Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಯುಗಾದಿ ಭವಿಷ್ಯ 2024: ಈ ಸಂವತ್ಸರದಲ್ಲಿ ಧನು ರಾಶಿಯವರ ರಾಶಿಫಲ ಹೇಗಿದೆ?
ಧನು ರಾಶಿಯವರಲ್ಲಿ ಗ್ರಹಗಳ ಸ್ಥಾನದ ಬಗ್ಗೆ ನೋಡುವುದಾದರೆ ಶನಿಯು 3ನೇ ಮನೆಯಲ್ಲಿ, 4ನೇ ಮನೆಯಲ್ಲಿ ರಾಹು , 10ನೇ ಮನೆಯಲ್ಲಿ ಕೇತುವಿದೆ. ಗುರು ಮೇ 1ರವರೆಗೆ ಗುರು 5ನೇ ಮನೆಯಲ್ಲಿದ್ದರೆ ನಂತರ ಅಂದರೆ ಮೇ. 1ರಿಂದ 6ನೇ ಮನೆಯಲ್ಲಿ ಇರಲಿದೆ.
ಈ ಗ್ರಹಗಳ ಸ್ಥಾನ ಧನು ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ ಎಂದು ನೋಡುವುದಾದರೆ:

ಧನು ರಾಶಿಯವರ ವ್ಯಾಪಾರ ಭವಿಷ್ಯ
ಧನು ರಾಶಿಯವರಿಗೆ 5ನೇ ಮನೆಯಲ್ಲಿ ಗುರು ಇರುವುದರಿಂದ ವ್ಯವಹಾರಸ್ಥರಿಗೆ ಅನುಕೂಲಕರವಾಗಿದೆ. ನೀವು ಉತ್ತಮ ಲಾಭ ಗಳಿಸುವುದರಿಂದ ಆರ್ಥಿಕ ಬೆಳವಣಿಗೆಯಾಗಲಿದೆ. ಹೊಸ ವ್ಯವಹಾರದಲ್ಲಿ, ಪಾಲುದಾರಿಕೆಯ ವ್ಯವಹಾರದಲ್ಲಿ ಉತ್ತಮ ಲಾಭ ಗಳಿಸಲು ಸಾಧ್ಯವಾಗುವುದು. ಶನಿಯ ಅನುಕೂಲಕರ ಸ್ಥಾನದಿಂದಾಗಿ ನಿಮ್ಮ ಸಮಸ್ಯೆ ಬಗೆಹರಿಯಲಿದೆ. ವ್ಯಾಪಾರಿಗಳು ತಮ್ಮ ಪ್ರಚಾರದ ಕಡೆಯೂ ಗಮಹರಿಸಬೇಕು.
ವೃತ್ತಿ ಭವಿಷ್ಯ
ಉದ್ಯೋಗಸ್ಥರಿಗೆ ಈ ಅವಧಿ ಅನುಕೂಲಕರವಾಗಿದೆ . ಮೇ.1ರಿಂದ ಉದ್ಯೋಗದ ದೃಷ್ಟಿಯಿಂದ ಇನ್ನೂ ಒಳ್ಳೆಯದು. ನೀವು ಬಯಸಿದ ಕೆಲಸ ಪಡೆಯಲು ಸಾಧ್ಯವಾಗುವುದು.
ಶನಿಯ ಸಂಚಾರವು ಅನುಕೂಲಕರವಾಗಿರುವುದರಿಂದ , ನಿಮ್ಮ ಕಠಿಣ ಪರಿಶ್ರಮಕ್ಕೆ ಒಳ್ಳೆಯ ಫಲಿತಾಂಶ ದೊರೆಯಲಿದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು ಗಳಿಸಲು ಸಾಧ್ಯವಾಗುವುದು. ಆದರೆ ಉದ್ಯೋಗದಲ್ಲಿ ಚಿಕ್ಕ ಅಭದ್ರತೆ ಕಾಡಬಹುದು. ಆದರೆ ನೀವು ಆತ್ಮವಿಶ್ವಾಸದಿಂದ ಇರುವುದು ಒಳ್ಳೆಯದು.
ಆರ್ಥಿಕ ಭವಿಷ್ಯ
ನಿಮಗೆ ಈ ವರ್ಷ ಆರ್ಥಿಕ ದೃಷ್ಟಿಯಿಂದ ತುಂಬಾ ಒಳ್ಳೆಯದು. ಈ ವರ್ಷ ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರುವುದು. ಈ ಅವಧಿಯಲ್ಲಿ ಆರ್ಥಿಕ ಸ್ಥಿತಿ ಉತ್ತಮವಾಗಲಿದೆ. ಈ ಸಮಯದಲ್ಲಿ ಮಾಡಿದ ಹೂಡಿಕೆಯು ಭವಿಷ್ಯದಲ್ಲಿ ಉತ್ತಮ ಆದಾಯವನ್ನು ನೀಡುತ್ತದೆ. ಆದರೆ ಹೂಡಿಕೆಗೆ ಇದು ಉತ್ತಮ ಸಮಯವಾಗಿದೆ.
ಆದರೆ ಯಾವುದೇ ಹೂಡಿಕೆ ಮಾಡುವಾಗ ಅದರ ಬಗ್ಗೆ ವಿಚಾರಣೆ ಮಾಡದೆ ಹೂಡಿಕೆ ಮಾಡಲು ಹೋಗಬೇಡಿ. ಯಾವುದೇ ಆಸ್ತಿ ಹೂಡಿಕೆ ಮಾಡುವ ಮೊದಲು ಎಲ್ಲಾ ದಾಖಲೆಗಳನ್ನು ಸಂಪೂರ್ಣವಾಗಿ ಪರಿಶೀಲಿಸಿ ಮಾಡಿದರೆ ಒಳ್ಳೆಯದು. ಇಲ್ಲದಿದ್ದರೆ ನಷ್ಟ ಅನುಭವಿಸಬೇಕಾಗುವುದು. ಉಳಿದಂತೆ ಆರ್ಥಿಕವಾಗಿ ಈ ಅವಧಿ ಉತ್ತಮವಾಗಿದೆ.
ಕುಟುಂಬ ಭವಿಷ್ಯ
ಕುಟುಂಬ ಜೀವನದಲ್ಲಿ ಮಿಶ್ರಫಲ. ಮಕ್ಕಳ ಭವಿಷ್ಯದ ಚಿಂತೆ ಕಾಡುವುದು. ಅವರ ಸ್ನೇಹಿತರ ಬಗ್ಗೆಯೂ ವಿಚಾರಿಸಬೇಕು, ಮಕ್ಕಳಿಗೆ ಸಮಧಾನ ಬುದ್ಧಿ ಹೇಳಿ, ಕೋಪಗೊಂಡು ಬೊಬ್ಬೆ ಹಾಕುವುದರಿಂದ ಯಾವುದೇ ಪ್ರಯೋಜನವಿಲ್ಲ. ಸ್ಥಾನ ಕುಟುಂಬದಲ್ಲಿ ಕೆಲ ಸಮಸ್ಯೆ ತರಬಹುದು. ಆದರೆ ಶನಿಯ ಸ್ಥಾನದ ಬಲದಿಂದ ಎಲ್ಲಾ ಸಮಸ್ಯೆ ಬಗೆಹರಿಯಲಿದೆ. ಕುಟುಂಬದಲ್ಲಿ ಸಂತೋಷ ಇರಲಿದೆ.
ಆರೋಗ್ಯ ಭವಿಷ್ಯ
ನಿಮಗೆ ಮೊದಲ ನಾಲ್ಕು ತಿಂಗಳುಗಳು ಆರೋಗ್ಯಕ್ಕೆ ಅನುಕೂಲಕರವಾಗಿರುತ್ತದೆ , ಆದರೆ ನಂತರ ನೀವು ಆರೋಗ್ಯದ ಕಡೆಗೆ ತುಂಬಾನೇ ಗಮನಹರಿಸಬೇಕು. ಕಣ್ಣು ಹಾಗೂ ಬೆನ್ನಿಗೆ ಸಂಬಂಧಿಸಿದ ಸಮಸ್ಯೆ ಕಾಡಬಹುದು. ಯಾವುದೇ ಆರೋಗ್ಯ ಸಮಸ್ಯೆ ನಿರ್ಲಕ್ಷ್ಯ ಮಾಡಬೇಡಿ, ಶನಿಯ ಅನುಕೂಲಕರ ಸಾಗಣೆಯು ನಿಮ್ಮ ಆರೋಗ್ಯ ಸಮಸ್ಯೆ ಬಗೆಹರಿಯಲು ಸಹಾಯ ಮಾಡುತ್ತದೆ. ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ವಿದ್ಯಾರ್ಥಿ ಭವಿಷ್ಯ
ವಿದ್ಯಾರ್ಥಿಗಳಿಗೆ ಮಿಶ್ರ ಫಲಿತಾಂಶ. ಗುರುವಿನ ಸಂಚಾರವು ಅನುಕೂಲಕರವಾಗಿದೆ. ಉನ್ನತ ಶಿಕ್ಷಣಕ್ಕಾಗಿ ಪ್ರತಿಷ್ಠಿತ ಸಂಸ್ಥೆ ಅಥವಾ ವಿದೇಶಕ್ಕೆ ಹೋಗ ಬಯಸುವವರಿಗೆ ಇದು ವಿಶೇಷವಾಗಿ ಪ್ರಯೋಜನಕಾರಿಯಾಗಿದೆ .
ಈ ಯುಗಾದಿ ಭವಿಷ್ಯವನ್ನು ಜ್ಯೋತಿಷ್ಯಶಾಸ್ತ್ರದ ಪ್ರಕಾರ ಹೇಳಿದ್ದು ಇದುವೇ ನಿಖರ ಎಂದು ಹೇಳುತ್ತಿಲ್ಲ. ಜ್ಯೋತಿಷ್ಯ ಎಂಬುವುದು ಭವಿಷ್ಯದ ಬಗ್ಗೆ ಊಹೆ ಮಾಡುವುದು ಅಷ್ಟೇ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications