Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಸೆಪ್ಟೆಂಬರ್ 4ರಿಂದ ಸಿಂಹ ರಾಶಿಯಲ್ಲಿ ಬುಧಾದಿತ್ಯ ಯೋಗ: ಈ 5 ರಾಶಿಯವರು ಹೆಚ್ಚಿನ ಪ್ರಯೋಜನ ಪಡೆಯುವಿರಿ
ಸೂರ್ಯ ಸಿಂಹ ರಾಶಿಯಲ್ಲಿದೆ, ಬುಧನು ಸಿಂಹ ರಾಶಿಗೆ ಸಂಚರಿಸಿರುವುದರಿಂದ ಬುದಾದಿತ್ಯ ಯೋಗ ಉಂಟಾಗಿದೆ, ಈ ಬುಧಾದಿತ್ಯ ಯೋಗದಿಂದಾಗ ಈ ರಾಶಿಯವರು ಹೆಚ್ಚಿನ ಪ್ರಯೋಜನ ಪಡೆಯುವಿರಿ:

ವೃಷಭ ರಾಶಿ
4ನೇ ಮನೆಯಲ್ಲಿ ಬುಧಾದಿತ್ಯ ಯೋಗ ಉಂಟಾಗಿದೆ. ವ್ಯಾಪಾರಿಗಳಿಗೆ ತುಂಬಾನೇ ಅನುಕೂಲಕರವಾಗಲಿದೆ. ಈ ಅವಧಿಯಲ್ಲಿ ನೀವು ಉತ್ತಮ ಲಾಭ ಗಳಿಸುತ್ತೀರಿ. ವ್ಯಾಪಾರ ಕ್ಷೇತ್ರದಲ್ಲಿ ಆರ್ಥಿಕ ಪ್ರಯೋಜನ ಸಿಗಲಿದೆ. ವೃತ್ತಿ ಜೀವನದ ದೃಷ್ಟಿಯಿಂದಲೂ ಈ ಅವಧಿ ಅನುಕೂಲಕರವಾಗಿದೆ. ಆಸ್ತಿ ಸಂಬಂಧಿತ ವಿವಾದವಿದ್ದರೆ ಅದು ಬಗೆಹರಿಯಲಿದೆ. ಹೊಸ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ಅವಧಿಯಲ್ಲಿ ಒಳ್ಳೆಯ ಫಲಿತಾಂಶ ಸಿಗಲಿದೆ.
ಮಿಥುನ ರಾಶಿ
ಮಿಥುನ ರಾಶಿಯ 3ನೇ ಮನೆಯಲ್ಲಿ ಬುಧಾದಿತ್ಯ ಯೋಗ ಉಂಟಾಗಿದೆ. ಈ ಅವಧಿ ನಿಮಗೆ ಅನುಕೂಲಕರವಾಗಿದೆ, ವೃತ್ತಿ ಜೀವನದಲ್ಲಿ ಹೆಚ್ಚಿನ ಪ್ರಯೋಜನ ಪಡೆಯುತ್ತೀರಿ.
ಹೊಸ ಉದ್ಯೋಗಾವಕಾಶಗಳು ಸಿಗುತ್ತವೆ. ವ್ಯಾಪಾರಿಗಳಿಗೆ ಈ ಸಮಯ ತುಂಬಾನೇ ಉತ್ತಮವಾಗಿದೆ, ಸೂರ್ಯ ಹಾಗೂ ಬುಧ ನಿಮಗೆ ಅನುಕೂಲಕರ ಸ್ಥಾನದಲ್ಲಿ ಇರುವುದರಿಂದ ವೈಯಕ್ತಿಕ ಬದುಕಿನಲ್ಲಿಯೂ ಉತ್ತಮ ಪ್ರಯೋಜನ ಪಡೆಯುತ್ತೀರಿ. ಈ ಅವಧಿಯಲ್ಲಿ ಆರ್ಥಿಕ ಬದುಕು ತುಂಬಾ ಚೆನ್ನಾಗಿರಲಿದೆ.
ಸಿಂಹ ರಾಶಿ
ಸಿಂಹ ರಾಶಿಯಲ್ಲಿ ಲಗ್ನ ಮನೆಯಲ್ಲಿ ಬುಧಾದಿತ್ಯ ಯೋಗ ಉಂಟಾಗಿದೆ. ಲಗ್ನ ಮನೆಯಲ್ಲಿ ಸೂರ್ಯ ಸಂಚಾರವಾಗಿರುವುದರಿಂದ ನಿಮಗೆ ಅದೃಷ್ಟಕರವಾಗಿದೆ. ಕುಟುಂಬ ಜೀವನ, ವೈವಾಹಿಕ ಬದುಕು ಚೆನ್ನಾಗಿರಲಿದೆ. ವ್ಯಾಪಾರಿಗಳು ಈ ಸಮಯದಲ್ಲಿ ವ್ಯಾಪಾರದಲ್ಲಿ ಉತ್ತಮ ಲಾಭ ಗಳಿಸುತ್ತೀರಿ. ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ಕೆಲಸ ಮತ್ತು ವ್ಯವಹಾರದಲ್ಲಿ ಪ್ರಗತಿ ಇರುತ್ತದೆ . ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ. ಇನ್ನು ಕೆಲಸ ಬದಲಾವಣೆ ಮಾಡಬೇಕೆಂದಿದ್ದರೆ ಈ ಸಮಯ ತುಂಬಾನೇ ಉತ್ತಮವಾಗಿರಲಿದೆ.
ವೃಶ್ಚಿಕ ರಾಶಿ
ಬುಧಾದಿತ್ಯ ಯೋಗ ಮಕರ ರಾಶಿಯಲ್ಲಿ 10ನೇ ಮನೆಯಲ್ಲಿ ಉಂಟಾಗಿದೆ. ಈ ಅವಧಿಯಲ್ಲಿ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಹೊಸ ಉದ್ಯೋಗಕ್ಕೆ ಪ್ರಯತ್ನಿಸುತ್ತಿದ್ದರೆ ಈ ಸಮಯ ಅನುಕೂಲಕರವಾಗಿದೆ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ.ಆರೋಗ್ಯದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ಆರ್ಥಿಕವಾಗಿಯೂ ಈ ಅವಧಿ ಉತ್ತಮವಾಗಿರಲಿದೆ, ನಿಮ್ಮ ಕೆಲಸ ಕಾರ್ಯವು ಯೋಜನೆಯಂತೆಯೇ ರೂಪುಗೊಂಡಿದೆ.
ಕುಂಭ ರಾಶಿ
ಕುಂಭ ರಾಶಿಯಲ್ಲಿ 7ನೇ ಮನೆಯಲ್ಲಿ ಬುಧಾದಿತ್ಯ ಯೋಗ ಉಂಟಾಗಿದೆ. ವ್ಯಾಪಾರಿಗಳಿಗೆ ಧನಲಾಭವಾಗಲಿದೆ. ವೃತ್ತಿ ಬದುಕಿನಲ್ಲಿ ಪ್ರಗತಿ ಉಂಟಾಗಲಿದೆ.ಕೆಲಸ ಕಾರ್ಯದಲ್ಲಿ ಒಳ್ಳೆಯ ಫಲಿತಾಂಶ ದೊರೆಯಲಿದೆ. ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ. ಈ ಅಅವಧಿಯಲ್ಲಿ ವೈಯಕ್ತಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
