ಜೂನ್‌ 29ಕ್ಕೆ ಬುಧ ಕರ್ಕ ರಾಶಿಗೆ ಹೋದಾಗ ಈ ರಾಶಿಯವರು ಆರ್ಥಿಕ ಪ್ರಗತಿ ಕಾಣುವಿರಿ

ಜ್ಯೋತಿಷ್ಯದಲ್ಲಿ ತಾರ್ಕಿಕ ಗ್ರಹವೆಂದು ಕರೆಯಲ್ಪಡುವ ಬುಧವು ನಮ್ಮ ಬುದ್ಧಿಶಕ್ತಿ ಹಾಗೂ ಸಂವಹನದ ಮೇಲೆ ಪ್ರಭಾವ ಬೀರುತ್ತದೆ. ಇದೇ ಜೂನ್ 29 ರಂದು ಮಧ್ಯಾಹ್ನ 12:13 ಕ್ಕೆ ಬುಧನು ಮಿಥುನ ರಾಶಿ ಬಿಟ್ಟು ಕರ್ಕ ರಾಶಿಗೆ ಸಂಚರಿಸಲಿದೆ. ಬುಧನು ಮಿಥುನ ಕರ್ಕ ರಾಶಿಗೆ ಸಂಚರಿಸಿದಾಗ ಈ ರಾಶಿಯವರು ಆರ್ಥಿಕ ಪ್ರಯೋಜನ ಪಡೆಯಲಿದ್ದಾರೆ.

ಈ ರಾಶಿಯವರ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ...

Budha Sanchar In Karka Rashi

ಮೇಷ ರಾಶಿ

ಮೇಷ ರಾಶಿಯವರಿಗೆ ಈ ಸಮಯ ತುಂಬಾ ಅನುಕೂಲಕರವಾಗಿರುತ್ತದೆ. ಈ ಸಮಯದಲ್ಲಿ ನಿಮ್ಮ ವೃತ್ತಿ ಬದುಕಿನಲ್ಲಿ ತುಂಬಾನೇ ಒಳ್ಳೆಯ ಅವಕಾಶ ಸಿಗಲಿದೆ, ನೀವು ಕೆಲಸ ಬದಲಾಯಿಸಲು ಯೋಚಿಸುತ್ತಿದ್ದರೆ ಈ ಸಮಯ ತುಂಬಾ ಚೆನ್ನಾಗಿರಲಿದೆ. ಸ್ವಂತ ವ್ಯವಹಾರ ಮಾಡುತ್ತಿರುವವರು ಈ ಸಮಯದಲ್ಲಿ ತುಂಬಾನೇ ಒಳ್ಳೆಯ ಪ್ರಯೋಜನ ಪಡೆಯುತ್ತೀರಿ. ಈ ಸಮಯದಲ್ಲಿ ಯಾವುದೇ ಆರ್ಥಿಕ ತೊಂದರೆ ಇರಲ್ಲ, ಹೀಗಾಗಿ ನಿಮ್ಮ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರೆಯುತ್ತದೆ. ಅಲ್ಲದೆ ಈ ಸಮಯದಲ್ಲಿ ಹಣ ಉಳಿತಾಯ ಮಾಡಲು ಸಾಧ್ಯವಾಗುವುದು. ಇನ್ನು ನೀವು ಎಲ್ಲಾದರೂ ಹಣ ಹೂಡಿಕೆ ಮಾಡಿದ್ದರೆ ಅದರಿಂದ ಉತ್ತಮ ಪ್ರಯೋಜನ ಪಡೆಯುತ್ತೀರಿ. ಈ ಸಮಯದಲ್ಲಿ ನೀವು ಉತ್ತಮ ಲಾಭ ಪಡೆಯಲು ಸಾಧ್ಯವಾಗಬಹುದು, ಅದು ನಿಮ್ಮ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ.

ಕುಟುಂಬ ಜೀವನದ ದೃಷ್ಟಿಯಿಂದ ನೋಡುವುದಾದರೂ ಈ ಸಮಯ ನಿಮಗೆ ತುಂಬಾ ಚೆನ್ನಾಗಿರಲಿದೆ. ನಿಮ್ಮಿಬ್ಬರ ಬಾಂಧವ್ಯ ಮತ್ತಷ್ಟು ಗಟ್ಟಿಯಾಗುವುದು, ಅಲ್ಲದೆ ಈ ಅವಧಿಯಲ್ಲಿ ನಿಮ್ಮ ಆರೋಗ್ಯ ಕೂಡ ಚೆನ್ನಾಗಿರಲಿದೆ.


ಮಿಥುನ ರಾಶಿ

ಜೂನ್‌ 29ಕ್ಕೆ ನಿಮ್ಮ ರಾಶಿಯನ್ನು ಬಿಟ್ಟು ಕರ್ಕ ರಾಶಿಗೆ ಚಲಿಸಿದಾಗ ಆರ್ಥಿಕವಾಗಿ ನೀವು ತುಂಬಾ ಒಳ್ಳೆಯ ಪ್ರಯೋಜನ ಪಡೆಯುತ್ತೀರಿ. ಈ ಅವಧಿಯಲ್ಲಿ ನಿಮ್ಮ ವೃತ್ತಿ ಬದುಕಿನಲ್ಲಿ ಬೆಳೆಯಲು ಒಳ್ಳೆ-ಒಳ್ಳೆಯ ಅವಕಾಶಗಳು ದೊರೆಯಲಿದೆ. ಸಂಬಳ ಹೆಚ್ಚಾಗಲಿದೆ, ವ್ಯಾಪಾರಿಗಲು ಅರ್ಥಿಕವಾಗಿ ಹೆಚ್ಚಿನ ಪ್ರಯೋಜನ ಪಡೆಯುತ್ತೀರಿ.

ಇನ್ನು ಯಾವುದಾದರು ಆಸ್ತಿ ಮಾರಾಟಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ಸಮಯ ಒಳ್ಳೆಯದಿದೆ. ಪೂರ್ವಜರ ಆಸ್ತಿಯಿಂದ ಆರ್ಥಿಕ ಪ್ರಯೋಜನಗಳನ್ನು ಸಹ ಪಡೆಯಬಹುದು. ಆರ್ಥಿಕವಾಗಿ ತುಂಬಾ ಉತ್ತಮ ಪ್ರಯೋಜನ ಪಡೆಯುತ್ತೀರಿ. ಉದ್ಯೋಗ ಬದಲಾವಣೆಗೆ ಪ್ರಯತ್ನಿಸುತ್ತಿದ್ದರೆ ಒಳ್ಳೆಯ ಪ್ರಯೋಜನ ಪಡೆಯುತ್ತೀರಿ.

ಪ್ರೇಮಿಗಳಿಗೆ ಈ ಅವಧಿ ಅನುಕೂಲಕರವಾಗಿದೆ. ಈ ಸಮಯದಲ್ಲಿ ನೀವು ಮತ್ತು ನಿಮ್ಮ ಸಂಗಾತಿ ನಿಮ್ಮ ಆಲೋಚನೆಗಳನ್ನು ಪರಸ್ಪರ ಹಂಚಿಕೊಳ್ಳುತ್ತೀರಿ. ಮಿಥುನ ರಾಶಿಯವರ ಆರೋಗ್ಯವು ಚೆನ್ನಾಗಿರಲಿದೆ.

ಕರ್ಕ ರಾಶಿ

ಜೂನ್‌ 29ರಿಂದ ಬುಧವು ನಿಮ್ಮ ಲಗ್ನ ಮನೆಯಲ್ಲಿ ಇರಲಿದೆ. ನೀವು ವೃತ್ತಿ ಬದುಕಿನಲ್ಲಿ ಉತ್ತಮ ಯಶಸ್ಸು ಪಡೆಯುತ್ತೀರಿ. ನೀವು ನಿಮ್ಮ ಕೆಲಸದಲ್ಲಿ ನೀವು ಬಹಯಸಿದಂತೆಯೇ ಉತ್ತಮ ಪ್ರಯೋಜನ ಪಡೆಯಲು ಸಾಧ್ಯವಾಗುವುದು. ಇನ್ನು ಸ್ವಂತ ವ್ಯಾಪಾರ ಮಾಡುತ್ತಿದ್ದರೆ ನಿಮ್ಮ ವ್ಯವಹಾರದಲ್ಲಿ ಬೆಳವಣಿಗೆ ಕಂಡು ಬರಲಿದೆ. ಆರ್ಥಿಕವಾಗಿ ಲಾಭ ಪಡೆಯುತ್ತೀರಿ. ಈ ಸಮಯದಲ್ಲಿ ಖರ್ಚು ಇರಲಿದೆ. ಆರ್ಥಿಕ ಪ್ರಯೋಜನಗಳನ್ನು ಪಡೆಯುತ್ತೀರಿ.

ಇನ್ನು ಕುಟುಂಬ ಜೀವನದ ದೃಷ್ಟಿಯಿಂದ ಒಳ್ಳೆಯದಿದೆ. ವೈವಾಹಿಕ ಜೀವನದಲ್ಲಿ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ.

ಕನ್ಯಾರಾಶಿ

ಕನ್ಯಾ ರಾಶಿಯವರಿಗೆ ಈ ಅವಧಿ ಉತ್ತಮವಾಗಿದೆ. ಈ ಅವಧಿಯಲ್ಲಿ ಜೀವನದ ಪ್ರತಿಯೊಂದು ಅಂಶಗಳಲ್ಲಿ ಧನಾತ್ಮಕ ಫಲಿತಾಂಶ ಸಿಗಲಿದೆ. ನೀವು ಎದುರಿಸುತ್ತಿದ್ದ ಹವು ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ವೃತ್ತಿ ಬದುಕಿನಲ್ಲಿ ಧನಾತ್ಮಕ ಫಲಿತಾಂಶಗ ಪಡೆಯುತ್ತೀರಿ, ವ್ಯಾಪಾರಿಗಳು ಉತ್ತಮ ಆರ್ಥಿಕ ಪ್ರಯೋಜನ ಪಡೆಯಲು ಸಾಧ್ಯವಾಗುವುದು. ಈ ಅವಧಿಯಲ್ಲಿ ನಿಮ್ಮೆಲ್ಲಾ ಆಸೆ ಈಡೇರಲಿದೆ.

ಇನ್ನು ಈ ಸಮಯದಲ್ಲಿ ಕುಟುಂಬ ಜೀವನ ಚೆನ್ನಾಗಿರಲಿದೆ. ವೈವಾಹಿಕ ಬಾಂಧವ್ಯದಲ್ಲಿ ಅನ್ಯೂನ್ಯತೆ ಇರಲಿದೆ, ಆರೋಗ್ಯವೂ ಚೆನ್ನಾಗಿರಲಿದೆ.

ತುಲಾ ರಾಶಿ

ತುಲಾ ರಾಶಿಯವರು ಜೂನ್ 29ರಿಂದ ಅತ್ಯುತ್ತಮವಾದ ಪ್ರಯೋಜನ ಪಡೆಯುತ್ತಿರಿ. ಈ ಸಮಯದಲ್ಲಿ ಧಾರ್ಮಿಕ ಕ್ಷೇತ್ರದ ಕಡೆಗೆ ಒಲವು ಹೆಚ್ಚಾಗಲಿದೆ. ಉದ್ಯೋಗಿಗಳು ಈ ಅವಧಿಯಲ್ಲಿ ಉತ್ತಮ ಯಶಸ್ಸು ಪಡೆಯುತ್ತೀರಿ, ನಿಮ್ಮ ಕೆಲಸಕ್ಕೆ ಮೆಚ್ಚುಗೆ ಸಿಗಲಿದೆ. ಅಲ್ಲದೆ ಕೆಲಸವನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದರೆ ಈ ಸಮಯದಲ್ಲಿ ಉತ್ತಮ ಪ್ರಯೋಜನ ಪಡೆಯುತ್ತೀರಿ,

ಈ ಸಮಯದಲ್ಲಿ ಉಳಿತಾಯ ಮಾಡಲು ಸಾದ್ಯವಾಗುವುದು, ಇದರಿಂದಾಗಿ ನಿಮ್ಮ ಆರ್ಥಿಕ ಸ್ಥಿತಿ ಮತ್ತಷ್ಟು ಬಲಗೊಳ್ಳಲಿದೆ. ಆರೋಗ್ಯ ಚೆನ್ನಾಗಿರಲಿದೆ. ಅಲ್ಲದೆ ನೀವು ಕೂಡ ಫಿಟ್ನೆಸ್‌ ಕಡೆ ಗಮನಹರಿಸುತ್ತೀರಿ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Budha Sanchar In Karka Rashi: Financial Lucky To These Zodiac In Kannada

Budha Sanchar In Karka Rashi 2024: These zodiac get more financial benefits, read on.
Story first published: Monday, June 24, 2024, 20:09 [IST]
X
Desktop Bottom Promotion