Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ರಾಶಿಫಲ ಮಾರ್ಚ್ 8: ಈ ದಿನ ಯಾವ ರಾಶಿಗೆ ಹೇಗಿರಲಿದೆ?
ಶುಭೋದಯ... ಜ್ಯೋತಿಷ್ಯದ ಪ್ರಕಾರ ಈ ದಿನದ ರಾಶಿಫಲ ನೋಡೋಣ..
ಮಾರ್ಚ್ 8
ಪಕ್ಷ: ಶುಕ್ಲ ಪಕ್ಷ
ಅಮೃತ ಕಾಲ: ಮಧ್ಯಾಹ್ನ 1:30ರಿಂದ 03:05ರವರೆಗೆ ಇದೆ
ರಾಹುಕಾಲ: ಬೆಳಗ್ಗೆ 09:35ರಿಂದ 11:04ರವರೆಗೆ ಇದೆ
ಮೇಷ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ನಿಮ್ಮ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ನಡೆಯಲಿದೆ. ವೃತ್ತಿ ಬದುಕಿನಲ್ಲಿ ಹೊಸ ಅವಕಾಶಗಳು ದೊರೆಯಬಹುದು. ಆರ್ಥಿಕವಾಗಿ ಈ ದಿನ ಅನುಕೂಲಕರವಾಗಿದೆ, ಕುಟುಂಬದಲ್ಲಿ ಭಿನ್ನಾಭಿಪ್ರಾಯ ಉಂಟಾಗದಂತೆ ನೋಡಿಕೊಳ್ಳಿ, ನಿಮ್ಮ ಹಾಗೂ ಸಂಗಾತಿ ನಡುವೆ ಏನೇ ಭಿನ್ನಾಭಿಪ್ರಾಯವಿದ್ದರೂ ಅದನ್ನು ಮಾತನಾಡಿ ಬಗೆಹರಿಸಲು ಪ್ರಯತ್ನಿಸಿ. ಈ ದಿನ ಆರೋಗ್ಯದ ಬಗ್ಗೆ ನೋಡುವುದಾದರೆ ಅತಿಯಾದ ಮಾನಸಿಕ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು.

ವೃಷಭ ರಾಶಿ
ಈ ದಿನ ನಿಮ್ಮ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ನಡೆಯಲಿದೆ. ಆದರೆ ನೀವು ಹಣದ ವಿಷಯದಲ್ಲಿ ಜಾಗ್ರತೆ ಮಾಡಬೇಕು, ಹಣದ ವ್ಯವಹಾರ ಮಾಡುವಾಗ ಅದರ ಬಗ್ಗೆ ಚೆನ್ನಾಗಿ ಆಲೋಚಿಸಿ ಮಾಡುವುದು ಒಳ್ಳೆಯದು, ಈ ದಿನ ಸಾಲ ನೀಡುವುದು, ಪಡೆಯುವುದು ಒಳ್ಳೆಯದಲ್ಲ. ಮನಸ್ಸಿನಲ್ಲಿ ಕೆಲ ಗೊಂದಲಗಳು ಇರಬಹುದು, ಆದರೆ ನಿಮ್ಮ ಆಪ್ತರ ಜೊತೆ ಮಾತನಾಡಿದಾಗ ಮನಸ್ಸಿಗೆ ಸಮಧಾನ ಅ ನಿಸುವುದು. ಆರೋಗ್ಯ ಸರಾಸರಿಯಾಗಿರಲಿದೆ.
ಮಿಥುನ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ಕೆಲಸದಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗಲಿದೆ, ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ, ಈ ದಿನ ಹಣದ ಸಮಸ್ಯೆ ಅಷ್ಟಾಗಿ ಕಾಡಲ್ಲ, ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ, ನೀವು ಈ ದಿನ ನಿಮ್ಮ ಆಹಾರಕ್ರಮದ ಕಡೆಗೆ ಗಮನಹರಿಸಿದರೆ ಒಳ್ಳೆಯದು.
ಕರ್ಕ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಕೆಲಸ ಕಾರ್ಯದಲ್ಲಿ ಯಾವುದೇ ಅಡೆತಡೆ ಇರಲ್ಲ, ನೀವು ಅಂದು ಕೊಂಡಂತೆಯೇ ಕೆಲಸ ನಡೆಯಲಿದೆ, ಆರ್ಥಿಕವಾಗಿ ತುಂಬಾ ಪ್ರಯೋಜನದ ದಿನ, ಆದರೆ ಜಾಗ್ರತೆ ಕೂಡ ಮಾಡಬೇಕು, ಇಲ್ಲದಿದ್ದರೆ ಹಣದ ನಷ್ಟ ಉಂಟಾಗಬಹುದು. ಕುಟುಂಬದಲ್ಲಿ ನೆಮ್ಮದಿ ಇರಲಿದೆ, ಆರೋಗ್ಯ ಸಂಬಂಧಿತ ವಿಷಯದಲ್ಲಿ ಈ ದಿನ ನಿಮಗೆ ಅನುಕೂಲಕರವಾಗಿದೆ.
ಸಿಂಹ ರಾಶಿ
ಈ ದಿನ ನಿಮಗೆ ತುಂಬಾನೇ ಅನುಕೂಲಕರವಾಗಿದೆ, ಕೆಲಸದಲ್ಲಿ ಉತ್ತಮ ಫಲ ಪಡೆಯಲು ಸಾಧ್ಯವಾಗಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ, ಆರ್ಥಿಕ ಜೀವನದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ಇನ್ನು ಆರೋಗ್ಯ ಸಂಬಂಧಿತ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ಕುಟುಂಬ ವಾತಾವರಣ ಚೆನ್ನಾಗಿರಲಿದೆ, ಈ ದಿನ ಸಂತೋಷದಿಂದ ಕಳೆಯಲು ಸಾಧ್ಯವಾಗಲಿದೆ.
ಕನ್ಯಾ ರಾಶಿ
ಈ ದಿನ ನೀವು ಸ್ವಲ್ಪ ಜಾಗ್ರತೆವಹಿಸಬೇಕು, ನಿಮ್ಮ ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಿದರೆ ಒಳ್ಳೆಯದು, ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಪ್ರತಿಫಲ ಪಡೆಯಲು ಸಾಧ್ಯವಾಗಲಿದೆ. ಇನ್ನು ಕೆಲಸ ಸಂಬಂಧಿತ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಅನುಭವಿಗಳ ಸಲಹೆ ಪಡೆಯಿರಿ. ಈ ದಿನ ನೀವು ಪ್ರಯಾಣ ಮಾಡುವ ಸಾಧ್ಯತೆ ಇದೆ, ವ್ಯಾಪಾರಸ್ಥರು ಈ ದಿನ ಮಾಡುವ ಪ್ರಯಾಣದಿಂದ ಲಾಭ ಪಡೆಯುತ್ತೀರಿ. ಕುಟುಂಬದ ವಾತಾವರಣ ಚೆನ್ನಾಗಿರಲಿದೆ. ಆರೋಗ್ಯ ಕೂಡ ಉತ್ತಮವಾಗಿರಲಿದೆ.
ತುಲಾ ರಾಶಿ
ಈ ದಿನ ಕುಟುಂಬದ ದೃಷ್ಟಿಯಿಂದ ತುಂಬಾನೇ ಉತ್ತಮವಾಗಿರಲಿದೆ, ಈ ದಿನ ನಿಮ್ಮ ಕುಟುಂಬದ ಜೊತೆಗೆ ಸಮಯ ಕಳೆಯಲು ಸಾಧ್ಯವಾಗಲಿದೆ, ಪ್ರೇಮಿಗಳಿಗೆ ಈ ದಿನ ತುಂಬಾನೇ ವಿಶೇಷವಾಗಿರಲಿದೆ. ಇನ್ನು ಈ ದಿನ ನೀವು ಬಜೆಟ್ ಮೀರಿ ಖರ್ಚು ಮಾಡಬೇಡಿ ಎಂದು ಸಲಹೆ ನೀಡಲಾಗುವುದು. ಇನ್ನು ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಬೇಡ.
ವೃಶ್ಚಿಕ ರಾಶಿ
ಈ ದಿನ ನೀವು ಅನಗ್ಯತ ಚಿಂತೆ ಬಿಟ್ಟು ಮಾಡಬೇಕಾದ ಕೆಲಸದ ಕಡೆಗೆ ಗಮನಹರಿಸುವುದು ಒಳ್ಳೆಯದು ಎಂದು ಸಲಹೆ ನೀಡಲಾಗುವುದು, ಬೇರೆಯವರ ವಿಷಯಕ್ಕೆ ಮೂಗು ತೂರಿಸಲು ಹೋಗಬೇಡಿ, ಕುಟುಂಬ ಜೀವನ ತುಂಬಾನೇ ಚೆನ್ನಾಗಿರಲಿದೆ. ವ್ಯಾಪಾರಸ್ಥರು ಲಾಭ ಗಳಿಸುತ್ತೀರಿ, ಆರೋಗ್ಯ ಸಮಸ್ಯೆವಿದ್ದರೆ ಸುಧಾರಣೆ ಕಂಡು ಬರಲಿದೆ.
ಧನು ರಾಶಿ
ನಿಮಗೆ ಈ ದಿನ ವಿಶೆಷವಾಗಿರಲಿದೆ, ಕೆಲಸ ಕಾರ್ಯದಲ್ಲಿ ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ, ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಪಡೆಯಲು ಸಾಧ್ಯವಾಗಲಿದೆ. ಇನ್ನು ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ, ನಿಮ್ಮ ನಡುವೆ ಏನೇ ಮುನಿಸು ಇದ್ದರೆ ಅದು ದೂರಾಗಲಿದೆ. ನೀವು ಆಹಾರಕ್ರಮದ ಕಡೆಗೆ ಗಮನಹರಿಸುವಂತೆ ಸಲಹೆ ನೀಡಲಾಗುವುದು.
ಮಕರ ರಾಶಿ
ಈ ದಿನ ನಿಮಗೆ ತುಂಬಾ ಉತ್ತಮವಾಗಿರಲಿದೆ, ಆರ್ಥಿಕವಾಗಿ ನೀವು ತುಂಬಾನೇ ಪ್ರಯೋಜನ ಪಡೆಯುತ್ತೀರಿ. ಕುಟುಂಬ ಜೀವನದಲ್ಲಿ ನೆಮ್ಮದಿ ಇರಲಿದೆ, ಕುಟುಂಬದ ಜೊತೆಗೆ ಸಮಯ ಕಳೆಯಲು ಸಾಧ್ಯವಾಗಲಿದೆ. ಇನ್ನು ಕೆಲ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಅದಕ್ಕೆ ಪರಿಹಾರ ಸಿಗಲಿದೆ. ಕೆಲಸದ ಕಡೆಗೆ ಹೆಚ್ಚು ಗಮನಹರಿಸಲು ಸಾಧ್ಯವಾಗಲಿದೆ. ಕೆಲಸ ಕಾರ್ಯಗಳಲ್ಲಿ ಉತ್ತಮ ಪ್ರತಿಫಲ ಸಿಗಲಿದೆ, ಹಣದ ಲಾಭವಾಗಲಿದೆ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಈ ದಿನ ಅನುಕೂಲಕರವಾಗಿದೆ, ನಿಮ್ಮ ಕೆಲಸ ಕಾರ್ಯಗಳು ನಿಮ್ಮ ಯೋಜನೆಯಂತೆಯೇ ನಡೆಯಲಿದೆ, ನಿಮ್ಮ ಕೆಲಸ ಕಾರ್ಯಗಳಿಗೆ ಮೆಚ್ಚುಗೆ ದೊರೆಯಲಿದೆ. ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮವಾಗಿರಲಿದೆ, ಆರೋಗ್ಯ ಕೂಡ ಚೆನ್ನಾಗಿರಲಿದೆ, ಈ ದಿನ ನಿಮಗೆ ಎಲ್ಲಾ ರೀತಿಯಿಂದಲೂ ಅನುಕೂಲಕರವಾಗಿದೆ.
ಮೀನ ರಾಶಿ
ಈ ದಿನ ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದೆ, ನಿಮ್ಮ ಕೆಲಸ ಕಾರ್ಯಗಳಲ್ಲಿ ಕ್ರಿಯೇಟಿವಿಟಿ ಹೆಚ್ಚಾಗಲಿದೆ, ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮವಾಗಿರಲಿದೆ, ಮಾನಸಿಕ ಒತ್ತಡ ಕಡಿಮೆಯಾಗಲಿದೆ. ಈ ದಿನ ಕುಟುಂಬ ಜವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications





