Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಿನ ಭವಿಷ್ಯ: ಅಕ್ಟೋಬರ್ 23 ಈ ದಿನ 12 ರಾಶಿಗಳ ರಾಶಿಫಲ,ಹೇಗಿದೆ?
ಜ್ಯೋತಿಷ್ಯಶಾಸ್ತ್ರ ಪ್ರಕಾರ ಅಕ್ಟೋಬರ್ 23ರ ಈ ದಿನ 12 ರಾಶಿಗಳಲ್ಲಿ ಯಾರಿಗಲ್ಲಾ ಶುಭವಾಗಿದೆ:
ಮೇಷ ರಾಶಿ
ಈ ದಿನ ನಿಮಗೆ ಶುಭವಾಗಿರಲಿದೆ, ಕೆಲಸ ಕಾರ್ಯಗಳು ಚೆನ್ನಾಗಿ ನಡೆಯಲಿದೆ. ಕುಟುಂಬದಲ್ಲಿನ ಸಮಸ್ಯೆ ಬಗೆಹರಿಯಲಿದೆ, ಇದರಿಂದ ಮನಸ್ಸಿಗೆ ನೆಮ್ಮದಿ ಇರಲಿದೆ. ವ್ಯಾಪಾರಿಗಳಿಗೆ ಈ ದಿನ ಧನಾತ್ಕವಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 10
ಶುಭ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:20 ರವರೆಗೆ

ವೃಷಭ ರಾಶಿ
ಈ ದಿನ ನಿಮಗೆ ಶುಭವಾಗಿರಲಿದೆ, ಆರ್ಥಿಕವಾಗಿ ತುಂಬಾ ಚೆನ್ನಾಗಿರಲಿದೆ. ಆದರೆ ಯಾವುದೇ ಆರ್ಥಿಕ ನಿರ್ಧಾರ ತೆಗೆದುಕೊಳ್ಳಬೇಡಿ, ವ್ಯಾಪಾರಿಗಳಿಗೆ ಧನ ಲಾಭವಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ, ಆರೋಗ್ಯ ಬಗ್ಗೆ ಹೇಳುವುದಾದರೆ ಆಹಾರಕ್ರಮದ ಕಡೆಗೆ ಗಮನಹರಿಸಬೇಕು.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 29
ಶುಭ ಸಮಯ: ಬೆಳಿಗ್ಗೆ 7 ರಿಂದ ಮಧ್ಯಾಹ್ನ 12:30 ರವರೆಗೆ
ಮಿಥುನ ರಾಶಿ
ಈ ದಿನ ಉತ್ತಮವಾಗಿರಲಿದೆ, ನಿಮ್ಮ ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರ್ಥಿಕವಾಗಿ ಈ ದಿನ ಅನುಕೂಲಕರವಾಗಿದೆ. ವ್ಯಾಪಾರಿಗಳು ವ್ಯವಹಾರದ ಕಡೆಗೆ ಗಮನಹರಿಸಬೇಕು. ಆರೋಗ್ಯ ಸಮಸ್ಯೆಯಿದ್ದರೆ ಸುಧಾರಣೆ ಕಂಡು ಬರಲಿದೆ.
ಅದೃಷ್ಟದ ಬಣ್ಣ: ಗಾಢ ಹಳದಿ
ಅದೃಷ್ಟದ ಸಂಖ್ಯೆ: 14
ಶುಭ ಸಮಯ: ಸಂಜೆ 4:05 ರಿಂದ ರಾತ್ರಿ 9 ರವರೆಗೆ
ಕರ್ಕ ರಾಶಿ
ಈ ದಿನ ಆರ್ಥಿಕ ವಿಷಯದ ಕಡೆಗೆ ಗಮನಹರಿಸಬೇಕು, ಕೆಲಸದ ವಿಚಾರದಲ್ಲಿ ಸ್ವಲ್ಪವೂ ನಿರ್ಲಕ್ಷ್ಯ ವಹಿಸಬೇಡಿ. ನಿಮ್ಮ ಎಲ್ಲಾ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಪ್ರಯತ್ನಿಸಿ. ವ್ಯಾಪಾರಿಗಳಿಗೆ ಈ ದಿನ ಧನಾತ್ಮಕವಾಗಿರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ಆದರೆ ಚಿಕ್ಕ ಪುಟ್ಟ ವಿಷಯಗಳನ್ನುನ ನಿರ್ಲಕ್ಷ್ಯ ಮಾಡಿ. ಆರೋಗ್ಯದಲ್ಲಿ ಏರಳಿತವಿರಲಿದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 11
ಶುಭ ಸಮಯ: ಬೆಳಗ್ಗೆ 5:45 ರಿಂದ 10:25 ರವರೆಗೆ
ಸಿಂಹ ರಾಶಿ
ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿರಲಿದೆ, ಕೆಲಸದಲ್ಲಿ ಈ ದಿನ ಉತ್ತಮವಾಗಿರಲಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಅವಿವಾಹಿತರಿಗೆ ಉತ್ತಮ ವಿವಾಹ ಪ್ರಸ್ತಾಪವಿರಬಹುದು. ಕುಟುಂಬದ ಜೊತೆ ಹೆಚ್ಚು ಸಮಯ ಕಳೆಯಿರಿ, ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯ ಸಮಸ್ಯೆಯಿದ್ದರೆ ಗಮನಹರಿಸಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 31
ಶುಭ ಮುಹೂರ್ತ: ಮಧ್ಯಾಹ್ನ 1 ರಿಂದ 3 ರವರೆಗೆ
ಕನ್ಯಾ ರಾಶಿ
ಕೆಲಸದಲ್ಲಿ ಈ ದಿನ ಅನುಕೂಲಕಕರವಾಗಿದೆ, ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಕಾಲುಗಳಲ್ಲಿ ನೋವು ಇರಬಹುದು.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 15
ಶುಭ ಸಮಯ: ಮಧ್ಯಾಹ್ನ 2:15 ರಿಂದ ರಾತ್ರಿ 8:10 ರವರೆಗೆ
ತುಲಾ ರಾಶಿ
ಈ ದಿನ ಉತ್ತಮವಾಗಿರಲಿದೆ, ನಿಮ್ಮ ಕೆಲಸಕ್ಕೆ ತಕ್ಕ ಪ್ರತಿಫಲ ಸಿಗಲಿದೆ, ಪ್ರಮುಖ ಕೆಲಸ ಮಾಡುವಾಗ ಆತುರಪಡಬೇಡಿ., ವ್ಯಾಪಾರಿಗಳು ತುಂಬಾ ಜಾಗ್ರತೆವಹಿಸಬೇಕು. ಕುಟುಂಬ ಜೀವನದಲ್ಲಿ ಖುಷಿಯಾಗಿರುತ್ತೀರಿ, ವೈವಾಹಿಕ ಜೀವನ ಚೆನ್ನಾಗಿರಲಿದೆ. ಸ್ನಾಯು ಸಂಬಂಧಿ ಸಮಸ್ಯೆಗಳಿರಬಹುದು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 20
ಶುಭ ಸಮಯ: ಬೆಳಿಗ್ಗೆ 8:40 ರಿಂದ ಮಧ್ಯಾಹ್ನ 12:30 ರವರೆಗೆ
ವೃಶ್ಚಿಕ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ. ಈ ದಿನ ನೀವು ಪ್ರಮುಖ ಕೆಲಸದತ್ತ ಗಮನಹರಿಸುತ್ತೀರಿ, ಬಾಕಿಯಿರುವ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗುವುದು. ಕುಟುಂಬದಲ್ಲಿ ನಿಮ್ಮ ಜವಾಬ್ದಾರಿ ಉತ್ತಮವಾಗಿ ಪೂರ್ಣಗೊಳಿಸಲು ಸಾಧ್ಯವಾಗುವುದು. ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 5
ಶುಭ ಸಮಯ: ಮಧ್ಯಾಹ್ನ 1:30 ರಿಂದ ಸಂಜೆ 7 ರವರೆಗೆ
ಧನು ರಾಶಿ
ಈ ದಿನ ನೀವು ಅಧಿಕ ಕೆಲಸದ ಒತ್ತಡಕ್ಕೆ ಒಳಗಾಗಬಹುದು, ಕೆಲಸದಲ್ಲಿ ತಪ್ಪಾಗದಂತೆ ಜಾಗ್ರತೆವಹಿಸಿ. ಹಣಕಾಸಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ಕುಟುಂಬದಲ್ಲಿ ಮನಸ್ತಾಪ ಮಾಡಿಕೊಳ್ಳಬೇಡಿ, ಏನೇ ಸಮಸ್ಯೆವಿದ್ದರೂ ಸಮಧಾನದಿಂದ ಬಗೆಹರಿಸಲು ಪ್ರಯತ್ನಿಸಿ. ಬೇಡದ ವಿಷಯಗಳ ಬಗ್ಗೆ ಚಿಂತೆ ಮಾಡದೆ ಧ್ಯಾನ,ಯೋಗ ಅಂತ ಗಮನಹರಿಸಿದರೆ ನಿಮ್ಮ ಆರೋಗ್ಯಕ್ಕೆ ಒಳ್ಳೆಯದು.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 19
ಶುಭ ಮುಹೂರ್ತ: ಮಧ್ಯಾಹ್ನ 1:30 ರಿಂದ 4 ರವರೆಗೆ
ಮಕರ ರಾಶಿ
ಈ ದಿನ ಸವಾಲಿನಿಂದ ಕೂಡಿರಲಿದೆ, ಆರ್ಥಿಕ ಪರಿಸ್ಥಿತಿ ಬಲಗೊಳ್ಳಲಿದೆ. ಆದಾಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಸಂಬಂಧ ಸುಧಾರಿಸಲಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಆರೋಗ್ಯಕ್ಕಾಗಿ ಆಹಾರಕ್ರಮದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 38
ಶುಭ ಸಮಯ: ಬೆಳಿಗ್ಗೆ 7:55 ರಿಂದ 10:30 ರವರೆಗೆ
ಕುಂಭ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ. ಆರ್ಥಿಕವಾಗಿ ಉತ್ತಮವಾಗಿರಲಿದೆ, ಕಡಿಮೆ ಶ್ರಮದಿಂದ ಒಳ್ಳೆಯ ಹಣ ಗಳಿಸಬಹುದು. ಚಿಕ್ಕ ವಿಷಯಕ್ಕೆ ಕೋಪಗೊಂಡು ವಾದ-ವಿವಾದಕ್ಕೆ ಇಳಿಯಬೇಡಿ. ಆರೋಗ್ಯ ವಿಷಯಗಳಲ್ಲಿ ನಿರ್ಲಕ್ಷ್ಯ ಬೇಡ, ನಿಮ್ಮ ಹಾಗೂ ಸಂಗಾತಿ ನಡುವೆ ಹೊಂದಾಣಿಕೆ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 9
ಶುಭ ಸಮಯ: ಸಂಜೆ 6 ರಿಂದ 8:15 ರವರೆಗೆ
ಮೀನ ರಾಶಿ
ಉದ್ಯಮಿಗಳಿಗೆ ಈ ದಿನ ಉತ್ತಮವಾಗಿರಲಿದೆ. ಹಣಕಾಸಿನ ಸ್ಥಿತಿ ಚೆನ್ನಾಗಿರಲಿದೆ. ಕುಟುಂಬ ಜೀವ ಚೆನ್ನಾಗಿರಲಿದೆ, ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಿದೆ. ವೈವಾಹಿಕ ಜೀವನ ಉತ್ತಮವಾಗಿರಲಿದೆ.
ಆರೋಗ್ಯ ದುರ್ಬಲವಾಗಿರುತ್ತದೆ, ಆರೋಗ್ಯ ಸಮಸ್ಯೆ ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 9
ಶುಭ ಸಮಯ: ಸಂಜೆ 6 ರಿಂದ 8:15 ರವರೆಗೆ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications