Latest Updates
-
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ!
ವರ್ಷದ ಬಳಿಕ ವೃಶ್ಚಿಕದಲ್ಲಿ ಬುಧ-ಶುಕ್ರ ಯುತಿ: ಈ 3 ರಾಶಿಯವರಿಗೆ ವೃತ್ತಿ, ವೈಯಕ್ತಿಕ ಬದುಕಿಗೆ ತುಂಬಾ ಒಳ್ಳೆಯದು
ಬುಧ-ಶುಕ್ರ ಸಂಯೋಗವನ್ನು ಜ್ಯೋತಿಷ್ಯ ಅತ್ಯಂತ ಅದೃಷ್ಟ ಎಂದು ಕರೆಯಲಾಗುವುದು. ಅಕ್ಟೋಬರ್ 13 ರಂದು, ಬೆಳಗ್ಗೆ 05:49 ಕ್ಕೆ, ಶುಕ್ರವು ವೃಶ್ಚಿಕ ರಾಶಿಯನ್ನು ಪ್ರವೇಶಿಸುತ್ತಿದೆ ಅದೇ ಮಾಸ ಅಕ್ಟೋಬರ್ 29 ರಂದು, ರಾತ್ರಿ 10:24 ಕ್ಕೆ ಬುಧ ಕೂಡ ವೃಶ್ಚಿಕ ರಾಶಿಗೆ ಸಂಚರಿಸಲಿದೆ, ಆವಾಗ ಬುಧ-ಶುಕ್ರ ಯುತಿ ಉಂಟಾಗುವುದು, ಈ ಬುಧ-ಶುಕ್ರ ಯುತಿ ನವೆಂಬರ್ 07 ರವರೆಗೆ ವೃಶ್ಚಿಕ ರಾಶಿಯಲ್ಲಿ ಇರುತ್ತದೆ.
ವೃಶ್ಚಿಕ ರಾಶಿಯಲ್ಲಿ ಬುಧ-ಶುಕ್ರ ಯುತಿ ಏರ್ಪಟ್ಟಾಗ ಈ ರಾಶಿಯವರಿಗೆ ಅದೃಷ್ಟ ತರಲಿದೆ:

ವೃಶ್ಚಿಕ ರಾಶಿಯ ಲಗ್ನ ಮನೆಯಲ್ಲಿ ಬುಧ ಮತ್ತು ಶುಕ್ರರ ಸಂಯೋಗವಿದೆ. ಈ ಸಂಯೋಗ ನಿಮಗೆ ಲಾಭ ಸಿಗಲಿದೆ. ಈ ಅವಧಿಯಲ್ಲಿ ನಿಮ್ಮ ಗೌರವ ಹೆಚ್ಚಿರಲಿದೆ. ಸಮಾಜದಲ್ಲಿ ನಿಮ್ಮ ಗೌರವ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ.
ವೃತ್ತಿ ಕ್ಷೇತ್ರದಲ್ಲಿ ಪ್ರಗತಿಯನ್ನು ಕಾಣಬಹುದು, ಸಮಯದಲ್ಲಿ ನಿಮ್ಮ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ವ್ಯಾಪಾರಸ್ಥರು ಲಾಭ ಗಳಿಸುತ್ತೀರಿ, ಈ ಅವಧಿಯಲ್ಲಿ ನಿಮ್ಮ ವ್ಯವಹಾರ ಹೆಚ್ಚಾಗಲಿದೆ. ಉದ್ಯಮಿಗಳಿಗೆ ವ್ಯವಹಾರದಲ್ಲಿ ಉತ್ತಮ ಅವಕಾಶ ಸಿಗಲಿದೆ.
ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ. ನೀವು ಒಬ್ಬರನ್ನೊಬ್ಬರು ಚೆನ್ನಾಗಿ ಅರ್ಥಮಾಡಿಕೊಳ್ಳುತ್ತೀರಿ. ನಿಮ್ಮ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲಿದೆ. ಈ ಅವಧಿಯಲ್ಲಿ ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.
ತುಲಾ ರಾಶಿ
ತುಲಾ ರಾಶಿಯವರಿಗೆ ಈ ಬುಧ-ಶುಕ್ರ ಸಂಯೋಗ ಪ್ರಗತಿ ತರಲಿದೆ. ನೀವು ನಿಮ್ಮ ವೃತ್ತಿ ಕ್ಷೇತ್ರದಲ್ಲಿ ಉತ್ತಮ ಫಲ ಪಡೆಯುತ್ತೀರಿ, ಈ ಅವಧಿಯಲ್ಲಿ ನಿಮ್ಮ ಕೆಲಸ ಕಾರ್ಯಗಳು ಉತ್ತಮವಾಗಿರಲಿದೆ.
ಆರ್ಥಿಕವಾಗಿ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸಮಸ್ಯೆ ಬಗೆಹರಿಯಲಿದೆ, ಹಣದ ಉಳಿತಾಯ ಮಾಡಲು ಸಾಧ್ಯವಾಗುವುದು. ನೀವು ಹಠಾತ್ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ.
ಈ ಅವಧಿಯಲ್ಲಿ ಸಾಮಾಜಿಕವಾಗಿವಾಗಿ ನಿಮ್ಮ ವ್ಯಕ್ತಿತ್ವ ಸುಧಾರಿಸುತ್ತದೆ. ಈ ಸಮಯದಲ್ಲಿ ನಿಮ್ಮ ಎಲ್ಲಾ ಆಸೆಗಳು ಈಡೇರುತ್ತವೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಪ್ರೇಮಿಗಳಿಗೆ ಈ ಅವಧಿ ಅನುಕೂಲಕರವಾಗಿದೆ. ಈ ಸಮಯದಲ್ಲಿ ಆರೋಗ್ಯ ಚೆನ್ನಾಗಿರಲಿದೆ.
ಮಕರ ರಾಶಿ
ಮಕರ ರಾಶಿಯಲ್ಲಿ ಬುಧ-ಶುಕ್ರ ಸಂಯೋಗ ಉಂಟಾಗಲಿದೆ, ಈ ಅವಧಿಯಲ್ಲಿ ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ. ನಿಮ್ಮ ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ನೀವು ಅನುಕೂಲಕರ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ವೃತ್ತಿ ಬದುಕಿನಲ್ಲಿನ ಸಮಸ್ಯೆ ಬಗೆಹರಿಯಲಿದೆ.
ಆರ್ಥಿಕವಾಗಿ ತುಂಬಾ ಪ್ರಯೋಜನ ಪಡೆಯುತ್ತೀರಿ. ಆರ್ಥಿಕ ಕಾರಣದಿಂದ ಬಾಕಿಯುಳಿದಿದ್ದ ಕೆಲಸವು ಪೂರ್ಣಗೊಳ್ಳಲಿದೆ. ಆರ್ಥಿಕವಾಗಿ ಉಳಿತಾಯ ಮಾಡಲು ಕೂಡ ಸಾಧ್ಯವಾಗುವುದು. ಹಿಂದೆ ಮಾಡಿದ ಹೂಡಿಕೆಯಿಂದ ಲಾಭಗಳಿರಬಹುದು. ಷೇರು ಮಾರುಕಟ್ಟೆಯಲ್ಲೂ ಲಾಭ ಗಳಿಸುವ ಸಾಧ್ಯತೆಗಳಿವೆ.
ಈ ಅವಧಿಯಲ್ಲಿ ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ತುಂಬಾ ಉತ್ತಮವಾಗಿರಲಿದೆ. ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು. ಶುಕ್ರ-ಬುಧ ಜೊತೆಯಾದಾಗ ವ್ಯಾಪಾರ ಕ್ಷೇತ್ರದಲ್ಲಿರುವವರು ತುಂಬಾ ಒಳ್ಕೆಯ ಪ್ರಯೋಜನ ಪಡೆಯುತ್ತೀರಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications