Latest Updates
-
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಮದುವೆಗೂ ಮುನ್ನ ಈ 48 ಗಂಟೆಗಳ ಚೆಕ್ಲಿಸ್ಟ್ ಮರೆಯದಿರಿ -
ಬಿಸಿಲ ಬೇಗೆಯಿಂದ ಪಾರಾಗಲು ಮನೆಯನ್ನು ತಂಪಾಗಿರಿಸುವ ಅದ್ಭುತ ಟಿಪ್ಸ್ -
ಬಿಸಿಲ ಬೇಗೆಯಿಂದ ಪಾರಾಗಲು ಈ ಪಾನೀಯಗಳೇ ಮದ್ದು! -
ಬಿಸಿಲ ಬೇಗೆಯಿಂದ ಪಾರಾಗಲು ಈ ಟ್ರೆಂಡ್ಸ್ ಮಿಸ್ ಮಾಡ್ಬೇಡಿ -
ಬಿಸಿಲ ಬೇಗೆಯಿಂದ ಪಾರಾಗಲು ನಿಮ್ಮ ವ್ಯಾಯಾಮದ ಸಮಯ ಬದಲಾಯಿಸಿ
ದಿನ ಭವಿಷ್ಯ: ಡಿಸೆಂಬರ್ 8 ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಶುಭ ದಿನ, ಈ ದಿನ ಜ್ಯೋತಿಷ್ಯ ಪ್ರಕಾರ ದ್ವಾದಶ ರಾಶಿಗಳ ರಾಶಿಫಲ ನೋಡೋಣ...
ಮೇಷ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ, ಕುಟುಂಬದ ಜೊತೆಗೆ ಖುಷಿಯಿಂದ ಕಳೆಯುತ್ತೀರಿ. ಕೆಲಸದಲ್ಲಿ ಕೆಲವೊಂದು ದೊಡ್ಡ ಜವಾಬ್ದಾರಿ ನೀಡಬಹುದು, ಕೆಲಸದಲ್ಲಿ ತಪ್ಪುಗಳಾಗದಂತೆ ಜಾಗ್ರತೆವಹಿಸಿ.

ವೃಷಭ ರಾಶಿ
ಈ ದಿನ ಕೆಲಸಕ್ಕೆ ಸಂಬಂಧಿಸಿದ ನಿರ್ಧಾರ ಆಲೋಚಿಸಿ ತೆಗೆದುಕೊಳ್ಳಬೇಕು. ಆರ್ಥಿಕವಾಗಿ ಈ ದಿನ ಉತ್ತಮವಾಗಿರಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯ ಉತ್ತಮವಾಗಿರಲಿದೆ, ಈ ದಿನ ಹೆಚ್ಚಿನ ಮಾನಸಿಕ ಒತ್ತಡವಿಲ್ಲದೆ ಕಳೆಯಬಹುದು.
ಮಿಥುನ ರಾಶಿ
ಈ ದಿನ ನೀವು ಆರೋಗ್ಯದ ಕಡೆಗೆ ಹೆಚ್ಚು ಗಮನಹರಿಸಬೇಕು, ಆರೋಗ್ಯ ಸಮಸ್ಯೆಗೆ ಸೂಕ್ತ ವೈದ್ಯರನ್ನು ಕಂಡು ಚಿಕಿತ್ಸೆ ಪಡೆಯಿರಿ. ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯ ಸಮಸ್ಯೆಯಿಂದಾಗಿ ಕೆಲಸದ ಕಡೆಗೆ ಗಮನಹರಿಸಲು ಕಷ್ಟವಾಗಬಹುದು. ನೀವು ವಿಶ್ರಾಂತಿ ಕಡೆಗೆ ಗಮನಹರಿಸಿ. ಮನೆಯಲ್ಲಿ ಅವಾಹಿತರಿದ್ದರೆ ಅವರಿಗೆ ಮದುವೆ ಪ್ರಸ್ತಾಪ ಬರಲಿದೆ.
ಕರ್ಕ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಕೆಲಸದಲ್ಲಿ ಯಶಸ್ಸು ಪಡೆಯಲು ಸಾಧ್ಯವಾಗುವುದು. ನೀವು ಕುಟುಂಬದ ಕಡೆಗೆ ಹೆಚ್ಚಿನ ಗಮನಹರಿಸಬೇಕು, ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯ ಉಂಟಾಗಬಹುದು, ಕೆಲವು ಗೊಂದಲಗಳಿಂದ ಮನಸ್ಸಿನಲ್ಲಿ ಆತಂಕ ಮೂಡಿಸಿದೆ. ವ್ಯಾಪಾರಿಗಳಿಗೆ ಆರ್ಥಿಕಾಗಿಉತ್ತಮವಾಗಿದೆ, ನೀವು ಹೊಸ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ಅವಧಿ ನಿಮಗೆ ತುಂಬಾನೇ ಅನುಕೂಲಕರವಾಗಿದೆ.
ಸಿಂಹ ರಾಶಿ
ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ, ಕೆಲಸ ಕಾರ್ಯಗಳು ನಿಮ್ಮ ಯೋಜನೆಯಂತೆಯೇ ನಡೆಯಲಿದೆ. ಕೆಲಸಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಕುಟುಂಬ ಜೀವನ ತುಂಬಾ ಚೆನ್ನಾಗಿರಲಿದೆ. ಈ ದಿನ ಆರ್ಥಿಕವಾಗಿಯೂ ಉತ್ತಮವಾಗಿದೆ, ಖುಷಿ-ಖುಷಿಯಿಂದ ಇರಲು ಸಾಧ್ಯವಾಗುವುದು.
ಕನ್ಯಾ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಈ ದಿನ ನಿಮ್ಮ ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ಗಮನ ನೀಡುವುದು ಒಳ್ಳೆಯದು. ವ್ಯಾಪಾರಸ್ಥರಿಗೆ ಈ ಅವಧಿ ಉತ್ತಮವಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ, ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ.
ತುಲಾ ರಾಶಿ
ಈ ದಿನ ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ. ವ್ಯಾಪಾರಸ್ಥರು ಉತ್ತಮ ಆರ್ಥಿಕ ಲಾಭ ಪಡೆಯಬಹುದು, ಕೆಲಸ ಕಾರ್ಯಗಳು ಈ ದಿನ ಯೋಜಿತರೀತಿಯಲ್ಲಿ ನಡೆಯಲಿದೆ. ಕುಟುಂಬದ ಜೊತೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗುವುದರಿಂದ ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ.
ವೃಶ್ಚಿಕ ರಾಶಿ
ಈ ದಿನ ನೀವು ಯಾವುದಾದರು ಸಮಾರಂಭದಲ್ಲಿ ಭಾಗವಹಿಸಬಹುದು, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ. ಹಣದ ಕಾರಣಕ್ಕೆ ಬಾಕಿಯಾಗಿದ್ದ ಕೆಲಸ ಮತ್ತೆ ಶುರು ಮಾಡಲಾಗಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ.
ಧನು ರಾಶಿ
ಈ ದಿನ ಕೆಲ ಅಡೆತಡೆಗಳಿರಬಹುದು, ಕೆಲಸದಲ್ಲಿ ಕೆಲ ಅಡೆತಡೆಗಳಿರಬಹುದು, ಮನೆಯಲ್ಲಿ ಹಿರಿಯರಿದ್ದರೆ ಅವರ ಆರೋಗ್ಯದ ಕಡೆಗೆ ಗಮನಹರಿಸಿ. ಸೂಕ್ತ ವೈದ್ಯರಿಗೆ ತೋರಿಸಿ, ಈ ದಿನ ನಿಮ್ಮ ಸ್ನೇಹಿತರನ್ನು ಭೇಟಿಯಾಗಬಹುದು.
ಮಕರ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಈ ದಿನ ಆತುರದಿಂದ ಕೆಲಸ ಮಾಡಲು ಹೋಗಬೇಡಿ, ಬುದ್ಧಿವಂತಿಕೆಯಿಂದ ಯೋಜನೆಯ ಪ್ರಕಾರ ಮಾಡಿದರೆ ತುಂಬಾ ಒಳ್ಳೆಯದು. ಕೆಲಸಕ್ಕೆ ಸಂಬಂಧಿಸಿದಂತೆ ಖುಷಿಯ ಸುದ್ದಿ ಸಿಗಬಹುದು.
ಕುಂಭ ರಾಶಿ
ಈ ದಿನ ನಿಮಗೆ ಮಿಶ್ರಫಲ, ಕೆಲಸ ಕಾರ್ಯಗಳಿಗೆ ಈ ದಿನ ಉತ್ತಮವಾಗಿರಲಿದೆ, ಹಳೆಯ ತಪ್ಪು ಮತ್ತೆ ಮಾಡಲು ಹೋಗಬೇಡಿ. ಈ ದಿನ ಸಾಮಾಜಿಕ ಕಾರ್ಯದಲ್ಲಿ ಭಾಗಿಯಾಗಬಹುದು. ಕುಟುಂಬದ ಜೊತೆಗೆ ಅಥವಾ ಸ್ನೇಹಿತರ ಜೊತೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗುವುದು.
ಮೀನ ರಾಶಿ
ಈ ದಿನ ಮಿಶ್ರಫಲ. ಕೆಲಸದಲ್ಲಿ ಈ ದಿನ ಉತ್ತಮವಾಗಿರಲಿದೆ, ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿರಲಿದೆ. ಆರ್ಥಿಕವಾಗಿ ನೋಡುವುದಾದರೆ ಬಜೆಟ್ ಮೀರಿ ಖರ್ಚು ಮಾಡಲು ಹೋಗಬೇಡಿ, ಕುಟುಂಬದ ಜೊತೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗುವುದು.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











