Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ದಿನ ಭವಿಷ್ಯ ಡಿಸೆಂಬರ್ 1: ತಿಂಗಳ ಮೊದಲ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯ ಪ್ರಕಾರ ಡಿಸೆಂಬರ್ 1, ಕೊನೆಯ ತಿಂಗಳ ಮೊದಲ ದಿನದ ಭವಿಷ್ಯ ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ಈ ದಿನ ನೀವು ಪ್ರಮುಖ ವ್ಯಕ್ತಿಯನ್ನು ಭೇಟಿಯಾಗಬಹುದು, ಹಣಕಾಸಿನ ವಿಷಯದಲ್ಲಿಯೂ ಉತ್ತಮವಾಗಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.

ವೃಷಭ ರಾಶಿ
ವೃಷಭ ರಾಶಿಯವರಿಗೆ ಈ ದಿನ ಅನುಕೂಲಕರವಾಗಿದೆ, ಕುಟುಂಬದಲ್ಲಿ ಪ್ರೀತಿ, ನೆಮ್ಮದಿ ಇರಲಿದೆ, ಹಣಕಾಸಿನ ವಿಷಯದಲ್ಲಿಯೂ ಈ ದಿನ ನಿಮಗೆ ಅನುಕೂಲಕರವಾಗಿದೆ, ಆದರೆ ಆರೋಗ್ಯ ವಿಷಯದಲ್ಲಿ ಪ್ರತಿಕೂಲವಾಗಿದೆ, ಆರೋಗ್ಯದ ಕಡೆ ಹೆಚ್ಚು ಗಮನಹರಿಸಿ.
ಮಿಥುನ ರಾಶಿ
ಈ ದಿನ ಮಿಥುನ ರಾಶಿಯವರಿಗೆ ಶುಭವಾಗಿದೆ, ಮನೆಯವರ ಜೊತೆ ಭಿನ್ನಾಭಿಪ್ರಾಯವಿದ್ದರೆ ಅದು ಸರಿಯಾಗಬಹುದು, ತಂದೆಯ ಸಲಹೆ ಪಾಲಿಸುವುದು ಒಳ್ಳೆಯದು, ಕೋಪದ ನಿರ್ಧಾರಗಳು ಸಮಸ್ಯೆ ಹೆಚ್ಚಿಸಲಿದೆ. ವ್ಯಾಪಾರಿಗಳು ವ್ಯಾಪಾರದಲ್ಲಿ ಯಾವುದೇ ಬದಲಾವಣೆ ಮಾಡಲು ಹೋಗಬೇಡಿ.
ಕರ್ಕ ರಾಶಿ
ಈ ದಿನ ಮಿಶ್ರಫಲಿತಾಂಶ, ಕುಟುಂಬ ಜೀವನ ಚೆನ್ನಾಗಿರಲಿದೆ, ಮನೆಗೆ ಅತಿಥಿಗಳು ಬರಬಹುದು, ಈ ದಿನ ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ.
ಸಿಂಹ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಮನೆಯವರ ಜೊತೆ ಮಾತನಾಡುವಾಗ ನಿಮ್ಮ ಮಾತಿನ ಮೇಲೆ ನಿಯಂತ್ರಣವಿರಲಿ. ಆರೋಗ್ಯ ಸಮಸ್ಯೆ ನಿರ್ಲಕ್ಷ್ಯ ಮಾಡಲು ಹೋಗಬೇಡಿ, ಈ ದಿನ ಹಣಕ್ಕೆ ಸಂಬಂಧಿಸಿದ ಚಿಂತನೆ ಕಾಡಬಹುದು. ವೃತ್ತಿ ಬದುಕಿನ ಸಮಸ್ಯೆ ಬೆಗಹರಿಯಲಿದೆ.
ಕನ್ಯಾ ರಾಶಿ
ಈ ದಿನ ಮಿಶ್ರಫಲಿತಾಂಶ, ಆರೋಗ್ಯದ ದೃಷ್ಟಿಯಿಂದ ಈ ದಿನ ಅನುಕೂಲಕರವಲ್ಲ. ವಾಹನ ಖರೀದಿಗೆ ಪ್ರಯತ್ನಿಸುತ್ತಿದ್ದರೆ ಈ ಅವಧಿ ಅನುಕೂಲಕರವಾಗಿರಲಿದೆ. ಕೋಪವನ್ನು ನಿಯಂತ್ರಿಸಿದರೆ ಒಳ್ಳೆಯದು. ಕುಟುಂಬದ ವಿಷಯದಲ್ಲಿ ನಿರ್ಲಕ್ಷ್ಯ ಮಾಡಲು ಹೋಗಬೇಡಿ.
ತುಲಾ ರಾಶಿ
ಈ ದಿನ ನಿಮಗೆ ಹಣಕಾಸಿನ ದೃಷ್ಟಿಯಿಂದ ನಿಮಗೆ ಉತ್ತಮವಾಗಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಈ ದಿನ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ, ಅನಗ್ಯತ ವಿಷಯಗಳ ಕಡೆಗೆ ಗಮನಹರಿಸಿ. ಕೆಲಸ ಕಾರ್ಯಗಳು ಅಡೆತಡೆಯಿಲ್ದೆ ಪೂರ್ಣವಾಗಲಿದೆ.
ವೃಶ್ಚಿಕ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಕುಟುಂಬದಲ್ಲಿನ ಭಿನ್ನಾಭಿಪ್ರಾಯ ಮಾತುಕತೆ ಮೂಲಕಬಗೆಹರಿಸಬಹುದು. ಈ ದಿನ ಆತುರ ಹಾಗೂ ಕೋಪದಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ, ಹಣಕಾಸಿನ ವಿಷಯದಲ್ಲಿ ಉತ್ತಮವಾಗಿದ್ದು ಕೆಲ ವಸ್ತುಗಳ ಖರೀದಿ ಮಾಡುತ್ತೀರಿ.
ಧನು ರಾಶಿ
ಈ ದಿನ ಉತ್ತಮವಾಗದೆ, ಕೆಲ ಶುಭ ಸುದ್ದಿಗಳನ್ನು ಕೇಳುತ್ತೀರಿ, ಇದರಿಂದ ಸಂತೋಷವಾಗಿ ಇರುತ್ತೀರಿ, ಹಣಕಾಸಿನ ದೃಷ್ಟಿಯಿಂದಲೂ ಉತ್ತಮವಾಗಿದೆ, ಹೂಡಿಕೆಗೆ ಈ ದಿನ ಉತ್ತಮವಾಗಿದೆ. ಕೆಲಸ ಕಾರ್ಯಗಳು ಚೆನ್ನಾಗಿ ನಡೆಯಲಿದೆ.
ಮಕರ ರಾಶಿ
ಈ ದಿನ ಮಿಶ್ರಫಲ, ಈ ದನ ಹಣಕಾಸಿನ ವಿಷಯದಲ್ಲಿ ಈ ದಿನ ಉತ್ತಮವಾಗಿದೆ, ಹಣಕಾಸು ಚೆನ್ನಾಗಿ ಇರಲಿದೆ. ಕೆಲಸದಲ್ಲಿ ಪರಿಸ್ಥಿತಿ ಒತ್ತಡದಿಂದ ಕೂಡಿರಲಿದೆ, ಈ ದಿನ ಪ್ರತಿಕೂಲ ಪರಿಸ್ಥಿತಿಯಲ್ಲಿ ತಾಳ್ಮೆಯಿಂದ ವರ್ತಿಸಿ.
ಕಂಭ ರಾಶಿ
ಕುಂಭ ರಾಶಿಯವರಿಗೆ ಈ ದಿನ ಶುಭವಾಗಿದೆ,ವ್ಯಾಪಾರಿಗಳಿಗೆ ಆರ್ಥಿಕ ಲಾಭವಿರಲಿದೆ, ಪ್ರಮುಖ ಕೆಲಸ ಪೂರ್ಣವಾದ ಸಂತೋಷವಿರಬಹುದು, ಆದರೆ ಹಣಕ್ಕೆ ಸಂಬಂಧಿಸಿದ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.
ಮೀನ ರಾಶಿ
ಈ ದಿನ ನಿಮಗೆ ಸಮಾನ್ಯವಾಗಿರಲಿದೆ, ಹಣಕಾಸಿನ ವಿಷಯದಲ್ಲಿ ಅನುಕೂಲಕರ,ಬರಬೇಕಾಗಿರುವ ಹಣ ನಿಮ್ಮ ಕೈ ಸೇರಲಿದೆ. ಬೇಡದ ವಿಷಯಗಳ ಕಡೆ ಚಿಂತೆ ಮಾಡಬೇಡಿ, ಈ ದಿನ ಮನೆಗೆ ಕೆಲ ಬೆಲೆ ಬಾಳುವ ವಸ್ತು ಖರೀದಿಸಬಹುದು.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
