Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ನವೆಂಬರ್ 28, ದಿನ ಭವಿಷ್ಯ: ಈ ದಿನ 7 ರಾಶಿಯವರಿಗೆ ತುಂಬಾನೇ ಶುಭವಾಗಿದೆ
ಜ್ಯೋತಿಷ್ಯ ಪ್ರಕಾರ ಈ ದಿನದ ಭವಿಷ್ಯ ಹೇಗಿದೆ ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ,ಆದರೆ ನಿಮ್ಮನ್ನು ನಂಬಿ ಒಪ್ಪಿಸಿದ ಕೆಲಸವನ್ನು ಮಾಡಿ ಮುಗಿಸಲು ಪ್ರಯತ್ನಿಸಬೇಕು, ಆರ್ಥಿಕ ಜೀವನ ತುಂಬಾ ಚೆನ್ನಾಗಿರಲಿದೆ. ಮನೆಯ ವಾತಾವರಣ ಕೂಡ ತುಂಬಾ ಚೆನ್ನಾಗಿರಲಿದೆ, ಹವಾಮಾನ ಬದಲಾವಣೆ ಆರೋಗ್ಯದ ಮೇಲೆಪರಿಣಾಮ ಬೀರಬಹುದು.
ವೃಷಭ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಯಾವುದಾದರೂ ಹೊಸ ಕಾರ್ಯ ಮಾಡಲು ಯೋಚಿಸುತ್ತಿದ್ದರೆ ಆ ನಿಟ್ಟಿನಲ್ಲಿ ಪ್ರಯತ್ನ ಮಾಡಲು ದಿನ ಶುಭವಾಗಿದೆ, ನಿಮ್ಮ ಕೆಲಸಕ್ಕಾಗಿ ಬೇರೆಯವರನ್ನು ಅತಿಯಾಗಿ ನಂಬಬೇಡಿ, ನಿಮ್ಮ ಕೆಲಸ ನೀವೇ ಮಾಡಿ ಮುಗಿಸುವುದು ಒಳ್ಳೆಯದು. ವೈವಾಹಿಕ ಬದುಕು ಚೆನ್ನಾಗಿರಲಿದೆ.

ಮಿಥುನ ರಾಶಿ
ಈ ದಿನ ಆರ್ಥಿಕವಾಗಿ ಉತ್ತಮವಾಗಿರಲಿದೆ, ಕೆಲಸ ಕಾರ್ಯವನ್ನು ಉತ್ಸಾಹದದಿಂದ ಮಾಡಿ ಮುಗಿಸುತ್ತೀರಿ, ಹಣದ ಹೂಡಿಕೆಗೂ ಈ ದಿನ ಉತ್ತಮವಾಗಿದೆ. ಕುಟುಂಬದಲ್ಲಿ ನಿಮ್ಮ ಹಾಗೂ ಸಂಗಾತಿ ನಡುವೆ ಹೊಂದಾಣಿಕೆ ಚೆನ್ನಾಗಿರಲಿದೆ.
ಕರ್ಕ ರಾಶಿ
ಈ ದಿನ ಕೆಲಸದಲ್ಲಿ ಒತ್ತಡವಿರಲಿದೆ, ನೀವು ಏನಾದರು ಪ್ರಮುಖ ಸಲಹೆ ಪಡೆಯುವುದಾದರೆ ಹಿರಿಯರ ಸಲಹೆ ಪಡೆಯಿರಿ, ಯಾರ ಜೊತೆಯೂ ವಿವಾದಕ್ಕೆ ಹೋಗಬೇಡಿ, ಪ್ರತಿಕೂಲ ಪರಿಸ್ಥಿತಿಯಲ್ಲಿ ತಾಳ್ಮೆಯಿಂದ ವರ್ತಿಸಿ.
ಸಿಂಹ ರಾಶಿ
ಈ ದಿನ ಕುಟುಂಬದಲ್ಲಿ ಶುಭ ಕಾರ್ಯವಿರಬಹುದು, ನಿಮ್ಮ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ, ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಬೇಡ, ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ.
ಕನ್ಯಾ ರಾಶಿ
ಈ ದಿನ ನಿಮಗೆ ತುಂಬಾನೇ ಅನುಕೂಲಕರವಾಗಿರಲಿದೆ, ಆರ್ಥಿಕವಾಗಿಯೂ ಉತ್ತಮವಾಗಿದೆ, ಆದರೆ ಹಣಕ್ಕೆ ಸಂಬಂಧಿಸಿದ ನಿರ್ಧಾರ ಆಲೋಚಿಸಿ ತೆಗೆದುಕೊಳ್ಳಿ. ಇನ್ನು ಈ ದಿನ ಯಾರ ಬಗೆಯೂ ಅನಗ್ಯತ ಮಾತುಗಳನ್ನು ಹೇಳಲು ಹೋಗಬೇಡಿ, ಪಿತೂರಿಗಳಿಗೆ ಒಳಗಾಗಬೇಡಿ. ನಿಮ್ಮ ಕೆಲಸದ ಕಡೆಗೆ ಗಮನಹರಿಸಿ.
ತುಲಾ ರಾಶಿ
ಈ ದಿನ ನಿಮಗೆ ಸರಾಸರಿಯಾಗಿರಿದೆ, ಈ ದಿನ ಹಣಕಾಸಿನ ದೃಷ್ಟಿಯಿಂದ ಉತ್ತಮವಾಗಿದೆ, ಮನೆಯ ಅಲಂಕಾರದಲ್ಲಿ ಬದಲಾವಣೆ ಮಾಡಲು ಬಯಸುತ್ತೀರಿ, ಕಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ಈ ದಿನ ನೀವು ಕೆಲಸದ ಕಡೆಗೆ ಗಮನಹರಿಸಿ, ಕೆಲಸದಲ್ಲಿ ಒತ್ತಡ ಕಡಿಮೆಯಾಗಲಿದೆ, ಆರೋಗ್ಯದ ಕಡೆಗೆ ಗಮನಹರಿಸಿ. ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ.
ಧನು ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿರಲಿದೆ, ನಿಮ್ಮ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಬೇಕು, ಆಸ್ತಿ ಸಂಬಂಧಿಸಿದ ವ್ಯವಹಾರಕ್ಕೆ ಈ ದಿನ ನಿಮಗೆ ಅನುಕೂಲಕರವಾಗಿರಲಿದೆ.
ಮಕರ ರಾಶಿ
ಈ ದಿನ ನಿಮಗೆ ಮಿಶ್ರಫಲ, ಕುಟುಂಬದಲ್ಲಿ ಕೆಲ ಭಿನ್ನಾಭಿಪ್ರಾಯವಿರಬಹುದು, ಆದರೆ ವೃತ್ತಿ ಬದುಕಿನ ದೃಷ್ಟಿಯಿಂದ ನೋಡುವುದಾದರೆ ಈ ದಿನ ಅನುಕೂಲಕರವಾಗಿದೆ, ನಿಮ್ಮಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣವಾಗಲಿದೆ.
ಕುಂಭ ರಾಶಿ
ಈ ದಿನ ನಿಮಗೆ ಮಿಶ್ರಫಲ. ನೀವು ಕೋಪದಿಂದ ಆಡುವ ಮಾತುಗಳ ಕಡೆಗೆ ಗಮನಹರಿಸಬೇಕು, ಹಣಕಾಸಿನ ಬಗ್ಗೆ ಕೂಡ ಜಾಗ್ರತೆ, ಯಾರ ಬಳಿಯಿಂದಲೂ ಸಾಲ ಪಡೆಯದಿರಿ, ವೈವಾಹಿಕ ಜೀವನ ಚೆನ್ನಾಗಿರಲಿದೆ.
ಮೀನ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ವ್ಯಾಪಾರಿಗಳಿಗೆ ಲಾಭ ದೊರೆಯಲಿದೆ, ಆರೋಗ್ಯ ಕೂಡ ಉತ್ತಮವಾಗಿರಲಿದೆ, ಅಲ್ಲದೆ ಆರೋಗ್ಯ ಸಮಸ್ಯೆಯಿದ್ದರೆ ಈ ದಿನ ಸುಧಾರಣೆ ಕಂಡು ಬರುವುದು.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
