Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಅಕ್ಟೋಬರ್ 3 ದಿನ ಭವಿಷ್ಯ ಪ್ರಕಾರ 12 ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಈ ದಿನ ನಿಮಗೆ ಹೇಗಿರಲಿದೆ?
ಮೇಷ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿರಲಿದೆ, ಪ್ರಮುಖ ಸಮಸ್ಯೆ ಬಗೆಹರಿಯುವುದರಿಂದ ನಿರಾಳವಾಗುತ್ತೀರಿ. ಕೆಲಸ ಕಾರ್ಯಗಳಲ್ಲಿ ಉತ್ತಮ ಫಲಿತಾಂಶ ಸಿಗಲಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಮನೆಯಲ್ಲಿಯೂ ವಾತಾವರಣ ಉತ್ತಮವಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಏನೇ ಸಮಸ್ಯೆಯಿದ್ದರೆ ಅದು ಬಗೆಹರಿಯಲಿದೆ, ಆರೋಗ್ಯದ ದೃಷ್ಟಿಯಿಂದಲು ಈ ದಿನ ನಿಮಗೆ ಉತ್ತಮವಾಗಿದೆ.

ವೃಷಭ ರಾಶಿ
ವೃಷಭ ರಾಶಿಯವರಿಗೆ ಆರ್ಥಿಕವಾಗಿ ತೊಂದರೆಯಿಲ್ಲ, ಆದರೆ ನೀವು ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಲೇಬೇಡಿ. ವ್ಯವಹಾರದ ದೃಷ್ಟಿಯಿಂದ ದಿನವು ಉತ್ತಮವಾಗಿರುತ್ತದೆ. ಕೆಲಸದ ವಿಷಯದಲ್ಲಿ ಹೆಚ್ಚಿನ ಒತ್ತಡ ತೆಗೆದುಕೊಳ್ಳಬೇಡಿ, ಧನಾತ್ಮಕವಾಗಿರಿ. ಕುಟುಂಬ ಜೀವನ, ಸಂಗಾತಿಯೊಂದಿಗಿನ ಬಾಂಧವ್ಯ ಚೆನ್ನಾಗಿರಲಿದೆ.
ಮಿಥುನ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನದಲ್ಲಿ ನಿಮಗೆ ಯಶಸ್ಸು ದೊರೆಯಲಿದೆ. ಪಾಲುದಾರಿಕೆಯ ವ್ಯವಹಾರ ಮಾಡುತ್ತಿದ್ದರೆ ಈ ಅವಧಿ ನಿಮಗೆ ಅನುಕೂಲಕರವಾಗಿರಲಿದೆ. ನಿಮ್ಮ ಹಾಗು ಸಂಗಾತಿ ನಡುವೆ ಹೊಂದಾಣಿಕೆ, ಪ್ರೀತಿ ಇರಲಿದೆ, ಆರೋಗ್ಯದ ಬಗ್ಗೆ ಮಾತ್ರ ಜಾಗ್ರತೆವಹಿಸಿ.
ಕರ್ಕ ರಾಶಿ
ಆರ್ಥಿಕವಾಗಿ ಈ ದಿನ ನಿಮಗೆ ಅನುಕೂಲಕರವಾಗಿಯೇ ಇದೆ, ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದೆ. ಯೋಜನೆಯಂತೆಯೇ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿದೆ. ಅಗತ್ಯಕ್ಕಿಂತ ಹೆಚ್ಚಾಗಿ ಯಾರನ್ನೂ ನಂಬಬೇಡಿ. ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯ ಸರಿಪಡಿಸಲು ಪ್ರಯತ್ನಿಸಿ. ಆರೋಗ್ಯದ ಬಗ್ಗೆ ನೋಡುವುದಾದರೆ ನೆಗಡಿ, ಕೆಮ್ಮು ಈ ಬಗೆಯ ಸಮಸ್ಯೆಗಳಿರಬಹುದು.
ಸಿಂಹ ರಾಶಿ
ಕುಟಂಬ ಜೀವನ ಚೆನ್ನಾಗಿರಲಿದೆ, ಅನಗ್ಯತ ಖರ್ಚುಗಳಿಗೆ ಕಡಿವಾಣ ಹಾಕಿ, ವ್ಯಾಪಾರಸ್ಥರಿಗೆ ಲಾಭ ದಿನವಾಗಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಸಂಬಂಧ ಚೆನ್ನಾಗಿರಲಿದೆ, ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿದೆ.
ಕನ್ಯಾ ರಾಶಿ
ನೀವು ಸ್ವಲ್ಪ ಸಮಯದಿಂದ ಹಣಕ್ಕೆ ಸಂಬಂಧಿಸಿದ ಪ್ರಯತ್ನ ಮಾಡುತ್ತಿದ್ದರೆ ಈ ದಿನ ಅನುಕುಲಕರವಾಗಿದೆ. ಯಾವುದೇ ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗಬಹುದು. ವ್ಯಾಪಾರಿಗಳು ವ್ಯವಹಾರದಲ್ಲಿ ಸ್ವಲ್ಪ ಜಾಗ್ರತೆವಹಿಸಿ. ಕುಟುಂಬ ಬದುಕು ಚೆನ್ನಾಗಿರಲಿದೆ. ಜೀವನಶೈಲಿ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು.
ತುಲಾ ರಾಶಿ
ಆರ್ಥಿಕವಾಗಿ ಈ ದಿನ ನಿಮಗೆ ಅನುಕೂಲಕರವಾಗಿದೆ. ನಿಮ್ಮ ಆರೋಗ್ಯದಲ್ಲಿ ಸುಧಾರಣೆಯಾಗುವ ಸಾಧ್ಯತೆಯಿದೆ. ಉದ್ಯಮಿಗಳ ಆರ್ಥಿಕ ಸ್ಥಿತಿ ಬಲವಾಗಿರುತ್ತದೆ. ಮನೆಯಲ್ಲಿ ಖುಷಿಯ ವಾತಾವರಣ ಇರಲಿದೆ, ನಿಮ್ಮ ಆರೋಗ್ಯ ಚೆನ್ನಾಗಿರಲಿದೆ, ಆದರೆ ಆಪ್ತರ ಆರೋಗ್ಯ ಸಮಸ್ಯೆ ನಿಮ್ಮ ಚಿಂತೆಗೆ ಕಾರಣವಾಗಿರಬಹುದು.
ವೃಶ್ಚಿಕ ರಾಶಿ
ಸಂಬಂಧದ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿದೆ, ಅದರೆ ನೀವು ಕೆಲಸದ ಕಡೆಗೆ ಗಮನಹರಿಸಬೇಕು, ನಿರ್ಲಕ್ಷ್ಯದಿಂದ ಸಮಸ್ಯೆ ಹೆಚ್ಚಾಗುವುದು, ಇನ್ನು ಆರೋಗ್ಯಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ಸಲ್ಲದು. ಅತಿಯಾದ ಮಾನಸಿಕ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು.
ಧನು ರಾಶಿ
ಆರ್ಥಿಕವಾಗಿ ಉತ್ತಮವಾಗಿದೆ, ಆದರೆ ಕೆಲಸದಲ್ಲಿ ಒತ್ತಡವಿರಬಹುದು, ಆರೋಗ್ಯ ಚೆನ್ನಾಗಿರಲಿದೆ, ಆರೋಗ್ಯ ಸಮಸ್ಯೆಯಿದ್ದರೆ ಸುಧಾರಣೆ ಕಂಡು ಬರಲಿದೆ. ವೈವಾಹಿಕ ಬದುಕಿನಲ್ಲಿ ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.
ಮಕರ ರಾಶಿ
ಕೋಪ ನಿಯಂತ್ರಿಸಿ, ಅನಗ್ಯತ ಜಗಳಕ್ಕೆ ಹೋಗಬೇಡಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು.
ವ್ಯಾಪಾರಿಗಳಿಗೆ ಈ ದಿನ ಸಾಧಾರಣವಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯ ಬಗ್ಗೆ ನಿರ್ಲಕ್ಷ್ಯ ಬೇಡ. ಇಂದು ನೀವು ವಾಹನವನ್ನು ಬಹಳ ಎಚ್ಚರಿಕೆಯಿಂದ ಉಪಯೋಗಿಸಿ.
ಕುಂಭ ರಾಶಿ
ವ್ಯಾಪಾರಿಗಳು ಈ ದಿನ ಯಾವುದೇ ರಿಸ್ಕ್ ತೆಗೆದುಕೊಳ್ಖಬೇಡಿ. ಇತರರ ಸಲಹೆಯ ಮೇರೆಗೆ ಯಾವುದೇ ವ್ಯವಹಾರ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಉದ್ಯೋಗಿಗಳಿಗೆ ಈ ದಿನ ಸಾಧಾರಣವಾಗಿರಲಿದೆ. ಮನೆಯಲ್ಲಿ ಅವಿವಾಹಿತ ಸದಸ್ಯರಿದ್ದರೆ ಅವರಿಗೆ ಮದುವೆ ಪ್ರಸ್ತಾಪ ಬರಬಹುದು. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.
ಆರೋಗ್ಯ: ಕೆಲಸದ ಹೊರೆ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ.
ಮೀನ ರಾಶಿ
ನಿಮ್ಮ ಮಾತುಗಳಲ್ಲಿ ನಿಯಂತ್ರಣವಿದ್ದರೆ ಒಳ್ಳೆಯದು, ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಬೇಡ. ಪ್ರೀತಿಯಲ್ಲಿದ್ದರೆ ನಿಮ್ಮ ಸಂಬಂಧಕ್ಕೆ ಸಂಬಂಧಿಸಿದಂತೆ ನೀವು ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಲು ಹೋಗಬೇಡಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications