Latest Updates
-
ಗಣೇಶೋತ್ಸವದ ಸೌಂಡ್ ಕಿರಿಕಿರಿ: ನೆರೆಹೊರೆಯವರ ಜೊತೆ ಜಗಳವಿಲ್ಲದೆ ನೆಮ್ಮದಿಯ ನಿದ್ರೆ ಪಡೆಯುವುದು ಹೇಗೆ? -
ದೆಹಲಿ ಮಳೆ: ನಿಮ್ಮ ಮನೆಯಲ್ಲಿ ಬೂಷ್ಟು ಮತ್ತು ತೇವಾಂಶ ತಡೆಯಲು 45 ನಿಮಿಷದ ಸಿಂಪಲ್ ಪ್ಲಾನ್! -
ಗಣೇಶ ಹಬ್ಬದ ಮೋದಕ: ಶುಗರ್ ಏರಿಕೆಯಾಗದಂತೆ ಸವಿಯಲು ಇಲ್ಲಿವೆ 5 ಆರೋಗ್ಯಕರ ಟಿಪ್ಸ್ -
ಐಫೋನ್ 18 ಪ್ರೋ ಪ್ರೀ-ಆರ್ಡರ್: ₹7,000 ಕ್ಯಾಶ್ಬ್ಯಾಕ್ ಪಡೆಯುವುದು ಹೇಗೆ? ನಕಲಿ ಆಫರ್ಗಳಿಂದ ಎಚ್ಚರ! -
ದೆಹಲಿ ಮಳೆ: ಜಾರಿ ಬೀಳದಂತೆ ಎಚ್ಚರ, ಬೆನ್ನುನೋವಿನಿಂದ ಮುಕ್ತಿ ಪಡೆಯಲು 12 ನಿಮಿಷದ ವರ್ಕೌಟ್ ರೂಟಿನ್! -
ಗಣೇಶೋತ್ಸವದ ಸಂಭ್ರಮದಲ್ಲಿ ದಂಪತಿಗಳ ಜಗಳ ಬೇಡ: ಸಮಯ ಮತ್ತು ಬಜೆಟ್ ನಿರ್ವಹಣೆಗೆ ಇಲ್ಲಿದೆ ಸಿಂಪಲ್ ಪ್ಲಾನ್! -
ಗಣೇಶೋತ್ಸವ 2026: ಮಳೆಯ ನಡುವೆಯೂ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಇಲ್ಲಿದೆ ಸರಳ ಟಿಪ್ಸ್! -
ಪ್ಯಾಕ್ ಮಾಡಿದ ಆಹಾರದಲ್ಲಿ ಸಕ್ಕರೆ, ಉಪ್ಪು ಹೆಚ್ಚಿದ್ದರೆ ಕೆಂಪು ಲೇಬಲ್: ಸುಪ್ರೀಂ ಕೋರ್ಟ್ ಪ್ರಶ್ನೆ, ಗ್ರಾಹಕರಿಗೆ ಸಿಗುತ್ತಾ ಪರಿಹಾರ? -
ಝೊಮ್ಯಾಟೋದಲ್ಲಿ 'ಪೇ ಆನ್ ಡೆಲಿವರಿ' ಶುಲ್ಕದ ಶಾಕ್: ನಿಮ್ಮ ಬಿಲ್ ಹೆಚ್ಚಾಗುತ್ತಿದೆಯೇ? ಬಚಾವ್ ಆಗೋದು ಹೇಗೆ? -
ಗಣೇಶೋತ್ಸವದ ಮಳೆ ಮತ್ತು ದರ್ಶನದ ಕ್ಯೂ: ಆಯಾಸವಿಲ್ಲದೆ ಬಪ್ಪನ ದರ್ಶನ ಪಡೆಯಲು ಇಲ್ಲಿದೆ ಬೆಸ್ಟ್ ಟಿಪ್ಸ್!
ದಿನ ಭವಿಷ್ಯ: ಆಗಸ್ಟ್ ಮಾಸದ ಮೊದಲ ದಿನ 12 ರಾಶಿಗಳಿಗೆ ಹೇಗಿರಲಿದೆ?
ಮೇಷ ರಾಶಿ
ಮೇಷ ರಾಶಿಯವರಿಗೆ ಈ ದಿನ ಅನುಕೂಲಕರವಾಗಿದೆ, ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಯಾವುದೇ ರಿಸ್ಕ್ ತೆಗೆದುಕೊಳ್ಳಬೇಡಿ. ಕೆಲಸದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕುಟುಂಬದಲ್ಲಿ ಸಂತೋಷ ಇರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಈ ದಿನ ಆರೋಗ್ಯ ಉತ್ತಮವಾಗಿರಲಿದೆ.

ವೃಷಭ ರಾಶಿ
ಈ ದಿನ ಅಷ್ಟೊಂದು ಅನುಕೂಲಕರವಲ್ಲ, ಪೂರ್ವಜರ ಆಸ್ತಿಗೆ ಸಂಬಂಧಿಸಿದ ಯಾವುದೇ ವಿಷಯವು ನ್ಯಾಯಾಲಯದಲ್ಲಿ ನಡೆಯುತ್ತಿದ್ದರೆ, ಅದು ಪರಸ್ಪರ ಒಪ್ಪಿಗೆಯಿಂದ ಇತ್ಯರ್ಥವಾಗುವ ಸಾಧ್ಯತೆಯಿದೆ. ವಿರೋಧಿಗಳ ಜಾಗ್ರತೆವಹಿಸಿ, ಇ ದಿನ ಯಾವುದೇ ಸಾಲದ ವ್ಯವಹಾರ ಮಾಡಬೇಡಿ, ವೈವಾಹಿಕ ಜೀವನ ಚೆನ್ನಾಗಿರಲಿದೆ, ನೀವು ಇತ್ತೀಚೆಗೆ ಯಾವುದೇ ಆಪರೇಷನ್ ಅಥವಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೆ, ವಿಶ್ರಾಂತಿಗೆ ಗಮನ ಕೊಡಿ.
ಮಿಥುನ ರಾಶಿ
ಈ ದಿನ ನಿಮಗೆ ಶುಭವಾಗಿದೆ, ನಿಮ್ಮ ಗೌರವ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ. ಆರ್ಥಿಕ ಪರಿಸ್ಥಿತಿ ಬಲಗೊಳ್ಳಲಿದೆ. ವ್ಯಾಪಾರಿಗಳಿಗೆ ಧನ ಲಾಭವಿರಲಿದೆ. ಕೆಲಸದ ಜಾಗದಲ್ಲಿ ಕೋಪದಿಂದ ವರ್ತಿಸಬೇಡಿ. ಕುಟುಂಬ ಜೀವನ ಚೆನ್ನಾಗಿರಲಿದೆ.ಕೆಲಸದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಮಲಬದ್ಧತೆ , ಅಸಿಡಿಟಿ, ಗ್ಯಾಸ್ ಮೊದಲಾದ ಸಮಸ್ಯೆಗಳಿರಬಹುದು.
ಕರ್ಕ ರಾಶಿ
ಈ ದಿನ ನೀವು ಕೆಲಸದ ಜಾಗದಲ್ಲಿ ಜಾಗ್ರತೆವಹಿಸಿ. ಹಣಕಾಸಿನ ವಿಷಯದಲ್ಲಿ ಈ ದಿನ ಅನುಕೂಲಕರವಲ್ಲ, ಆರ್ಥಿಕ ಪರಿಸ್ಥಿತಿ ಹದಗೆಡುವ ಲಕ್ಷಣಗಳಿವೆ. ವ್ಯಾಪಾರಿಗಳು ಹೆಚ್ಚಿನ ಶ್ರಮಹಾಕಿದರೆ ಮಾತ್ರ ಈ ದಿನ ಸರಾಸರಿಯಾಗಿರಲಿದೆ. ಕೆಲಸದಲ್ಲಿ ಈ ದಿನ ಉತ್ತಮವಾಗಿದೆ. ಕೆಲಸ ಹುಡುಕುತ್ತಿರುವವರು ಮತ್ತಷ್ಟು ಶ್ರಮ ಮಾಡಬೇಕು, ವೈವಾಹಿಕ ಜೀವನದಲ್ಲಿ ಕೆಲ ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲಿದೆ. ಆಹಾರದ ಬಗ್ಗೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗುತ್ತವೆ. ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ನಿಮ್ಮ ಹಾಗೂ ಸಂಗಾತಿಯ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಈ ದಿನ ಎಲ್ಲವೂ ಯೋಜನೆಯಂತೆಯೇ ನಡೆಯಲಿದೆ, ಆರೋಗ್ಯ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಈ ದಿನ ನೀವು ನಿಮ್ಮ ಕಠಿಣ ಶ್ರಮಕ್ಕೆ ಉತ್ತಮ ಪಲ ಪಡೆಯುತ್ತೀರಿ. ನಿಮ್ಮ ಆಪ್ತರ ಜೊತೆ ಮನಸ್ತಾಪವಿದ್ದರೆ ಅದು ಬಗೆಹರಿಯಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ವೈವಾಹಿಕ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯಬೇಡ. ಪ್ರೇಮಿಗಳ ಸಂಬಂಧ ಮತ್ತಷ್ಟು ಗಟ್ಟಿಯಾಗುವುದು.
ತುಲಾ ರಾಶಿ
ಈ ದಿನ ನಿಮಗೆ ಶುಭವಾಗಿದೆ. ನೀವು ನಿರೀಕ್ಷಿಸಿದಂತೆ ಫಲಿತಾಂಶವನ್ನು ಪಡೆಯುತ್ತೀರಿ. ವೃತ್ತಿ ಜೀವನದಲ್ಲಿ ಕೆಲವು ಬದಲಾವಣೆಗಳಾಗಬಹುದು. ಹಣಕ್ಕೆ ಸಂಬಂಧಿಸಿದ ವ್ಯವಹಾರಗಳನ್ನು ಮಾಡುವಾಗ ಜಾಗ್ರತವಹಿಸಿ. ವ್ಯಾಪಾರಿಗಳಿಗೆ ಈ ದಿನ ಲಾಭ ಗಳಿಸಲು ಸಾಧ್ಯವಾಗುವುದು. ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಕುಟುಂಬದಲ್ಲಿನ ಸಮಸ್ಯೆ ಬಗೆಹರಿಯಲಿದೆ, ಹಾಗಾಗಿ ಕುಟುಂಬದಲ್ಲಿ ಉತ್ತಮ ವಾತಾವರಣ ಇರಲಿದೆ. ಅವಾಹಿತರಿಗೆ ಶೀಘ್ರದಲ್ಲಿ ಮದುವೆ ನಿಶ್ಚಿಯವಾಗಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ಮನೆಯ ವಾತಾವರಣ ಇರಲಿದೆ, ಆದರೆ ಈ ದಿನ ನೀವು ಚಿಕ್ಕ ವಿಷಯಕ್ಕೆ ಕೋಪಗೊಳ್ಳಬೇಡಿ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ಕೆಲಸದ ಜಾಗದಲ್ಲಿ ಬೇರೆಯವರ ಕೆಲಸದಲ್ಲಿ ಹಸ್ತಕ್ಷೇಪ ಮಾಡಬೇಡಿ. ನೀವು ವಿವಾಹಿತರಾಗಿದ್ದರೆ ವೈವಾಹಿಕ ಜೀವನದ ಕಡೆಗೆ ಗಮನಹರಿಸಿ. ಆರೋಗ್ಯದ ಕಡೆಗೆ ಗಮನಹರಿಸಿ.
ಧನು ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ. ಕೆಲಸ ಕಾರ್ಯಗಳಲ್ಲಿ ಯಾವುದೇ ಅಡೆತಡೆ ಇರಲ್ಲ, ವಿದ್ಯಾರ್ಥಿಗಳಿಗೆ ಈ ದಿನ ಉತ್ತಮವಾಗಿದೆ, ಈ ದಿನ ನಿಮ್ಮ ಆಪ್ತರ ವರ್ತನೆ ನಿಮ್ಮ ಮನಸ್ಸಿಗೆ ಬೇಸರವನ್ನುಂಟು ಮಾಡಬಹುದು, ಚಿಕ್ಕ ವಿಷಯವನ್ನು ಮನಸ್ಸಿಗೆ ತೆಗೆದುಕೊಳ್ಳಬೇಡಿ, ಉದ್ಯೋಗಿಗಳಿಗೆ ಈ ದಿನ ಅನುಕೂಲಕರವಾಗಿದೆ. ಮನೆಯಲ್ಲಿ ಕೆಲ ಭಿನ್ನಾಭಿಪ್ರಾಯಗಳಿರಬಹುದು, ಅದನ್ನು ಬಗೆಹರಿಸಲು ಪ್ರಯತ್ನಿಸಬೇಕು.
ಮಕರ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಈ ದಿನ ಕೆಲಸದಲ್ಲಿ ಒತ್ತಡವಿರಲಿದೆ, ಆದರೆ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗುವುದು, ಕುಟುಂಬದ ಜೊತೆ ಸಮಯ ಕಳೆಯುತ್ತೀರಿ, ಈ ದಿನ ಆರೋಗ್ಯ ಚೆನ್ನಾಗಿರಲಿದೆ. ಮನೆಯಲ್ಲಿ ಶಾಂತಿಯುತ ವಾತಾವರಣ ಇರುತ್ತದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ.
ಕುಂಭ ರಾಶಿ
ಮನೆಯಲ್ಲಿನ ಸಮಸ್ಯೆ ದೊಡ್ಡದಾಗಲು ಬಿಡಬೇಡಿ, ಈ ದಿನ ನೀವು ಕೋಪ ನಿಯಂತ್ರಿಸಿದರೆ ಪರಿಸ್ಥಿತಿ ನಿಭಾಯಿಸುವುದು ಸುಲಭವಾಗುವುದು. ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿರಲಿದೆ, ವ್ಯಾಪಾರಿಗಳಿಗೆ ಈ ದಿನ ಶುಭವಾಗಿದೆ, ಆದರೆ ಈ ಅವಧಿಯಲ್ಲಿ ವ್ಯಾಪಾರ ವಿಸ್ತರಣೆ ಮಾಡಲು ಹೋಗಬೇಡಿ. ವೈವಾಹಿಕ ಜೀವನದಲ್ಲಿನ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿ. ಆರೋಗ್ಯ ಸಮಸ್ಯೆಗಳಿರಬಹುದು.
ಮೀನ ರಾಶಿ
ನಿಮ್ಮ ದೊಡ್ಡ ಚಿಂತೆ ಬಗೆಹರಿಯಲಿದೆ, ಹಾಗಾಗಿ ನೀವು ಈ ದಿನ ಆರಾಮವಾಗಿ ಇರುತ್ತೀರಿ, ನಿಮ್ಮ ಎಲ್ಲಾ ಕೆಲಸಗಳು ಯೋಜನೆಯ ಪ್ರಕಾರ ಪೂರ್ಣಗೊಳ್ಳುತ್ತವೆ ಮತ್ತು ನಿಮಗಾಗಿ ಸಾಕಷ್ಟು ಸಮಯವನ್ನು ನೀವು ಪಡೆಯುತ್ತೀರಿ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕುಟುಂಬ, ವೈವಾಹಿಕ ಜೀವನ ಚೆನ್ನಾಗಿರಲಿದೆ, ಈ ದಿನ ವಾಹನ ಓಡಿಸುವಾಗ
ಜಾಗ್ರತೆವಹಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
