Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಜನವರಿ 30ರ ದಿನ ಭವಿಷ್ಯ ಪ್ರಕಾರ ಯಾವ ರಾಶಿಗೆ ಹೇಗಿರಲಿದೆ?
ಜ್ಯೋತಿಷ್ಯದ ಪ್ರಕಾರ ಜನವರಿ 30ರ ರಾಶಿಫಲ ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ, ನೀವು ಈ ಹಿಂದೆ ತೆಗೆದುಕೊಂಡು ನಿರ್ಧಾರಗಳು ಉತ್ತಮ ಫಲ ನೀಡುತ್ತದೆ, ಕೆಲಸ ಕಾರ್ಯಗಳು ನೀವು ಅಂದುಕೊಂಡಂತೆ ನಡೆಯಲಿದೆ. ಆರೋಗ್ಯದ ದೃಷ್ಟಿಯಿಂದ ಆರ್ಥಿಕ ಜೀವನದ ದೃಷ್ಟಿಯಿಂದ ಈ ದಿನ ಅನುಕೂಲಕರವಾಗಿದೆ.

ವೃಷಭ ರಾಶಿ
ಈ ದಿನ ಕೆಲಸ ಕಾರ್ಯದ ದೃಷ್ಟಿಯಿಂದ ನೋಡುವುದಾದರೆ ನಿಮಗೆ ಅನುಕೂಲಕರವಾಗಿದೆ, ಆರ್ಥಿಕವಾಗಿಯೂ ಉತ್ತಮವಾಗಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕೆಲಸದ ಕಾರಣದಿಂದ ವೈಯಕ್ತಿಕ ಜೀವನದ ಕಡೆಗೆ ಗಮನಹರಿಸುವುದು ಕಷ್ಟವಾಗಬಹುದು.
ಮಿಥುನ ರಾಶಿ
ಈ ದಿನ ಸರಾಸರಿಯಾಗಿಲಿದೆ, ಬೇರೆ ಕಡೆ ಕೆಲಸಕ್ಕೆ ಪ್ರಯತ್ನ ಮಾಡಿದ್ದರೆ ಅದಕ್ಕೆ ಸಂಬಂಧಿಸಿದ ಒಳ್ಳೆಯ ಸುದ್ದಿ ಪಡೆಯಬಹುದು. ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಅನುಕೂಲಕರವಾಗಿದೆ. ಹೊಸ ಹೂಡಿಕೆ ಬಗ್ಗೆ ಆಲೋಚನೆ ಮಾಡಲು ಕೂಡ ಈ ಅವಧಿ ಅನುಕೂಲಕರವಾಗಿದೆ.
ಕರ್ಕ ರಾಶಿ
ಈ ದಿನ ಹಣದ ಬಗ್ಗೆ ಹೆಚ್ಚು ಜಾಗ್ರತೆವಹಿಸಬೇಕು, ಖರ್ಚು ಹೆಚ್ಚಿರಲಿದೆ, ಆದರೆ ಆದಾಯವು ಚೆನ್ನಾಗಿರುವುದರಿಂದ ತೊಂದರೆಯಿಲ್ಲ,ಯಾವುದೇ ದೊಡ್ಡ ಹೂಡಿಕೆ ಮಾಡಲು ಹೋಗಬೇಡಿ. ಕುಟುಂಬದಲ್ಲಿ ಏನಾದರು ಭಿನ್ನಾಭಿಪ್ರಾಯವಿದ್ದರೆ ತಾಳ್ಮೆಯಿಂದ ಬಗೆಹರಿಸಿ.
ಸಿಂಹ ರಾಶಿ
ಈ ದಿನ ಉತ್ತಮವಾಗಿರಲಿದೆ, ಹೂಡಿಕೆಗೆ ಈ ಅವಧಿ ಅನುಕೂಲಕರವಾಗಿದೆ, ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಿ, ವೃತ್ತಿ ಬದುಕಿನ ದೃಷ್ಟಿಯಿಂದ ನಿಮಗೆ ಅನುಕೂಲಕರವಾಗಿದೆ.
ಕನ್ಯಾ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಉದ್ಯೋಗಿಗಳಿಗೆ ಈ ದಿನ ಅಉಕೂಲಕರವಾಗಿದೆ.
ಆರ್ಥಿಕವಾಗಿ ಹಾಗೂ ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ.
ತುಲಾ ರಾಶಿ
ಆರ್ಥಿಕ ದೃಷ್ಟಿಯಿಂದ ಉತ್ತಮವಾಗಿದೆ, ಕೊಟ್ಟ ಸಾಲ ಮರಳಿ ಸಿಗಲಿದೆ. ಕೆಲಸ ಕಾರ್ಯಗಳು ಇಂದು ನೀವು ಎಣಿಸಿದಂತೆಯೇ ನಡೆಯಲಿದೆ. ಮಕ್ಕಳ ಕಾರಣಕ್ಕೆ ಮನೆಯಲ್ಲಿ ಖುಷಿಯ ವಾತಾವರಣ ಇರಲಿದೆ, ಆರೋಗ್ಯದ ದೃಷ್ಟಿಯಿಂದಲೂ ಈ ದಿನ ನಿಮಗೆ ಉತ್ತಮವಾಗಿದೆ.
ವೃಶ್ಚಿಕ ರಾಶಿ
ಈ ದಿನ ಜಾಗ್ರತೆವಹಿಸಿ, ಸಂಬಂಧದಲ್ಲಿ ಸಮಸ್ಯೆ ದೊಡ್ಡದಾಗಲು ಬಿಡಬೇಡಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಆಹಾರಕ್ರಮದ ಕಡೆಗೆ ಗಮನಹರಿಸಿ. ಇನ್ನು ನೀವು ಹೆಚ್ಚು ಆಯಾಸ ಮಾಡಿಕೊಳ್ಳದೆ ವಿಶ್ರಾಂತಿ ಕಡೆಗೆ ಗಮನಹರಿಸುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.
ಧನು ರಾಶಿ
ಈ ದಿನ ಆರ್ಥಿಕ ದೃಷ್ಟಿಯಿಂದ ಉತ್ತಮವಾಗಿದೆ, ಹಾಗಾಗಿ ವ್ಯಾಪಾರಿಗಳಿಗೆ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದವರಿಗೆ ಈ ದಿನ ಉತ್ತಮವಾಗಿರಲಿದೆ. ಆಸ್ತಿ ಖರೀದಿ ಅಥವಾ ವಾಹನ ಖರೀದಿ ಈ ಬಗ್ಗೆ ಆಲೋಚನೆ ಮಾಡುತ್ತಿದ್ದರೆ ಅದಕ್ಕೆ ಈ ದಿನ ಉತ್ತಮವಾಗಿದೆ.
ಮಕರ ರಾಶಿ
ಈ ದಿನ ಮಕರ ರಾಶಿಯವರಿಗೆ ಮಿಶ್ರಫಲ, ಈ ದಿನ ವಾಹನ ಚಲಾಯಿಸುವಾಗ ಜಾಗ್ರತೆವಹಿಸಿ. ಇನ್ನು ಈ ದಿನ ಯಾವುದೇ ದೊಡ್ಡ ಹೂಡಿಕೆ ಮಾಡದಂತೆ ಸಲಹೆ ನೀಡಲಾಗುವುದು, ಕೆಲಸದ ದೃಷ್ಟಿಯಿಂದ ನೋಡುವುದಾದರೆ ಈ ದಿನ ಅನುಕೂಲಕರವಾಗಿದೆ.
ಕುಂಭ ರಾಶಿ
ಈ ದಿನ ನಿಮ್ಮ ಪ್ರಮುಖ ಸಮಸ್ಯೆಗೆ ಬಗೆಹರಿಯಲಿದೆ, ಕೆಲಸದಲ್ಲಿನ ಅಡೆತಡೆ ದೂರಾಗಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ. ಆರೋಗ್ಯ ಕೂಡ ಚೆನ್ನಾಗಿರಲಿದೆ.
ಮೀನ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ,ನಿಮ್ಮ ಯೋಜನೆಯಂತೆ ಕೆಲಸ ಕಾರ್ಯಗಳು ನಡೆಯಲಿದೆ, ವ್ಯಾಪಾರಿಗಳು ಧನ ಲಾಭ ಪಡೆಯಲು ಸಾಧ್ಯವಾಗುವುದು. ಕೆಲಸ ಕಾರ್ಯಗಳಲ್ಲಿ ಅಡೆತಡೆ ದೂರಾಗಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
