿಗಳಿಗೆ ಹೇಗಿರಲಿದೆ ಎಂದು ನೋಡೋಣ ಬನ್ನಿ:
ಮೇಷ ರಾಶಿ
ಮೇಷ ರಾಶಿಯವರಿಗೆ ಈ ಅವಧಿ ಉತ್ತಮವಾಗಿದೆ, ಈ ಸಮಯದಲ್ಲಿ ಕುಟುಂಬದಲ್ಲಿನ ಸಮಸ್ಯೆಗಳು ಕಡಿಮೆಯಾಗಿ ಮನೆಯ ವಾತಾವರಣ ಸುಧಾರಿಸುವುದು. ಈ ಅವಧಿಯಲ್ಲಿ ಸಂಗಾತಿಯು ತನ್ನ ಆರೋಗ್ಯದ ಕಡೆಗೆ ತುಂಬಾನೇ ಗಮನಹರಿಸಬೇಕು. ಪ್ರೇಮಿಗಳು ಈ ಅವಧಿಯಲ್ಲಿ ಸ್ವಲ್ಪ ಜಾಗ್ರತೆವಹಿಸಿ.

ವೃಷಭ ರಾಶಿ
ವೃಷಭ ರಾಶಿಯವರ ವೈವಾಹಿಕ ಜೀವನದಲ್ಲಿ ಕೆಲ ಸಮಸ್ಯೆಗಳಿರಬಹುದು, ನಿಮ್ಮಿಬ್ಬರ ನಡುವೆ ನಂಬಿಕೆಯ ಕೊರತೆಯಿಂದಾಗಿ ಸಮಸ್ಯೆಗಳು ಹೆಚ್ಚಾಗುವುದು. ನೀವಿಬ್ಬರು ಮನಸ್ಸು ಬಿಚ್ಚಿ ಮಾತನಾಡಿ ನಿಮ್ಮ ಸಮಸ್ಯೆ ಬಗೆಹರಿಸಿಕೊಳ್ಳಿ. ಚಿಕ್ಕ-ಪುಟ್ಟ ವಿಷಯಗಳ ಕಡೆಗೆ ಗಮನಹರಿಸಬೇಕು, ಇಲ್ಲದಿದ್ದರೆ ಈ ಚಿಕ್ಕ ಪುಟ್ಟ ವಿಷಯಗಳೇ ಕುಟುಂಬದಲ್ಲಿ ದೊಡ್ಡ ಸಮಸ್ಯೆ ಉಂಟು ಮಾಡಬಹುದು.
ಮಿಥುನ ರಾಶಿ
ನೀವು ವಿವಾಹಿತರಾಗಿದ್ದರೆ, ವೈವಾಹಿಕ ಜೀವನ ಚೆನ್ನಾಗಿರಲಿದೆ. ಕುಟುಂಬದಲ್ಲಿ ಚಿಕ್ಕ ಪುಟ್ಟ ಸಮಸ್ಯೆಯಿದ್ದರೆ ಅದು ಬಗೆ ಹರಿಯಲಿದೆ. ಪ್ರೇಮಿಗಳಿಗೆ ಈ ತಿಂಗಳು ತುಂಬಾ ವಿಶೇಷವಾಗಿರಲಿದೆ.
ಕರ್ಕ ರಾಶಿ
ನೀವು ವಿವಾಹಿತರಾಗಿದ್ದರೆ, ನಿಮ್ಮ ವೈವಾಹಿಕ ಜೀವನದ ಬಗ್ಗೆ ನೀವು ಹೆಚ್ಚು ಗಮನ ಹರಿಸಬೇಕು. ನಿಮ್ಮಿಬ್ಬರಲ್ಲಿ ಯಾವುದೇ ಸಮಸ್ಯೆಯಿದ್ದರೆ ಕೂತು ಮಾತನಾಡಿ ಬಗೆಹರಿಸಿಕೊಳ್ಳಬೇಕು.
ಸಿಂಹ ರಾಶಿ
ಕುಟುಂಬ ಜೀವನದಲ್ಲಿ ಕೆಲವು ಚಿಂತೆ ಇರಬೇಕು. ಈ ಸಮಯದಲ್ಲಿ ತಂದೆಯ ಆರೋಗ್ಯವು ಸ್ವಲ್ಪ ದುರ್ಬಲವಾಗಿರುತ್ತದೆ, ಈ ಬಗ್ಗೆ ಗಮನಹರಿಸಬೇಕು. ಪ್ರತಿಕೂಲ ಸಂದರ್ಭಗಳಲ್ಲಿ ನಿಮ್ಮ ಒಡಹುಟ್ಟಿದವರ ಸಂಪೂರ್ಣ ಬೆಂಬಲವನ್ನು ನೀವು ಪಡೆಯುತ್ತೀರಿ. ಅನಗ್ಯತ ಚಿಂತೆ ಬಿಡಿ, ಕುಟುಂಬದ ಸಂತೋಷದ ಕಡೆಗೆ ಗಮನಹರಿಸಿ.
ಕನ್ಯಾ ರಾಶಿ
ಪ್ರೇಮಿಗಳಿಗೆ ಈ ತಿಮಗಳು ತುಂಬಾ ಮುಖ್ಯವಾಗಿರಲಿದೆ. ಪ್ರಣಯ ಜೀವನದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ವಿವಾಹಿತರ ವೈವಾಹಿಕ ಜೀವನ ಚೆನ್ನಾಗಿರಲಿದೆ.
ತುಲಾ ರಾಶಿ
ತುಲಾ ರಾಶಿಯವರ ಪ್ರೇಮಿಗಳಿಗೆ, ವಿವಾಹಿತರಿಗೆ ಈ ಅವಧಿ ಉತ್ತಮವಾಗಿರಲಿದೆ. ವಿವಾಹಿತರಿಗೆ ಈ ತಿಂಗಳು ತುಂಬಾ ಆಹ್ಲಾದಕರವಾಗಿರುತ್ತದೆ. ಈ ತಿಂಗಳು ನಿಮ್ಮ ಆದಾಯ ಹೆಚ್ಚಾಗುವ ಸಾಧ್ಯತೆ ಇದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಶೀಘ್ರದಲ್ಲೇ ಎಲ್ಲಾ ಸಾಲಗಳಿಂದ ಮುಕ್ತರಾಗಬಹುದು, ಇದರಿಂದ ಕುಟುಂಬದಲ್ಲಿ ಸಂತೋಷ ಹೆಚ್ಚಾಗಲಿದೆ.
ವೃಶ್ಚಿಕ ರಾಶಿ
ವೈವಾಹಿಕ ಜೀವನದಲ್ಲಿ ಈ ಅವಧಿಯಲ್ಲಿ ಸಮಸ್ಯೆ ಹೆಚ್ಚಾಗುವುದು. ನಿಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯ ಹೆಚ್ಚಾಗುವುದು. ಪ್ರೇಮಿಗಳಿಗೆ ಈ ಅವಧಿ ಅನುಕೂಲಕರವಾಗಿದೆ, ಅವಾಹಿತರು ಮದುವೆ ಸಂಬಂಧ ಹುಡುಕುತ್ತಿದ್ದರೆ ಈ ಸಮಯದಲ್ಲಿ ಮದುವೆಯ ಮಾತುಕತೆ ನಡೆಯುವ ಸಾಧಯತೆ ಇದೆ.
ಧನು ರಾಶಿ
ಕೌಟುಂಬಿಕ ಜೀವನದಲ್ಲಿ ಕೆಲವು ಗೊಂದಲಗಳಿರುತ್ತವೆ. ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯ ಅಂತರ ಹೆಚ್ಚಿಸಬಹುದು. ನೀವು ತುಂಬಾ ಸಮತೋಲಿತ ರೀತಿಯಲ್ಲಿ ವರ್ತಿಸುವಂತೆ ಸಲಹೆ ನೀಡಲಾಗುವುದು.
ಮಕರ ರಾಶಿ
ಈ ಅವಧಿ ಕುಟುಂಬ ಜೀವನದ ದೃಷ್ಟಿಯಿದ ತುಂಬಾನೇ ಅನುಕೂಲಕರವಾಗಿರಲಿದೆ. ಕುಟುಂಬ ಸದಸ್ಯರಲ್ಲಿ ಪ್ರೀತಿ ಮತ್ತು ಒಗ್ಗಟ್ಟು ಇರುತ್ತದೆ. ಪ್ರತಿಕೂಲ ಸಂದರ್ಭಗಳಲ್ಲಿ ನೀವು ಅವರ ಸಂಪೂರ್ಣ ಬೆಂಬಲವನ್ನು ಸಹ ಪಡೆಯುತ್ತೀರಿ. ನೀವು ವಿವಾಹಿತರಾಗಿದ್ದರೆ ಈ ತಿಂಗಳ ಆರಂಭ ಅಷ್ಟು ಒಳ್ಳೆಯದಲ್ಲ, ಕೆಲ ಭಿನ್ನಾಭಿಪ್ರಾಯ, ಇಬ್ಬರ ನಡುವೆ ಹೊಂದಾಣಿಕೆಗೆ ಸಮಸ್ಯೆಯಾಗಬಹುದು, ಆದರೆ ಪ್ರೀತಿಯಿಂದ ನಡೆದುಕೊಳ್ಳಿ, ಎಲ್ಲವೂ ಸರಿಯಾಗುವುದು.
ಕುಂಭ ರಾಶಿ
ಈ ತಿಂಗಳು ಕುಂಭ ರಾಶಿಯವರು ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುವುದು. ಈ ರಾಶಿಯ ವಿವಾಹಿತರಿಗೆ ಏಪ್ರಿಲ್ ತಿಂಗಳು ತುಂಬಾ ಕಷ್ಟಕರವಾಗಿರುತ್ತದೆ. ನಿಮ್ಮ ನಡುವೆ ಪರಸ್ಪರ ಹೊಂದಾಣಿಕೆಯ ಕೊರತೆ ಇರುತ್ತದೆ. ಎಲ್ಲಾ ಸಮಸ್ಯೆ ಬಗೆಹರಿಸಿಕೊಂಡು ಮುಂದುವರೆಯಲು ಪ್ರಯತ್ನಿಸಿ.
ಮೀನ ರಾಶಿ
ನಿಮ್ಮ ಮಾತುಗಳು ಕುಟುಂಬದಲ್ಲಿನ ಸಮಸ್ಯೆ ಕದಡದಂತೆ ಜಾಗ್ರತೆವಹಿಸಿ. ನಿಮ್ಮ ಅಭಿಪ್ರಾಯವೇ ಸಂಗಾತಿಯ ಅಭಿಪ್ರಾಯವಿರಬೇಕು ಎಂದೇನಿಲ್ಲ, ಅವರ ಅಭಿಪ್ರಾಯವನ್ನೂ ಕೇಳಿ . ನಿಮ್ಮ ಸಂಗಾತಿಯ ಆರೋಗ್ಯದ ಮೇಲೆ ಗಮನಹರಿಸಬೇಕು. ಪ್ರೇಮಿಗಳಿಗೆ ಈ ತಿಂಗಳು ವಿಶೇಷವಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications