Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಿನ ಭವಿಷ್ಯ: ಜನವರಿ 28ರದಿನ ಯಾವ ರಾಶಿಗೆ ಹೇಗಿರಲಿದೆ?
ಜ್ಯೋತಿಷ್ಯಶಾಸ್ತ್ರ ಪ್ರಕಾರ ಜನವರಿ 28 ನಿಮಗೆ ಹೇಗಿರಲಿದೆ?
ಮೇಷ ರಾಶಿ
ಈ ದಿನ ನಿಮಗೆ ಅಷ್ಟೊಂದು ಅನುಕೂಲಕರವಲ್ಲ, ನಿಮ್ಮ ಆತ್ಮವಿಶ್ವಾಸ ಕುಗ್ಗಹುದು, ನೀವು ಗೊಂದಲದಿಂದ ಯಾವುದೇ ತೀರ್ಮಾನಕ್ಕೆ ಬರಬೇಡಿ, ಕೆಲಸದ ಕಡೆಗೆ ಹೆಚ್ಚು ಗಮನಕೊಟ್ಟು ಮಾಡು ಪ್ರಯತ್ನಿಸಬೇಕು. ನಿಮ್ಮ ಕೋಪ ನಿಯಂತ್ರಿಸುವುದು ಒಳ್ಳೆಯದು.

ವೃಷಭ ರಾಶಿ
ನಿಮಗೆ ಏನು ಮುಖ್ಯವೋ ಅದರತ್ತ ಗಮನಹರಿಸುವುದು ಒಳ್ಳೆಯದು, ನೀವು ನಿಮಗಾಗಿ ಸ್ವಲ್ಪ ಸಮಯ ಮೀಸಲಿಡಿ, ಕೆಲಸದ ಜೊತೆಗೆ ವೈಯಕ್ತಿಕ ಬದುಕಿನ ಕಡೆಗೂ ಗಮನಹರಿಸಿ, ಇದರಿಂದ ಬದುಕಿನಲ್ಲಿ ತುಂಬಾ ಒಳಳೆಯ ಬೆಳವಣಿಗೆ ಕಾಣಬಹುದು.
ಮಿಥುನ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ, ನೀವು ಯಾವುದೇ ನಿರ್ಧಾರವಾದರೂ ಸ್ವಂತ ತೆಗೆದುಕೊಳ್ಳಿ, ಬೇರೆಯವರು ಹೇಳಿದರು ಎಂದು ತೆಗೆದುಕೊಳ್ಳಬೇಡಿ.
ಕರ್ಕ ರಾಶಿ
ಈ ದಿನ ಸ್ವಲ್ಪ ಸೋಮಾರಿತನವಿರಬಹುದು, ಕುಟುಂಬದ ಜೊತೆಗೆ ಹೆಚ್ಚಿನ ಸಮಯ ಕಳೆಯಲು ಬಯಸುತ್ತೀರಿ, ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಬೇಡ, ವಿಶ್ರಾಂತಿ ಕಡೆಗೆ ಗಮನಹರಿಸಿದರೆ ಲವಲವಿಕೆ ಮರಳಿ ಪಡೆಯಲು ಸಾಧ್ಯವಾಗಲಿದೆ, ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ.
ಸಿಂಹ ರಾಶಿ
ಆರ್ಥಿಕ ದೃಷ್ಟಿಯಿಂದ ಈ ದಿನ ಅಷ್ಟೊಂದು ಅನುಕೂಲಕರವಲ್ಲ, ಆದರೆ ಅದರ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವ ಅಗ್ಯತವಿಲ್ಲ, ಬೇರೆಯವರ ಹತ್ರ ಸಹಾಯ ಕೇಳಲು ಹಿಂಜರಿಯಬೇಡಿ. ಕೆಲಸದ ಕಡೆಗೆ ಹೆಚ್ಚು ಗಮನಹರಿಸಿ.
ಕನ್ಯಾ ರಾಶಿ
ವೃತ್ತಿ ಬದುಕಿನಲ್ಲಿ ನಿಮ್ಮ ಸಾಮರ್ಥ್ಯದ ಬಗ್ಗೆ ನಿಮಗೆ ಸಂದೇಹ ಬೇಡ, ನಿಮ್ಮ ಗುರಿಯತ್ತ ಗಮನಹರಿಸಿ,ಆತ್ಮವಿಶ್ವಾಸದಿಂದ ಸವಾಲುಗಳನ್ನು ಸುಲಭವಾಗಿ ಜಯಿಸಲು ಸಾಧ್ಯವಾಗುವುದು ಎಂಬುವುದು ಮರೆಯದಿರಿ.
ತುಲಾ ರಾಶಿ
ಅನಗ್ಯತ ಚಿಂತೆಗಳು ಮಾನಸಿಕ ಒತ್ತಡ ಹೆಚ್ಚಿಸಬಹುದು, ನೀವು ನಿಮ್ಮ ಕೆಲಸ ಕಾರ್ಯದ ಕಡೆಗೆ ಗಮನಹರಿಸಿ, ಅನಗ್ಯತ ವಿವಾದಗಳಿಂದ ದೂರವಿರಿ, ಮಾನಸಿಕ ಒತ್ತಡ ಕಡಿಮೆ ಮಾಡಲು ಧ್ಯಾನದ ಕಡೆಗೆ ಗಮನಹರಿಸಿ.
ವೃಶ್ಚಿಕ ರಾಶಿ
ಈ ದಿನ ಒಂಟಿತನ ಕಾಡಬಹುದು, ನಿಮಗೆ ಇಷ್ಟವಾದ ವಿಷಯದ ಕಡೆಗೆ ಗಮನಹರಿಸಿ, ಇದರಿಂದ ಮನಸ್ಸಿಗೆ ಖುಷಿ ಸಿಗಲಿದೆ. ಕೆಲಸದಲ್ಲಿ ನಿರ್ಲಕ್ಷ್ಯ ಬೇಡ, ಪ್ರೀತಿ ಪಾತ್ರರ ಜೊತೆಗೆ ಸಮಯ ಕಳೆಯುವುದು ಒಳ್ಳೆಯದು.
ಧನು ರಾಶಿ
ಈ ದಿನ ಕೆಲಸ ಕಾರ್ಯದ ಕಡೆಗೆ ಗಮನಹರಿಸಲು ಸ್ವಲ್ಪ ಕಷ್ಟವಾಗಬಹುದು, ನೀವು ಹಲವು ಕೆಲಸ ಒಟ್ಟಿಗೆ ಮಾಡುವ ಬದಲಿಗೆ ಪ್ರಮುಖ ಕೆಲಸದ ಕಡೆಗೆ ಗಮನಹರಿಸಿ. ಈ ದಿನ ಸವಾಲುಗಳನ್ನು ಎದುರಿಸಲು ಸಾಧ್ಯವಾಗುವುದು, ಇದರಿಂದ ಮಾನಸಿಕ ಒತ್ತಡ ಕಡಿಮೆಯಾಗಲಿದೆ.
ಮಕರ ರಾಶಿ
ನೀವು ಆರೋಗ್ಯದ ಕಡೆಗೆ ಗಮನಹರಿಸಿ, ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳಿ, ನೀವು ನಿಮಗೆ ತುಂಬಾ ಮುಖ್ಯವೂ ಅದರತ್ತ ಗಮನಹರಿಸಿ, ಅನಗ್ಯತ ಚಿಂತೆಗಳಿಂದ ದೂರವಿರಿ.
ಕುಂಭ ರಾಶಿ
ಕಲಸದ ಕಾರ್ಯದ ದೃಷ್ಟಿಯಿಂದ ನೋಡುವುದಾದರೆ ಈ ದಿನ ಅನುಕೂಲಕರವಾಗಿದೆ, ಸಿಕ್ಕ ಅವಕಾಶ ಉತ್ತಮವಾಗಿ ಬಳಸಿಕೊಳ್ಳುತ್ತೀರಿ, ಆರ್ಥಿಕ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿದೆ, ಹೂಡಿಕೆ ಮಾಡಲು ಸಾಧ್ಯವಾಗಲಿದೆ.
ಮೀನ ರಾಶಿ
ಮನೆಯಲ್ಲಿ ಕೆಲ ಸಮಸ್ಯೆಗಳಿರಬಹುದು,ಆದರೆ ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಿ, ನೀವು ನಿಮ್ಮ ಸಂಗಾತಿ ಜೊತೆ ಹೆಚ್ಚಿನ ಸಮಯ ಕಲೆಯಲು ಪ್ರಯತ್ನಿಸಿ, ಇದರಿಂದ ಅವರಿಗೆ ಮನಸ್ಸಿಗೆ ಖುಷಿಯಾಗುವುದು. ವೃತ್ತಿ ಬದುಕು-ವೈಯಕ್ತಿಕ ಬದುಕಿನ ನಡುವೆ ಸಮತೋಲನ ಕಾಪಾಡಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications