ನವೆಂಬರ್ ಮಾಸ ಭವಿಷ್ಯ: ಈ ಮಾಸ 12 ರಾಶಿಗಳ ರಾಶಿಫಲ ಹೇಗಿದೆ?

ನವೆಂಬರ್‌ ತಿಂಗಳು ದೀಪಾವಳಿ ಹಬ್ಬದ ಸಂಭ್ರಮದೊಂದಿಗೆ ಶುರುವಾಗಲಿದೆ. ಎಲ್ಲರಿಗೂ ಈ ದೀಪಾವಳಿ ಹೊಸ ಅವಕಾಶ ತರಲಿ, ಸಮೃದ್ಧಿ ಹೆಚ್ಚಾಗಲಿ, ಕುಟುಂಬದಲ್ಲಿ ಸಂತೋಷ ನೆಲೆಸಲಿ ಎಂದು ಹಾರೈಸುತ್ತೇವೆ. ನವೆಂಬರ್ ಮಾಸದಲ್ಲಿ ಗ್ರಹಗಳ ಸ್ಥಾನದ ಪ್ರಕಾರ ದ್ವಾದಶ ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ ಬನ್ನಿ:

November 2024 horoscope

ಮೇಷ ರಾಶಿ

ನವೆಂಬರ್ ಮಾಸದಲ್ಲಿ ನೀವು ವೃತ್ತಿ ಬದುಕಿನ ಕಡೆಗೆ ಹೆಚ್ಚಿನ ಗಮನ ನೀಡುವುದರಿಂದ ಒಳ್ಳೆಯ ಫಲಿತಾಂಶ ಸಿಗಲಿದೆ. ಆರ್ಥಿಕವಾಗಿ ಈ ಸಮಯ ಚೆನ್ನಾಗಿರಲಿದೆ, ವೈವಾಹಿಕ ಬದುಕಿನಲ್ಲಿ ಖುಷಿ ಇರಲಿದೆ, ಈ ಮಾಸ ರೊಮ್ಯಾಂಟಿಕ್‌ ಜೋಡಿಗಳಾಗಿ ಕಳೆಯುವಿರಿ, ಕುಟುಂಬದಲ್ಲಿಯೂ ಸಂತೋಷದ ವಾತಾವರಣ ಇರಲಿದೆ. ಆರೋಗ್ಯ ಸರಾಸರಿಯಾಗಿರಲಿದೆ,. ಆದರೆ ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.

ವೃಷಭ ರಾಶಿ

ವೃಷಭ ರಾಶಿಯವರಿಗೆ ನವೆಂಬರ್ ಮಾಸ ವೃತ್ತಿ ಬದುಕಿನ ದೃಷ್ಟಿಯಿಂದ ನೋಡುವುದಾದರೆ ಉತ್ತಮವಾಗಿಯೇ ಇದೆ, ವ್ಯಾಪಾರಿಗಳು ತಮ್ಮ ವ್ಯವಹಾರದಲ್ಲಿ ಒತ್ತಮ ಪ್ರಗತಿ ಕಾಣಬಹುದು. ಆದರೆ ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಖರ್ಚುಗಳನ್ನು ಮಿತಿಯಲ್ಲಿ ಮಾಡಿದರೆ ಒಳ್ಳೆಯದು. ವಿದೇಶಕ್ಕೆ ಕೆಲಸಕ್ಕೆ ಹೋಗಬೇಕು ಅಥವಾ ಓದಲು ಹೋಗಬೇಕು ಎಂದು ಪ್ರಯತ್ನ ಹಾಕುತ್ತಿರುವವರೆಗೆ ಈ ಸಮಯ ಅನುಕೂಲಕರವಾಗಿದೆ. ಆರೋಗ್ಯ ಕೂಡ ಸರಾಸರಿಯಾಗಿರಲಿದೆ. ಪ್ರೀತಿ ಜೀವನದ ಬಗ್ಗೆ ನೋಡುವುದಾದರೆ ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯ ಉಂಟಾಗಬಹುದು.


ಮಿಥುನ ರಾಶಿ

ಗ್ರಹಗತಿಗಳ ಸ್ಥಾನವು ಮಿಥುನ ರಾಶಿಯವರಿಗೆ ಅನುಕೂಲಕರವಾಗಿದೆ. ವೃತ್ತಿ ಬದುಕಿನಲ್ಲಿ ಉತ್ತಮ ಅವಕಾಶಗಳು ದೊರೆಯಲಿದೆ. ಆರ್ಥಿಕ ದೃಷ್ಟಿಯಿಂದಲೂ ಈ ಸಮಯ ಅನುಕೂಲಕರವಾಗಿದೆ, ಈ ಅವಧಿಯಲ್ಲಿ ಹಣ ಉಳಿತಾಯ ಮಾಡಲು ಸಾಧ್ಯವಾಗುವುದು. ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಉತ್ತಮ ಹೊಂದಾಣಿಕೆ ಇರಲಿದೆ.

ಕರ್ಕ ರಾಶಿ

ಕರ್ಕ ರಾಶಿಯವರಿಗೆ ನವೆಂಬರ್‌ ಮಾಸ ಸ್ವಲ್ಪ ಚಾಲೇಂಜ್‌ ಮಾಸ. ವೃತ್ತಿ ಬದುಕಿನಲ್ಲಿ ಅಡೆತಡೆಗಳು ಎದುರಾಗಬಹುದು. ಹಣಕಾಸಿನ ವಿಷಯದಲ್ಲಿ ಜಾಗ್ರತೆವಹಿಸಬೇಕು. ವ್ಯಾಪಾರಿಗಳಿಗೆ ಬಯಸಿದ ಲಾಭ ಸಿಗದೆ ನಿರಾಸೆಯಾಗಬಹುದು, ಆದರೆ ನಿರಾಸೆ ಬೇಡ ತಿಂಗಳ ಮಧ್ಯದ ನಂತರ ಪರಿಸ್ಥಿತಿ ಹತೋಟಿಗೆ ಬರುತ್ತದೆ. ಆದಾಯದಲ್ಲಿ ಪ್ರಗತಿ ಕಂಡು ಬರವುದು. ಆದರೆ ಕುಟುಂಬ ಜೀವನ ಹಾಗೂ ವೈವಾಹಿಕ ಜೀವನದ ದೃಷ್ಟಿಯಿಂದ ನೋಡುವುದಾದರೆ ಈ ದಿನ ಉತ್ತಮವಾಗಿದೆ. ಆರೋಗ್ಯ ಕೂಡ ಚೆನ್ನಾಗಿರಲಿದೆ.

ಸಿಂಹ ರಾಶಿ

ಸಿಂಹ ರಾಶಿಯವರಿಗೆ ವೃತ್ತಿ ಬದುಕಿನಲ್ಲಿ ಅನೇಕ ಅಡೆತಡೆಗಳು ಎದುರಾಗಬಹುದು, ಕೆಲಸದಲ್ಲಿ ತೃಪ್ತಿ ಎಂಬುವುದು ಇರಲ್ಲ, ಕೆಲಸದ ಒತ್ತಡ ತುಂಬಾ ಇರಲಿದೆ. ವ್ಯಾಪಾರಿಗಳು ಕೂಡ ತುಂಬಾನೇ ಜಾಗ್ರತೆವಹಿಸಿ, ಯಾವುದೇ ಹೊಸ ಹೂಡಿಕೆ ಮಾಡಲು ಹೋಗಬೇಡಿ. ಆರೋಗ್ಯದ ಕಡೆಗೆ ಗಮನಹರಿಸಿ. ಡ್ರೈವ್‌ ಮಾಡುವಾಗ ಜಾಗ್ರತೆವಹಿಸಬೇಕು. ಸಂಬಂಧದಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗದಂತೆ ನೋಡಿಕೊಳ್ಳಿ.

ಕನ್ಯಾ ರಾಶಿ

ಕನ್ಯಾ ರಾಶಿಯವರಿಗೆ ನವೆಂಬರ್‌ ಮಾಸ ಅನುಕೂಲಕರವಾಗಿದೆ. ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಆದಾಯ ಚೆನ್ನಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ. ಇನ್ನು ಈ ಮಾಸ ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿರಲಿದೆ.

ತುಲಾ ರಾಶಿ

ತುಲಾ ರಾಶಿಯವರು ನವೆಂಬರ್‌ ಮಾಸದಲ್ಲಿ ಜಾಗ್ರತೆವಹಿಸಬೇಕು. ಹಣದ ಬಗ್ಗೆ ಜಾಗ್ರತೆವಹಿಸಬೇಕು. ಕುಟುಂಬ ಜೀವನದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ಆರೋಗ್ಯ ಚೆನ್ನಾಗಿರಲಿದೆ, ಕುಟುಂಬ ಜೀವನದ ದೃಷ್ಟಿಯಿಂದ ನೋಡುವುದಾದರೆ ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.

ವೃಶ್ಚಿಕ ರಾಶಿ

ವೃಶ್ಚಿಕ ರಾಶಿಯವರಿಗೆ ಈ ಅವಧಿ ಅನುಕೂಲಕರವಾಗಿದೆ, ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಈ ಅವಧಿ ಅನುಕೂಲಕರವಾಗಿದೆ. ಕುಟುಂಬ ಜೀವನದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ಆರ್ಥಿಕವಾಗಿ ಉತ್ತಮ ಪ್ರಯೋಜನ ಕಂಡು ಬರಲಿದೆ. ಆರೋಗ್ಯದ ದೃಷ್ಟಿಯಿಂದಲೂ ಈ ಅವಧಿ ಉತ್ತಮವಾಗಿರಲಿದೆ.


ಧನು ರಾಶಿ

ಧನು ರಾಶಿಯವರಿಗೆ ಈ ಸಮಯ ಅನುಕೂಲಕರವಾಗಿದೆ, ಉತ್ತಮ ಉದ್ಯೋಗವಕಾಶಗಳು ದೊರೆಯಲಿದೆ. ಹಣದ ಖರ್ಚು ಹೆಚ್ಚಿರಲಿದೆ, ಇದರಿಂದ ಸಾಲ ತೆಗೆದುಕೊಳ್ಳಬೇಕಾಗಬಹುದು.ಅಲ್ಲದೆ ಕುಟುಂಬ ಜೀವನದಲ್ಲಿ ಕೆಲ ಭಿನ್ನಾಭಿಪ್ರಾಯಗಳಿರಬಹುದು. ಕೆಲವೊಂದು ವಿಷಯಗಳು ಸಂಬಂಧವನ್ನು ಹಾಳು ಮಾಡುತ್ತದೆ, ಈ ಬಗ್ಗೆ ಜಾಗ್ರತೆವಹಿಸಿ. ಇನ್ನು ಆರೋಗ್ಯದ ಕಡೆಗೆ ಗಮನಹರಿಸಬೇಕು.

ಮಕರ ರಾಶಿ

ಮಕರ ರಾಶಿಯವರು ನವೆಂಬರ್ ತಿಂಗಳಿನಲ್ಲಿ ತುಂಬಾನೇ ಜಾಗ್ರತೆವಹಿಸಬೇಕು, ನಿಮ್ಮ ಕೆಲಸವನ್ನು ತುಂಬಾ ಎಚ್ಚರಿಕೆಯಿಂದ ಮಾಡಬೇಕು, ಇಲ್ಲದಿದ್ದರೆ ಸಮಸ್ಯೆ ಉಂಟಾಗುವುದು. ವ್ಯಾಪಾರಿಗಳು ಕೂಡ ಪ್ರತಿಯೊಂದು ನಿರ್ಧಾರವನನ್ನು ಬಹಳ ಜಾಗ್ರತೆಯಿಂದ ತೆಗೆದುಕೊಳ್ಳಬೇಕು. ಆದರೆ ಕುಟುಂಬ ಜೀವನದ ದೃಷ್ಟಿಯಿಂದ ನೋಡುವುದಾದರೆ ಈ ಅವಧಿ ನಿಮಗೆ ಅನುಕೂಲಕರವಾಗಿದೆ. ಆರ್ಥಿಕವಾಗಿ ದೊಡ್ಡ ಸಮಸ್ಯೆಯಿರಲ್ಲ, ಆದರೆ ದೊಡ್ಡ ಖರ್ಚುಗಳಿಗೆ ಕಡಿವಾಣ ಹಾಕಿದರೆ ಒಳ್ಳೆಯದು. ಆರೋಗ್ಯದ ದೃಷ್ಟಿಯಿಂದಲೂ ಈ ಸಮಯ ಉತ್ತಮವಾಗಿದೆ.

ಕುಂಭ ರಾಶಿ

ಕುಂಭ ರಾಶಿಯವರಿಗೆ ನವೆಂಬರ್ ಮಾಸ ಅಷ್ಟೊಂದು ಶುಭವಲ್ಲ. ಕೆಲಸದಲ್ಲಿ ಸಮಸ್ಯೆ ಹೆಚ್ಚಾಗಬಹುದು, ಕೆಲಸದಲ್ಲಿ ತೃಪ್ತಿ ಇರಲ್ಲ. ಕುಟುಂಬದ ಜೊತೆಗೆ ಕೆಲ ಭಿನ್ನಾಭಿಪ್ರಾಯ ಉಂಟಾಗಬಹುದು. ಆದರೆ ವೈವಾಹಿಕ ಜೀವನ ಚೆನ್ನಾಗಿರಲಿದೆ, ನಿಮ್ಮ ನಡುವೆ ಹೊಂದಾಣಿಕೆ ಇರಲಿದೆ. ಕುಂಭ ರಾಶಿಯವರ ಮೇಲೆ ಹೆಚ್ಚಿನ ಜವಾಬ್ದಾರಿ ಬೀಳಲಿದೆ.


ಮೀನ ರಾಶಿ

ವೃತ್ತಿ ಬದುಕಿನಲ್ಲಿ ಅತೃಪ್ತಿ ಇರಬಹುದು, ಕೆಲಸ ಬದಲಾವಣೆ ಬಗ್ಗೆ ಕೂಡ ಆಲೋಚಿಸಬಹುದು, ಆದರೆ ತಾಳ್ಮೆಯಿಂದ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಲಾಗುವುದು. ಕುಟುಂಬದಲ್ಲಿ ಹಲವು ಸಮಸ್ಯೆಗಳು ಬರಬಹುದು, ಆದರೆ ನೀವು ಮುಕ್ತ ಸಂವಹನ ಮಾಡಿದರೆ ಎಲ್ಲವೂ ಸರಿಯಾಗಲಿದೆ, ಆ ನಿಟ್ಟಿನಲ್ಲಿ ಪ್ರಯತ್ನ ಮಾಡಬೇಕಷ್ಟೇ. ವೈವಾಹಿಕ ಬದುಕಿನಲ್ಲಿ ಭಿನ್ನಾಭಿಪ್ರಾಯ ಹೆಚ್ಚು ಮಾಡಲು ಹೋಗಬೇಡಿ. ಆರೋಗ್ಯದ ಕಡೆ ಕೂಡ ಗಮನಹರಿಸಿ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

2024: November Month Horoscope Prediction For 12 Zodiac Signs In Kannada

November Prediction: November Masa 12 zodiac signs prediction, read on..
Story first published: Thursday, October 24, 2024, 16:29 [IST]
X
Desktop Bottom Promotion