Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಜನವರಿ 31 ದಿನ ಭವಿಷ್ಯ: ಈ ಮಾಸದ ಕೊನೆಯ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಜನವರಿ 31ರ ಭವಿಷ್ಯ ನೋಡೋಣ:
ಮೇಷ ರಾಶಿ
ಈ ದಿನ ಭಾವನಾತ್ಮಕವಾಗಿ ಸ್ವಲ್ಪ ದುರ್ಬಲವಾಗಿರಬಹುದು, ನೀವು ನಿಮ್ಮ ಪ್ರೀತಿ ಪಾತ್ರರ ಜೊತೆ ಸಮಯ ಕಳೆಯುವುದರಿಂದ ಮನಸ್ಸಿಗೆ ಸಮಧಾನ ಸಿಗಲಿದೆ. ಪ್ರತಿಕೂಲ ಸಂದರ್ಭವನ್ನು ಸಮಧಾನದಿಂದ ಎದುರಿಸಿ. ಆರ್ಥಿಕ ಜೀವನದ ಬಗ್ಗೆ ನೋಡುವುದಾದರೆ ಖರ್ಚು ಹೆಚ್ಚಿರಲಿದೆ.

ವೃಷಭ ರಾಶಿ
ಈ ದಿನ ಒತ್ತಡದಿಂದಕೂಡಿರಲಿದೆ, ವೃತ್ತಿ ಬದುಕಿನಲ್ಲಿ ಕೆಲಸದ ಒತ್ತಡವಿರಲಿದೆ, ಮನೆಯಲ್ಲಿಯೂ ಕೆಲ ಅಸಮಧಾನ ಉಂಟಾಗುವುದರಿಂದ ಮಾನಸಿಕವಾಗಿ ತುಂಬಾನೇ ಒತ್ತಡಕ್ಕೆ ಒಳಗಾಗುತ್ತೀರಿ. ಹಣದ ಪ್ರಯತ್ನ ಮಾಡಿದ್ದರೆ ಈ ದಿನ ಅನುಕೂಲಕರವಾಗಿದೆ ಅಂದರೆ ಯಾರ ಬಳಿಯಾದರು ಸಾಲ ಕೇಳಿದರೆ ಸಾಲ ದೊರೆಯುವುದು.
ಮಿಥುನ ರಾಶಿ
ಈ ದಿನ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮುನ್ನ ಹಿರಿಯರ ಸಲಹೆ ಪಡೆಯಿರಿ. ಕೆಲಸದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ಆರೋಗ್ಯ ಸಮಸ್ಯೆವಿರಬಹುದು, ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ.
ಕರ್ಕ ರಾಶಿ
ಈ ದಿನ ಮಿಶ್ರಫಲ, ಕೆಲಸದಲ್ಲಿ ಒತ್ತಡವಿರಲಿದೆ, ಹೂಡಿಕೆ ವಿಚಾರದಲ್ಲಿ ಜಾಗ್ರತೆವಹಿಸಿ. ಕುಟುಂಬದಲ್ಲಿ ಏನಾದರು ಸಮಸ್ಯೆವಿದ್ದರೆ ಅದನ್ನು ಮಾತುಕತೆ ಮೂಲಕ ಬಗೆಹರಿಸಲು ಪ್ರಯತ್ನಿಸಿ. ಬಾಸ್ ನೀಡಿರುವ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಿ.
ಸಿಂಹ ರಾಶಿ
ಈ ದಿನ ನಿಮಗೆ ತುಂಬಾನೇ ಮುಖ್ಯವಾಗಿದೆ, ವೃತ್ತಿಗೆ ಸಂಬಂಧಿಸಿದ ನಿರ್ಧಾರ ಆಲೋಚಿಸಿ ತೆಗೆದುಕೊಳ್ಳುವಂತೆ ಸಲಹೆ ನೀಡಲಾಗುವುದು. ಹಣಕಾಸಿನ ವಿಚಾರದಲ್ಲಿ ಜಾಗ್ರತೆವಹಿಸಿ, ಇಲ್ಲದಿದ್ದರೆ ಮೋಸ ಹೋಗಬಹುದು.
ಕನ್ಯಾ ರಾಶಿ
ಕನ್ಯಾ ರಾಶಿಯವರು ಕೆಲಸದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ಕೆಲಸದಲ್ಲಿ ನೀವು ಒಳ ರಾಜಕೀಯದ ಬಗ್ಗೆ ಜಾಗ್ರತೆವಹಿಸಿ. ಆರೋಗ್ಯದಲ್ಲಿ ಏರಳಿತವಿರಬಹುದು, ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ.
ತುಲಾ ರಾಶಿ
ಈ ದಿನ ಹಣಕಾಸಿನ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿದೆ. ಯಾವುದೇ ಆಸ್ತಿ ಸಂಬಂಧಿತ ಸಮಸ್ಯೆವಿದ್ದರೆ ಅದು ಬಗೆಹರಿಯಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಮನಸ್ಸಿನಲ್ಲಿರುವ ಅನಗ್ಯತ ಚಿಂತೆಗಳನ್ನು ದೂರ ಮಾಡಿ.
ವೃಶ್ಚಿಕ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಯಾವುದೇ ನಕರಾತ್ಮಕ ಆಲೋಚನೆಗಳಿಂದ ದೂರವಿರಿ, ನಿಮ್ಮ ಕೆಲಸ ಕಾರ್ಯಗಳು ಯೋಜನೆಯಂತೆ ಪೂರ್ಣಗೊಳ್ಳಲಿದೆ. ಈ ದಿನ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.
ಧನು ರಾಶಿ
ಕೆಲಸಕ್ಕೆ ಸಂಬಂಧಿಸಿದಂತೆ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ. ಕುಟುಂಬ ಜೀವನ ಚೆನ್ನಾಗಿರಲಿದೆ. ಆಸ್ತಿ ಸಂಬಂಧಿಸಿದ ವ್ಯವಹಾರಕ್ಕೆ ಈ ದಿನ ಉತ್ತಮವಾಗಿರಲಿದೆ. ವ್ಯಾಪಾರಿಗಳು ಧನ ಲಾಭ ಪಡೆಯುತ್ತೀರಿ.
ಮಕರ ರಾಶಿ
ಈ ದಿನ ಮಿಶ್ರಫಲಿತಾಂಶ. ಮನೆಯ ವಾತಾವರಣ ಚೆನ್ನಾಗಿರಲಿದೆ, ಹಣದ ವಿಷಯದಲ್ಲಿ ಉತ್ತಮವಲ್ಲ, ಖರ್ಚು ಹೆಚ್ಚಿರಲಿದೆ, ಈ ದಿನ ಪ್ರಮುಖ ನಿರ್ಧಾರಗಳನ್ನು ಆಲೋಚಿಸಿ ತೆಗೆದುಕೊಳ್ಳಿ.
ಕುಂಭ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ವ್ಯಾಪಾರಿಗಳಿಗೆ ಉತ್ತಮ ಧನ ಲಾಭವಾಗಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ. ಹೊಸ ಉದ್ಯೋಗಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ಅವಧಿ ಅನಕೂಲಕರವಾಗಿದೆ. ಈ ದಿನ ನೀವಾಡುವ ಮಾತುಗಳ ಬಗ್ಗೆ ಜಾಗ್ರತೆವಹಿಸಿ.
ಮೀನ ರಾಶಿ
ಈ ದಿನ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಆದರೆ ಈ ದಿನ ಬಜೆಟ್ ಮೀರಿ ಖರ್ಚು ಮಾಡದಂತೆ ಸಲಹೆ ನೀಡಲಾಗುವುದು. ಆರೋಗ್ಯದಲ್ಲಿ ಏರಳಿತವಿರಬಹುದು, ವಿಶ್ರಾಂತಿ ಕಡೆಗೆ ಗಮನಹರಿಸಿ. ರಾಜಕಾರಣಿಗಳಿಗೆ ಈ ದಿನ ತುಂಬಾ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications