Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ನವೆಂಬರ್ 23 ದಿನ ಭವಿಷ್ಯ: 12 ರಾಶಿಗಳಲ್ಲಿ ಯಾರಿಗೆ ಶುಭ ಯಾರಿಗೆ ಇಲ್ಲ;?
ಶುಭ ದಿನ : ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಮೇಷ ರಾಶಿ
ಈ ದಿನ ಯಾವುದೇ ನಿರ್ಧಾರವಾಗಿರಲಿ ತರಾತುರಿಯಿಂದ ತೆಗೆದುಕೊಳ್ಳಬೇಡಿ, ಅನಗ್ಯತ ಚಿಂತೆಯಿಂದ ದೂರವಿರಿ, ಈ ದಿನ ಆರೋಗ್ಯದ ದೃಷ್ಟಿಯಿಂದ ಉತ್ತಮವಲ್ಲ, ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಹಣಕ್ಕೆ ಸಂಬಂಧಿಸಿದ ನಿರ್ಧಾರ ಆಲೋಚಿಸಿ ತೆಗೆದುಕೊಳ್ಳಬೇಕು. ಹಣಕಾಸಿನ ದೃಷ್ಟಿಯಿಂದ ವೃಷಭ ಕ್ಕೆ ಅನುಕೂಲರವಲ್ಲ.

ವೃಷಭ ರಾಶಿ
ಪ್ರತಿಕೂಲ ಪರಿಸ್ಥಿತಿಯನ್ನು ಉತ್ತಮವಾಗಿ ನಿಭಾಯಿಸಲು ಸಾಧ್ಯವಾಗುವುದು, ಅಪೂರ್ಣವಾದ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವತ್ತ ಹೆಚ್ಚು ಗಮನಹರಿಸಬೇಕು, ಕುಟುಂಬದ ಜೊತೆ ಹೆಚ್ಚು ಸಮಯ ಕಳೆಯಲು ಪ್ರಯತ್ನಿಸಿ, ಸಂಗಾತಿಯ ಜೊತೆಗೆ ರೆಸ್ಟೋರೆಂಟ್ , ಶಾಪಿಂಗ್ ಅಂತ ಹೊರಗಡೆ ಹೋಗುವಿರಿ, ಈ ದಿನ ನಿಮಗೆ ರೊಮ್ಯಾಂಟಿಕ್ ಆಗಿರಲಿದೆ.
ಮಿಥುನ ರಾಶಿ
ಸೋಮಾರಿತನದಿಂದ ವರ್ತಿಸಬೇಡಿ, ನೀವು ಹಣದ ಬಗ್ಗೆ ತುಂಬಾನೇ ಜಾಗ್ರತೆವಹಿಸಬೇಕು, ಈ ದಿನ ಹೆಚ್ಚು ಖರ್ಚು ಬರುವ ಸಾಧ್ಯತೆ ಇದೆ, ನೀವು ಕೆಲಸಕ್ಕೆ ಸಂಬಂಧಿಸಿದ ಕೆಲವೊಂದು ಗೊಂದಲಗಳಿಗೆ ಅನುಭವಿಗಳ ಸಲಹೆ ಪಡೆಯುವುದು ಒಳ್ಳೆಯದು.
ಕರ್ಕ ರಾಶ
ಆದಾಯದ ದೃಷ್ಟಿಯಿಂದ ಈ ದಿನ ಅನುಕೂಲಕರವಾಗಿರಲಿದೆ. ಈ ದಿನ ಖುಷಿಯ ಸುದ್ದಿಯನ್ನು ಪಡೆಯುತ್ತೀರಿ, ಕುಟುಂಬದಲ್ಲಿ ಸಂತೋಷದ ವಾತವರಣ ಇರಲಿದೆ, ಕೆಲಸದಲ್ಲಿಯೂ ಅಷ್ಟೇ ಯಾವುದೇ ಅಡೆತಡೆ ಇರಲ್ಲ, ನಿಮ್ಮ ಯೋಜನೆಯಂತೆಯೇ ಕೆಲಸ ಕಾರ್ಯಗಳು ನಡೆಯಲಿದೆ.
ಸಿಂಹ ರಾಶಿ
ತುಂಬಾ ಸಮಯದಿಂದ ಕಾಡುತ್ತಿರುವ ಸಮಸ್ಯೆಗೆ ಬೇಗನೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಬೇಕು. ವೈವಾಹಿಕ ಜೀವನದಲ್ಲಿ ಕೆಲ ಭಿನ್ನಾಭಿಪ್ರಾಯ ಬರಬಹುದು, ತಾಳ್ಮೆಯಿಂದ ಬಗೆಹರಿಸಿ, ಹಣದ ದೃಷ್ಟಿಯಿಂದ ಒಳ್ಳೆಯದಿದೆ, ಹೂಡಿಕೆಗೆ ತಕ್ಕ ಸಮಯ, ವ್ಯಾಪರಿಗಳು ತಮ್ಮ ವ್ಯವಹಾರದಲ್ಲಿ ಜಾಗ್ರತೆವಹಿಸಿ.
ಕನ್ಯಾ ರಾಶಿ
ಕೆಲಸದ ಒತ್ತಡ ಅಧಿಕವಿರಲಿದೆ, ಆದರೂ ನೀವು ನಿಮ್ಮ ಆರೋಗ್ಯದ ಕಡೆಯೂ ಗಮನಹರಿಸಿ ಎಂದು ಸಲಹೆ ನೀಡಲಾಗುವುದು. ಹೂಡಿಕೆಗೆ ಸಂಬಂಧಿಸಿದ ನಿರ್ಧಾರವನ್ನು ಮನೆಯವರ ಜೊತೆ ಚರ್ಚಿಸಿ ತೆಗೆದುಕೊಳ್ಳಿ. ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯ ಉಂಟಾದರೆ ಅದನ್ನು ಬಗೆಹರಿಸಲು ಪ್ರಯತ್ನಿಸಿ.
ತುಲಾ ರಾಶಿ
ಹಣಕಾಸಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ಹೂಡಿಕೆಗೆ ಈ ದಿನ ಅನುಕೂಲಕರವಾಗಿರಲಿದೆ, ಪ್ರೀತಿ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯಕರ ಜೀವನಶೈಲಿ ಕಡೆಗೆ ಗಮನಹರಿಸಿ. ಸರಿಯಾದ ಸಮಯಕ್ಕೆ ನಿದ್ದೆ ಮಾಡುವುದು ಒಳ್ಳೆಯದು.
ವೃಶ್ಚಿಕ ರಾಶಿ
ಕೆಲಸದ ನಡುವೆ ಚಿಕ್ಕ ಬ್ರೇಕ್ ತೆಗೆದುಕೊಳ್ಳಿ, ಕುಟುಂಬದ ಜೊತೆಗೆ ಹೆಚ್ಚಿನ ಸಮಯ ಕಳೆಯಲು ಪ್ರಯತ್ನಿಸಿದರೆ ಮನಸ್ಸಿಗೆ ಖುಷಿ, ನೆಮ್ಮದಿ ಸಿಗಲಿದೆ. ಕೋಪ ನಿಯಂತ್ರಿಸಿ, ಅನಗ್ಯತ ವಿವಾದಗಳಿಂದ ದೂರವಿರಲು ಪ್ರಯತ್ನಿಸಿ. ವಹಿಸಿರುವ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನ ಮಾಡಬೇಕು.
ಧನು ರಾಶಿ
ಈ ದಿನ ಹಣದ ಖರ್ಚು ಹೆಚ್ಚರಿಲಿದೆ, ಅತಿಥಿಗಳು ಮನೆಗೆ ಬರಬಹುದು. ಈ ದಿನ ನಿಮಗೆ ವೃತ್ತಿ ಬದುಕು ಹಾಗೂ ವೈಯಕ್ತಿಕ ಬದುಕು ಎರಡೂ ಚೆನ್ನಾಗಿರಲಿದೆ. ನೀವು ಸಂಬಂಧ ಬಲಪಡಿಸಲು ಹೆಚ್ಚು ಪ್ರಯತ್ನಬೇಕು, ಕೆಲಸದಲ್ಲಿ ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ.
ಮಕರ ರಾಶಿ
ಈ ದಿನ ಹಣಕಾಸಿನ ವಿಚಾರದಲ್ಲಿ ಚಿಂತೆ ಇರಲ್ಲ, ಆದರೆ ದೊಡ್ಡ ಹೂಡಿಕೆ ಮಾಡುವವರು ಜಾಗ್ರತೆವಹಿಸಬೇಕು. ಕೆಲವೊಂದು ಪ್ರಮುಖ ರಹಸ್ಯ ನೀವು ಬೇರೆ ಯಾರ ಬಳಿಯೂ ಹೇಳದಿದ್ದರೆ ಒಳ್ಳೆಯದು. ಆರೋಗ್ಯದ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿರಲಿದೆ.
ಕುಂಭ ರಾಶಿ
ಹಣಕಾಸಿನ ದೃಷ್ಟಿಯಿಂದ ಈ ದಿನ ನಿಮಗೆ ಅನುಕೂಲಕರವಾಗಿರಲಿದೆ, ನಿಮ್ಮ ನಿರ್ಧಾರ ಬೇರೆಯವರ ಮೇಲೆ ಹಾಕುವ ಪ್ರಯತ್ನ ಮಾಡಬೇಡಿ, ಕುಟುಂಬದ ನೆಮ್ಮದಿ ಕಡೆಗೂ ಗಮನಹರಿಸಿ. ಕುಟುಂಬ ಜೀವನ ಚೆನ್ನಾಗಿರಲಿದೆ, ವೈವಾಹಿಕ ಬದುಕು ರೊಮ್ಯಾಂಟಿಕ್ ಆಗಿರಲಿದೆ.
ಮೀನ ರಾಶಿ
ನೀವು ಸಂಗಾತಿಯ ಆರೋಗ್ಯದ ಕಡೆಗೆ ಹೆಚ್ಚು ಗಮನಹರಿಸಬೇಕು. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧ್ಯವ್ಯ ಚೆನ್ನಾಗಿರಲಿದೆ, ಏನಾದರು ಆರೋಗ್ಯ ಸಮಸ್ಯೆಯಿದ್ದರೆ ಆ ಬಗೆಯೂ ತಿಳಿಸಿ, ಹಣವನ್ನು ನೋಡಿಕೊಂಡು ಖರ್ಚು ಮಾಡಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications