Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸೋಮವಾರದ ದಿನ ಭವಿಷ್ಯ: ನವೆಂಬರ್ 11, ದ್ವಾದಶ ರಾಶಿಗಳಿಗೆ ಹೇಗಿದೆ?
ಜ್ಯೋತಿಷ್ಯ ಪ್ರಕಾರ ಸೋಮವಾರದ ದಿನ ದ್ವಾದಶ ರಾಶಿಗಳಿಗೆ ಹೇಗಿದೆ ಎಂದು ನೋಡೋಣ:
ಮೇಷ ರಾಶಿ
ನೀವು ಇಂದು ಅನೇಕ ಕೆಲಸಗಳ ಕಡೆಗಮನ ಹರಿಸುತ್ತೀರಿ, ಅದರ ಬದಲಿಗೆ ಪ್ರಮುಖ ಕೆಲಸದತ್ತ ಗಮನಹರಿಸಿ ಎಂದು ಸಲಹೆ ನೀಡಲಾಗುವುದು. ಯಾವುದೇ ಪ್ರಮುಖ ಕೆಲಸ ಅಪೂರ್ಣವಾಗಿ ಬಿಡಬೇಡಿ. ನಿಮ್ಮ ಸಂಗಾತಿಯೊಂದಿಗೆ ಬಾಂಧವ್ಯ ತುಂಬಾ ಚೆನ್ನಾಗಿರಲಿದೆ, ನಿಮ್ಮಿಬ್ಬರ ನಡುವೆ ಪ್ರೀತಿ ಹೆಚ್ಚಾಗಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಅತಿಯಾದ ಕೆಲಸ ಆಯಾಸ ಉಂಟು ಮಾಡಬಹುದು. ಆರ್ಥಿಕವಾಗಿ ಈ ದಿನ ನಿಮಗೆ ಅನುಕೂಲಕರವಾಗಿದೆ. ಪ್ರಮುಖ ಸಾಲ ಮರುಪಾವತಿಸಲು ಸಾಧ್ಯವಾಗುವುದು.

ವೃಷಭ ರಾಶಿ
ಈ ದಿನ ಮಿಶ್ರಫಲ, ಪ್ರತಿಕೂಲ ಸಂದರ್ಭದಲ್ಲಿ ತಾಳ್ಮೆ ಕಳೆದುಕೊಳ್ಳಬೇಡಿ ಎಂದು ಸಲಹೆ ನೀಡಲಾಗವುದು, ನೀವು ಅಪೂರ್ಣವಾಗಿರುವ ಕೆಲಸ ಪೂರ್ಣಗೊಳಿಸಲು ಹೆಚ್ಚು ಗಮನಹರಿಸಬೇಕು. ಹಣಕಾಸಿನ ವಿಷಯದಲ್ಲಿ ಜಾಗ್ರತೆವಹಿಸಿ, ಬಜೆಟ್ ಮೀರಿ ಖರ್ಚು ಮಾಡಬೇಡಿ. ಸಂಬಂಧದ ದೃಷ್ಟಿಯಿಂದ ಈ ದಿನ ಅನುಕೂಲಕರವಾಗಿದೆ.
ಮಿಥುನ ರಾಶಿ
ಈ ದಿನ ಆರೋಗ್ಯದ ದೃಷ್ಟಿಯಿಂದ ನಿಮಗೆ ಉತ್ತಮವಾಗಿದೆ, ಆರ್ಥಿಕವಾಗಿಯೂ ಈ ದಿನ ನಿಮಗೆ ಅನುಕೂಲಕರವಾಗಿದೆ. ವೃತ್ತಿ ಬದುಕಿನ ದೃಷ್ಟಿಯಿಂದ ಈ ದಿನ ಕಾರ್ಯ ನಿರತವಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ. ಈ ದಿನ ಕುಟುಂಬ ಜೀವನ ಚೆನ್ನಾಗಿರಲಿದೆ, ಕುಟುಂಬದ ಜೊತೆ ಈ ದಿನ ಪ್ರಮುಖ ವಿಷಯದ ಬಗ್ಗೆ ಚರ್ಚಿಸಬಹುದು.
ಕರ್ಕ ರಾಶಿ
ಈ ದಿನ ನೀವು ಆರೋಗ್ಯದ ಬಗ್ಗೆ ಜಾಗ್ರತೆವಹಿಸಬೇಕು. ನೀವು ಹಣಕಾಸಿನ ಬಗ್ಗೆ ತುಂಬಾನೇ ಜಾಗ್ರತೆವಹಿಸಬೇಕು, ಬಜೆಟ್ ಪ್ಲ್ಯಾನ್ ಇಲ್ಲದಿದ್ದರೆ ಕಷ್ಟವಾಗಬಹುದು, ಬಜೆಟ್ ಮೀರಿ ಖರ್ಚು ಮಾಡಬೇಡಿ. ನಿಮ್ಮ ಕೆಲಸದ ಕ್ರೆಡಿಟ್ ಬೇರೆಯವರು ತೆಗೆದುಕೊಳ್ಳಬಹುದು ಈ ಬಗ್ಗೆ ಜಾಗ್ರತೆವಹಿಸಿ.
ಸಿಂಹ ರಾಶಿ
ಈ ದಿನ ವೃತ್ತಿ ಬದುಕಿನ ಕಡೆಗೆ ತುಂಬಾನೇ ಗಮನಹರಿಸುತ್ತೀರಿ. ನೀವು ನಿಮ್ಮ ಕೌಶಲ್ಯ ವೃದ್ಧಿಸುವ ಕಡೆಗೆ ಗಮನಹರಿಸುತ್ತೀರಿ. ನಿಮ್ಮ ಕೆಲಸ ಕಾರ್ಯಗಳಿಗೆ ಸಹೋದ್ಯೋಗಿಗಳ ಬೆಂಬಲ ಕೂಡ ಸಿಗಲಿದೆ. ಕೆಲವೊಂದು ಪ್ರತಿಕೂಲ ಸಂದರ್ಭದಲ್ಲಿ ತಾಳ್ಮೆಯಿಂದ ವರ್ತಿಸಿ. ಹಣಕಾಸಿನ ದೃಷ್ಟಿಯಿಂದ ಈ ದಿನ ನಿಮಗೆ ಸರಾಸರಿಯಾಗಿರಲಿದೆ.
ಕನ್ಯಾ ರಾಶಿ
ನೀವು ನಿಮ್ಮ ಕೆಲಸ ಕಾರ್ಯದತ್ತ ಗಮನಹರಿಸಿದರೆ ಒಳ್ಳೆಯದು ಎಂದು ಸಲಹೆ ನೀಡಲಾಗುವುದು, ನಿಮ್ಮ ಕೆಲಸದಲ್ಲಿ ಹೊಸ ಪ್ಲ್ಯಾನ್ ಮಾಡಿ. ನೀವು ನಿಮ್ಮ ಸಂಗಾತಿ ಜೊತೆಗೆ ಮುಕ್ತವಾಗಿ ಮಾತನಾಡಿ. ಇದರಿಂದ ನಿಮ್ಮ ನಡುವೆ ಏನಾದರು ಚಿಕ್ಕ ಪುಟ್ಟ ಮನಸ್ತಾಪವಿದ್ದರೆ ಬಗೆಹರಿಯಲಿದೆ. ಹಣವನ್ನು ನೀವು ಬಜೆಟ್ ಪ್ರಕಾರ ಖರ್ಚು ಮಾಡುವುದರಿಂದ ಯಾವುದೇ ಸಮಸ್ಯೆ ಇರಲ್ಲ. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಮಾಡಬೇಡಿ.
ತುಲಾ ರಾಶಿ
ಈ ದಿನ ವೃತ್ತಿಗೆ ಸಂಬಂಧಿಸಿದ ಕೆಲ ಗೊಂದಲ ಪರಿಹರಿಸಲು ಪ್ರಯತ್ನ ಪಡುತ್ತೀರಿ, ನಿಮ್ಮ ಕೌಶಲ್ಯ, ವೀಕ್ನೆಸ್ ಎಲ್ಲಾ ಗಮನಿಸಿ, ವೃತ್ತಿ ಸಂಬಂಧಿಸಿದಂತೆ ಹೇಗೆ ಬೆಳೆಯಬಹುದು ಎಂದು ಯೋಚಿಸುವುದು ಒಳ್ಳೆಯದು. ಸಂಬಂಧದ ದೃಷ್ಟಿಯಿಂದ ನೋಡುವುದಾದರೆ ಈ ದಿನ ನಿಮಗೆ ರೊಮ್ಯಾಂಟಿಕ್ ಆಗಿರಲಿದೆ. ಹಣಕಾಸಿನ ನಿರ್ಧಾರಗಳನ್ನು ಆಲೋಚಿಸಿ ತೆಗೆದುಕೊಳ್ಳಬೇಕು.
ವೃಶ್ಚಿಕ ರಾಶಿ
ಈ ದಿನ ವೃತ್ತಿ ಜೀವನದ ದೃಷ್ಟಿಯಿಂದ ನಿಮಗೆ ಅನುಕೂಲಕರವಾಗಿದೆ. ಈ ದಿನ ಸಂಗಾತಿಯ ಜೊತೆ ಖುಷಿ ಖುಷಿಯಿಂದ ಕಳೆಯುತ್ತೀರಿ, ನಿಮ್ಮ ಸಂಗಾತಿಯಿಂದ ಸರ್‌ಪ್ರೈಸ್ ದೊರೆಯಲಿದೆ. ಆರ್ಥಿಕವಾಗಿ ಉತ್ತಮವಾಗಿದೆ, ಹೂಡಿಕೆಗೆ ಈ ದಿನ ಅನುಕೂಲಕರವಾಗಿದೆ. ಆರೋಗ್ಯ ವಿಷಯದಲ್ಲಿನಿರ್ಲಕ್ಷ್ಯ ಮಾಡಬೇಡಿ.
ಧನು ರಾಶಿ
ನೀವು ನಿಮ್ಮ ಕೆಲಸ ಕಾರ್ಯದ ಕಡೆಗೆ ಗಮನಹರಿಸುವುದು ಒಳ್ಳೆಯದು, ನಿಮಗೆ ವಹಿಸಿದ ಕೆಲಸವನ್ನು ಪೂರ್ಣಗೊಳಿಸಲು ಸಂಪೂರ್ಣ ಪ್ರಯತ್ನ ಹಾಕುತ್ತೀರಿ. ಸಂಬಂಧದಲ್ಲಿ ಹೊಂದಾಣಿಕೆಯಿದ್ದರೆ ಅನೇಕ ಸಮಸ್ಯೆ ತಪ್ಪಿಸಬಹುದು, ಈ ನಿಟ್ಟಿನಲ್ಲಿಪ್ರಯತ್ನ ಹಾಕಿ. ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಅನುಕೂಲಕರವಾಗಿರಲಿದೆ.
ಮಕರ ರಾಶಿ
ನೀವು ಸಂಗಾತಿಯ ಭಾವನೆಗಳ ಕಡೆಗೆ ಹೆಚ್ಚಿನ ಗಮನ ನೀಡಿ, ಅವರಿಗೆ ನೀವು ಅವರನ್ನು ನಿರ್ಲಕ್ಷ್ಯ ಮಾಡುತ್ತಿದ್ದೀರಿ ಎಂದು ಅನಿಸಿರುತ್ತದೆ, ಹೀಗಾಗಿ ನೀವು ನಿಮ್ಮ ಸಂಬಂಧ ಸರಿಪಡಿಸಲು ಪ್ರಯತ್ನಿಸಬೇಕು. ವೃತ್ತಿ ಜೀವನದ ಕಡೆಗೆ ತುಂಬಾನೇ ಗಮನಹರಿಸಬೇಕು. ಹಣದ ಬಗ್ಗೆ ಜಾಗ್ರತೆವಹಿಸಿ.
ಕುಂಭ ರಾಶಿ
ನೀವು ನಿಮ್ಮ ಕೆಲಸವನ್ನು ಅತ್ಯುತ್ತಮವಾಗಿ ಮಾಡಿ ಮುಗಿಸಲು ಪ್ರಯತ್ನಿಸಬೇಕು. ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ನಡೆಯಲಿದೆ. ಹಣದ ಬಗ್ಗೆ ಪ್ಲ್ಯಾನಿಂಗ್ ಮಾಡುವುದು ಒಳ್ಳೆಯದು, ಹೂಡಿಕೆಗೆ ಮುನ್ನ ತಜ್ಞರ ಸಲಹೆ ಪಡೆಯಿರಿ. ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯ ಕೂಡ ಉತ್ತಮವಾಗಿರಲಿದೆ.
ಮೀನ ರಾಶಿ
ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮವಾಗಿರಲಿದೆ. ಕೆಲಸ ಕಾರ್ಯಗಳು ಸ್ವಲ್ಪ ನಿಧಾನವಾಗಬಹುದು, ಪ್ರಮುಖ ಕೆಲಸದ ಕಡೆಗೆ ಗಮನಹರಿಸಿ ಎಂದು ಸಲಹೆ ನೀಡಲಾಗುವುದು. ಪ್ರೀತಿ ಬದುಕು ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications