ದಿನ ಭವಿಷ್ಯ ಏಪ್ರಿಲ್ 13: ಶನಿವಾರದ ಈ ದಿನ ನಿಮ್ಮ ರಾಶಿಗೆ ಹೇಗಿರಲಿದೆ?

ವೈದಿಕ ಶಾಸ್ತ್ರದ ಪ್ರಕಾರ ಶನಿವಾರದ ಈ ದಿನ (ಏಪ್ರಿಲ್ 13) ನಿಮಗೆ ಹೇಗಿರಲಿದೆ ಎಂದು ನೋಡೋಣ ಬನ್ನಿ:

ಮೇಷ ರಾಶಿ

ಕೆಲಸದ ದೃಷ್ಟಿಯಿಂದ ನೋಡುವುದಾದರೆ ಈ ದಿನ ಶುಭವಾಗಿದೆ. ಉದ್ಯಮಿಗಳ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಬಲವಾದ ಸಾಧ್ಯತೆಯಿದೆ. ನಿಮ್ಮ ಯಾವುದೇ ಕೆಲಸವು ಹಣದ ಕೊರತೆಯಿಂದ ಸ್ಥಗಿತಗೊಂಡಿದ್ದರೆ, ಅದನ್ನು ಇಂದು ಪೂರ್ಣಗೊಳಿಸಬಹುದು. ಮನೆಯ ವಾತಾವರಣ ಚೆನ್ನಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 35
ಶುಭ ಸಮಯ: ಬೆಳಿಗ್ಗೆ 6:05 ರಿಂದ 8 ರವರೆಗೆ

e Dina Rashi Bhavishya

ವೃಷಭ ರಾಶಿ

ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಸಮಸ್ಯೆಗಳಿರಬಹುದು. ಆರ್ಥಿಕ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ಈ ದಿನ ನಿಮ್ಮ ಎಲ್ಲಾ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗುವುದು. ಈ ದಿನ ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 40
ಶುಭ ಸಮಯ: ಸಂಜೆ 6 ರಿಂದ ರಾತ್ರಿ 9 ರವರೆಗೆ

ಮಿಥುನ ರಾಶಿ

ವಿದ್ಯಾರ್ಥಿಗಳು ನಕಾರಾತ್ಮಕತೆಯು ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಬಿಡಬಾರದು. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ವ್ಯಾಪಾರಿಗಳಿಗೆ ಮಿಶ್ರ ಫಲ. ನಿಮ್ಮ ವ್ಯಾಪಾರ ಯೋಜನೆಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡುವ ಮೊದಲು ಎಚ್ಚರಿಕೆಯಿಂದ ಯೋಚಿಸಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 19
ಶುಭ ಸಮಯ: ಮಧ್ಯಾಹ್ನ 12 ರಿಂದ 2:45 ರವರೆಗೆ

ಮಿಥುನ ರಾಶಿ

ಮಿಥುನ ರಾಶಿಯವರಿಗೆ ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿದೆ. ವೈವಾಹಿಕ ಜೀವನದಲ್ಲಿ ಮಾಧುರ್ಯ ಹೆಚ್ಚಾಗಲಿದೆ. ಈ ದಿನ ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 12
ಶುಭ ಮುಹೂರ್ತ: ಬೆಳಗ್ಗೆ 7:35 ರಿಂದ 11 ರವರೆಗೆ

ಕರ್ಕ ರಾಶಿ

ಕರ್ಕ ರಾಶಿಯವರಿಗೆ ಈ ದಿನ ಶುಭ ದಿನ, ಈ ದಿನ ಆರ್ಥಿಕವಾಗಿ ಒಳ್ಳೆಯದಿದೆ. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆಯಿದೆ. ಕಚೇರಿಯ ವಾತಾವರಣವು ಸಕಾರಾತ್ಮಕವಾಗಿರುತ್ತದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಈ ದಿನ ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 12
ಶುಭ ಮುಹೂರ್ತ: ಬೆಳಗ್ಗೆ 7:35 ರಿಂದ 11 ರವರೆಗೆ

ಸಿಂಹ ರಾಶಿ

ಹಣದ ವಿಷಯದಲ್ಲಿ ಇಂದು ನಿಮಗೆ ಏರಿಳಿತಗಳಿಂದ ಕೂಡಿರಲಿದೆ, ಈ ದಿನ ಹಣವನ್ನು ನೋಡಿಕೊಂಡು ಖರ್ಚು ಮಾಡಿದರೆ ಒಳ್ಳೆಯದು. ಉದ್ಯಮಿಗಳು ಜಾಗ್ರತೆವಹಿಸಿ. ವೈವಾಹಿಕ ಜೀವನದಲ್ಲಿ ನಿಮ್ಮ ಕೋಪದ ಸ್ವಭಾವವು ಸಮಸ್ಯೆ ಉಂಟು ಮಾಡಬಹುದು. ಆರೋಗ್ಯ ದುರ್ಬಲವಾಗಿರುತ್ತವೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 9
ಶುಭ ಸಮಯ: ಮಧ್ಯಾಹ್ನ 12 ರಿಂದ 2:50 ರವರೆಗೆ

ಕನ್ಯಾ ರಾಶಿ

ಹಣದ ವಿಷಯದಲ್ಲಿ ಇಂದು ನಿಮಗೆ ಒಳ್ಳೆಯ ದಿನವಾಗಲಿದೆ. ನೀವು ಸಣ್ಣ ಹೂಡಿಕೆ ಮಾಡಲು ಯೋಜಿಸುತ್ತಿದ್ದರೆ,ಈ ದಿನ ಜಾಗ್ರತೆವಹಿಸಿ. ಕಛೇರಿಯಲ್ಲಿ ನಿಮ್ಮ ಕೆಲಸದಲ್ಲಿ ಸ್ವಲ್ಪ ಅಡೆತಡೆಗಳು ಉಂಟಾಗಬಹುದು, ಆದರೆ ಈ ಸಮಸ್ಯೆ ತಾತ್ಕಾಲಿಕವಾಗಿರುತ್ತದೆ. ಈ ದಿನ ಹಣದ ಖರ್ಚು ಅಧಿಕವಿರಲಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಸರಾಸರಿಯಾಗಿರುತ್ತದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 26
ಶುಭ ಸಮಯ: ಸಂಜೆ 5 ರಿಂದ ರಾತ್ರಿ 8 ರವರೆಗೆ

ತುಲಾ ರಾಶಿ

ಅನಗ್ಯತ ವಿಷಯಗಳ ಬಗ್ಗೆ ಚಿಂತೆ ಮಾಡುವುದನ್ನು ಬಿಡಿ. ಸದ್ಯೋಗಿಗಳಿಗೆ ಕಚೇರಿಯಲ್ಲಿ ಅತ್ಯಂತ ಸಮತೋಲಿತ ರೀತಿಯಲ್ಲಿ ವರ್ತಿಸುವಂತೆ ಸಲಹೆ ನೀಡಲಾಗುವುದು. ವ್ಯಾಪಾರಿಗಳು ಇಂದು ದೊಡ್ಡ ಆರ್ಥಿಕ ಲಾಭವನ್ನು ಗಳಿಸುವ ಸಾಧ್ಯತೆಯಿದೆ. ವಿಶೇಷವಾಗಿ ನೀವು ಬಟ್ಟೆ ವ್ಯಾಪಾರಿಯಾಗಿದ್ದರೆ, ನೀವು ದೊಡ್ಡ ಆರ್ಡರ್ ಪಡೆಯಬಹುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 19
ಶುಭ ಸಮಯ: ಬೆಳಗ್ಗೆ 4:20 ರಿಂದ 9 ರವರೆಗೆ

ವೃಶ್ಚಿಕ ರಾಶಿ

ಪ್ರೇಮಿಗಳಿಗೆ ಈ ದಿನ ರೊಮ್ಯಾಂಟಿಕ್ ದಿನವಾಗಲಿದೆ. ಹಣದ ವಿಷಯದಲ್ಲಿ ದಿನವು ಉತ್ತಮವಾಗಿರುತ್ತದೆ. ನೀವು ಹಣ ಗಳಿಸುವ ಅವಕಾಶಗಳಿವೆ. ವ್ಯಾಪಾರಿಗಳು ಹೂಡಿಕೆ ಮಾಡಲು ಉತ್ತಮ ಅವಕಾಶವನ್ನು ಪಡೆಯುತ್ತಾರೆ. ಆರೋಗ್ಯದ ದೃಷ್ಟಿಯಿಂದ ದಿನವು ಅನುಕೂಲಕರವಾಗಿರುತ್ತದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 6
ಶುಭ ಸಮಯ: ಸಂಜೆ 5 ರಿಂದ ರಾತ್ರಿ 8 ರವರೆಗೆ

ಧನು ರಾಶಿ

ಹಣದ ವಿಷಯದಲ್ಲಿ ಇಂದು ನಿಮಗೆ ಮಿಶ್ರಫಲ, ಈ ದಿನ ಖರ್ಚು ಅಧಿಕವಿರಲಿದೆ. ಅನೇಕ ಅನಗ್ಯತ ಆಲೋಚನೆಗಳು ಮನಸ್ಸಿನಲ್ಲಿ ಬರುತ್ತವೆ. ಆ ಬಗ್ಗೆ ಚಿಂತಿಸಬೇಡಿ ಎಂದು ಸಲಹೆ ನೀಡಲಾಗುವುದು. ವ್ಯಾಪಾರಿಗಳಿಗೆ ದೀರ್ಘ ಪ್ರಯಾಣದ ಸಾಧ್ಯತೆ ಇದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 11
ಶುಭ ಸಮಯ: ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ರವರೆಗೆ

ಮಕರ ರಾಶಿ

ಆರೋಗ್ಯ ಸಮಸ್ಯೆಯಿಂದಾಗಿ ಹಣದ ಖರ್ಚು ಅಧಿಕ ಇರಲಿದೆ. ವ್ಯಾಪಾರಿಗಳು ಹೊಸ ವ್ಯಾಪಾರ ಪ್ರಸ್ತಾಪವನ್ನು ಪಡೆಯಬಹುದು. ನಿಮ್ಮ ಪ್ರೀತಿಪಾತ್ರರು ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ನೀವು ಭಾವಿಸುವಿರಿ. ನೀವು ಅವರೊಂದಿಗೆ ಮುಕ್ತವಾಗಿ ಮಾತನಾಡುವುದು ಒಳ್ಳೆಯದು.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 5
ಶುಭ ಸಮಯ: ಸಂಜೆ 4:55 ರಿಂದ 7 ರವರೆಗೆ

ಕುಂಭ ರಾಶಿ

ಕೆಲಸದ ದೃಷ್ಟಿಯಿಂದ ಈ ದಿನ ಉತ್ತಮ ದಿನವಾಗಿದೆ. ನೀವು ಉದ್ಯಮಿಯಾಗಿದ್ದರೆ ಮತ್ತು ದೀರ್ಘಕಾಲದವರೆಗೆ ಕೆಲವು ಕೆಲಸವನ್ನು ಪೂರ್ಣಗೊಳಿಸಲು ಶ್ರಮಿಸುತ್ತಿದ್ದರೆ, ನಿಮ್ಮ ಕೆಲಸ ಇಂದು ಪೂರ್ಣಗೊಳ್ಳಬಹುದು. ನೀವು ಹಣಕಾಸಿನ ಲಾಭವನ್ನು ಸಹ ಪಡೆಯುವ ಸಾಧ್ಯತೆಯಿದೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 10
ಶುಭ ಸಮಯ: ಬೆಳಿಗ್ಗೆ 7 ರಿಂದ 10:30 ರವರೆಗೆ

ಮೀನ ರಾಶಿ

ಹಣದ ವಿಷಯದಲ್ಲಿ ಈ ದಿನ ಮಿಶ್ರಫಲ. ನೀವು ಬ್ಯಾಂಕಿನಿಂದ ಸಾಲ ಪಡೆದಿದ್ದರೆ, ಅದರ ಕಂತುಗಳನ್ನು ಪಾವತಿಸುವಲ್ಲಿ ನಿರ್ಲಕ್ಷ್ಯ ವಹಿಸಬೇಡಿ. ಕಚೇರಿಯಲ್ಲಿ ಪ್ರತಿಕೂಲ ಸಂದರ್ಭಗಳನ್ನು ಎದುರಿಸಬೇಕಾಗಬಹುದು. ಸಣ್ಣ ವ್ಯಾಪಾರಸ್ಥರಿಗೆ ಲಾಭದಾಯಕ ದಿನವಾಗಿದೆ. ಆರೋಗ್ಯ ಹದಗೆಡುವ ಸಾಧ್ಯತೆ ಇದೆ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 24
ಶುಭ ಸಮಯ: ಸಂಜೆ 6:15 ರಿಂದ 8:15 ರವರೆಗೆ

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

April 13 Daily Horoscope Prediction Of 12 Zodiac Signs 2024 in Kannada

Explore Dina Rashi Bhavishya (ದಿನ ಭವಿಷ್ಯ) Today's Astrology Prediction For Aries, Taurus, Gemini, Cancer, Leo, Virgo, Libra, Scorpio, Pieces, Capricorn, Aquarius, And Pisces In Kannada
X
Desktop Bottom Promotion