Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ದಿನ ಭವಿಷ್ಯ, ಫೆಬ್ರವರಿ 8: ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯದ ಪ್ರಕಾರ ಫೆಬ್ರವರಿ 8 ನಿಮಗೆ ಹೇಗಿರಲಿದೆ?
ಮೇಷ ರಾಶಿ
ಆರೋಗ್ಯದ ಕಡೆಗೆ ತುಂಬಾನೇ ಗಮನರಿಸಿ, ಅಲ್ಲದೆ ಈ ದಿನ ಹಣದ ಖರ್ಚು ಹೆಚ್ಚರಿಲಿದೆ. ಕುಟುಂಬದಲ್ಲಿಯೂ ಪರಿಸ್ಥಿತಿ ಒತ್ತಡದಿಂದ ಕೂಡಿರಬಹುದು, ನೀವು ತ ಆಳ್ಮೆಯಿಂದ ವರ್ತಿಸಿ, ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ ಎಂದು ಸಲಹೆ ನೀಡಲಗುವುದು.

ವೃಷಭ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣವಾಗಲಿದೆ, ಸಂಗಾತಿ ಜೊತೆ ಹಳೆಯ ವಿಷಯ ಕೆದಕಬೇಡಿ, ಮನೆಯ ವಾತವರಣ ಶಾಂತವಾಗಿರುತ್ತದೆ, ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಈ ದಿನ ಉತ್ತಮವಾಗಿದೆ.
ಮಿಥುನ ರಾಶಿ
ಈ ದಿನ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ನಡೆಯಲಿದೆ, ನಿಮ್ಮ ಕೆಲಸಕ್ಕೆ ಮೆಚ್ಚುಗೆ ದೊರೆಯಲಿದೆ, ವ್ಯಾಪಾರಸ್ಥರು ಬಯಸಿದ ಲಾಭ ಪಡೆಯುತ್ತೀರಿ. ಕುಟುಂಬ ಜೀವನ ಚನ್ನಾಗಿರಲಿದೆ, ಒಟ್ಟಿನಲ್ಲಿ ಈ ದಿನ ನಿಮಗೆ ಅನುಕೂಕರವಾಗಿದೆ.
ಕರ್ಕ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಅಪೂರ್ಣವಾಗಿದ್ದ ಪ್ರಮುಖ ಕೆಲಸ ಪೂರ್ಣಗೊಳಿಸಲು ಸಾಧ್ಯವಾಗಲಿದೆ, ಈ ದಿನ ಆರ್ಥಿಕವಾಗಿ ಉತ್ತಮವಾಗಿದೆ, ಶಾಪಿಂಗ್ ಅಂತ ಸುತ್ತಾಡಬಹುದು, ನಿಮಗೆ ವಹಿಸಿರುವ ಜವಾಬ್ದಾರಿ ಸಮಯಕ್ಕೆ ಪೂರ್ಣಗೊಳಿಸಿ, ವಿಳಂಬ ಮಾಡಬೇಡಿ.
ಸಿಂಹ ರಾಶಿ
ಈ ದಿನ ಸ್ವಲ್ಪ ಜಾಗ್ರತೆವಹಿಸಿ, ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ, ಕೆಲಸದಲ್ಲಿ ಅಡೆತಡೆಗಳು ಎದುರಾಗಬಹುದು, ದೂರದ ಪ್ರಯಾಣ ಸ್ವಲ್ಪ ಮುಂದೂಡುವುದು ಒಳ್ಳೆಯದು, ಕುಟುಂಬ ಜೀವನ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಈ ದಿನ ನೀವು ತೆಗೆದುಕೊಳ್ಳುವ ನಿರ್ಧಾರಗಳು ನಿಮಗೆ ಉತ್ತಮ ಫಲ ನೀಡಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಹೊಂದಾಣಿಕೆ ಉತ್ತಮವಾಗಿರಲಿದೆ. ಹೂಡಿಕೆ ಮಾಡಬಯಸಿದರೆ ಅದಕ್ಕೆ ಈ ದಿನ ಉತ್ತಮವಾಗಿದೆ.
ತುಲಾ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಮನೆಯ ವಾತಾವರಣ ಸಂತೋಷದಿಂದ ಕೂಡಿರಲಿದೆ. ಆಸ್ತಿ ಸಂಬಂಧಿಸಿದ ವ್ಯವಹಾರ ಮಾಡುವುದಾದರೆ ಈ ದಿನ ಉತ್ತಮವಾಗಿರಲಿದೆ. ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮವಾಗಿರಲಿದೆ.
ವೃಶ್ಚಿಕ ರಾಶಿ
ಈ ದಿನ ನಿಮಗೆ ಮಿಶ್ರಫಲ, ಕೆಲಸದ ವಿಷಯದಲ್ಲಿ ಯಾವುದೇ ಅಪಾಯಕಾರಿ ನಿರ್ಧಾರ ತೆಗೆದುಕೊಳ್ಳಬೇಡಿ. ಅಲ್ಲದೆ ಈ ದಿಬ ಬಜೆಟ್ ಮೀರಿ ಖರ್ಚು ಮಾಡದಂತೆ ಜಾಗ್ರತೆವಹಿಸಿ. ಈ ದಿನ ದೂರ ಪ್ರಯಾಣವಿದ್ದರೆ ಮುಂದೂಡಿದರೆ ಒಳ್ಳೆಯದು.
ಧನು ರಾಶಿ
ಈ ದಿನ ನೀವು ಸ್ವಲ್ಪ ಜಾಗ್ರತೆವಹಿಸಬೇಕು, ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ, ಒಟ್ಟಿನಲ್ಲಿ ಈ ದಿನ ಸಂತೋಷವಾಗಿ ಕಳೆಯಲು ಸಾಧ್ಯವಾಗಲಿದೆ.
ಮಕರ ರಾಶಿ
ಈ ದಿನ ನಿಮಗೆ ತುಂಬಾನೇ ಚೆನ್ನಾಗಿರಲಿದೆ, ಮನೆಯಲ್ಲ ಶೀಘ್ರವೇ ಶುಭ ಕಾರ್ಯಕ್ರಮ ನಡೆಯಲಿದೆ, ಮಕ್ಕಳ ಜೊತೆಗೆ ಸಂತೋಷದಿಂದ ಸಮಯ ಕಳೆಯಬಹುದು, ವೈವಾಹಿಕ ಬದುಕು ಚೆನ್ನಾಗಿರಲಿದೆ.
ಕುಂಭ ರಾಶಿ
ಈ ದಿನ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಪಡೆಯಲು ಸಾಧ್ಯವಾಗಲಿದೆ. ರಾಜಕಾರಣಿಗಳಿಗೆ ಈ ದಿನ ಉತ್ತಮವಾಗಿದೆ, ಕೆಲಸ ಕಾರ್ಯಗಳು ನೀವು ಅಂದುಕೋಂಡಂತೆಯೇ ನಡೆಯಲಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ.
ಮೀನ ರಾಶಿ
ಈ ದಿನ ನೀವು ಆರೋಗ್ಯದ ಕಡೆಗೆ ಹೆಚ್ಚು ಗಮನಹರಿಸಿ, ಚಿಕ್ಕ ಸಮಸ್ಯೆ ಅಂತ ನಿರ್ಲಕ್ಷ್ಯ ಸಲ್ಲದು. ಈ ದಿನ ನಿಮಗೆ ವೃತ್ತಿ ಬದುಕು ಹಾಗೂ ವೈಯಕ್ತಿಕ ಬದುಕಿನ ದೃಷ್ಟಿಯಿಂದ ನೋಡುವುದಾದರೆ ಅನುಕೂಕರವಾಗಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
