Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಡಿಸೆಂಬರ್ 5 ದಿನ ಭವಿಷ್ಯ:ಗುರುವಾರದ ದಿನ ದ್ವಾದಶ ರಾಶಿಗಳಿಗೆ ಹೇಗಿದೆ?
ಶುಭ ಗುರುವಾರ, ಜ್ಯೋತಿಷ್ಯ ಪ್ರಕಾರ ಈ ದಿನದ ರಾಶಿಫಲ ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ಕೆಲ ಅಡೆತಡೆಗಳಿರಬಹುದು, ಹಾಗಾಗಿ ಕೆಲಸದ ಕಡೆ ಗಮನ ನೀಡಲು ಕಷ್ಟವಾಗುವುದು, ಕುಟುಂಬ ಜೀವನದಲ್ಲಿಯೂ ಪರಿಸ್ಥಿತಿ ಅಷ್ಟು ಚೆನ್ನಾಗಿರಲ್ಲ, ನೀವು ಕೋಪ ನಿಯಂತ್ರಿಸಿ ತಾಳ್ಮೆಯಿಂದ ಆಲೋಚನೆ ಮಾಡಿದರೆ ಒಳ್ಳೆಯದು. ನೀವು ನಿಮ್ಮ ಕೆಲಸ ಕಡೆಗೆ ತುಂಬಾನೇ ಗಮನಹರಿಸಬೇಕು, ಕೆಲವು ನಿಮ್ಮ ಹೆಸರಿಗೆ ಕಳಂಕ ತರುವ ಪ್ರಯತ್ನ ಮಾಡಬಹುದು,ಈ ಬಗ್ಗೆ ಜಾಗ್ರತೆವಹಿಸಿ. ಹಣಕಾಸು ವಿಷಯದಲ್ಲಿ ಈ ದಿನ ಅನುಕೂಲಕರವಲ್ಲ, ಬೆಲೆ ಬಾಳುವ ವಸ್ತುಗಳು ಕಳೆದು ಹೋಗದಂತೆ ಜಾಗ್ರತೆಮಾಡಿ.

ವೃಷಭ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಈ ದಿನ ನಿಮ್ಮ ಕೆಲಸ ಕಾರ್ಯದಲ್ಲಿ ನೀವು ಉತ್ತಮ ಫಲ ಪಡೆಯುತ್ತೀರಿ, ಹಣಕಾಸಿನ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಪ್ರಮುಖ ಕೆಲಸ ಪೂರ್ಣಗೊಳಿಸಲು ಸಾಧ್ಯವಾಗುವುದು, ಆರೋಗ್ಯದ ದೃಷ್ಟಿಯಿಂದಲೂ ಈ ದಿನ ನಿಮಗೆ ಅನುಕೂಲಕರವಾಗಿದೆ.
ಮಿಥುನ ರಾಶಿ
ಈ ದಿನ ಕೆಲಸದ ಒತ್ತಡ ಅಧಿಕವಿರಲಿದೆ, ಹಣಕಾಸಿನ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿದೆ, ಹೂಡಿಕೆಗೆ ಸಂಬಂಧಿಸಿದ ನಿರ್ಧಾರ
ತೆಗೆದುಕೊಳ್ಳಬಹುದು, ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂವ್ಯ ಚೆನ್ನಾಗಿರಲಿದೆ.
ಕರ್ಕ ರಾಶಿ
ಈ ದಿನ ನಿಮಗೆ ಮಿಶ್ರಫಲ, ಕೆಲಸದ ಕಡೆಗೆ ಹೆಚ್ಚಿನ ಗಮನ ನೀಡಬೇಕು, ಆದರೆ ನಿಮ್ಮ ಕಠಿಣಶ್ರಮಕ್ಕೆ ಫಲ ಸಿಗಲಿದೆ. ಹಣಕಾಸಿನ ಬಗ್ಗೆ ಹೇಳುವುದಾದರೆ ಹಣಕ್ಕೆ ಸಂಬಂಧಿಸಿದ ನಿಮ್ಮ ಪ್ರಯತ್ನಕ್ಕೆ ಫಲ ಸಿಗಲಿದೆ, ಸಾಲ ಕೇಳಿದ್ದರೆ ಅದು ಸಿಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಉತ್ತಮ ಹೊಂದಾಣಿಕೆ ಇರಲಿದೆ.
ಸಿಂಹ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ಯೋಜನೆಯಂತೆಯೇ ಕೆಲಸವನ್ನು ಮಾಡಿ ಮುಗಿಸಬಹುದು. ಹಣಕಾಸಿನ ಪರಿಸ್ಥಿತಿ ಚೆನ್ನಾಗಿರಲಿದೆ, ಯಾರಿಗೂ ಸಾಲ ನೀಡಬೇಡಿ, ಮರಳಿ ಸಿಗುವುದು ಕಷ್ಟ. ನಮ್ಮ ಹಾಗೂ ಸಂಗಾತ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಈ ದಿನ ನಿಮಗೆ ಉತ್ತಮವಾಗಿರಲಿದೆ.
ಕನ್ಯಾ ರಾಶಿ
ಈ ದಿನ ಕೆಲಸವನ್ನು ಉತ್ತಮವಾಗಿ ನಿಭಾಯಿಸಲು ಸಾಧ್ಯವಾಗುವುದು. ಆರ್ಥಿಕವಾಗಿ ಉತ್ತಮವಾಗಿರಲಿದೆ. ಮನೆಯ ವಾತಾವರಣ ಚೆನ್ನಾಗಿರಲಿದೆ. ಮಕ್ಕಳ ಕಡೆಯಿಂದ ಖುಷಿಯ ಸುದ್ದಿ ಪಡೆಯುತ್ತೀರಿ. ನೀವು ಕುಟುಂಬದ ಜೊತೆ ಹೆಚ್ಚಿನ ಸಮಯ ಕಳೆದೆ ಈ ದಿನ ಇನ್ನಷ್ಟು ಖುಷಿಯಾಗಿರುವಿರಿ.
ತುಲಾ ರಾಶಿ
ತುಲಾ ರಾಶಿಯವರಿಗೆಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ವ್ಯಾಪಾರಿಗಳು ತಮ್ಮ ವ್ಯಾಪಾರ ತಂತ್ರವನ್ನು ಹಂಚಿಕೊಳ್ಳಲು ಹೋಗಬಾರದು. ಕೆಲಸದ ವಿಷಯದಲ್ಲಿ ನಿರ್ಲಕ್ಷ್ಯ ಬೇಡ, ಕುಟುಂಬ ಜೀವನ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ನೀವು ಈ ದಿನ ಕೆಲಸವನ್ನು ಯೋಜಿತ ರೀತಿಯಲ್ಲಿ ಮಾಡಿ ಮುಗಿಸಲು ಪ್ರಯತ್ನಿಸಬೇಕು, ಇಲ್ಲದಿದ್ದರೆ ನಷ್ಟ ಉಂಟಾಗಬಹುದು, ಈ ದಿನ ಬಜೆಟ್ ಮೀರಿ ಖರ್ಚು ಮಾಡಲು ಹೋಗಬೇಡಿ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಬೇಡ. ಮನೆಯ ವಾತಾವರಣ ಚೆನ್ನಾಗಿರಲಿದೆ.
ಧನು ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ. ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ನಡೆಯಲಿದೆ, ಆರ್ಥಿಕವಾಗಿಯೂ ಈ ದಿನ ಉತ್ತಮವಾಗಿದೆ. ಈ ದಿನ ಮನೆಯವರ ಜೊತೆಗೆ ಮಾತನಾಡುವಾಗ ನಿಮ್ಮ ಮಾತುಗಳಿಂದ ಅವರ ಮನಸ್ಸು ನೋಯಿಸದಂತೆ ನಡೆದುಕೊಳ್ಳಿ.
ಮಕರ ರಾಶಿ
ಈ ದಿನ ನೀವು ಆರೋಗ್ಯ ಸಮಸ್ಯೆ ಎದುರಿಸಬಹುದು, ಇದು ನಿಮ್ಮ ಕೆಲಸ ಮೇಲೆ ಕೂಡ ಪರಿಣಾಮ ಬೀರಬಹುದು, ಆರೋಗ್ಯ ಸಮಸ್ಯೆ ನಿರ್ಲಕ್ಷ್ಯ ಮಾಡಬೇಡಿ, ವಿಶ್ರಾಂತಿ ಕಡೆಗೆ ಗಮನಹರಿಸಿ. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯವಿರಬಹುದು, ತಾಳ್ಮೆಯಿಂದ ಬಗೆಹರಿಸಿ.
ಕುಂಭ ರಾಶಿ
ಆತುರದ ನಿರ್ಧಾರ ಸಮಸ್ಯೆ ಹೆಚ್ಚಿಸುವುದು, ಆದ್ದರಿಂದ ಜಾಗ್ರತೆ, ವ್ಯಾಪಾರಿಗಳು ಈ ದಿನ ತಮ್ಮ ವ್ಯಾಪಾರ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಅಪೂರ್ಣವಾಗಿದ್ದ ಕೆಲಸಗಳು ಭರದಿಂದ ಸಾಗಲಿದೆ. ಮನೆಯ ವಾತಾವರಣ ಚೆನ್ನಗಿರಲಿದೆ.
ಮೀನ ರಾಶಿ
ಈ ದಿನ ನೀವು ಸ್ವಲ್ಪ ಜಾಗ್ರತೆವಹಿಸಬೇಕು, ಕೆಲಸಕ್ಕೆ ಸಂಬಂಧಿಸಿದ ನಿರ್ಧಾರ ಆಲೋಚಿಸಿ ತೆಗೆದುಕೊಳ್ಳಬೇಕು. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂವ್ಯ ಚೆನ್ನಾಗಿರಲಿದೆ, ಹಣಕಾಸು ವಿಷಯದಲ್ಲಿ ನಿರ್ಲಕ್ಷ್ಯ ಬೇಡ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications