Latest Updates
-
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ!
ಮಾಸ ಭವಿಷ್ಯ: ಆಗಸ್ಟ್ ಮಾಸದಲ್ಲಿ 12 ರಾಶಿಗಳ ಆರ್ಥಿಕ ಸ್ಥಿತಿ ಹೇಗಿರಲಿದೆ?
ಆಗಸ್ಟ್ ಮಾಸದ ಭವಿಷ್ಯ ಪ್ರಕಾರ ಈ ತಿಂಗಳಿನಲ್ಲಿ 12 ರಾಶಿಗಳ ಆರ್ಥಿಕ ಭವಿಷ್ಯ ಹೇಗಿರಲಿದೆ?
ಮೇಷ ರಾಶಿ
ಮೇಷ ರಾಶಿಯವರಿಗೆ ಆದಾಯ ಚೆನ್ನಾಗಿರಲಿದೆ, ಅದರೆ ಹಣದ ವಿಷಯದಲ್ಲಿ ಜಾಗ್ರತೆವಹಿಸಿ, ಹೆಚ್ಚು ಖರ್ಚು ಮಾಡಲು ಹೋಗಬೇಡಿ. ನಿಮ್ಮ ಬಜೆಟ್‌ಗೆ ಹೆಚ್ಚು ಖರ್ಚು ಮಾಡಬೇಡಿ. ಹಣವನ್ನು ಉಳಿತಾಯ ಮಾಡಲು ಪ್ರಯತ್ನಿಸಬೇಕು. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ, ಇಲ್ಲದಿದ್ದರೆ ಆಸ್ಪತ್ರೆಗೆ ಹಣ ಖರ್ಚಾಗುವುದು.

ವೃಷಭ ರಾಶಿ
ಆರ್ಥಿಕ ಜೀವನ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಹಣದ ಕೊರತೆಯಿಲ್ಲದ ಕಾರಣ ಅಪೂರ್ಣವಾಗಿದ್ದ ಕೆಲಸಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುವುದು. ಅಲ್ಲದೆ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪುರ್ನಗೊಳ್ಳುವುದರಿಂದ ಆರ್ಥಿಕ ಲಾಭ ಉಂಟಾಗುವುದು.
ಮಿಥುನ ರಾಶಿ
ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಮಿಶ್ರಫಲ. ಈ ಅವಧಿಯಲ್ಲಿ ಉದ್ಯಮಿಗಳು, ವ್ಯಾಪಾರಸ್ಥರು ಕೆಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಆದರೆ ಕಠಿಣಶ್ರಮದಿಂದ ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕಂಪನಿಗಳಗಳಲ್ಲಿ ಕೆಲಸ ಮಾಡುವವರಿಗೆ ಈ ಅವಧಿ ಉತ್ತಮವಾಗಿದೆ.
ಕರ್ಕ ರಾಶಿ
ಆದಾಯದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿದೆ, ನೀವು ನಿಮ್ಮ ಆದಾಯದಲ್ಲಿ ಪ್ರಗತಿಯನ್ನು ಕಾಣುತ್ತೀರಿ, ಇನ್ನು ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವುದರಿಂದ ಆರ್ಥಿಕ ಸಮಸ್ಯೆ ದೂರಾಗಲಿದೆ. ಆರ್ಥಿಕ ವಿಷಯದಲ್ಲಿ ಅಸ್ಡಡೆ ಮಾಡಬೇಡಿ. ಇನ್ನು ಈ ಸಮಯದಲ್ಲಿ ಬೇರೆಯವರು ಹೇಳಿದರು ಎಂದು ಹೂಡಿಕೆ ಮಾಡಲು ಹೋಗಬೇಡಿ.
ಸಿಂಹ ರಾಶಿ
ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮವಾಗಿದೆ. ಆದರೆ ಖರ್ಚು ಕೂಡ ಹೆಚ್ಚಿರಲಿದೆ, ನೀವು ಖರ್ಚು ವೆಚ್ಚಗಳನ್ನು ಸರಿಯಾಗಿ ನಿಭಾಯಿಸದಿದ್ದರೆ ಬಜೆಟ್ ಲೆಕ್ಕಾಚಾರ ನಿಮ್ಮ ಕೈ ಮೀರಿ ಹೋಗಬಾರದು, ಅದ್ದರಿಂದ ಜಾಗ್ರತೆವಹಿಸಿ.
ಕನ್ಯಾ ರಾಶಿ
ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮವಾಗಿದೆ, ತಿಂಗಳ ಆರಂಭವು ನಿಮಗೆ ತುಂಬಾ ಒಳ್ಳೆಯದು. ಆರ್ಥಿಕ ಲಾಭದ ಬಲವಾದ ಸಾಧ್ಯತೆಯಿದೆ. ಅಂತಹ ಪರಿಸ್ಥಿತಿಯಲ್ಲಿ, ಹಣದ ಕೊರತೆಯಿಂದ ಸ್ಥಗಿತಗೊಂಡಿದ್ದ ನಿಮ್ಮ ಎಲ್ಲಾ ಕೆಲಸಗಳು ಪೂರ್ಣಗೊಳ್ಳಲಿದೆ, ಈ ಸಮಯದಲ್ಲಿ ನೀವು ಯೋಚಿಸದೆ ಖರ್ಚು ಮಾಡಲು ಹೋಗದಿರುವುದು ಒಳ್ಳೆಯದು.
ತುಲಾ ರಾಶಿ
ಈ ಅವಧಿ ನಿಮಗೆ ಆರ್ಥಿಕವಾಗಿ ಉತ್ತಮವಾಗಿದೆ, ಆದರೆ ನೀವು ಹಣದ ವಿಷಯದಲ್ಲಿ ಅಥವಾ ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ಮಾಡಿದರೆ ಹಣದ ಖರ್ಚು ಹೆಚ್ಚಾಗುವುದು, ಆದ್ದರಿಂದ ಜಾಗ್ರತೆವಹಿಸಿ. ಖರ್ಚು ಹೆಚ್ಚಿರಬಹುದು, ಈ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ.
ವೃಶ್ಚಿಕ ರಾಶಿ
ಆರ್ಥಿಕ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿದೆ. ಈ ಮಾಸದಲ್ಲಿ ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಪ್ರಗತಿಯನ್ನು ಕಾಣುತ್ತೀರಿ, ಆಸ್ತಿಗೆ ವ್ಯವಹಾರ ಮಾಡುವುದಾದರೆ ಈ ಅವಧಿಯಲ್ಲಿ ಲಾಭ ಗಳಿಸಲು ಸಾಧ್ಯವಾಗುವುದು.ಹೊಸ ವ್ಯವಹಾರಕ್ಕೆ ಅಥವಾ ಹೊಸ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಈ ಅವಧಿ ಮಂಗಳಕರವಾಗಿದೆ, ನಿಮ್ಮ ಆರ್ಥಿಕ ಸ್ಥಿತಿ ಮತ್ತಷ್ಟು ಬಲವಾಗಲಿದೆ.
ಧನು ರಾಶಿ
ಈ ಅವಧಿ ನಿಮಗೆ ಉತ್ತಮವಾಗಿದೆ, ಆದರೆ ಅದೃಷ್ಟ ನಂಬಿ ಕೂರಬೇಡಿ, ಈ ಅವಧಿಯಲ್ಲಿ ನಿರೀಕ್ಷೆ ಮಾಡಿದ ಪ್ರತಿಫಲ ಪಡೆಯಬಹುದು. ಆದರೆ ನೀವು ತಾಳ್ಮೆಯಿಂದ ಕಾಯುವುದು ಒಳ್ಳೆಯದು. ಉದ್ಯಮಿಗಳಿಗೆ ಈ ಅವಧಿ ಚೆನ್ನಾಗಿರಲಿದೆ.
ಮಕರ ರಾಶಿ
ವ್ಯಾಪಾರಿಗಳಿಗೆ ಈ ದಿನ ಲಾಭವಾಗಲಿದೆ, ವ್ಯಾಪಾರಸ್ಥರು ಸರ್ಕಾರಿ ವಲಯದಿಂದ ಲಾಭ ಪಡೆಯಬಹುದು. ಆದಾಗ್ಯೂ, ಯಶಸ್ಸನ್ನು ಸಾಧಿಸಲು ಯಾವುದೇ ಶಾರ್ಟ್‌ಕಟ್ ಇಲ್ಲ, ಇದಕ್ಕಾಗಿ ನೀವು ಶ್ರಮಿಸಬೇಕು. ತ್ವರಿತ ಲಾಭ ಗಳಿಸಲು ಯಾವುದೇ ತಪ್ಪು ಮಾರ್ಗವನ್ನು ಅನುಸರಿಸಬೇಡಿ. ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸುವ ಅಗತ್ಯವಿದೆ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಈ ಅವಧಿ ಉತ್ತಮವಾಗಿದೆ. ಆದರೆ ಪ್ರಾರಂಭದಲ್ಲಿ ಸ್ವಲ್ಪ ಕಷ್ಟವಾಗಬಹುದು, ನಂತರ ಎಲ್ಲವೂ ಸರಿಯಾಗಲಿದೆ. ವೃತ್ತಿ ಜೀವನದಲ್ಲಿನ ಸವಾಲುಗಳು ದೂರಾಗಲಿದೆ. ವ್ಯಾಪಾರಿಗಳಿಗೆ ಉತ್ತಮವಾಗಿದೆ. ಲಾಭ ಗಳಿಸಲು ಕೆಲವು ಉತ್ತಮ ಅವಕಾಶಗಳನ್ನು ಸಹ ಪಡೆಯುತ್ತೀರಿ.
ಮೀನ ರಾಶಿ
ಹಣಕ್ಕೆ ಸಂಬಂಧಿಸಿದ ಯಾವುದೇ ವ್ಯವಹಾರ ಮಾಡಬೇಡಿ. ನೀವು ಅನಗತ್ಯ ವೆಚ್ಚಗಳನ್ನು ತಪ್ಪಿಸಬೇಕು. ಕೆಲಸದ ವಿಷಯದಲ್ಲಿ ಆಗಸ್ಟ್ ತಿಂಗಳು ನಿಮಗೆ ಬಹಳ ಮುಖ್ಯವಾಗಿರುತ್ತದೆ. ಉದ್ಯಮಿಗಳ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆಯಿದೆ. ಹಣಕಾಸಿನ ವಿಚಾರದಲ್ಲಿ ಅಗತ್ಯಕ್ಕಿಂತ ಹೆಚ್ಚು ಯಾರನ್ನೂ ನಂಬಬೇಡಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications