Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಡಿಸೆಂಬರ್ 28ರ ದಿನ ಭವಿಷ್ಯ: ಜ್ಯೋತಿಷ್ಯ ಪ್ರಕಾರ ಈ ದಿನದ ಭವಿಷ್ಯ
ಶುಭ ದಿನ, ಈ ದಿನದ ರಾಶಿಫಲ ನೋಡೋಣ:
ಮೇಷ ರಾಶಿ
ವ್ಯಾಪಾರಿಗಳಿಗೆ ವೀಕೆಂಡ್‌ನ ವ್ಯವಹಾರ ಚೆನ್ನಾಗಿರಲಿದೆ. ಹಣದ ತೊಂದರೆಯಿಲ್ಲ, ಆದರೆ ಖರ್ಚು ನಿಯಂತ್ರಿಸಿದರೆ ಒಳ್ಳೆಯದು. ಈ ದಿನ ವಿನ ವಿರೋಧಿಗಳು ನಿಮ್ಮ ವಿರುದ್ಧ ಪಿತೂರಿ ಮಾಡಬಹುದು, ಜಾಗ್ರತೆವಹಿಸಿ. ನೀವಾಡುವ ಮಾತುಗಳ ಕಡೆ ಕೂಡ ಗಮನವಿರಲಿ.

ವೃಷಭ ರಾಶಿ
ಈ ದಿನನಿಮಗೆ ಶುಭವಾಗಿದೆ, ನಿಮ್ಮ ಯೋಜನೆಯಂತೆಯೇ ಕೆಲಸ ಕಾರ್ಯಗಳು ನಡೆಯಲಿದೆ, ಮೂರನೇಯವರ ಸಲಹೆಮೇರೆಗೆ ಯಾವುದೇ ನಿರ್ಧಾರತೆಗೆದುಕೊಳ್ಳಬೇಡಿ ಎಂದು ಸಲಹೆ ನೀಡಲಾಗುವುದು. ಹಣಕಾಸಿನ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿದೆ.
ಮಿಥುನ ರಾಶಿ
ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ಕೆಲಸ ಕಾರ್ಯದ ಕಡೆಗೆ ಗಮನಹರಿಸಬೇಕು, ಪ್ರಮುಖವಾದ ಕೆಲಸವನ್ನು ಅಪೂರ್ಣವಾಗಿ ಬಿಡಬೇಡಿ. ಆರ್ಥಿಕವಾಗಿ ನೋಡುವುದಾದರೆ ಈ ದಿನ ನಿಮಗೆ ಸರಾಸರಿಯಾಗಿರಲಿದೆ.
ಕರ್ಕ ರಾಶಿ
ಆರ್ಥಿಕವಾಗಿ ತುಂಬಾ ಚೆನ್ನಾಗಿರಲಿದೆ, ಅಲ್ಲದೆ ಪ್ರಮುಖ ಸಮಸ್ಯೆ ಬಗೆಹರಿಸಲು ಸಾಧ್ಯವಾಗಲಿದೆ, ಆರೋಗ್ಯದ ದೃಷ್ಟಿಯಿಂದೂ ಒಳ್ಳೆಯದು. ಮನೆಯ ಸಮಸ್ಯೆಗ ಮನೆಯವರ ಜೊತೆ ಚರ್ಚಿಸಿದರೆ ಪರಿಹಾರ ಸಿಗಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಸಿಂಹ ರಾಶಿ
ಆರ್ಥಿಕ ದೃಷ್ಟಿಯಿಂದ ಈ ದಿನ ಅನುಕೂಲಕರ. ಅಪೂರ್ಣವಾದ ಕೆಲಸವು ಪೂರ್ಣಗೊಳ್ಳಲಿದೆ. ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ, ವಿವಾಹಿತರಿಗೂ ಈ ದಿನ ತುಂಬಾ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಆರೋಗ್ಯ ಸಮಸ್ಯೆ ಇದ್ದರೆ ಆರೋಗ್ಯದಲ್ಲಿ ಸುಧಾರಣೆ ಕಂಡು ಬರಲಿದೆ. ಈ ದಿನ ವಾಹನ ಚಲಾಯಿಸುವಾಗ ಜಾಗ್ರತೆವಹಿಸಿ. ಇನ್ನು ನಿಮ್ಮ ಕೆಲಸವನ್ನು ನೀವೇ ಮಾಡಿ, ಬೇರೆಯವರನ್ನು ನಂಬಿದರೆ ನಿಮಗೇ ಕಷ್ಟವಾಗಬಹುದು. ಖರ್ಚುಗಳ ಕಡೆ ಗಮನಕೊಟ್ಟರೆ ಕೊಟ್ಟರೆ ಒಳ್ಳೆಯದು.
ತುಲಾ ರಾಶಿ
ಸಂಗಾತಿಗೆ ಆರೋಗ್ಯ ಸಮಸ್ಯೆಯಿದ್ದರೆ ಸುಧಾರಣೆ ಕಂಡು ಬರಲಿದೆ. ಈ ದಿನ ಖರ್ಚು ಬಗ್ಗೆ ಗಮನವಿರಲಿ ಹಾಗೂ ಸಾಲ ಮಾಡಲು ಹೋಗಬೇಡಿ. ವೈವಾಹಿಕ ಬದುಕಿನಲ್ಲಿ ಕೆಲ ಅಭಿಪ್ರಾಯ ವ್ಯತ್ಯಾಸ ಬರಬಹುದು. ಸಮಧಾನದಿಂದ ವರ್ತಿಸಿ.
ವೃಶ್ಚಿಕ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಆರ್ಥಿಕವಾಗಿ ಈ ದಿನ ಅಷ್ಟೊಂದು ಅನುಕೂಲಕರವಲ್ಲ, ಖರ್ಚು ಕಡೆಗೆ ಗಮನಹರಿಸಬೇಕು, ದೊಡ್ಡ ಹೂಡಿಕೆ ಮಾಡಲು ಹೋಗಬೇಡಿ. ಯಾರನ್ನೂ ಕುರುಡಾಗಿ ನಂಬಬೇಡಿ, ಯಾವುದೇ ರಿಸ್ಕ್ ತೆಗೆದುಕೊಳ್ಳಬೇಡಿ ಎಂದು ಸಲಹೆ ನೀಡಲಾಗುವುದು.
ಧನು ರಾಶಿ
ಧನು ರಾಶಿಯವರಿಗೆ ಈ ದಿನ ಅನುಕೂಲಕರವಾಗಿದೆ, ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ಸಾಮಾಜಿಕವಾಗಿಯೂ ಗುರುತಿಸಿಕೊಳ್ಳಲು ಸಾಧ್ಯವಾಗುವುದು, ಈ ದಿನ ದೊಡ್ಡ ಚಿಂತೆಯಿಲ್ಲದೆ ಆರಾಮವಾಗಿ ಕಳೆಯಲು ಸಾಧ್ಯವಾಗುವುದು.
ಮಕರ ರಾಶಿ
ಹಣಕಾಸಿನ ವಿಷಯದಲ್ಲಿ ಜಾಗ್ರತೆವಹಿಸಿ. ಆರೋಗ್ಯ ಚೆನ್ನಾಗಿರಲಿದೆ, ಈ ದಿನ ಪ್ರಯಾಣ ಮಾಡುವುದಾದರೆ ತುಂಬಾನೇ ಅನುಕೂಲಕರವಾಗಿರಲಿದೆ. ಕುಟುಂಬ ವಾತಾವರಣ ಖುಷಿಯಿಂದ ಕೂಡಿರಲಿದೆ. ಕೆಲಸ ಕಾರ್ಯದ ವಿಷಯದಲ್ಲಿಯೂ ಈ ದಿನ ಅನುಕೂಲಕರ.
ಕುಂಭ ರಾಶಿ
ಆರ್ಥಿಕ ನಿರ್ಧಾರಗಳನ್ನು ಆಲೋಚಿಸಿ ತೆಗೆದುಕೊಳ್ಳಬೇಕು. ಕುಟುಂಬದ ಜೊತೆಗೆ ಸಂತೋಷದಿಂದ ಕಳೆಯಲು ಸಾಧ್ಯವಾಗುವುದು. ಈ ದಿನ ಮಾಡುವ ಪ್ರಯಾಣ ಖುಷಿ ನೀಡಲಿದೆ. ಪ್ರಣಯ ಜೀವನ ಚೆನ್ನಾಗಿರಲಿದೆ.
ಮೀನ ರಾಶಿ
ಈ ದಿನ ನಿಮಗೆ ಶುಭವಾಗಿದೆ, ರಾಜಕಾರಣಿಗಳ ಖ್ಯಾತಿ ಹೆಚ್ಚಾಗಲಿದೆ. ವ್ಯಾಪಾರಿಗಳಿಗೆ ಉತ್ತಮ ಲಾಭ ಗಳಿಸಲು ಸಾಧ್ಯವಾಗಲಿದೆ, ಕೆಲಸ ಕಾರ್ಯಗಳು ನಿಮ್ಮ ಯೋಜನೆಯಂತೆಯೇ ಪೂರ್ಣಗೊಳ್ಳಲಿದೆ. ಆಸ್ತಿ ಸಂಬಂಧಿಸಿದ ವ್ಯವಹಾರ ಲಾಭ ನೀಡಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications