Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Dina Bhavishya: ಆಗಸ್ಟ್ 13ರ ಬುಧವಾರ ಯಾರಿಗೆಲ್ಲಾ ಶುಭಕರ?
ವೈದಿಕ ಶಾಸ್ತ್ರದ ಪ್ರಕಾರ ಆಗಸ್ಟ್ 13ರಂದು 12 ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಮೇಷ ರಾಶಿಯವರಿಗೆ ಇಂದು ಅನುಕೂಲಕರ ದಿನವಾಗಿರಲಿದೆ. ನಿಮ್ಮ ಆರೋಗ್ಯದಲ್ಲಿ ಸುಧಾರಣೆ ಆಗಲಿದೆ. ನಿಮ್ಮ ಹಲವು ಕೆಲಸದಲ್ಲಿ ಯಶಸ್ಸು ಸಿಗಲಿದೆ. ಪ್ರಯಾಣಗಲು ನಿಮಗೆ ಲಾಭವಾಗಲಿದೆ. ವ್ಯಾಪಾರಿಗಳು ಈ ದಿನ ದೊಡ್ಡ ಮಟ್ಟದ ಲಾಭ ಇರಲಿದೆ. ಸಮಯದೊಳಗೆ ನಿಮ್ಮೆಲ್ಲಾ ಕೆಲಸಗಳ ಮುಗಿಸುವಿರಿ.
ವೃಷಭ ರಾಶಿ
ಇಂದು ನೀವು ಮನೆಯಿಂದ ಹೊರಗುಳಿಯುವ ಸಮಯ ಹೆಚ್ಚಾಗಲಿದೆ. ನಿಮ್ಮ ಪ್ರಯಾಣಗಳು ಹೆಚ್ಚಾಗಲಿದೆ. ಸರ್ಕಾರಿ ನೌಕರರಿಗೆ ಬಹಳ ಸಂಕಷ್ಟಕರ ದಿನ ಎನ್ನಬಹುದು. ನಿಮ್ಮ ಹಣಕಾಸು ಸ್ಥಿತಿಯಲ್ಲಿ ಬದಲಾವಣೆಗೆ ಒಳಗಾಗಬಹುದು. ಮನೆ ಕುರಿತಾದ ಚಿಂತೆಯೊಂದು ಕಾಡಲಿದೆ.

ಮಿಥುನ ರಾಶಿ
ಮಿಥುನ ರಾಶಿಯವರಿಗೆ ಈ ದಿನವು ದೊಡ್ಡ ಸವಾಲಿನ ದಿನ ಇದೆ. ಯಾರೊಂದಿಗೂ ಈ ದಿನ ವ್ಯವಹಾರದ ಕುರಿತಾದ ಚರ್ಚೆಗಳ ಮಾಡಬೇಡಿ, ಇಲ್ಲವೆ ಹಣಕಾಸು ಕುರಿತ ಒಪ್ಪಂದಗಳು, ಸಾಲ ನೀಡಲು ಮುಂದಾಗಬೇಡಿ.
ಕರ್ಕ ರಾಶಿ
ಕರ್ಕ ರಾಶಿಯ ಜನರಿಗೆ ಮಿಶ್ರ ಫಲದ ದಿನ. ಈ ದಿನ ಆದಾಯಕ್ಕಿಂತ ಹೆಚ್ಚು ವೆಚ್ಚ ಇರಬಹುದು. ನಿಮ್ಮ ಸಾಲದ ಪ್ರಮಾಣ ಹೆಚ್ಚಾಗಬಹುದು. ಪ್ರಯಾಣಗಳಲ್ಲಿ ನೀವು ಅಂದುಕೊಂಡ ಫಲಿತಾಂಶ ಇರುವುದಿಲ್ಲ. ಗೃಹಿಣಿಯಲ್ಲಿ ಖರ್ಚು ಹೆಚ್ಚಾಗಲಿದೆ.
ಸಿಂಹ ರಾಶಿ
ಸಿಂಹ ರಾಶಿಯವರಲ್ಲಿ ಈ ದಿನ ಅತ್ಯಂತ ಶುಭಕರ. ನೀವು ಪ್ರೀತಿ ಪ್ರೇಮದ ವಿಚಾರದಲ್ಲಿ ಶುಭಕರ. ಆಪ್ತರೊಬ್ಬರಿಂದ ಸಿಹಿ ಸುದ್ದಿ ಪಡೆಯಲಿದ್ದೀರಿ. ಆರ್ಥಿಕ ಸ್ಥಿತಿ ಸುಧಾರಿಸಲಿದೆ. ನಿಮ್ಮಿಂದ ಇತರರಿಗೆ ಸಹಾಯ ಮಾಡುವಂತಹ ದಿನ.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಈ ದಿನ ಮಿಶ್ರ ಫಲ. ನಿಮ್ಮ ಕೆಲಸದಲ್ಲಿ ಹೆಚ್ಚು ಗಮನವಿಡಿ. ಮುಂದಿನ ಭವಿಷ್ಯದ ಯೋಜನೆ ಕುರಿತು ನಿರ್ಧಾರ ತೆಗೆದುಕೊಳ್ಳುತ್ತೀರಿ. ಆರೋಗ್ಯದ ಕಡೆಗೆ ಹೆಚ್ಚು ಗಮನವಿಡಿ. ದೀರ್ಘಕಾಲದ ಸಮಸ್ಯೆಗಳು ಮತ್ತಷ್ಟು ಹೆಚ್ಚಾಗುವ ಅಪಾಯವಿದೆ.
ತುಲಾ ರಾಶಿ
ತುಲಾ ರಾಶಿಯ ಜನರಿಗೆ ಕೆಲಸದ ಸ್ಥಳದಲ್ಲಿಂದು ಅಪಾಯ ಎದುರಾಗಬಹುದು. ಹೀಗಾಗಿ ಎಚ್ಚರಿಕೆಯಿಂದ ಇರಬೇಕಿದೆ. ಸಮಯದ ಒಳಗೆ ನಿಮ್ಮ ಕೆಲಸಗಳ ಪೂರ್ಣ ಮಾಡಿ. ಪೋಷಕರ ಆರೋಗ್ಯದಲ್ಲಿ ಏರುಪೇರು ಸಂಭವ. ಹಿರಿಯರ ಮಾತುಗಳ ನಿರ್ಲಕ್ಷ್ಯ ಮಾಡಬೇಡಿ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯ ಜನರಿಗೆ ಈ ದಿನ ಅಚ್ಚರಿಯ ಫಲಿತಾಂಶ ಬರಲಿದೆ. ನಿಮ್ಮ ದೈನಂದಿನ ಕೆಲಸದಲ್ಲಿ ಅಡ್ಡಿಯಾಗಿದ್ದ ವಿಚಾರವೊಂದು ಬಗೆಹರಿಯಲಿದೆ. ಹಿಂದಿನ ಆರ್ಥಿಕ ಸಮಸ್ಯೆಯೊಂದು ಮತ್ತೆ ಮುನ್ನೆಲೆಗೆ ಬರಬಹುದು.
ಧನು ರಾಶಿ
ಧನು ರಾಶಿಯ ಮಂದಿಗೆ ಈ ದಿನ ಮಿಶ್ರ ಫಲವಿದೆ. ನಿಮ್ಮ ಬಹುದಿನದ ಕನಸೊಂದನ್ನು ನನಸು ಮಾಡಿಕೊಳ್ಳಲು ಇಂದು ಒಂದು ಹೆಜ್ಜೆ ಮುಂದಿಡಲಿದ್ದೀರಿ. ನಿಮ್ಮ ಹಣಕಾಸು ಸ್ಥಿತಿ ಸುಧಾರಿಸಲಿದೆ. ಬ್ಯಾಂಕಿಂಗ್ ವಿಚಾರವಾಗಿ ನೀವು ಆಪ್ತರೊಬ್ಬರ ಭೇಟಿಯಾಗಬಹುದು.
ಮಕರ ರಾಶಿ
ಮಕರ ರಾಶಿಯವರು ಈ ದಿನ ದೊಡ್ಡ ಸವಾಲು ಎದುರಿಸುತ್ತೀರಿ. ವಾಹನ ಸಂಬಂಧವಾಗಿ ಖರ್ಚು ಅಥವಾ ಅಪಾಯ ಕೂಡ ಎದುರಾಗಬಹುದು. ಬಹಳ ದಿನಗಳಿಂದ ಮಾಡಿ ಮುಗಿಸಬೇಕಿದ್ದ ಕೆಲಸವೊಂದನ್ನು ಪೂರ್ಣ ಮಾಡಲಿದ್ದೀರಿ.
ಕುಂಭ ರಾಶಿ
ಕುಂಭ ರಾಶಿಯ ಜನರಿಗೆ ಸಮಸ್ಯೆಗಳಿಂದ ತುಂಬಿದ ದಿನವಾಗಬಹುದು. ನಿಮ್ಮ ಆರೋಗ್ಯದಲ್ಲಿ ಏರುಪೇರು ನೋಡಬಹುದು. ಆಪ್ತರೊಬ್ಬರು ನಿಮಗೆ ಹಣಕಾಸು ವಿಚಾರವಾಗಿ ಸಮಸ್ಯೆ ತರಬಹುದು. ವ್ಯಾಪಾರಿಗಳಿಗೆ ಸಾಮಾನ್ಯ ದಿನವಾಗಿರಲಿದೆ.
ಮೀನ ರಾಶಿ
ಮೀನ ರಾಶಿಯ ಜನರಿಗೆ ಬಹಳ ದಿನದ ಬಯಕೆ ಈಡೇರಬಹುದು. ಸಮಸ್ಯೆಗಳನ್ನು ದೂರ ಮಾಡುವ ನಿಮ್ಮ ಪ್ರಯತ್ನದಲ್ಲಿ ಶುಭವಿದೆ. ಗೃಹಿಣಿಯರಿಗೆ ಈ ದಿನ ಶುಭವಾಗಲಿದೆ. ಪ್ರಮಾಣಗಳ ಮಾಡಬೇಕಾಗಬಹುದು. ಬ್ಯಾಂಕಿಂಗ್ ವಿಚಾರದಲ್ಲಿ ನೀವು ಅಂದುಕೊಂಡಿದ್ದ ಕೆಲಸ ಆಗಬಹುದು.



Click it and Unblock the Notifications