Latest Updates
-
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್ -
ಮುಂಬೈನಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಪೋಷಕರು ಗಮನಿಸಿ!
ಸಂಖ್ಯಾಶಾಸ್ತ್ರ ಪ್ರಕಾರ ಈ ಜುಲೈ ಮಾಸ ನಿಮ್ಮ ಜನ್ಮ ಸಂಖ್ಯೆಗೆ ಹೇಗಿರಲಿದೆ?
ನಿಮ್ಮ ದಿನಾಂಕದ ಪ್ರಕಾರ ಸಂಖ್ಯಾಶಾಸ್ತ್ರದ ಸಂಖ್ಯೆ ಯಾವುದು ಎಂದು ತಿಳಿಯಬಹುದು. ಉದಾಹರಣೆಗೆ ನಿಮ್ಮ ಜನ್ಮ 29 ಆದರೆ ನಿಮ್ಮ ಜನ್ಮ ಸಂಖ್ಯೆ 2 (2+9=11,1+1=2) ಜುಲೈ ತಿಂಗಳು ಸಂಖ್ಯಾಶಾಸ್ತ್ರದ ಪ್ರಕಾರ ನಿಮಗೆ ಹೇಗಿರಲಿದೆ ನೋಡೋಣ ಬನ್ನಿ:

ಸಂಖ್ಯೆ 1 (ಹುಟ್ಟಿದ ದಿನಾಂಕ 1,10,19,28)
ಈ ತಿಂಗಳು ನಿಮಗೆ ಅಷ್ಟೊಂದು ಅನುಕೂಲಕರವಲ್ಲ, ಈ ಅವಧಿಯಲ್ಲಿ ಹಲವು ಸವಾಲುಗಳನ್ನು ಎದುರಿಸಬಹುದು, ಕೆಲಸದಲ್ಲಿ ಈ ಮಾಸ ನಿಮಗೆ ಸರಾಸರಿಯಾಗಿರಲಿದೆ, ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲು ಹೆಚ್ಚು ಸವಾಲುಗಳನ್ನು ಎದುರಿಸಬೇಕಾಗಬಹುದು. ಈ ಅವಧಿಯಲ್ಲಿ ಯಾರನ್ನೂ ಕುರುಡಾಗಿ ನಂಬಬೇಡಿ, ಪ್ರತಿಯೊಂದು ನಿರ್ಧಾರವನ್ನು ಬಹಳ ಆಲೋಚಿಸಿ ತೆಗೆದುಕೊಳ್ಳಿ. ಆತುರದ ನಿರ್ಧಾರ ಸಮಸ್ಯೆಗಳನ್ನು ಹೆಚ್ಚಿಸುವುದು, ನಷ್ಟವನ್ನು ಉಂಟು ಮಾಡುವುದು.
ಸಂಖ್ಯೆ 2 (ಹುಟ್ಟಿದ ದಿನಾಂಕ 2,11,20,29)
ಪ್ರೇಮಿಗಳಿಗೆ ಈ ಮಾಸ ಉತ್ತಮವಾಗಿರಲಿದೆ, ನಿಮ್ಮಿಬ್ಬರ ಬಾಂಧವ್ಯ ಮತ್ತಷ್ಟು ಗಟ್ಟಿಯಾಗುವುದು. ವಿವಾಹಿತರಿಗೆ ಈ ಮಾಸ ಅನುಕೂಲಕರವಾಗಿದೆ, ಚಿಕ್ಕ ಪುಟ್ಟ ವಿಷಯವನ್ನು ಮನಸ್ಸಿಗೆ ತೆಗೆದುಕೊಂಡು ದೊಡ್ಡದು ಮಾಡಲು ಹೋಗಲು ಮಾಡಬೇಡಿ. ನೀವು ನಿಮ್ಮ ಕೆಲಸ ಕಾರ್ಯದಲ್ಲ ನಿರ್ಲಕ್ಷ್ಯ ಮಾಡಬೇಡಿ, ನೀವು ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಿ.
ಸಂಖ್ಯೆ 3 (ಹುಟ್ಟಿದ ದಿನಾಂಕ 3,12,21,30)
ಕೆಲಸದಲ್ಲಿ ಹೆಚ್ಚಿನ ಶ್ರಮ ಹಾಕಿ ದುಡಿಯಿರಿ. ಹೊಸ ವ್ಯವಹಾರ ಅಥವಾ ಉದ್ಯೋಗಕ್ಕೆ ಪ್ರಯತ್ನಿಸಲು ಈ ಅವಧಿ ತುಂಬಾ ಚೆನ್ನಾಗಿರಲಿದೆ. ಈ ತಿಂಗಳಿನಲ್ಲಿ ನೀವು ನಿಮ್ಮ ಕೆಲಸಕ್ಕೆ ತಕ್ಕ ಪ್ರತಿಫಲ ಪಡೆಯುತ್ತೀರಿ, ಇನ್ನು ಈ ಮಾಸ ಅತಿಯಾದ ಆತ್ಮವಿಶ್ವಾಸ ತಪ್ಪಿಸುವುದು ಒಳ್ಳೆಯದು. ಕೆಲಸ ಹಾಗೂ ಕುಟುಂಬದ ನಡುವೆ ಸಮತೋಲನ ಕಾಪಾಡಿಕೊಳ್ಳಿ.
ಸಂಖ್ಯೆ 4 (ಹುಟ್ಟಿದ ದಿನಾಂಕ 4,13,22,31)
ಈ ಮಾಸ ನಿಮಗೆ ಅಷ್ಟೊಂದು ಅನುಕೂಲಕರವಲ್ಲ, ನಿಮ್ಮ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲು ಕಷ್ಟವಾಗುವುದು. ಕೆಲಸದ ಜಾಗದಲ್ಲಿ ನಿಮ್ಮ ಶ್ರಮ ಗನಿಸುತ್ತಿಲ್ಲ ಎಂದು ಅನಿಸಬಹುದು. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಉಂಟಾಗದಂತೆ ಜಾಗ್ರತೆವಹಿಸಿ, ನೀವು ಮಾತಿನ ಮೇಲೆ ಹಿಡಿತವಿಡಿ. ಅಹಂ ನಿಮಗೆ ಸಮಸ್ಯೆಯನ್ನುಂಟು ಮಾಡಬಹುದು.
ಸಂಖ್ಯೆ 5 (ಹುಟ್ಟಿದ ದಿನಾಂಕ 5,14,23)
ಅತಿ ಹೆಚ್ಚು ಮಾನಸಿಕ ಒತ್ತಡ ತೆಗೆದುಕೊಳ್ಳಬೇಡಿ. ನಿಮ್ಮ ಕನಸುಗಳನ್ನು ಈಡೇರಿಸಲು ನಿಮ್ಮ ಪ್ರಯತ್ನದಲ್ಲಿ ಬದಲಾವಣೆ ಮಾಡಿ, ಕೆಲಸದಲ್ಲಿ ಒತ್ತಡ ಹೆಚ್ಚಿರಬಹುದು, ಹೊಸ ಜವಾಬ್ದಾರಿ ನಿಮ್ಮ ಹೆಗಲೇರುವುದು. ಆದರೆ ಬುದ್ಧಿವಂತಿಕೆ, ಸಂವಹನ ಕೌಶಲ್ಯದಿಂದ ಜವಾಬ್ದಾರಿ ಸುಲಭವಾಗಿ ನಿಭಾಯಿಸುತ್ತೀರಿ.
ಸಂಖ್ಯೆ 6 (ಹುಟ್ಟಿದ ದಿನಾಂಕ 6,15,24)
ಈ ಮಾಸ ಯಾವುದೇ ದೀರ್ಘಾವಧಿಯ ಹೂಡಿಕೆಗಳನ್ನು ಮಾಡಬೇಡಿ, ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ, ಬಯಸಿದ ದುಬಾರಿ ವಸ್ತುಗಳನ್ನು ಖರೀದಿಸಬಹುದು. ಈ ತಿಂಗಳು ಕುಟುಂಬ ಜೀವನ ಚೆನ್ನಾಗಿರಲಿದೆ. ನೀವು ವೈಯಕ್ತಿಕ ಜೀವನದ ಕಡೆಗೆ ಗಮನಹರಿಸಿ. ನೀವು ವೃತ್ತಿ ಹಾಗೂ ವೈಯಕ್ತಿಕ ಜೀವನದಲ್ಲಿ ಸಮತೋಲನ ಕಾಪಾಡಲು ಪ್ರಯತ್ನಿಸಿ.
ಸಂಖ್ಯೆ 7 (ಹುಟ್ಟಿದ ದಿನಾಂಕ 7,16,25)
ಜುಲೈ ಮಾಸ ನಿಮಗೆ ಅಷ್ಟೊಂದು ಅನುಕೂಲಕರವಲ್ಲ, ಆದ್ದರಿಂದ ಈ ಅವಧಿಯಲ್ಲಿ ನೀವು ಸರಾಸರಿ ಫಲಿತಾಂಶಗಳನ್ನು ಪಡೆಯುತ್ತೀರಿ. ನೀವು ನಿರೀಕ್ಷೆ ಮಾಡಿದಂತೆ ಫಲ ಪಡೆಯುವುದು ಕಷ್ಟವಾಗುವುದು. ಲಾಭ ಗಳಿಸಲು ಅಡ್ಡ ಮಾರ್ಗ ಹಿಡಿಯಬೇಡಿ. ಇನ್ನು ನಿಮ್ಮ ಮಾತುಗಳಿಂದ ಬೇರೆಯವರಿಗೆ ನೋಯಿಸಬೇಡಿ. ಆಂತರಿಕ ಸಮಸ್ಯೆ ಕುಟುಂಬದ ಮೇಲೆ ಪ್ರಬಾವ ಬೀರದಂತೆ ಜಾಗ್ರತೆವಹಿಸಿ.
ಸಂಖ್ಯೆ 8 (ಹುಟ್ಟಿದ ದಿನಾಂಕ 8,17,26)
ಈ ಮಾಸ ಆರ್ಥಿಕವಾಗಿ ಒಳ್ಳೆಯದು, ಈ ಅವಧಿಯಲ್ಲಿ ಆದಾಯ ಹೆಚ್ಚಾಗಲಿದೆ. ಈ ತಿಂಗಳು ನೀವು ಹೂಡಿಕೆ ಮತ್ತು ಹಣಕಾಸು ಪ್ಲ್ಯಾನ್ ಬಗ್ಗೆ ಯೋಚಿಸುತ್ತೀರಿ. ಈ ತಿಂಗಳಿನಲ್ಲಿ ವೃತ್ತಿ ಬದುಕಿನಲ್ಲಿ ಪ್ರಗತಿ ಕಂಡು ಬರುವುದು. ಈ ಅವಧಿಯಲ್ಲಿ ನೀವು ವೃತ್ತಿ ಬಗ್ಗೆ ಮಾತ್ರ ಗಮನಹರಿಸದೆ, ವೈಯಕ್ತಿಕ ಜೀವನದ ಕಡೆಯೂ ಗಮನಹರಿಸಿ.
ಸಂಖ್ಯೆ 9 (ಹುಟ್ಟಿದ ದಿನಾಂಕ 9,18,27)
ಜುಲೈ ಮಾಸದಲ್ಲಿ ಕೆಲಸದಲ್ಲಿ ನೀವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು, ಈ ಸಮಯದಲ್ಲಿ ನೀವು ಕೆಲಸದಲ್ಲಿ ಯಾವುದೇ ರೀತಿಯ ನಷ್ಟವನ್ನು ತಪ್ಪಿಸಬೇಕಾಗುತ್ತದೆ. ವೈವಾಹಿಕ ಜೀವನದ ಕಡೆಗೆ ಗಮನಹರಿಸಿ, ನಿಮ್ಮಿಂದ ತಪ್ಪುಗಳು ಆಗದಂತೆ ಗಮನಹರಿಸಿ. ಅಗತ್ಯವಾದ ಕೆಲಸದವನ್ನು ನಿರ್ಲಕ್ಷ್ಯ ಮಾಡಿದರೆ ನಷ್ಟ ಉಂಟಾಗುವುದು. ಮಹಿಳೆಯಿಂದ ನಿಮಗೆ ತೊಂದರೆಯಾಗದಂತೆ ಜಾಗ್ರತೆವಹಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications