Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ನವೆಂಬರ್ 24, ಭಾನುವಾರ: ಈ ದಿನದ ರಾಶಿಫಲ ನಿಮ್ಮ ರಾಶಿಗೆ ಹೇಗಿದೆ?
ಶುಭ ಭಾನುವಾರ
ಈ ದಿನ ದ್ವಾದಶ ರಾಶಿಗಳ ರಾಶಿಫಲ ನೋಡೋಣ....
ಮೇಷ ರಾಶಿ
ಈ ದಿನ ನಿಮಗೆ ಶುಭವಾಗಿದೆ,ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ಹಿರಿಯರು ನೀಡಿರುವ ಸಲಹೆ ಪಾಲಿಸಿ, ಮನೆಗೆಅತಿಥಿಗಳು ಬರಬಹುದು. ಮನೆಗಾಗಿ ಕೆಲ ವಸ್ತುಗಳನ್ನು ಶಾಪಿಂಗ್ ಮಾಡಬಹುದು.

ವೃಷಭ ರಾಶಿ
ಈ ದಿನ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಕೆಲಸ ಹುಡುಕುತ್ತಿರುವವರು ಶೀಘ್ರದಲ್ಲಿಯೇ ಒಳ್ಳೆಯ ಸುದ್ದಿ ಪಡೆಯುತ್ತೀರಿ. ಮನೆಯ ವಾತಾವರಣ ಚೆನ್ನಾಗಿರಲಿದೆ, ವ್ಯಾಪಾರಿಗಳಿಗೆ ಹಣ ಗಳಿಸಲು ಸಾಧ್ಯವಾಗುವುದು.
ಮಿಥುನ ರಾಶಿ
ಈ ದಿನ ಅದೃಷ್ಟದ ಬೆಂಬಲ ನಿಮ್ಮ ಜೊತೆ ಇರುವುದರಿಂದ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಆರ್ಥಿಕವಾಗಿಯೂ ಈ ದಿನ ಅನುಕೂಲಕರವಾಗಿದೆ. ಕೆಲ ಸ್ನೇಹಿತರನ್ನು ಭೇಟಿಯಾಗಬಹುದು, ಮನೆಗೆ ಸಂಬಂಧಿಸಿದ ಕೆಲಸ ಅರ್ಧಕ್ಕೆ ಬಿಟ್ಟಿದ್ದರೆ ಪೂರ್ಣಗೊಳಿಸಲು ಸಾಧ್ಯವಾಗುವುದು.
ಕರ್ಕ ರಾಶಿ
ಈ ದಿನ ಹಣಕಾಸಿನ ವಿಷಯದಲ್ಲಿ ಜಾಗ್ರತೆವಹಿಸಬೇಕು, ಹೂಡಿಕೆ ಮಾಡದಿರುವುದು ಒಳ್ಳೆಯದು. ವ್ಯಾಪಾರಸ್ಥರು ವ್ಯವಹಾರದಲ್ಲಿ ಜಾಗ್ರತೆವಹಿಸಬೇಕು.ಈ ದಿನ ಓಡಾಟ ಅಧಿಕವಿರುವುದರಿಂದ ಆಯಾಸ ಕಾಡಬಹುದು.
ಸಿಂಹ ರಾಶಿ
ಈ ದಿನ ನಿಮಗೆ ಸರಾಸರಿಯಾಗಿರಲಿದೆ, ಕೆಲಸ ಕಾರ್ಯದಲ್ಲಿ ಉತ್ತಮ ಫಲ ಸಿಗಲಿದದೆ, ವ್ಯಾಪಾರಿಗಳು ತಮ್ಮ ವ್ಯವಹಾರದ ಕಡೆಗೆ ಹೆಚ್ಚಿನ ಗಮನಹರಿಸಬೇಕು, ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಬೇಡ. ಆಸ್ತಿ ಸಂಬಂಧಿಸಿದ ವಿವಾದವಿದ್ದರೆ ಅದನ್ನು ಬಗೆಹರಿಸಬಹುದು.
ಕನ್ಯಾ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ತುಂಬಾ ಉತ್ತಮವಾಗಿರಲಿದೆ. ಪ್ರೇಮಿಗಳಿಗೆ ಈ ದಿನ ರೊಮ್ಯಾಂಟಿಕ್ ಆಗಿರಲಿದೆ. ವ್ಯಾಪಾರಿಗಳು ಈ ದಿನ ಜಾಗ್ರತೆವಹಿಸಬೇಕು.ಕುಟುಂಬ ಜೀವನ ಚೆನ್ನಾಗಿರಲಿದೆ.
ತುಲಾ ರಾಶಿ
ಈ ದಿನ ನಿಮಗೆ ಮಿಶ್ರಫಲ, ಈ ದಿನ ಮನೆಯ ವಾತಾವರಣ ಚೆನ್ನಾಗಿರಲಿದೆ, ಆದರೆ ಹಣಕಾಸಿನ ವಿಚಾರದಲ್ಲಿ ಜಾಗ್ರತೆವಹಿಸಬೇಕು, ಆಸ್ತಿ ಖರೀದಿ ಮಾಡುವುದಾದರೆ ಈ ದಿನ ಹೆಚ್ಚು ಜಾಗ್ರತೆವಹಿಸಿ. ವೃತ್ತಿ ಬದುಕು ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ಈ ದಿನ ಕೆಲಸ ಕಾರ್ಯಗಳು ಚೆನ್ನಾಗಿರಲಿದೆ, ವ್ಯಾಪಾರಿಗಳಿಗೆ ಈ ದಿನ ಅನುಕೂಲಕರಕರವಾಗಿರಲಿದೆ. ಆಸ್ತಿ ಖರೀದಿಗೆ ಈ ದಿನ ಉತ್ತಮವಾಗಿರಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ.
ಧನು ರಾಶಿ
ಈ ದಿನ ಕೆಲಸ ಕಾರ್ಯಗಳುಉತ್ತಮವಾಗಿ ನಡೆಯಲಿದೆ, ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ, ಹಣದ ಬಗ್ಗೆ ಹೆಚ್ಚು ಜಾಗ್ರತೆವಹಿಸಿ,, ಹೆಚ್ಚು ಖರ್ಚು ಮಾಡಲು ಹೋಗಬೇಡಿ, ಹೊಸ ಕೆಲಸ ಪ್ರಾರಂಭಿಸಲು ಈ ಅವಧಿ ಅನುಕೂಲಕರವಾಗಿದೆ.
ಮಕರ ರಾಶಿ
ಈ ದಿನ ಕೆಲಸಕಾರ್ಯಗಳ ಕಡೆಗೆ ಹೆಚ್ಚಿನ ಗಮನಹರಿಸಬೇಕು,ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಕಡೆಗೆ ಗಮನಹರಿಸಬೇಕು. ಈ ದಿನ ಏನಾದರು ತಪ್ಪಾಗಿದ್ದರೆ ಅದನ್ನು ಸರಿಪಡಿಸಲು ಪ್ರಯತ್ನಿಸಿ, ವೈವಾಹಿಕ ಜೀವನದಲ್ಲಿ ಸಂಗಾತಿ ಸಲಹೆಯನ್ನು ಕೂಡ ಪರಿಗಣಿಸಿ.
ಕುಂಭ ರಾಶಿ
ಈ ದಿನ ಅನುಕೂಲಕರವಾಗಿರಲಿದೆ, ಆರ್ಥಿಕವಾಗಿ ಈ ದಿನ ನಿಮಗೆ ಅನುಕೂಲಕರವಾಗಿರಲಿದೆ, ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ಅವಾಹಿತರಿಗೆ ಮದುವೆ ಪ್ರಸ್ತಾಪಬರಬಹುದು.
ಮೀನ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಕೆಲಸ ಕಾರ್ಯಗಳು ಉತ್ತಮವಾಗಿರಲಿದೆ. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡ, ಹಣಕಾಸಿನ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
