Latest Updates
-
ಎಆರ್ ರಹಮಾನ್ ಬೆಂಗಳೂರು ಕಾನ್ಸರ್ಟ್: ಮೆಟ್ರೋ ಟೈಮಿಂಗ್ಸ್ ಮತ್ತು ಸುರಕ್ಷಿತವಾಗಿ ಮನೆ ಸೇರಲು ಇಲ್ಲಿದೆ ಪಕ್ಕಾ ಪ್ಲಾನ್! -
ಮುಂಬೈನಲ್ಲಿ 10% ನೀರು ಕಡಿತ: ನೀರಿನ ಅಭಾವ ಎದುರಿಸಲು ಮತ್ತು ಉಳಿತಾಯ ಮಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಹಬ್ಬದ ಸಿಹಿ ಖರೀದಿಸುವ ಮುನ್ನ ಎಚ್ಚರ! FSSAI ದಾಳಿ: ಕಳಪೆ ಖೋವಾ, ಪನ್ನೀರ್ ಪತ್ತೆ ಹೇಗೆ? -
ಭಾರತ vs ಪಾಕಿಸ್ತಾನ ಏಷ್ಯನ್ ಗೇಮ್ಸ್ ಫೈನಲ್: ಹೈ-ವೋಲ್ಟೇಜ್ ಕದನಕ್ಕೆ ಸಜ್ಜಾಗಿ, ಲೈವ್ ವೀಕ್ಷಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಮುಂಬೈನಲ್ಲಿ ಕಲುಷಿತ ಗಾಳಿ: ವಾಕಿಂಗ್ ಹೋಗುವ ಮುನ್ನ ಈ ಎಚ್ಚರಿಕೆ ವಹಿಸಿ, ಇಲ್ಲದಿದ್ದರೆ ಆರೋಗ್ಯಕ್ಕೆ ಕುತ್ತು! -
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ!
ದಿನ ಭವಿಷ್ಯ: ಫೆಬ್ರವರಿ 5 ಯಾವ ರಾಶಿಗೆ ಹೇಗಿರಲಿದೆ?
ಜ್ಯೋತಿಷ್ಯದ ಪ್ರಕಾರ ಈ ದಿನ ಯಾರಿಗೆ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಮೇಷ ರಾಶಿಯವರಿಗೆ ಈ ದಿನ ಉತ್ತಮವಾಗಿರಲಿದೆ, ವ್ಯಾಪಾರಿಗಳಿಗೆ ದಿನ ಧನ ಲಾಭವಾಗಲಿದೆ, ಈ ದಿನ ಗಾಡಿ ಬಳಸುವಾಗ ಜಾಗ್ರತೆವಹಿಸಿ. ಹಣದ ಖರ್ಚು ಬಗ್ಗೆ ತುಂಬಾನ ಜಾಗ್ರತೆವಹಿಸಿ.

ವೃಷಭ ರಾಶಿ:
ಈ ದಿನ ನೀವು ಸ್ವಲ್ಪ ತಾಳ್ಮೆಯಿಂದಿರಬೇಕು, ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ, ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ, ಈ ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚು ತೊಡಗಿಕೊಳ್ಳಬಹುದು.
ಮಿಥುನ ರಾಶಿ
ಈ ದಿನ ನೀವು ಯಾವುದೇ ನಿರ್ಧಾರ ತೆಗೆದುಕೊಳ್ಳುವುದಾದರೆ ಆಲೋಚನೆ ಮಾಡಿ ತೆಗೆದುಕೊಳ್ಳಿ. ಅಲ್ಲದೆ ಸಂಬಂಧದಲ್ಲಿ ಕೆಲ ಅಭಿಪ್ರಾಯ ವ್ಯತ್ಯಾಸ ಬರಬಹುದು, ವೃತ್ತಿ ಬದುಕಿನಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ, ವೃತ್ತಿ ಹಾಗೂ ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಪಾಡಿ.
ಕರ್ಕ ರಾಶಿ
ಈ ದಿನ ನಿಮಗೆ ಸರಾಸರಿಯಾಗಿರಲಿದೆ, ಈ ದಿನ ನಿಮ್ಮ ಕೆಲಸವನ್ನು ಪೂರ್ಣಗೊಳಿಸಲು ಹೆಚ್ಚಿನ ಪ್ರಯತ್ನ ಹಾಕಿ, ಯಾವುದೇ ಕೆಲಸ ಅರ್ಧಕ್ಕೆ ಬಿಡಬೇಡಿ, ಇನ್ನು ಕೆಲಸಕ್ಕೆ ಸಂಬಂಧಿಸಿದ ಪ್ರಯಾಣ ಲಾಭದಾಯವಾಗಿದೆ, ವ್ಯಾಪಾರಗಳಿಗೆ ಈ ದಿನ ಸಾಮಾನ್ಯವಾಗಿರಲಿದೆ.
ಸಿಂಹ ರಾಶಿ
ಈ ದಿನ ನೀವು ನಿಮ್ಮ ಕೋಪಕ್ಕೆ ಕಡಿವಾಣ ಹಾಕಿದರೆ ಒಳ್ಳೆಯದು, ವ್ಯಾಪಾರಸ್ಥರಿಗೆ ಈ ದಿನ ಉತ್ತಮವಾಗಿದೆ, ಮನೆಯ ವಾತಾವರಣ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ/
ಕನ್ಯಾ ರಾಶಿ
ಈ ದಿನ ನಿಮಗೆ ತುಂಬಾನೇ ಶುಭವಾಗಿದೆ, ಆರ್ಥಿಕ ವ್ಯವಹಾ ಮಾಡುವಾಗ ಜಾಗ್ರತೆವಹಿಸಿ, ಕುಟುಂಬದಲ್ಲಿ ಏನಾದರು ಸಮಸ್ಯೆವಿದ್ದರೆ ಅದು ಬಗೆಹರಿಯಲಿದೆ, ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿದೆ.
ತುಲಾ ರಾಶಿ
ವ್ಯಾಪಾರಿಗಳು ಈ ದಿನ ಬಯಸಿದ ಲಾಭ ಪಡೆಯುವುದು ಕಷ್ಟವಾಗಬಹುದು, ಅಲ್ಲದೆ ಈ ದಿನ ಆರೋಗ್ಯದಲ್ಲಿ ಏರಳಿತವಿರಬಹುದು. ಇನ್ನು ಕೆಲವೊಂದು ಮನಸ್ಸಿನಲ್ಲಿಯೇ ಇಟ್ಟುಕೊಳ್ಳುವುದಕ್ಕಿಂತ ಸಂಗಾತಿ ಜೊತೆಗೆ ಮುಕ್ತವಾಗಿ ಮಾತನಾಡಿದರೆ ನಿಮ್ಮ ಗೊಂದಲಕ್ಕೆ ಪರಿಹಾರ ಸಿಗಲಿದೆ.
ವೃಶ್ಚಿಕ ರಾಶಿ
ಈ ನ ನೀವು ಹಣಕಾಸಿನ ಕಡೆಗೆ ಹೆಚ್ಚಿನ ಗಮನಹರಿಸಬೇಕು, ಮಿತಿ ಮೀರಿ ಖರ್ಚು ಮಾಡಬೇಡಿ, ನಿಮ್ಮ ಸಂಗಾತಿಯ ಭಾವನೆಗಳನ್ನೂ ಗೌರವಿಸಿ. ವೃತ್ತಿ ಬದುಕಿನಲ್ಲಿ ಕೆಲ ಅಡೆತಡೆಗಳು ಎದುರಾಗಬಹುದು.
ಧನು ರಾಶಿ
ಈ ದಿನ ನಿಮಗೆ ಮಿಶ್ರಫಲ, ಕೆಲಸದ ಜಾಗದಲ್ಲಿ ಒತ್ತಡ ಹೆಚ್ಚಿರಿದೆ, ಇನ್ನು ಕುಟುಂಬ ಬದುಕಿನಲ್ಲಿಯೂ ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ವಿಷಯಕ್ಕೆ ಮನಸ್ತಾಪ ಹೆಚ್ಚಾಗಬಹುದು, ಆದರೆ ಮುಕ್ತವಾಗಿ ಮಾತನಾಡುವುದರಿಂದ ನಿಮ್ಮ ನಡುವಿನ ಮುನಿಸು ದೂರಾಗಲಿದೆ.ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ.
ಮಕರ ರಾಶಿ
ಮನೆಯ ವಿಷಯದಲ್ಲಿ ಮೂರನೇಯ ವ್ಯಕ್ತಿ ಮೂಗು ತೂರಿಸಲು ಅವಕಾಶ ನೀಡಬೇಡಿ,ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯ ಹೆಚಚಾಗದಂತೆ ನೋಡಿಕೊಳ್ಳಿ. ವೈಯಕ್ತಿಕ ಬದುಕಿನ ಸಮಸ್ಯೆ ವೃತ್ತಿ ಬದುಕಿನಲ್ಲಿಯೂ ಪ್ರಭಾವ ಬೀರುವುದು.
ಕುಂಭ ರಾಶಿ
ಈ ದಿನ ಆರ್ಥಿಕವಾಗಿ ನಿಮಗೆ ಉತ್ತಮವಾಗಿರಲಿದೆ, ಇನ್ನು ಹೂಡಿಕೆಗೆ ಈ ದಿನ ನಿಮಗೆ ಉತ್ತಮವಾಗಿದೆ, ವ್ಯಾಪಾರಸ್ಥರಿಗೆ ಧನಲಾಭವಾಗಲಿದೆ, ಉದ್ಯೋಗಿಗಳಿಗೆ ಈ ದಿನ ಸರಾಸರಿಯಾಗಿರಲಿದೆ.
ಮೀನ ರಾಶಿ
ಈ ದಿನ ನಿಮಗೆ ಶುಭವಾಗಿದೆ, ನಿಮ್ಮ ಕೆಲಸ ಕಾರ್ಯಗಳು ನೀವಂದುಕೊಂಡಂತೆಯೇ ಪೂರ್ಣವಾಗಲಿದೆ. ಕೆಲಸದ ಜೊತೆಗೆ ಕುಟುಂಬಕ್ಕೂ ಸಮಯ ನೀಡಿ, ಆರ್ಥಿಕವಾಗಿ ಈ ದಿನ ನಿಮಗೆ ಅನುಕೂಲಕರವಾಗಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
