Latest Updates
-
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ!
ದಿನ ಭವಿಷ್ಯ: ಡಿಸೆಂಬರ್ 21, ಈ ದಿನ ದ್ವಾದಶ ರಾಶಿಗಳಿಗೆ ಹೇಗಿದೆ ?
ಜ್ಯೋತಿಷ್ಯ ಪ್ರಕಾರ ಡಿಸೆಂಬರ್ 21ರಂದು ದ್ವಾದಶ ರಾಶಿಗಳಿಗೆ ಹೇಗಿರಲಿದೆ? ಯಾರಿಗೆ ಶುಭ ದಿನ, ಯಾರು ಜಾಗ್ರತೆವಹಿಸಬೇಕು ಎಂದು ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿರಲಿದೆ, ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ. ಕೆಲಸದ ಹುಡುಕಾಟದಲ್ಲಿರುವವರೆಗೆ ಒಳ್ಳೆಯ ಸುದ್ದಿ ಸಿಗಲಿದೆ. ವ್ಯಾಪಾರಸ್ಥರಿಗೆ ಈ ದಿನ ಅನುಕೂಲಕರವಾಗಿದೆ.

ವೃಷಭ ರಾಶಿ
ಈ ದಿನ ನೀವು ಕೆಲಸದಲ್ಲಿ ನಿರ್ಲಕ್ಷ್ಯ ತೋರಿಸಬೇಡಿ ಎಂದು ಸಲಹೆ ನೀಡಲಾಗುವುದು, ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಅನುಕೂಲಕರವಾಗಿದೆ. ಸಲ ಮಾಡಿದ್ದರೆ ಅದನ್ನು ತೀರಿಸಲು ಸಾಧ್ಯವಾಗುವುದು, ಕುಟುಂಬದಲ್ಲಿಯೂ ಸಂತೋಷದ ವಾತಾವರಣ ಇರಲಿದೆ. ವೈವಾಹಿಕ ಬದುಕಿನಲ್ಲಿ ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಮಿಥುನ ರಾಶಿ
ಈ ದಿನ ನಿಮಗೆ ಶುಭವಾಗಿದೆ,ಕುಟುಂಬದಲ್ಲಿ ಮಂಗಳಕರ ಕಾರ್ಯಕ್ರಮವಿರಬಹುದು, ಮನೆಯ ವಾತಾವರಣ ಸಂತೋಷದಿಂದ ಕೂಡಿರಲಿದೆ. ಕೆಲಸದಲ್ಲಿ ಇತರರನ್ನು ನಂಬುವ ಬದಲಿಗೆ ನಿಮ್ಮ ಕೆಲಸ ನೀವೇ ಮಾಡಿ ಮುಗಿಸುವುದು ಒಳ್ಳೆಯದು. ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಈ ದಿನ ನಿಮಗೆ ಅನುಕೂಲಕರವಾಗಿದೆ.
ಕರ್ಕ ರಾಶಿ
ಆಸ್ತಿ ವಿಚಾರಕ್ಕೆ ಮನಸ್ತಾಪ ಬರಬಹುದು, ಕೆಲವೊಂದು ಪರಿಸ್ಥಿತಿ ತಾಳ್ಮೆಯಿಂದ ಬಗೆಹರಿಸಿ. ಮಕ್ಕಳ ಪ್ರಗತಿ ನೋಡಿ ಖುಷಿ ಪಡುತ್ರೀರಿ. ವೃತ್ತಿ ಬದುಕಿನ ದೃಷ್ಟಿಯಿಂದಲೂ ಈ ಸಮಯ ನಿಮಗೆ ಅನುಕೂಲಕರವಾಗಿದೆ.
ಸಿಂಹ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ಆದರೆ ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಬೇಕು, ವ್ಯಾಪಾರಿಗಳು ಕೆಲ ಸವಾಲುಗಳನ್ನು ಎದುರಿಸುತ್ತಿದ್ದರೆ ಅದು ಬಗೆಹರಿಯಲಿದೆ. ಕೆಲವರ ಮಾತು ನಿಮಗೆ ನೋವುಂಟು ಮಾಡಬಹುದು, ಆದರೆ ನೀವು ಅಂಥ ವಿಷಯಗಳ ಕಡೆಗೆ ಕಿವಿಕೊಡದಿದ್ದರೆ ಒಳ್ಳೆಯದು.
ಕನ್ಯಾ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ನಿಮ್ಮ ಪ್ರಮುಖ ಸಮಸ್ಯೆಗೆ ಈ ದಿನ ಪರಿಹಾರ ಸಿಗುವುದರಿಂದ ಖುಷಿಯಾಗುತ್ತೀರಿ. ಈ ದಿನ ಯಾರ ಜೊತೆಯೂ ಹಣದ ವ್ಯವಹಾರ ಮಾಡಬೇಡಿ, ಸಾಲ ಕೊಟ್ಟರೆ ಸಂಬಂಧ ಹಾಳಾಗುವುದು. ಕುಟುಂಬ ಜೀವನ ಚೆನ್ನಾಗಿರಲಿದೆ.
ತುಲಾ ರಾಶಿ
ಈ ದಿನ ನಿಮಗೆ ಒತ್ತಡದಿಂದ ಕೂಡಿರಲಿದೆ, ಕೆಲಸದ ಕಡೆಗೆ ಹೆಚ್ಚು ಗಮನಹರಿಸಿ, ಹೂಡಿಕೆಗೆ ಈ ಅವಧಿ ಅನುಕೂಲಕರವಾಗಿದೆ. ಆಸ್ತಿ ಸಂಬಂಧಿತ ವಿವಾದ ಎದುರಾಗಬಹುದು. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯ ಉಂಟಾಗಬಹುದು.
ವೃಶ್ಚಿಕ ರಾಶಿ
ವ್ಯಾಪಾರಿಗಳಿಗೆ ಈ ದಿನ ಲಾಭದಾಯಕವಾಗಿದೆ, ಈ ದಿನ ಯಾರನ್ನೂ ಕುರುಡಾಗಿ ನಂಬಬೇಡಿ ಎಂದು ಸಲಹೆ ನೀಡಲಾಗುವುದು, ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ಮದುವೆ ಸಂಬಂಧ ನೋಡುತ್ತಿರುವವರೆಗೆ ಈ ವಾರ ಮದುವೆ ಸಂಬಂಧ ಬರಬಹುದು.
ಧನು ರಾಶಿ
ಈ ದಿನ ನಿಮಗೆ ಮಿಶ್ರಫಲ, ಕೆಲಸ ಕಾರ್ಯಗಳಲ್ಲಿ ಈ ದಿನ ಉತ್ತಮವಾಗಿರಲಿದೆ, ಅಪೂರ್ಣವಾಗಿದ್ದ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗುವುದು. ಆದರೆ ಹಣದ ಬಗ್ಗೆ ಜಾಗ್ರತೆವಹಿಸಿ, ಹೂಡಿಕೆ ಮಾಡಲು ಹೋಗಬೇಡಿ.
ಮಕರ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ಕೆಲಸ ಕಾರ್ಯಗಳು ನಿಮ್ಮ ಯೋಜನೆಯಂತೆಯೇ ಪೂರ್ಣಗೊಳ್ಳಲಿದೆ. ರಾಜಕಾರಣಿಗಳು ಈ ದಿನ ಜಾಗ್ರತೆವಹಿಸಬೇಕು. ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಕುಂಭ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಆರ್ಥಿಕವಾಗಿ ಉತ್ತಮವಾಗಿರಲಿದೆ. ಆದರೆ ಬೇಡದ ಆಲೋಚನೆಗಳಿಂದ ಹೊರಬರಬೇಕು, ಇಲ್ಲದಿದ್ದರೆ ಮನಸ್ಸು ಹಾಳಾಗುವುದು. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಅಭಿಪ್ರಾಯ ವ್ಯತ್ಯಾಸ ಬರಬಹುದು. ಕೋಪದಿಂದ ಮಾತನಾಡಬೇಡಿ, ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಿ.
ಮೀನ ರಾಶಿ
ಈ ದಿನ ನೀವು ಸ್ವಲ್ಪ ಜಾಗ್ರತೆವಹಿಸಬೇಕು, ಹಣದ ವಿಷಯದಲ್ಲಿ ಯಾರನ್ನೂ ನಂಬಬೇಡಿ, ವ್ಯಾಪಾರಿಗಳು ವ್ಯವಹಾರದಲ್ಲಿ ಜಾಗ್ರತೆವಹಿಸಬೇಕು. ಕುಟುಂಬ ಜೀವನದ ದೃಷ್ಟಿಯಿಂದ ನೋಡುವುದಾದರೆ ಈ ದಿನ ನಿಮಗೆ ಅನುಕೂಲಕರವಾಗಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications