Latest Updates
-
ಬಿಸಿಗಾಳಿಯ ಎಚ್ಚರಿಕೆ: ಅಡುಗೆ ಮಾಡದೆಯೇ ದೇಹಕ್ಕೆ ತಂಪು ನೀಡುವ ಪ್ರೋಟೀನ್ ಆಹಾರಗಳಿವು! -
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು!
ದಿನ ಭವಿಷ್ಯ: ಭಾನುವಾರದ ಈ ದಿನ ಯಾವ ರಾಶಿಗೆ ಹೇಗಿರಲಿದೆ?
ಜ್ಯೋತಿಷ್ಯದ ಪ್ರಕಾರ ಭಾನುವಾರದ ಈ ದಿನ ನಿಮಗೆ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ, ಕೆಲಸ ಕಾರ್ಯಗಳು ನೀವು ಅಂದುಕೊಂಡಂತೆಯೇ ನಡೆಯಲಿದೆ. ನಿಮ್ ಹಾಗೂ ಸಂಗಾತಿ ನಡುವೆ ಬಾಂಧವ್ಯ ತುಂಬ ಚೆನ್ನಾಗಿರಲಿದೆ. ಆರ್ಥಿಕ ದೃಷ್ಟಿಯಿಂದಲೂ ಈ ದಿನ ನಿಮಗೆ ಅನುಕೂಲಕರವಾಗಿದೆ.

ವೃಷಭ ರಾಶಿ
ಈ ದಿನ ನೀವು ಧನಾತ್ಮಕವಾಗಿರಿ, ಇದರಿಂದ ಒಳಿತಾಗುತ್ತದೆ, ನಿಮ್ಮ ಪ್ರೀತಿ ಪಾತ್ರರರು ನಿಮ್ಮ ಮೇಲೆ ಎಷ್ಟು ಪ್ರೀತಿ ಇಟ್ಟಿದ್ದಾರೆ ಎಂಬುವುದು ಅನುಭವಕ್ಕೆ ಬರುತ್ತದೆ, ಕುಟುಂಬದ ಜೊತೆಗೆ ಸಂತೋಷದಿಂದ ಸಮಯ ಕಳೆಯಲು ಸಾಧ್ಯವಾಗುವುದು. ಆಫೀಸ್ ಸಹೋದ್ಯೋಗಿಗಳ ಜೊತೆಗೆ ಎಚ್ಚರಿಕೆಯಿರಲಿ.
ಮಿಥುನ ರಾಶಿ
ಈ ದಿನ ನಿಮಗೆ ತುಂಬಾನೇ ಶುಭವಾಗಿದೆ, ಕೆಲಸದ ವಿಷಯದಲ್ಲಿ ಶುಭ ಸುದ್ದಿ ಪಡೆಯುತ್ತೀರಿ. ವ್ಯಾಪಾರಿಗಳಿಗೆ ಧನಲಾಭವಾಗಲಿದೆ. ಇನ್ನು ಮನೆಯ ಹಿರಿಯರು ಏನಾದರು ಸಲಹೆ ನೀಡಿದ್ದರೆ ಅದನ್ನು ನಿರ್ಲಕ್ಷ್ಯ ಮಾಡಲು ಹೋಗಬೇಡಿ.
ಕರ್ಕ ರಾಶಿ
ಈ ದಿನ ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯವಿರಬಹುದು, ನಿಮ್ಮ ಮನಸ್ಸಿಗೆ ತುಂಬಾ ನೋವಾಗಬಹದುದು ಆದರೆ ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿ ಎಂದ ಸಲಹೆ ನೀಡಲಾಗುವುದು. ವೃತ್ತಿ ಹಾಗೂ ವೈಯಕ್ತಿಕ ಜೀವನದ ದೃಷ್ಟಿಯಿಂದ ಈ ದಿನ ಅನುಕೂಲಕರವಾಗಿದೆ.
ಸಿಂಹ ರಾಶಿ
ನೀವು ನಿಮ್ಮ ಗುರಿಯತ್ತ ಗಮನಹರಿಸಲು ಸಾಧ್ಯವಾಗುವುದು, ನೀವು ಇಷ್ಟೇ ಸಾಕು ಎಂದು ಸೇಫ್ ಝೋನ್‌ನಲ್ಲಿ ಇರಲು ಬಯಸಿದರೆ ಬೆಳೆಯುವುದು ಕಷ್ಟವಾಗಬಹುದು, ಈ ದಿನ ನೀವು ತೆಗೆದುಕೊಳ್ಳುವ ನಿರ್ಧಾರಗಳು ನಿಮಗೆ ಉತ್ತಮ ಫಲ ನೀಡಲಿದೆ. ನಿಮ್ಮ ಕನಸುಗಳನ್ನು ನನಸ ಮಾಡಲು ಕಾರ್ಯ ಪ್ರಾರಂಭಿಸಿ.
ಕನ್ಯಾ ರಾಶಿ
ಜೀವನದ ಪ್ರತಿಯೊಂದು ಘಟನೆಯೂ ನಮಗೆ ಪಾಠ ಕಲಿಸಿಕೊಡುತ್ತೆ ಎಂದು ಯೋಚಿಸಿ ಮುಂದೆ ನಡೆಯಿರಿ ಎಂಬ ಸಲಹೆ ನೀಡಲಾಗುವುದು. ವೃತ್ತಿ ಬದುಕಿನಲ್ಲಿ ನಿಮ್ಮ ಪ್ರಯತ್ನಕ್ಕೆ ಉತ್ತಮ ಫಲ ದೊರೆಯುವ ಎಲ್ಲಾ ಸೂಚನೆಗಳಿವೆ. ನಿಮ್ಮ ಕೆಲಸ ಕಾರ್ಯಗಳಿಗೆ ಸಂಗಾತಿಯ ಬೆಂಬಲ ದೊರೆಯಲಿದೆ.
ತುಲಾ ರಾಶಿ
ಕೆಲವೊಂದು ಘಟನೆಗಳು ನಿಮ್ಮ ಆತ್ಮವಿಶ್ವಾಸ ಕುಗ್ಗಿಸಬಹುದು, ಆದರೆ ಹಾಗಾದಂತೆ ನೋಡಿಕೊಳ್ಳಿ ಎಂದು ಸಲಹೆ ನೀಡಲಾಗುವುದು. ಅನಗ್ಯತ ವಿಷಯಗಳ ಕಡೆಗೆ ಗಮನಹರಿಸಲು ಹೋಗಲೇಬೇಡಿ, ನಿಮ್ಮ ವೈವಾಹಿಕ ಜೀವನ ಚೆನ್ನಾಗಿರಲಿದೆ, ಸಂಗಾತಿಯ ಬೆಂಬಲ ದೊರೆಯಲಿದೆ.
ವೃಶ್ಚಿಕ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಈ ದಿನ ಧನಾತ್ಕಕವಾಗಿರಲಿದೆ, ಕೆಲಸ ಕಾರ್ಯಗಳು ನೀವು ಅಂದುಕೊಂಡಂತೆಯೇ ನಡೆಯಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಕೂಡ ನಿಮಗೆ ಉತ್ತಮವಾಗಿರಲಿದೆ.
ಧನು ರಾಶಿ
ಈ ದಿನ ನಿಮಗೆ ಉತ್ತಮ ಅವಕಾಶ ದೊರೆಯಲಿದೆ, ಆರ್ಥಿಕವಾಗಿ ಉತ್ತಮವಾಗಿದೆ, ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ತುಂಬಾನೇ ಚೆನ್ನಾಗಿರಲಿದೆ, ಪ್ರೀತಿ ಹೆಚ್ಚಾಗಲಿದೆ.
ಮಕರ ರಾಶಿ
ಈ ದಿನ ನೀವು ಪ್ರಮುಖವಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಹಿಂಜರಿಯಬೇಡಿ ಎಂದು ಸಲಹೆ ನೀಡಲಾಗುವುದು. ಈ ದಿನ ಆರೋಗ್ಯದ ದೃಷ್ಟಿಯಿಂದ, ಆರ್ಥಿಕ ದೃಷ್ಟಿಯಿಂದ ಉತ್ತಮವಾಗಿದೆ, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ.
ಕುಂಭ ರಾಶಿ
ಈ ದಿನ ನಿಮಗೆ ಉತ್ತಮವಾಗರಲಿದೆ, ನಿಮ್ಮ ಆತ್ಮವಿಶ್ವಾಸ ತುಂಬಾ ಚೆನ್ನಾಗಿರಲಿದೆ, ಇನ್ನು ಕೆಲವರು ನಿಮ್ಮನ್ನು ಪ್ರಭಾವಿಸಲು ಪ್ರಯತ್ನಿಸಬಹುದು, ಆದರೆ ನೀವು ಜಾಗ್ರತೆವಹಿಸಿ ಎಂದು ಸಲಹೆ ನೀಡಲಾಗುವುದು.
ಮೀನ ರಾಶಿ
ಈ ದಿನ ನಿಮಗೆ ಚೆನ್ನಾಗಿರಲಿದೆ, ಈ ದಿನ ನಿಮ್ಮ ಆತ್ಮವಿಶ್ವಾಸ ಉತ್ತಮವಾಗಿರಲಿದೆ, ನಿಮ್ಮ ಕೆಲಸಕ್ಕೆ ಉತ್ತಮ ಪ್ರತಿಫಲ ದೊರೆಯಲಿದೆ. ಈ ದಿನ ಆರ್ಥಿಕವಾಗಿ ತುಂಬಾ ಚೆನ್ನಾಗಿರಲಿದೆ. ಕುಟುಂಬ ಜೀವನ ಕೂಡ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications