Latest Updates
-
ಆರ್ಬಿಐ ಸಭೆಗೂ ಮುನ್ನ ದಂಪತಿಗಳಿಗೆ ಎಚ್ಚರಿಕೆ: ಇಂದೇ ಈ 30 ನಿಮಿಷದ ಫೈನಾನ್ಶಿಯಲ್ ಟೆಸ್ಟ್ ಮಾಡಿ! -
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು?
ಹೊಸ ವರ್ಷ ಭವಿಷ್ಯ: 2025ರ ವರ್ಷ ಕರ್ಕ ರಾಶಿಯವರಿಗೆ ಅದ್ಭುತವಾಗಿರಲಿದೆಯೇ?
2025ನೇ ವರ್ಷವು ಕರ್ಕ ರಾಶಿಯವರಿಗೆ ಹೇಗಿರಲಿದೆ? ಹೊಸ ವರ್ಷದಲ್ಲಿ ವೃತ್ತಿ ಬದುಕು, ಆರ್ಥಿಕ ಜೀವನ, ಕುಟುಂಬ ಜೀವನ ಇವುಗಳ ಬಗ್ಗೆ ಭವಿಷ್ಯ ಏನು ಹೇಳುತ್ತದೆ ಎಂದು ನೋಡೋಣ ಬನ್ನಿ:
ವೃತ್ತಿ ಜೀವನ
ವೃತ್ತಿ ಜೀವನ ಕರ್ಕ ರಾಶಿಯವರಿಗೆ ಅನುಕೂಲಕರವಾಗಿರುತ್ತದೆ. 2024ನೇ ವರ್ಷ ನಿಮಗೆ ಸವಾಲಿನ ವರ್ಷವಾಗಿತ್ತು ಅಲ್ವಾ? ಆದರೆ ಹೊಸ ವರ್ಷ ನಿಮಗೆ ಅನುಕೂಲಕರವಾಗಿರಲಿದೆ ಎಂದು ಭವಿಷ್ಯಹೇಳುತ್ತದೆ. ವೃತ್ತಿ ಬದುಕಿನಲ್ಲಿ ಉತ್ತಮ ಅವಕಾಶ ದೊರೆಯಲಿದೆ. ನೀವು ಕೆಲಸ ಬದಲಾವಣೆ ಬಗ್ಗೆ ಯೋಚಿಸುತ್ತಿದ್ದರೆ ಈ ಅವಧಿ ಅನುಕೂಲಕರವಾಗಿರುತ್ತದೆ.

ವ್ಯಾಪಾರಿಗಳಿಗೆ ಈ ಅವಧಿ ಉತ್ತಮವಾಗಿರಲಿದೆ. ಏಪ್ರಿಲ್, ಮೇ ತಿಂಗಳಿನಲ್ಲಿ ನೀವು ಹೆಚ್ಚಿನ ಆರ್ಥಿಕ ಲಾಭ ಪಡೆಯುತ್ತೀರಿ. ಮೇ ಮಧ್ಯದಲ್ಲಿ ಸ್ವಲ್ಪ ಓಡಾಟವಿರಬಹುದು,ಆದರೆ ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಪ್ರತಿಫಲ ಪಡೆಯುತ್ತೀರಿ. ಕೆಲಸದ ಜಾಗದಲ್ಲಿ ನಿಮಗೆ ಬೆಂಬಲ ಉತ್ತಮವಾಗಿರಲಿದೆ.
ನೀವು ವಿದೇಶದಲ್ಲಿ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ಅವಧಿ ಅನುಕೂಲಕರವಾಗಿದೆ.
ಆರ್ಥಿಕ ಜೀವನ
ಆರ್ಥಿಕವಾಗಿ ಈ ಅವಧಿ ನಿಮಗೆ ಅನುಕೂಲಕರವಾಗಿದೆ. ನಿಮ್ಮ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ನೀವು ಏಪ್ರಿಲ್ ನಂತರ ಉತ್ತಮ ಆರ್ಥಿಕ ಪ್ರಯೋಜನ ಪಡೆಯುತ್ತೀರಿ. ಈ ವರ್ಷ ನಿಮ್ಮ ಶ್ರಮಕ್ಕೆ ತಕ್ಕ ಲಾಭ ಪಡೆಯುವಲ್ಲಿ ನೀವು ಯಶಸ್ವಿಯಾಗುತ್ತೀರಿ. ಈ ಹಿಂದೆ ಮಾಡಿದ ಕಠಿಣ ಶ್ರಮಕ್ಕೆ ಈ ವರ್ಷ ಉತ್ತಮ ಫಲ ಸಿಗಲಿದೆ. ನೀವು ಹೂಡಿಕೆ ಮಾಡಲು ಅಥವಾ ಹೊಸ ವ್ಯವಹಾರ ಪ್ರಾರಂಭಿಸಲು ಈ ಅವಧಿ ಉತ್ತಮವಾಗಿರಲಿದೆ. ಈ ವರ್ಷ ಹಣವನ್ನು ಉಳಿತಾಯ ಮಾಡಲು ಸಾಧ್ಯವಾಗುವುದು. ಅತಿಯಾದ ಖರ್ಚು ಯಾವುದೂ ಬರಲ್ಲ.
ಪ್ರೀತಿ, ಕುಟುಂಬ ಜೀವನ
ಪ್ರೇಮಿಗಳಿಗೆ 2025ನೇ ವರ್ಷವು ಅನುಕೂಲಕರವಾಗಿರಲಿದೆ, ಕೆಲವೊಂದು ಅಭಿಪ್ರಾಯ ವ್ಯತ್ಯಾಸ ಬಂದರೂ ಎಲ್ಲವೂ ಸರಿಯಾಗಲಿದೆ. ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು. ವಿವಾಹಿತರಿಗೆ ವರ್ಷದ ಆರಂಭದ ತಿಂಗಳು ತುಂಬಾ ಚೆನ್ನಾಗಿರಲಿದೆ. ಅದಾದ ಬಳಿಕ ಕೆಲ ಮಿಶ್ರಫಲಿತಾಂಶ ಎದುರಿಸಬಹುದು,ಏರಳಿತಗಳಿರಬಹುದು. ಸಮಧಾನದಿಂದ ಪರಿಸ್ಥಿತಿ ನಿಭಾಯಿಸಿಕೊಂಡು ಹೋಗಲು ಪ್ರಯತ್ನಿಸಬೇಕು. ಕುಟುಂಬದ ಕಡೆಗೆ ಹೆಚ್ಚಿನ ಗಮನಹರಿಸಬೇಕು.
ಈ ವರ್ಷ ವಾಹನ ಅಥವಾ ಗಾಡಿ ಖರೀದಿಸಲು ಬಯಸುವುದಾದರೆ
ಈ ವರ್ಷ ನಿಮಗೆ ಅನುಕೂಲಕರವಾಗಿರಲಿದೆ. ನೀವು ಆಸ್ತಿ ಅಥವಾ ಮನೆ ಖರೀದಿಸಲು ಬಯಸುವುದಾದರೆ ಮೇ ನಂತರ ದಿನಗಳು ನಿಮಗೆ ತುಂಬಾನೇ ಶುಭವಾಗಿದೆ. ನೀವು ಈ ನಿಟ್ಟಿನಲ್ಲಿ ಪ್ರಯತ್ನ ಮಾಡಿದರೆ ಖಂಡಿತ ನಿಮ್ಮ ಪ್ರಯತ್ನಕ್ಕೆ ಉತ್ತಮ ಫಲ ಸಿಗಲಿದೆ. ಇನ್ನು ನೀವು ವಾಹನ ಖರೀದಿಸಲು ಬಯಸಿದರೆ ಅದು ಕೂಡ ಸಾಧ್ಯವಾಗಲಿದೆ. ಒಟ್ಟಿನಲ್ಲಿ 2025ನೇ ವರ್ಷವು ನಿಮ್ಮ ಸೌಕರ್ಯ ಹೆಚ್ಚಿಸಲಿದೆ.
ಆರೋಗ್ಯ
ಆರೋಗ್ಯದ ವಿಷಯದಲ್ಲಿ ಮಿಶ್ರಫಲ, ನೀವು ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬಾರದು. ನೀವು ಆರೋಗ್ಯಕರ ಜೀವನ ಶೈಲಿ ಕಡೆಗೆ ಹೆಚ್ಚು ಗಮನಹರಿಸಿದರೆ ಒಳ್ಳೆಯದು.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications