Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಿನ ಭವಿಷ್ಯ, ಅಕ್ಟೋಬರ್ 30: ಈ ದಿನದ ರಾಶಿಫಲ ಪ್ರಕಾರ ನಿಮಗೆ ಹೇಗಿರಲಿದೆ?
ಈ ದಿನದ ರಾಶಿಫಲ ನೋಡುವುದಾದರೆ ಯಾವ ರಾಶಿಗಳಿಗೆ ಶುಭ, ಯಾರಿಗೆ ಈ ದಿನ ಸರಾಸರಿಯಾಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಮೇಷ ರಾಶಿಯವರೇ ಬಂದ ಅವಕಾಶಗಳನ್ನು ಬಳಸಿಕೊಳ್ಳಲು ಪ್ರಯತ್ನಿಸುವುದು ಒಳ್ಳೆಯದು, ಹೀಗೆ ಮಾಡಿದ್ದೇ ಆದರೆ ನಿಮ್ಮ ಜೀವನದಲ್ಲಿ ಬಹುದೊಡ್ಡ ಬದಲಾವಣೆ ಕಾಣಬಹುದು. ನಿಮ್ಮ ಸಾಮರ್ಥ್ಯದ ಮೇಲೆ ನಿಮಗೆ ನಂಬಿಕೆ ಇರಲಿ, ಹೊಸ ಕಾರ್ಯವನ್ನು ಯಾವುದೇ ಹಿಂಜರಿಕೆಯಿಲ್ಲದೆ ಪ್ರಾರಂಭಿಸಲು ಈ ದಿನ ಸೂಕ್ತವಾಗಿದೆ.

ವೃಷಭ ರಾಶಿ
ಕೆಲವೊಂದು ಅನಿರೀಕ್ಷಿತ ಘಟನೆಗಳು ಎದುರಾಗಬಹುದು, ಅವುಗಳನ್ನು ಸ್ವೀಕರಿಸಿ. ಕೆಲಸದಲ್ಲಿ ಹೆಚ್ಚಿನ ಒತ್ತಡ ಇರಲಿದೆ, ದೈಹಿಕ ಹಾಗೂ ಮಾನಸಿಕ ಆರೋಗ್ಯದ ಕಡೆಗೆ ಗಮನಹರಿಸಿ. ಆತ್ಮವಿಶ್ವಾಸದಿಂದ ಮುಂದುವರೆಯಿರಿ, ಉತ್ತಮ ಪ್ರತಿಫಲ ಪಡೆಯಲು ಸಾಧ್ಯವಾಗುವುದು.
ಮಿಥುನ
ಈ ದಿನ ನಿಮ್ಮ ಕುಟುಂಬ ಜೀವನ ಚೆನ್ನಾಗಿರಲಿದೆ, ನೀವು ಸಂಗಾತಿಯ ಜೊತೆಯಿಂದ ಖುಷಿಯಿಂದ ದಿನ ಕಳೆಯುತ್ತೀರಿ. ದೈಹಿಕ ಹಾಗೂ ಮಾನಸಿಕ ಆರೋಗ್ಯದ ಕಡೆಗೆ ಗಮನಹರಿಸಿ, ಕೆಲಸ ಕಾರ್ಯಗಳು ಸರಾಸರಿಯಾಗಿ ನಡೆಯಲಿದೆ. ಹಾಗಾಗಿ ಈ ದಿನ ನಿಮಗೆ ಈ ದಿನ ಶುಭವಾಗಿದೆ.
ಕರ್ಕ ರಾಶಿ
ನಿಮ್ಮ ಕೆಲಸದ ಕ್ರೆಡಿಟ್ ಬೇರೆಯವರು ತೆಗೆದುಕೊಳ್ಳಬಹುದು, ಈ ಬಗ್ಗೆ ಜಾಗ್ರತೆವಹಿಸಿ. ನಿಮಗೆ ಸಿಕ್ಕ ಅವಕಾಶವನ್ನು ಉತ್ತಮವಾಗಿ ಬಳಸಿಕೊಳ್ಳಿ. ನಿಮ್ಮ ಕೆಲಸದಿಂದ ಗಮನ ಸೆಳೆಯಲು ಸಾಧ್ಯವಾಗುವುದು, ಈ ದಿನ ನಿಮಗೆ ಅನುಕೂಲಕರವಾಗಿದೆ.
ಸಿಂಹರಾಶಿ
ಈ ದಿನ ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ, ಕೆಲಸದಲ್ಲಿ ಹೊಸ ಅವಕಾಶಗಳು ದೊರೆಯಲಿದೆ. ವ್ಯಾಪಾರಿಗಳು ಕೂಡ ಸಿಕ್ಕ ಅವಕಾಶ ಚೆನ್ನಾಗಿ ಬಳಸಿಕೊಂಡರೆ ಈ ದಿನ ನಿಮಗೆ ಲಾಭದಾಯಕವಾಗಿರಲಿದೆ.
ಕನ್ಯಾ ರಾಶಿ
ಬೇರೆಯವರು ನಿಮ್ಮನ್ನು ನೋಡಿ ಸ್ಪೂರ್ತಿ ಪಡೆಯುತ್ತಾರೆ, ಈ ದಿನ ನಿಮಗೆ ತುಂಬಾನೇ ಅನುಕೂಲಕರವಾಗಿದೆ. ನಿಮ್ಮ ಕೆಲಸ ಕಾರ್ಯಗಳು ನೀವಂದುಕೊಂಡಂತೆಯೇ ನಡೆಯಲಿದೆ. ಹೀಗಾಗಿ ಈ ದಿನ ನಿಮಗೆ ಅನುಕೂಲಕರವಾಗಿದೆ.
ತುಲಾ ರಾಶಿ
ಬೇಡದ ವಿಷಯಗಳಿಗೆ ಅನಗ್ಯತ ಚಿಂತೆ ಮಾಡಬೇಡಿ, ನಿಮ್ಮನ್ನು ಇತರರ ಜೊತೆ ಹೋಲಿಕೆ ಮಾಡುವುದೂ ಬೇಡ. ಕುಟುಂಬದಲ್ಲಿ ಖುಷಿ ಇರಲಿದೆ, ನಿಮ್ಮ ಹಾಗೂ ನಡುವೆ ಪ್ರೀತಿ, ಸಾಮರಸ್ಯ ಇರಲಿದೆ.
ವೃಶ್ಚಿಕ ರಾಶಿ
ನಿಮಗೆ ತುಂಬಾ ಒಳ್ಳೆಯ ಅವಕಾಶ ದೊರೆಯಲಿದೆ, ವೃತ್ತಿ ಬದುಕಿನಲ್ಲಿ ಪ್ರಗತಿ ಕಾಣುತ್ತೀರಿ. ಕುಟುಂಬದ ಜೊತೆಗೆ ಉತ್ತಮ ಬಾಂಧವ್ಯ ಕಾಪಾಡಿಕೊಳ್ಳಿ. ಪೂರ್ವಜರ ಆಸ್ತಿಯಿಂದ ಲಾಭ ಗಳಿಸುತ್ತೀರಿ. ಆರ್ಥಿಕವಾಗಿ ಈ ದಿನ ನಿಮಗೆ ಅನುಕೂಲಕರವಾಗಿದೆ.
ಧನು ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ಈ ದಿನ ಶಕ್ತಿಯುತವಾಗಿರುತ್ತೀರಿ. ಆರೋಗ್ಯದ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿದೆ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಈ ದಿನ ನಿಮಗೆ ಅನುಕೂಲಕರವಾಗಿದೆ.
ಮಕರ ರಾಶಿ
ನೀವು ನಿಮ್ಮಲ್ಲಿನ ಅಭದ್ರತೆ ಗೆಲ್ಲಲು ಪ್ರಯತ್ನಿಸಬೇಕು, ನಿಮ್ಮ ಧೈರ್ಯ ಹೊಸ ಅವಕಾಶಗಳನ್ನು ನೀಡಲಿದೆ. ಈಗೀನ ಪರಿಸ್ಥಿತಿಯಲ್ಲಿ ಒಳ್ಳೆಯದರ ಕಡೆ ಮಾತ್ರ ಗಮನಹರಿಸಿ, ಅನಗ್ಯತ ಚಿಂತೆ ದೂರವಿಡಿ. ಆರೋಗ್ಯದ ಕಡೆಗೆ ಗಮನಹರಿಸಿ.
ಕುಂಭ ರಾಶಿ
ಕುಟುಂಬದ ಜೊತೆಗಿನ ಬಾಂಧವ್ಯ ಚೆನ್ನಾಗಿರಲಿದೆ, ಕುಟುಂಬದ ಜೊತೆಗೆ ಹೆಚ್ಚಿನ ಸಮಯ ಕಳೆಯುತ್ತೀರಿ. ಹಿರಿಯರ ಸಲಹೆ ನಿರ್ಲಕ್ಷ್ಯ ಮಾಡಬೇಡಿ. ಕೆಲಸ ಕಾರ್ಯಗಳಲ್ಲಿ ಹಿರಿಯರ ಬೆಂಬಲ ಸಿಗಲಿದೆ. ಈ ದಿನ ನಿಮಗೆ ಅನುಕೂಲಕರವಾಗಿದೆ.
ಮೀನ ರಾಶಿ
ಈ ದಿನ ನಿಮಗೆ ತುಂಬಾ ಶುಭವಾಗಿರಲಿದೆ. ಈ ದಿನ ಪರಿಸ್ಥಿತಿಗಳು ನಿಮಗೆ ಅನುಕೂಲಕರವಾಗಿರುವುದರಿಂದ ಖುಷಿಯಾಗಿರುತ್ತೀರಿ. ಕುಟುಂಬದ ಜೊತೆಗೆ ಸಮಯ ಕಳೆಯುತ್ತೀರಿ. ಈ ದಿನ ನಿಮ್ಮೆಲ್ಲಾ ಕಾರ್ಯಕ್ಕೆ ಪ್ರೀತಿ ಪಾತ್ರರ ಬೆಂಬಲ ದೊರೆಯಲಿದೆ. ಮನೆಯಲ್ಲಿ ಹಬ್ಬದ ಸಂಭ್ರಮ ಹೆಚ್ಚಾಗಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications




