Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮೇ ತಿಂಗಳ ಭವಿಷ್ಯ: ಈ ಮಾಸದಲ್ಲಿ 6 ರಾಶಿಯವರಿಗೆ ಹೆಚ್ಚು ಅದೃಷ್ಟಕರ, ಆದಾಯ ಹೆಚ್ಚಾಗಲಿದೆ
ವೈದಿಕ ಶಾಸ್ತ್ರದ ಪ್ರಕಾರ ಗ್ರಹಗತಿಗಳ ಸ್ಥಾನವು ಈ 6 ರಾಶಿಯವರಿಗೆ ತುಂಬಾನೇ ಅನುಕೂಲಕರ, ಬನ್ನಿ ಈ ಮಾಸ ಯಾವೆ್ಲಾ ರಾಶಿಗಳಿಗೆ ಪ್ರಗತಿಯ ಸೂಚನೆಯಿದೆ ಎಂದು ನೋಡೋಣ ಬನ್ನಿ:
ಮೇಷ ರಾಶಿ
ಮೇಷ ರಾಶಿಯವರಿಗೆ ತುಂಬಾ ಒಳ್ಳೆಯದು. ಈ ಸಮಯದಲ್ಲಿ ಉತ್ತಮ ಫಲಿತಾಂಶ ಪಡೆಯುತ್ತೀರಿ. ಕೆಲಸದಲ್ಲಿ ಪ್ರಗತಿ ಇರಲಿದೆ, ಆದರೆ ಕೆಲಸದ ಜಾಗದಲ್ಲಿ ಅನಗ್ಯತ ವಿಷಯಗಳ ಬಗ್ಗೆ ಮಾತನಾಡಲು ಹೋಗಬೇಡಿ. ವ್ಯಾಪಾರಿಗಳಿಗೆ ಈ ತಿಂಗಳಿನಲ್ಲಿ ಅತ್ಯುತ್ತಮ ಅವಕಾಶಗಳು ದೊರೆಯಲಿದೆ. ವ ವೃತ್ತಿಜೀವನದಲ್ಲಿ ಅಪೇಕ್ಷಿತ ಲಾಭವನ್ನು ಗಳಿಸುವಲ್ಲಿ ನೀವು ಯಶಸ್ವಿಯಾಗುತ್ತೀರಿ.

ಕೆಲವೊಂದು ಸವಾಲುಗಳು ಬರಲಿದೆ, ಆದರೆ ಆ ಸಮಸ್ಯೆ ನಿಮ್ಮನ್ನು ಹೆಚ್ಚಾಗಿ ಬಾಧಿಸುವುದಿಲ್ಲ. ವೈವಾಹಿಕ ಜೀವನದಲ್ಲಿ ಕೆಲ ಸಮಸ್ಯೆಗಳು ಇರಬಹುದು, ಆದರೆ ಅದೆಲ್ಲವೂ ಬಗೆಹರಿಯಲಿದೆ, ನಿಮ್ಮಿಬ್ಬರ ನಡುವೆ ಪ್ರೀತಿ ಮೊದಲಿನಂತೆ ಮತ್ತೆ ಗಟ್ಟಿಯಾಗುವುದು. ಇನ್ನು ಪ್ರೇಮ ವಿವಾಹ ಆಗಬೇಕೆಂದು ಬಯಸುವವರಿಗೆ ಈ ಅವಧಿ ಅನುಕೂಲಕರವಾಗಿರಲಿದೆ.
ಮಿಥುನ ರಾಶಿ
ಮಿಥುನ ರಾಶಿಯವರಿಗೆ ಈ ಅವಧಿ ಚೆನ್ನಾಗಿರಲಿದೆ, ವೃತ್ತಿ ಬದಕಿನ ಸಮಸ್ಯೆಗಳು ಬಗೆಹರಿಯಿದೆ, ವ್ಯಾಪಾರಿಳಿಗೆ ಈ ತಿಂಗಳು ಉತ್ತಮವಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಪ್ರಗತಿ ಕಂಡು ಬರುವುದರಿಂದ ಸಾಲ ತೀರಿಸಲು ಸಾಧ್ಯವಾಗುವುದು. ನೀವು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ, ನೀವು ಒಳ್ಳೆಯ ಫಲಿತಾಂಶ ಪಡೆಯುತ್ತೀರಿ. ಆರೋಗ್ಯದ ಕಡೆಗೆ ಗಮನಹರಿಸಿ.
ಸಿಂಹ ರಾಶಿ
ಉದ್ಯೋಗಿಗಳಿಗೆ ಮೇ ತಿಂಗಳು ತುಂಬಾ ಒಳ್ಳೆಯದು. ನೀವು ಬಯಸಿದ ವರ್ಗಾವಣೆಯನ್ನು ಬಯಸಿದರೆ, ಈ ತಿಂಗಳು ನಿಮಗೆ ವರ್ಗಾವಣೆ ಸಿಗಲಿದೆ. ತಿಂಗಳ ಮಧ್ಯದಲ್ಲಿ ಇದ್ದಕ್ಕಿದ್ದಂತೆ ಕೆಲಸದ ಹೊರೆ ಹೆಚ್ಚಾಗಬಹುದು. ಆದರೆ ನೀವು ಕೆಲಸವನ್ನು ಸಮರ್ಥವಾಗಿ ನಿಭಾಯಿಸುತ್ತೀರಿ. ಈ ಅವಧಿಯಲ್ಲಿ ವ್ಯಾಪಾರಸ್ಥರು ಉತ್ತಮ ಪ್ರಯೋಜನ ಪಡೆಯಬಹುದು. ಆರೋಗ್ಯದ ಬಗ್ಗೆ ನೀವು ಜಾಗ್ರತೆವಹಿಸಿ.
ವೃಶ್ಚಿಕ ರಾಶಿ
ತಿಂಗಳ ಆರಂಭವು ನಿಮಗೆ ತುಂಬಾ ಒಳ್ಳೆಯದು. ಈ ತಿಂಗಳಿನಲ್ಲಿ ಬಡ್ತಿ ಸಿಗಬಹುದು, ದೊಡ್ಡ ಕೆಲಸದ ಜವಾಬ್ದಾರಿ ನಿಮಗೆ ದೊರೆಯಲಿದೆ. ವ್ಯಾಪಾರಿಗಳು ತಮ್ಮ ವ್ಯವಹಾರದಲ್ಲಿ ಉತ್ತಮ ಪ್ರಯೋಜನ ಪಡೆಯಬಹುದು. ಹಣದ ವಿಷಯದಲ್ಲಿ ಮೇ ತಿಂಗಳು ನಿಮಗೆ ತುಂಬಾ ಒಳ್ಳೆಯದು. ಆರೋಗ್ಯ ಸಮಸ್ಯೆ ಇದ್ದರೆ ಸುಧಾರಣೆ ಕಂಡು ಬರುವುದು, ಆದರೆ ನೀವು ಕುಟುಂಬಕ್ಕೂ ಸಮಯ ನೀಡಲು ಪ್ರಯತ್ನಿಸಬೇಕು, ಇಲ್ಲದಿದ್ದರೆ ಕುಟುಂಬಲ್ಲಿ ಸಮಸ್ಯೆಯಾಗಬಹುದು, ಜಾಗ್ರತೆವಹಿಸಿ.
ಮಕರ ರಾಶಿ
ಕೆಲಸದಲ್ಲಿ ಈ ಸಮಯವು ನಿಮಗೆ ಉತ್ತಮವಾಗಿರುತ್ತದೆ. ವ್ಯಾಪಾರಿಗಳು ಈ ಅವಧಿಯಲ್ಲಿ ಒಳ್ಳೆಯ ಅವಕಾಶ ಪಡೆಯುತ್ತಾರೆ. ನಿಮ್ಮ ಆದಾಯ ಹೆಚ್ಚಾಗಬಹುದು. ಸಾಲ ಪಡೆದಿದ್ದರೆ ಅದನ್ನು ತೀರಿಸಲು ಸಾಧ್ಯವಾಗುವುದು. ಹಣದ ಉಳಿತಾಯ ಹೆಚ್ಚಾಗಲಿದೆ. ಈ ಅವಧಿಯಲ್ಲಿ ಷೇರುಪೇಟೆಯಲ್ಲಿ ಹೂಡಿಕೆ ಮಾಡಿದರೆ ನಿರೀಕ್ಷಿತ ಫಲಿತಾಂಶ ಸಿಗುತ್ತದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ಉಳಿದಂತೆ ಈ ಮಾಸ ನಿಮಗೆ ಅನುಕೂಲಕರವಾಗಿದೆ.
ಮೀನ ರಾಶಿ
ತಿಂಗಳ ಆರಂಭವು ವ್ಯಾಪಾರಸ್ಥರಿಗೆ ಉತ್ತಮವಾಗಿರುವುದಿಲ್ಲ. ಗ್ರಹಗಳ ಅಶುಭ ಸ್ಥಾನದಿಂದಾಗಿ ವ್ಯಾಪಾರದಲ್ಲಿ ಸ್ವಲ್ಪ ನಷ್ಟವಾಗುವ ಸಾಧ್ಯತೆಯಿದೆ. ಆತುರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ವ್ಯಾಪಾರಿಗಳು ಈ ಅವಧಿಯಲ್ಲಿ, ನೀವು ಲಾಭ ಗಳಿಸಲು ಕೆಲವು ಅವಕಾಶಗಳನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ನೀವು ಹಿಂದೆ ಮಾಡಿದ ಹೂಡಿಕೆಗಳಿಂದ ಒಳ್ಳೆಯ ಲಾಭ ಗಳಿಸುತ್ತೀರಿ. ನಿಮ್ಮ ಕಠಿಣ ಪರಿಶ್ರಮದ ಆಧಾರದ ಮೇಲೆ ನೀವು ಉತ್ತಮ ಯಶಸ್ಸನ್ನು ಸಾಧಿಸಲು ಸಾಧ್ಯವಾಗುವುದು. ಈ ಮಾಸ ನಿಮಗೆ ಉತ್ತಮವಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications