Latest Updates
-
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ
ಮಾರ್ಚ್‌ನಲ್ಲಿ 4 ಪ್ರಮುಖ ಗ್ರಹಗಳ ಸಂಚಾರ: ಶನಿ-ಮಂಗಳ ಸಂಯೋಗದಿಂದ ಈ 4 ರಾಶಿಯವರು ಜಾಗ್ರತೆ
ಮಾರ್ಚ್ ತಿಂಗಳಿನಲ್ಲಿ 4 ಪ್ರಮುಖ ಗ್ರಹಗಳ ಸಂಚಾರವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಬುಧ ಗ್ರಹ ಮಾರ್ಚ್ 7 ರಂದು ಮೀನ ರಾಶಿಯಲ್ಲಿ ಸಾಗಲಿದೆ. ಮಾರ್ಚ್ 12 ರಂದು, ಶುಕ್ರನು ಶನಿಯ ರಾಶಿಗೆ ಪ್ರವೇಶಿಸುತ್ತಾನೆ.
ಅದೇ ಸಮಯದಲ್ಲಿ, ಎರಡು ದಿನಗಳ ನಂತರ, ಅಂದರೆ ಮಾರ್ಚ್ 14 ರಂದು, ಸೂರ್ಯನು ಮೀನ ರಾಶಿಗೆ ಸಂಚರಿಸಲಿದೆ. ನಾಲ್ಕು ದಿನಗಳ ನಂತರ, ಮಾರ್ಚ್ 18 ರಂದು, ಶನಿಯು ಉದಯಿಸುತ್ತಾನೆ. ಈ ಗ್ರಹಗಳ ಚಲನೆಯ ಬದಲಾವಣೆಯು 4 ರಾಶಿಯವರಿಗೆ ಪ್ರಯೋಜನಕಾರಿಯಾಗಲಿದೆ. 4 ರಾಶಿಯವರು ತುಂಬಾನೇ ಜಾಗ್ರತೆವಹಿಸಿ.

ಮೇಷ ರಾಶಿ
ಬದಲಾವಣೆಗಳು ಮೇಷ ರಾಶಿಯವರಿಗೆ ಒಳ್ಳೆಯದು. ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ನಿಮ್ಮ ಮನಸ್ಸು ಸಂತೋಷದಿಂದ ಕೂಡಿರುತ್ತದೆ ಮತ್ತು ನೀವು ಧನಾತ್ಮಕ ಭಾವನೆ ಹೊಂದುತ್ತೀರಿ. ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಹೊಸ ಲಾಭದ ಮೂಲಗಳು ಸೃಷ್ಟಿಯಾಗುತ್ತವೆ. ವೃತ್ತಿಜೀವನದಲ್ಲಿ ಹೊಸ ಎತ್ತರವನ್ನು ತಲುಪಬಹುದು.
ವೃಷಭ ರಾಶಿ
ವೃಷಭ ರಾಶಿಯವರು ಗ್ರಹಗಳ ಸಂಚಾರದ ಲಾಭವನ್ನು ಪಡೆಯುತ್ತಾರೆ. ಜೀವನದಲ್ಲಿ ಸಂತೋಷ ಇರಲಿದೆ, ಕೆಲಸದಲ್ಲಿ ಬರುವ ಅಡೆತಡೆಗಳು ನಿವಾರಣೆಯಾಗಿ ಯಶಸ್ಸು ಸಿಗಲಿದೆ. ಕೆಲಸ ಮಾಡುವ ಜನರು ಬಡ್ತಿಯೊಂದಿಗೆ ಆರ್ಥಿಕ ಪ್ರಯೋಜನಗಳನ್ನು ಸಹ ಪಡೆಯಬಹುದು.
ಕರ್ಕ ರಾಶಿ
ಕರ್ಕ ರಾಶಿಯವರಿಗೆ ಮಾರ್ಚ್ ತಿಂಗಳು ಉತ್ತಮವಾಗಿರುತ್ತದೆ. ಕಾರ್ಯಕ್ಷೇತ್ರದಲ್ಲಿ ಪ್ರಗತಿ ಕಂಡುಬರಲಿದೆ. ವ್ಯಾಪಾರ ಮಾಡುವವರಿಗೆ ಸಮಯ ಉತ್ತಮವಾಗಿರುತ್ತದೆ ಮತ್ತು ಅವರು ಲಾಭವನ್ನೂ ಮಾಡಬಹುದು. ಸರ್ಕಾರಿ ನೌಕರಿ ಸಿಗುವ ಸಾಧ್ಯತೆಗಳೂ ಇವೆ. ಆರ್ಥಿಕ ಸ್ಥಿತಿ ಮೊದಲಿಗಿಂತ ಉತ್ತಮವಾಗಿರುತ್ತದೆ.
ಕನ್ಯಾ ರಾಶಿ
ಉದ್ಯೋಗದ ನಿರೀಕ್ಷೆಯಲ್ಲಿದ್ದ ಕನ್ಯಾ ರಾಶಿಯವರಿಗೆ ಯಶಸ್ಸು ಸಿಗಬಹುದು. ವೈವಾಹಿಕ ಜೀವನ ಉತ್ತಮವಾಗಿರಲಿದೆ. ಕೆಲಸದ ಸ್ಥಳದಲ್ಲಿ ಬಡ್ತಿ ದೊರೆಯಬಹುದು. ದೀರ್ಘಕಾಲದ ಮೊಕದ್ದಮೆಗಳು ಮತ್ತು ನ್ಯಾಯಾಲಯದ ಪ್ರಕರಣಗಳು ಕೊನೆಗೊಳ್ಳಬಹುದು. ಆದ್ದರಿಂದ ಈ ಅವಧಿ ಅನುಕೂಲಕರವಾಗಿದೆ.
ಈ ರಾಶಿಯವರು ಜಾಗ್ರತೆವಹಿಸಿ
ಜ್ಯೋತಿಷ್ಯದ ಮಂಗಳ ಮತ್ತು ಸಂಯೋಗ ಒಳ್ಳೆಯದಲ್ಲ ಎಂದು ಹೇಳಲಾಗುವುದು. ಮಾರ್ಚ್ ತಿಂಗಳಿನಲ್ಲಿ ಮಂಗಳ ಮತ್ತು ಶನಿಯ ಸಂಯೋಗವಿರುವುದಿಂದ ಈ 4 ರಾಶಿಯವರು ಜಾಗ್ರತೆವಹಿಸಬೇಕು
ತುಲಾ ರಾಶಿ: ವೃತ್ತಿ ಜೀವನದಲ್ಲಿ ಸವಾಲುಗಳಿರಬಹುದು
ಈ ಅವಧಿಯಲ್ಲಿ ತುಲಾ ರಾಶಿಯವರು ಜಾಗ್ರತೆವಹಿಸಬೇಕು. ಈ ಅವಧಿಯಲ್ಲಿ ವೃತ್ತಿ ಜೀವನದಲ್ಲಿ ಸವಾಲುಗಳು ಎದುರಾಗಬಹುದು. ವ್ಯವಹಾರದಲ್ಲಿ ಹಲವು ಅಡೆತಡೆಗಳು ಎದುರಾಗಬಹುದು. ಅಲ್ಲದೆ ವೈವಾಹಿಕ ಜೀವನದಲ್ಲಿಯೂ ಸಮಸ್ಯೆಗಳಿರಬಹುದು. ಏನೋ ಒಂದು ರೀತಿಯ ಗೊಂದಲ, ಜಗಳ ಉಂಟಾಗುವುದು. ಈ ಸಮಯದಲ್ಲಿ ಮನೆ ನೆಮ್ಮದಿ ಹಾಳಾಗುವುದು.
ಮಕರ ರಾಶಿ: ನಿಮ್ಮ ಕೋಪವನ್ನು ನಿಯಂತ್ರಿಸಿ
ಮಂಗಳ ಹಾಗೂ ಶನಿ ಗ್ರಹದ ಸಂಯೋಗದಿಂದಾಗಿ ಕುಟುಂಬದಲ್ಲಿ ಭಿನ್ನಾಭಿಪ್ರಾಯವಿರಬಹುದು. ಈ ಅವಧಿಯಲ್ಲಿ ನೀವು ಕೋಪವನ್ನು ನಿಯಂತ್ರಿಸಿದರೆ ಒಳ್ಳೆಯದು. ಕೆಲಸದಲ್ಲಿ ಕೆಲವು ಸವಾಲುಘಲು ಎದುರಾಗಬಹುದು.
ಧನು ರಾಶಿ: ಆರ್ಥಿಕ ಸ್ಥಿತಿ ಚೆನ್ನಾಗಿರಲ್ಲ
ಈ ಅವಧಿಯಲ್ಲಿ ನೀವೆಷ್ಟೇ ಶ್ರಮ ಹಾಕಿದರೆ ಅದಕ್ಕೆ ತಕ್ಕ ಫಲ ಸಿಗುವುದು ಕಷ್ಟವಾಗುವುದು. ಆರ್ಥಿಕ ಲಾಭ ಗಳಿಸಲು ಕಷ್ಟವಾಗುವುದು, ಮಕ್ಕಳಿಗೆ ಸಂಬಂಧಿಸಿದ ಚಿಂತೆ ಕಾಡಬಹುದು. ಅಲ್ಲದೆ ಹಣದ ಖರ್ಚು ಅಧಿಕವಿರಲಿದೆ.
ಮೀನ ರಾಶಿ: ಮಾನಸಿಕ ಒತ್ತಡ ಹೆಚ್ಚಾಗಲಿದೆ
ಈ ಅವಧಿಯಲ್ಲಿ ಮಾನಸಿಕ ಒತ್ತಡ ಹೆಚ್ಚಾಗಲಿದೆ. ಈ ಅವಧಿಯಲ್ಲಿ ಖರ್ಚು ಹೆಚ್ಚಾಗಲಿದೆ, ಮಾನಸಿಕ ಒತ್ತಡ ಹೆಚ್ಚಾಗುವುದು, ಕುಟುಂಬದ ಸಮಸ್ಯೆಗಳು ನಿಮ್ಮನ್ನು ಕಾಡುವುದು. ಆದ್ದರಿಂದ ಈ ಅವಧಿಯಲ್ಲಿ ನೀವು ಹೆಚ್ಚಿನ ತಾಳ್ಮೆವಹಿಸಬೇಕು.
ಗ್ರಹಗಳ ಪ್ರಭಾವ ಈ ನಾಲ್ಕು ರಾಶಿಗಳ ಮೇಲೆ ಅಷ್ಟು ಅನುಕೂಲಕರವಲ್ಲ, ಹಾಗಾಗಿ ಈ ಅವಧಿಯಲ್ಲಿ ಮಂಗಳ-ಶನಿಗೆ ಪರಿಹಾರ ಮಾಡಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











