Latest Updates
-
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
ಅಕ್ಟೋಬರ್ 2, ದಿನ ಭವಿಷ್ಯ: 12 ರಾಶಿಗಳ ಈ ದಿನ ರಾಶಿಫಲ
ವೈದಿಕ ಶಾಸ್ತ್ರದ ಪ್ರಕಾರ ಈ ದಿನ ನಿಮಗೆ ಹೇಗಿರಲಿದೆ?
ಮೇಷ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಕೆಲಸ ಕಾರ್ಯಗಳು ಉತ್ತಮವಾಗಿ ಪೂರ್ಣಗೊಳ್ಳಲಿದೆ, ಇನ್ನು ಪ್ರತಿಕೂಲ ಸಂದರ್ಭದಲ್ಲಿ ಬೆಂಬಲ ಸಿಗಲಿದೆ, ವ್ಯಾಪಾರಿಗಳಿಗೆ ಧನ ಲಾಭವಿದೆ. ವೈಯಕ್ತಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯದ ದೃಷ್ಟಿಯಿಂದಲೂ ಈ ದಿನ ನಿಮಗೆ ತುಂಬಾನೇ ಶುಭವಾಗಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಸಂಬಂಧ ಚೆನ್ನಾಗಿರಲಿದೆ.

ವೃಷಭ ರಾಶಿ
ವೃತ್ತಿ ಬದುಕಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ಆರ್ಥಿಕವಾಗೊ ಉತ್ತಮವಾಗಿರಲಿದೆ. ಕುಟುಂಬದ ಜೊತೆಗೆ ಉತ್ತಮ ಸಂಬಂಧ ಇರಲಿದೆ, ಈ ದಿನ ಆರೋಗ್ಯದ ದೃಷ್ಟಿಯಿಂದಲೂ ಉತ್ತಮವಾಗಿದೆ, ಇನ್ನು ಶಾಪಿಂಗ್ ಅಂತ ಬಜೆಟ್ ಮೀರಿ ಖರ್ಚು ಮಾಡಬೇಡಿ.
ಮಿಥುನ ರಾಶಿ
ಈ ದಿನ ನೀವು ನಿಮ್ಮ ಕಠಿಣ ಶ್ರಮಕ್ಕೆ ಉತ್ತಮ ಪ್ರಯೋಜನ ಪಡೆಯುತ್ತೀರಿ, ಇನ್ನು ಹಣದ ವಿಷಯದಲ್ಲಿ ಉತ್ತಮವಾಗಿದೆ, ಹಣದ ಹೂಡಿಕೆಗೆ ಈ ಅವಧಿ ತುಂಬಾ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಈ ಹಿಂದೆ ಉಂಟಾದ ನಷ್ಟ ಭರಿಸಲು ಉತ್ತಮ ಅವಕಾಶ ದೊರೆಯಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಏನಾದರೂ ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಮಾಡಲೇಬೇಡಿ.
ಕರ್ಕ ರಾಶಿ
ಈ ದಿನ ಆರ್ಥಿಕವಾಗಿ ಉತ್ತಮವಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯ ಸಂಬಂಧಿ ಸಮಸ್ಯೆಯಿದ್ದರೆ ಆರೋಗ್ಯದಲ್ಲಿ ಸುಧಾರಣೆ ಕಂಡು ಬರಲಿದೆ. ಕೆಲಸಕ್ಕೆ ಸಂಬಂಧಿಸಿದಂತೆ ಪ್ರಯತ್ನ ಮಾಡುತ್ತಿದ್ದರೆ ಈ ದಿನ ನಿಮಗೆ ಅನುಕೂಲಕರವಾಗಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಏನೇ ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲಿದೆ.
ಸಿಂಹ ರಾಶಿ
ಈ ದಿನ ಕೆಲಸದಲ್ಲಿ ಸ್ವಲ್ಪ ಒತ್ತಡ ಇರಲಿದೆ, ವ್ಯಾಪಾರಿಗಳು ತಮ್ಮ ವ್ಯವಹಾರದ ಕಡೆಗೆ ಗಮನಹರಿಸಿ. ವ್ಯಾಪಾರಿಗಳಿಗೆ ಈ ದಿನ ಹಣದ ವಿಚಾರದಲ್ಲಿ ಉತ್ತಮವಾಗಿರಲಿದೆ.ಕುಟುಂಬದಲ್ಲಿ ಏನೇ ಭಿನ್ನಾಭಿಪ್ರಾಯವಿದ್ದರೆ ಅದನ್ನು ಬಗೆಹರಿಸಲು ಈ ದಿನ ಉತ್ತಮವಾಗಿರಲಿದೆ. ಇನ್ನು ಆರೋಗ್ಯ ಸಮಸ್ಯೆಯಿದ್ದರೆ ಅದು ಬಗೆಹರಿಯಲಿದೆ.
ಕನ್ಯಾ ರಾಶಿ
ಈ ದಿನ ಹೂಡಿಕೆಗೆ ಉತ್ತಮವಲ್ಲ, ಹಾಗಾಗಿ ಹಣಕಾಸಿನ ವಿಚಾರದಲ್ಲಿ ಜಾಗ್ರತೆವಹಿಸಿ. ಕೆಲಸ ಕಾರ್ಯಗಳಲ್ಲಿ ಕೆಲ ಅಡೆತಡೆವಿರಬಹುದು. ಆರೋಗ್ಯ ವಿಷಯದಲ್ಲಿ ಸುಧಾರಣೆ ಕಂಡು ಬರಲಿದೆ. ಆರೋಗ್ಯ ಸಮಸ್ಯೆಗಳಿರಬಹುದು.
ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯವಿರಬಹುದು.
ತುಲಾ ರಾಶಿ
ತುಲಾ ರಾಶಿಯವರಿಗೆ ಈ ದಿನ ಶುಭವಾಗಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ. ಮನೆಯಲ್ಲಿ ಕೆಲ ಸಮಸ್ಯೆ ಉಂಟಾದರೆ ಸಮಧಾನದಿಂದ ಬಗೆಹರಿಸಲು ಪ್ರಯತ್ನಿಸಿ. ಆರೋಗ್ಯದ ಬಗ್ಗೆ ನೋಡುವುದಾದರೆ ಆಯಾಸ ಹೆಚ್ಚಿರಲಿದೆ.
ವೃಶ್ಚಿಕ ರಾಶಿ
ವೃತ್ತಿ ಬದುಕಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಇನ್ನು ಪ್ರೀತಿ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಉತ್ತಮ ಹೊಂದಾಣಿಕೆ ಇರಲಿದೆ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಧನು ರಾಶಿ
ಉದ್ಯೋಗಿಗಳಿಗೆ ಈ ದಿನ ಅನುಕೂಲಕರವಾಗಿರಲಿದೆ. ಉದ್ಯಮಿಗಳಿಗೆ, ವ್ಯಾಪಾರಸ್ಥರಿಗೆ ಈ ದಿನ ತುಂಬಾ ಚೆನ್ನಾಗಿರಲಿದೆ. ಕುಟುಂಬದಲ್ಲಿ ಏನೇ ಭಿನ್ನಾಭಿಪ್ರಾಯ ಉಂಟಾಗಿದ್ದರೆ ಈ ದಿನ ಅನುಕೂಲಕರವಾಗಿರಲಿದೆ. ದಂಪತಿ ತಮ್ಮ ನಡುವೆ ಸಮಸ್ಯೆ ಹೆಚ್ಚಾಗಲು ಬಿಡಬೇಡಿ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.
ಮಕರ ರಾಶಿ
ಈ ದಿನ ಖರ್ಚು ಹೆಚ್ಚಿರಬಹುದು, ಬಜೆಟ್ ಮೀರಿ ಖರ್ಚು ಮಾಡಬೇಡಿ, ಇನ್ನು ನೀವು ಯಾವುದೇ ನಿರ್ಧಾರ ಆತುರದಿಂದ ತೆಗೆದುಕೊಳ್ಳಬೇಡಿ. ವ್ಯಾಪಾರಿಗಳು ತಮ್ಮ ವ್ಯಾಪಾರ ಯೋಜನೆಯಲ್ಲಿ ಬದಲಾವಣೆ ಮಾಡಲು ಹೋಗಬೇಡಿ.ನಿಮ್ಮಲ್ಲಿ ಏನಾದರು ಗೊಂದಲವಿದ್ದರೆ ನಿಮ್ಮ ಪ್ರೀತಿಪಾತ್ರರ ಜೊತೆಗೆ ಹೇಳಿಕೊಳ್ಳಿ, ನಿಮ್ಮ ಸಮಸ್ಯೆ ಬಗೆಹರಿಯಲಿದೆ.
ಕುಂಭ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಆರ್ಥಿಕವಾಗಿ ತುಂಬಾ ಒಳ್ಳೆಯ ಪ್ರಯೋಜನ ಪಡೆಯುತ್ತೀರಿ. ಉದ್ಯೋಗಿಗಳ ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಬೇಡ.
ಮೀನ ರಾಶಿ
ವೃತ್ತಿ ಬದುಕಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ವ್ಯಾಪಾರಿಗಳಿಗೆ ಧನ ಲಾಭವಿರಲಿದೆ, ಕುಟುಂಬ ಜೀವನದಲ್ಲಿ ಸಂತೋಷ, ನೆಮ್ಮದಿ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯ ಸಮಸ್ಯೆ ನಿರ್ಲಕ್ಷ್ಯ ಮಾಡಬೇಡಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











