Latest Updates
-
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ!
ಡಿಸೆಂಬರ್ 25ರ ದಿನ ಭವಿಷ್ಯ: ಮಿಥುನ ರಾಶಿಗೆ ಅದೃಷ್ಟದ ದಿನ ಉಳಿದ ರಾಶಿಗಳಿಗೆ ಹೇಗಿದೆ?
ಶುಭ ದಿನ, ಜ್ಯೋತಿಷ್ಯದ ಪ್ರಕಾರ ಈ ದಿನದ ರಾಶಿಫಲ ನೋಡೋಣ.....
ಮೇಷ ರಾಶಿ
ಅನಾರೋಗ್ಯವಿರುವವರೆಗೆ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು, ಆರ್ಥಿಕವಾಗಿಯೂ ಉತ್ತಮವಾಗಿದೆ. ಈ ದಿನ ಪ್ರಯಾಣ ಮಾಡುವುದಾದರೆ ನಿಮ್ಮ ಪ್ರಯಾಣ ಸುಖಕರವಾಗಿರಲಿದೆ. ಈ ದಿನ ಕುಟುಂಬದ ಜೊತೆ ಸಂತೋಷದಿಂದ ಕಳೆಯುತ್ತೀರಿ.

ವೃಷಭ ರಾಶಿ
ಈ ದಿನ ಆರ್ಥಥಿಕವಾಗಿ ಉತ್ತಮವಾಗಿದೆ, ಸ್ವಲ್ಪ ದಿನದಿಂದ ನಿಮ್ಮನ್ನು ಕಾಡುತ್ತಿರುವ ಸಮಸ್ಯೆಗೆ ಪರಿಹಾರ ಸಿಗುವುದರಿಂದ ನಿರಾಳವಾಗುತ್ತೀರಿ, ಇನ್ನು ಈ ದಿನ ದೂರ ಪ್ರಯಾಣ ಮಾಡುವವರು ಸುರಕ್ಷತೆ ಕಡೆಗೆ ಗಮನಹರಿಸಿ.
ಮಿಥುನ ರಾಶಿ
ಆರ್ಥಿಕವಾಗಿ ತುಂಬಾ ಒಳ್ಳೆಯದಿದೆ, ವ್ಯಾಪಾರಸ್ಥರಿಗೆ ಲಾಭದ ದಿನ. ಕುಟುಂಬದಲ್ಲಿ ಒತ್ತಡದ ಪರಿಸ್ಥಿತಿ ಇರಬಹುದು. ನೀವು ಪ್ರಮುಖ ಕೆಲಸವನ್ನು ಅಪೂರ್ಣವಾಗಿ ಬಿಡದೆ, ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಿ.
ಕರ್ಕ ರಾಶಿ
ಈ ದಿನ ನಿಮಗೆ ಶುಭವಾಗಿದೆ. ಈ ದಿನ ಕೆಲಸಕ್ಕೆ ಸಂಬಂಧಿಸಿದ ಪ್ರಯಾಣ ನಿಮಗೆ ಅನುಕೂಲಕರವಾಗಿದೆ. ಆರೋಗ್ಯದ ಬಗ್ಗೆ ನೋಡುವುದಾದರೆ ಕಣ್ಣುಗಳ ಸಮಸ್ಯೆವಿರಬಹುದು. ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ.
ಸಿಂಹ ರಾಶಿ
ಈ ದಿನ ಆರ್ಥಿಕವಾಗಿ ನೋಡುವುದಾದರೆ ನಿಮಗೆ ಅನುಕೂಲಕರವಲ್ಲ, ಖರ್ಚು ಹೆಚ್ಚಿರಲಿದೆ. ಕೆಲಸದ ಕುರಿತ ಗೊಂದಲಗಳಿರಬಹುದು. ನೀವು ಊಹಿಸಿದಂತೆ ಕೆಲಸ ಕಾರ್ಯಗಳು ನಡೆಯದೆ ಸಮಸ್ಯೆಯಾಗಬಹುದು. ಆರೋಗ್ಯದ ಬಗ್ಗೆ ನೋಡುವುದಾದರೆ ಆಹಾರಕ್ರಮದ ಕಡೆಗೆ ಗಮನಹರಿಸಿ.
ಕನ್ಯಾ ರಾಶಿ
ಈ ದಿನ ನಿಮಗೆ ಶುಭವಾಗಿದೆ ಅಲ್ಲದೆ ಸಂತೋಷದಿಂದ ಕಳೆಯುತ್ತೀರಿ. ಕುಟುಂಬದಲ್ಲಿ ಸಂತೋಷದವಾತಾವರಣ ಇರಲಿದೆ. ವ್ಯಾಪಾರಿಗಳಿಗೆ ಈ ದಿ ಆರ್ಥಿಕವಾಗಿ ಶುಭದಿನ. ಆರೋಗ್ಯದ ದೃಷ್ಟಿಯಿಂದಲೂ ಈ ದಿನ ಅನುಕೂಲಕರ.
ತುಲಾ ರಾಶಿ
ತುಲಾ ರಾಶಿಯವರೇ ಈ ದಿನ ಜಾಗ್ರತೆವಹಿಸಬೇಕು, ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳವಾಗ ಜಾಗ್ರತೆವಹಿಸಬೇಕು. ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಅನುಕೂಲಕರ , ಆದರೆ ಹೂಡಿಕೆ ಬಗ್ಗೆ ತುಂಬಾನೇ ಜಾಗ್ರತೆವಹಿಸಬೇಕು. ಕುಟುಂಬದ ವಾತಾವರಣ ತುಂಬಾ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ಈ ದಿನ ಮಾಡುವ ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಬೇಕು, ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ಹೊಸ ಕೆಲಸ ಪ್ರಾರಂಭಿಸಲು ಈ ದಿನ ಉತ್ತಮವಾಗಿದೆ.
ಧನು ರಾಶಿ
ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಿದೆ, ಈ ದಿನ ಬರಬೇಕಾಗಿರುವ ಹಣ ಕೈ ಸೇರಲಿದೆ. ವೈವಾಹಿಕ ಜೀವನದ ಕಡೆಗೆ ಗಮನಹರಿಸಬೇಕು, ಚಿಕ್ಕ ಪುಟ್ಟ ಸಮಸ್ಯೆಗಳನ್ನು ನಿರ್ಲಕ್ಷ್ಯ ಮಾಡುವುದು ಒಳ್ಳೆಯದು.
ಮಕರ ರಾಶಿ
ಈ ದಿನ ನಮಗೆ ತುಂಬಾ ಚೆನ್ನಾಗಿರಲಿದೆ, ಆದರೆ ನೀವು ಅನಗ್ಯತ ಚಿಂತೆಯಿಂದ ದೂರವಿರಬೇಕು. ಈ ದಿನ ಅಪೂರ್ಣವಾಗಿರುವ ಕೆಲಸವನ್ನು ಪೂರ್ಣಗೊಳಿಲು ಸಾಧ್ಯವಾಗುವುದು. ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಈ ದಿನ ಅನುಕೂಲಕರವಾಗಿದೆ.
ಕುಂಭ ರಾಶಿ
ಹಿಂದಿನ ಹೂಡಿಕೆ ನಿಮಗೆ ಉತ್ತಮ ಲಾಭ ತಂದು ಕೊಡಬಹುದು, ಕುಟುಂಬದಲ್ಲಿ ಸಂತೋಷದ ವಾತಾವಣ ಇರಲಿದೆ. ಈ ದಿನ ಪ್ರಮುಖ ವ್ಯಕ್ತಿಯನ್ನು ಭೇಟಿಯಾಗಬಹುದು. ವೈವಾಹಿಕ ಜೀವನ, ಕುಟುಂಬ ಜೀವನ ಚೆನ್ನಾಗಿರಲಿದೆ.
ಮೀನ ರಾಶಿ
ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು, ಬರಬೇಕಾಗಿರುವ ಹಣ ಕೈ ಸೇರಲಿದೆ. ನಿಮ್ಮ ಪ್ರಯತ್ನಗಳಿಗೆ ಉತ್ತಮ ಫಲ ಸಿಗಲಿದೆ, ನಿಮ್ಮ ಕೆಲಸ ಕಾರ್ಯವನ್ನು ನೀವೇ ಮಾಡಿ ಮುಗಿಸುವುದು ಒಳ್ಳೆಯದು. ಬೇರೆಯವರನ್ನು ನಂಬಿದರೆ ಕೆಲಸ ಹಾಳಾಗಬಹುದು.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications