Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಸಂಖ್ಯಾಶಾಸ್ತ್ರ ಪ್ರಕಾರ ನವೆಂಬರ್ ತಿಂಗಳು ನಿಮಗೆ ಹೇಗಿರಲಿದೆ?
ಸಂಖ್ಯಾಶಾಸ್ತ್ರ ಪ್ರಕಾರ ನವೆಂಬರ್ ತಿಂಗಳ ಭವಿಷ್ಯ ಹೇಳಲಾಗಿದ್ದು 30 ದಿನಗಳು ನಿಮಗೆ ಹೇಗಿಲಿದೆ ಎಂದು ನೋಡೋಣ ಬನ್ನಿ:
ಸಂಖ್ಯೆ 1 (ಹುಟ್ಟಿದ ದಿನಾಂಕ 1. 10, 19, 28)
ನವೆಂಬರ್ ಮಾಸ ನಿಮಗೆ ತುಂಬಾನೇ ಅನುಕೂಲಕರವಾಗಿದೆ, ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿದೆ. ವ್ಯಾಪಾರಿಗಳು ಆರ್ಥಿಕ ಪ್ರಯೋಜನ ಪಡೆಯುತ್ತೀರಿ, ವ್ಯಾಪಾರಿಗಳು ಲಾಭ ಪಡೆಯುತ್ತೀರಿ. ಆದರೆ ಸಂಬಂಧದ ಕಡೆಗೆ ಸ್ವಲ್ಪ ಗಮಹರಿಸಬೇಕು. ಕೆಲವೊಂದು ಸಂದರ್ಭದಲ್ಲಿ ಕೆಲ ಏರಳಿತಗಳಿರಬಹುದು. ಸಂಬಂಧದಲ್ಲಿ ಸ್ವಲ್ಪ ಹೊಂದಾಣಿಕೆ ಕೊರತೆ ಕಾಣಬಹುದು, ಆದರೆ ಎಲ್ಲಾ ಸರಿಪಡಿಸಲು ಪ್ರಯತ್ನಿಸಿದರೆ ಈ ತಿಂಗಳು ನಿಮಗೆ ತುಂಬಾ ಉತ್ತಮವಾಗಿರಲಿದೆ.

ಸಂಖ್ಯೆ 2 (ಹುಟ್ಟಿದ ದಿನಾಂಕ 2, 11, 20, 29)
ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ತುಂಬಾ ಉತ್ತಮವಾಗಿರಲಿದೆ. ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ. ಕೆಲಸ-ಕಾರ್ಯಗಳಲ್ಲಿ ಪ್ರಗತಿ ಕಂಡು ಬರಲಿದೆ. ಏನಾದರೂ ಹೊಸ ಕಾರ್ಯ ಪ್ರಾರಂಭಿಸಲು ಬಯಸುವುದಾದರೆ ಈ ಅವಧಿ ನಿಮಗೆ ಉತ್ತಮವಾಗಿರಲಿದೆ. ಕುಟುಂಬ ಜೀವನದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ. ಆರ್ಥಿಕ ದೃಷ್ಟಿಯಿಂದಲೂ ಈ ಅವಧಿ ನಿಮಗೆ ಅನುಕೂಲಕರವಾಗಿದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ.
ಸಂಖ್ಯೆ 3 (ಹುಟ್ಟಿದ ದಿನಾಂಕ 3, 13, 21, 30)
ಈ ಮಾಸ ಸರಾಸರಿಯಾಗಿರಲಿದೆ, ವೃತ್ತಿ ಬದುಕಿನ ದೃಷ್ಟಿಯಿಂದ, ವೈಯಕ್ತಿಕ ಬದುಕಿನ ದೃಷ್ಟಿಯಿಂದ ಈ ಅವಧಿ ನಿಮಗೆ ಉತ್ತಮವಾಗಿರಲಿದೆ. ವೃತ್ತಿ ಬದುಕಿನಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿದೆ, ವ್ಯಾಪಾರಿಗಳು ಕೂಡ ಉತ್ತಮ ಆರ್ಥಿಕ ಪ್ರಯೋಜನ ಪಡೆಯುವಿರಿ. ಕುಟುಂಬ ಜೀವನ ಚೆನ್ನಾಗಿರಲಿದೆ. ಪ್ರೇಮಿಗಳು ಮದುವೆಯ ನಿರ್ಧಾರ ತೆಗೆದುಕೊಳ್ಳಬಹುದು, ಅವಾಹಿತರಿಗೆ ಮದುವೆ ಸಂಬಂಧ ಬರಬಹುದು.
ಸಂಖ್ಯೆ 4 ( ಹುಟ್ಟಿದ ದಿನಾಂಕ 4, 13, 22, 31)
ನೀವು ಈ ಮಾಸ ಸ್ವಲ್ಪ ಹೆಚ್ಚು ತಾಳ್ಮೆಯಿಂದ ವರ್ತಿಸಿದರೆ ಒಳ್ಳೆಯದು. ಕೆಲಸದಲ್ಲಿ ಕೆಲ ಅತೃಪ್ತಿ ಕಾಡಬಹುದು, ಕೆಲಸ ಬದಲಾವಣೆ ಬಗ್ಗೆ ಕೂಡ ಆಲೋಚಿಸಬಹುದು ಅಥವಾ ಕೆಲಸದಲ್ಲಿ ಬದಲಾವಣೆ ತರಲು ಆಲೋಚಿಸಬಹುದು. ಆದರೆ ಈ ಬಗ್ಗೆ ಅನುಭವಿಗಳ ಸೂಕ್ತ ಸಲಹೆ ಪಡೆಯುವುದು ಒಳ್ಳೆಯದು. ವ್ಯಾಪಾರಿಗಳಿಗೆ ಈ ಮಾಸ ಲಾಭದಾಯಕವಾಗಿರಲಿದೆ. ಸಾಮಾಜಿಕವಾಗಿ ನಿಮ್ಮ ಖ್ಯಾತಿ ಹೆಚ್ಚಾಗಲಿದೆ, ವೃತ್ತಿ ಬದುಕಿನಲ್ಲಿ ಬೆಳವಣಿಗೆಗೆ ಮಾಡುವ ಪ್ರಯತ್ನಕ್ಕೆ ಉತ್ತಮ ಫಲ ಸಿಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ.
ಸಂಖ್ಯೆ 5 (ಹುಟ್ಟಿದ ದಿನಾಂಕ 5, 14, 23)
ಸಂಖ್ಯೆ 5 ಆಗಿದ್ದರೆ ನವೆಂಬರ್ ಮಾಸ ಮಿಶ್ರಫಲ. ಮನೆಗೆ ಸಂಬಂಧಿಸಿದ ಕೆಲ ಪ್ರಮುಖ ನಿರ್ಧಾರ ತೆಗೆದುಕೊಳ್ಳಬಹುದು. ಮನೆಯ ಸದಸ್ಯರ ಜೊತೆಗೆ ಏನಾದರೂ ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲಿದೆ. ಕೆಲಸದ ಕಡೆಗೆ ಗಮಹರಿಸಬೇಕು, ಚಿಕ್ಕ ನಿರ್ಲಕ್ಷ್ಯ ನಷ್ಟವನ್ನುಂಟು ಮಾಡಬಹುದು, ಹಾಗಾಗಿ ಈ ಬಗ್ಗೆ ಜಾಗ್ರತೆವಹಿಸಿ.
ಸಂಖ್ಯೆ 6 (ಹುಟ್ಟಿದ ದಿನಾಂಕ 6, 15, 24)
ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿದೆ, ನಿಮ್ಮ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ, ಯಾವುದೇ ದೊಡ್ಡ ಸಮಸ್ಯೆ ಎದುರಾಗಲ್ಲ. ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಸಂಬಂಧದ ದೃಷ್ಟಿಯಿಂದ ನೋಡುವುದಾದರೆ ಈ ಸಮಯದಲ್ಲಿ ಕೆಲವರ ಮುಖವಾಡ ಕಳಚಿ ಬೀಳಬಹುದು. ಆದಾಯದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ.
ಸಂಖ್ಯೆ 7 (ಹುಟ್ಟಿದ ದಿನಾಂಕ 7, 16, 25)
ಈ ತಿಂಗಳು ನಿಮಗೆ ಸರಾಸರಿಗಿಂತ ಉತ್ತಮವಾಗಿರಲಿದೆ. ಆರ್ಥಿಕವಾಗಿ ಈ ಅವಧಿ ನಿಮಗೆ ಅನುಕೂಲಕರವಾಗಿದೆ. ವ್ಯಾಪಾರದಲ್ಲಿ ಲಾಭ ಗಳಿಸಲು ಸಾಧ್ಯವಾಗುವುದು. ಇನ್ನು ಯಾವುದಾದರು ಹೊಸ ಕೆಲಸ ಪ್ರಾರಂಭಿಸಲು ಈ ಸಮಯ ಉತ್ತಮವಾಗಿದೆ. ಕೆಲಸದಲ್ಲಿ ನಿರ್ಲಕ್ಷ್ಯ ಮಾಡಬಾರದು, ವ್ಯಾಪಾರಿಗಳು ಕೂಡ ಹೆಚ್ಚಿನ ಜಾಗ್ರತೆವಹಿಸಬೇಕು. ಕುಟುಂಬ ಜೀವನದ ಕಡೆಗೆ ಗಮನಹರಿಸುವುದು ಒಳ್ಳೆಯದು.
ಸಂಖ್ಯೆ 8 (ಹುಟ್ಟಿದ ದಿನಾಂಕ 8, 17, 26)
ನೀವು ಪೂರ್ವಜರ ವ್ಯವಹಾರ ಅಥವಾ ಆಸ್ತಿಯಲ್ಲಿ ಲಾಭ ಗಳಿಸಬಹುದು. ಸರ್ಕಾರ ನಿಯಮವನ್ನು ಉಲ್ಲೇಖಿಸಬೇಡಿ. ಆರೋಗ್ಯದ ಕಡೆಗೆ ಗಮನಹರಿಸಬೇಕು, ಕೋಪ ನಿಯಂತ್ರಿಸುವುದು ಒಳ್ಳೆಯದು. ಕುಟುಂಬ ಜೀವನದ ಕಡೆಗೆ ಗಮನಹರಿಸಿ. ನಿಮ್ಮ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ.
ಸಂಖ್ಯೆ 9 (ಹುಟ್ಟಿದ ದಿನಾಂಕ 9, 18, 27)
ನ್ಯಾಯಾಲಯದ ಪ್ರಕರಣ ಕೋರ್ಟ್‌ನಲ್ಲಿದ್ದರೆ ತೀರ್ಪು ನಿಮ್ಮ ಪರವಾಗಿ ಬರಬಹುದು. ಕಾಂಟ್ರ್ಯಾಕ್ಟರ್ ಕೆಲಸ ಮಾಡುತ್ತಿದ್ದರೆ ಉತ್ತಮ ಪ್ರಯೋಜನ ಪಡೆಯುತ್ತೀರಿ. ಹೊಸ ಕೆಲಸ ಕಾರ್ಯಗಳಲ್ಲಿ ತೊಡಗಿಕೊಳ್ಳಲು ಈ ಅವಧಿ ಉತ್ತಮವಾಗಿದೆ. ಈ ಅವಧಿಯಲ್ಲಿ ನಿಮ್ಮ ಖ್ಯಾತಿ ಹೆಚ್ಚಿರಲಿದೆ. ಕುಟುಂಬದ ದೃಷ್ಟಿಯಿಂದ ಈ ಸಮಯ ನಿಮಗೆ ಅನುಕೂಲಕರವಾಗಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











