Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಆಗಸ್ಟ್ 11 ದಿನ ಭವಿಷ್ಯ: ಈ ದಿನ ದ್ವಾದಶ 12 ರಾಶಿಗಳ ರಾಶಿಫಲ ಹೇಗಿದೆ?
ಜ್ಯೋತಿಷ್ಯ ಪ್ರಕಾರ ಈ ದಿನದ ( ಆಗಸ್ಟ್ 11) ಭವಿಷ್ಯ ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ, ಆದರೆ ಕೆಲಸದಲ್ಲಿ ಒತ್ತಡ ಇರುವುದರಿಂದ ಕುಟುಂಬಕ್ಕೆ ಸಮಯ ನೀಡಲು ಆಗುವುದಿಲ್ಲ. ವ್ಯಾಪಾರಿಗಳಿಗೆ ದನ ಲಾಭವಾಗಲಿದೆ, ಇನ್ನು ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮುನ್ನ ಮನೆಯವರ ಅಭಿಪ್ರಾಯ ಕೇಳಿ, ಆರೋಗ್ಯ ಚೆನ್ನಾಗಿರಲಿದೆ.

ವೃಷಭ ರಾಶಿ
ಕೆಲಸಕ್ಕೆ ಸಂಬಂಧಿಸಿದ ಅನಗ್ಯತ ಚಿಂತೆ ದೂರಾಗಲಿದೆ, ಆರ್ಥಿಕವಾಗಿ ಈ ದಿನ ತುಂಬಾ ಒಳ್ಳೆಯ ಪ್ರಯೋಜನ ಪಡೆಯುತ್ತೀರಿ, ಇನ್ನು ಆರ್ಥಿಕ ಕಾರಣದಿಂದ ನಿಲ್ಲಿಸಿದ್ದ ಕೆಲಸ ಶುರು ಮಾಡಲು ಈ ಸಮಯ ಉತ್ತಮವಾಗಿದೆ. ವೈವಾಹಿಕ ಹಾಗೂ ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯವೂ ಉತ್ತಮವಾಗಿರಲಿದೆ.
ಮಿಥುನ ರಶಿ
ಈ ದಿನ ನಿಮಗೆ ತುಂಬಾನೇ ಮುಖ್ಯವಾಗಿದೆ , ಕೆಲಸದಲ್ಲಿ ನೀವು ಬಯಸಿದ ಫಲ ಸಿಗಲಿದೆ, ಆರ್ಥಿಕವಾಗಿಯೂ ಈ ದಿನ ನಿಮಗೆ ಉತ್ತಮವಾಗಿದೆ, ಈ ದಿನ ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ವ್ಯಾಪಾರಿಗಳು ಆರ್ತಿಕ ಲಾಭ ಪಡೆಯಬಹುದು.
ಕರ್ಕ ರಾಶಿ
ಈ ದಿನ ನಿಮಗೆ ಶುಭವಾಗಿದೆ, ನ್ಯಾಯಾಲಯಕ್ಕೆ ಸಂಬಂಧಿಸಿದ ವಿಷಯವನ್ನು ಹೊರಗಡೆ ಬಗೆಹರಿಸುವುದು ಒಳ್ಲೆಯದು. ವ್ಯಾಪಾರಿಗಳಿಗೆ, ಉದ್ಯಮಿಗಳಿಗೆ ಲಾಭ ದೊರೆಯಲಿದೆ. ವೈವಾಹಿಕ ಜೀವನದಲ್ಲಿ ಬಾಂಧವ್ಯ ತುಂಬಾ ಚೆನ್ನಾಗಿರಲಿದೆ, ನಿದ್ದೆಗೆ ಸಂಬಂಧಿಸಿದ ಸಮಸ್ಯೆ ಕಾಡಬಹುದು.
ಸಿಂಹ ರಾಶಿ
ಈ ದಿನ ಆರ್ಥಿಕ ಪ್ರಯತ್ನಕ್ಕೆ ಒಳ್ಳೆಯ ಫಲ ಸಿಗಲಿದೆ, ವೈವಾಹಿಕ ಜೀವನದಲ್ಲಿ ಸಂತೋಷ ಇರಲಿದೆ, ಕೆಲಸ ಕಾರ್ಯಗಲು ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ, ಇನ್ನು ಹೂಡಿಕೆ ಬಗ್ಗೆ ಅವಸರ ಬೇಡ. ಆರೋಗ್ಯದ ಕಡೆಗೆ ಗಮನಹರಿಸಿ.
ಕನ್ಯಾ ರಾಶಿ
ನೀವು ಬೇಡದ ವಿಚಾರಗಳನ್ನು ಮನಸ್ಸಿಗೆ ಹಚ್ಚಿಕೊಳ್ಳಬೇಡಿ, ಕೆಲಸ ಕಾರ್ಯದ ವಿಷಯದಲ್ಲಿ ಈ ದಿನ ನಿಮಗೆ ಉತ್ತಮವಾಗಿದೆ. ನಿಮ್ಮ ಸಂಗಾತಿಯೊಂದಿಗಿನ ಸಂಬಂಧವನ್ನು ಸುಧಾರಿಸುವ ಪ್ರಯತ್ನಗಳು ಯಶಸ್ವಿಯಾಗುತ್ತವೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು.
ತುಲಾ ರಾಶಿ
ಈ ದಿನ ಕೆಲಸದಲ್ಲಿ ಒತ್ತಡ ಹೆಚ್ಚಿರಲಿದೆ. ಆರ್ಥಿಕ ಪರಿಸ್ಥಿತಿ ಹದಗೆಡುವ ಸಾಧ್ಯತೆ ಇದೆ, ಆದ್ದರಿಂದ ಖರ್ಚಿನ ಬಗ್ಗೆ ಜಾಗ್ರತೆವಹಿಸಿ.
ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಜಾಗ್ರತೆವಹಿಸಬೇಕು, ಇಲ್ಲದಿದ್ದರೆ ನಷ್ಟ ಉಂಟಾಗಬಹುದು. ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು, ಆರೋಗ್ಯದ ಕಡೆಗೆ ಗಮನಹರಿಸಿ.
ವೃಶ್ಚಿಕ ರಾಶಿ
ಇತರರ ವಿಷಯಗಳಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಬೇಡಿ. ವ್ಯಾಪಾರಿಗಳಿಗೆ ಲಾಭ ಗಳಿಸಲು ಕಷ್ಟವಾಗುವುದು, ಕುಟುಂಬದ ಕಡೆಗೆ ಗಮನಹರಿಸಬೇಕು, ಕೋಪದಿಂದ ವರ್ತಿಸಬೇಡಿ, ಆರೋಗ್ಯದ ಬಗ್ಗೆ ಹೇಳುವುದಾದರೆ ಕಣ್ಣುಗಳಿಗೆ ಸಂಬಂಧಿಸಿದ ಸಮಸ್ಯೆವಿರಬಹುದು, ಕೆಲಸದಲ್ಲಿ ನೀವು ಊಹಿಸಿದ ಫಲ ಸಿಗದೆ ನಿರಾಸೆ ಉಂಟಾಗಬಹುದು.
ಧನು ರಾಶಿ
ಈ ದಿನ ನೀವು ಜಾಗರೂಕರಾಗಿರಬೇಕು. ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಆತುರವನ್ನು ತಪ್ಪಿಸಿ. ಕುಟುಂಬದಲ್ಲಿ ಹೆಚ್ಚು ಹಠ-ಕೋಪದಿಂದ ವರ್ತಿಸಬೇಡಿ. ಪ್ರೇಮಿಗಳಿಗೆ ಅನುಕೂಲಕರವಲ್ಲ, ಆರೋಗ್ಯದ ಕಡೆಗೆ ಗಮನಹರಿಸಿ.
ಮಕರ ರಾಶಿ
ನಿಮ್ಮ ಸಮಸ್ಯೆಗಳನ್ನು ಎಲ್ಲರ ಮುಂದೆ ಹೇಳುವುದಕ್ಕೆ ಬಿಡಬೇಡಿ. ನಿಮ್ಮ ಕೆಲಸದ ಸ್ಥಳದಲ್ಲಿ ನೀವು ಉತ್ತಮ ಯಶಸ್ಸನ್ನು ಪಡೆಯುತ್ತೀರಿ. ನಿಮ್ಮ ಶ್ರಮಕ್ಕೆ ತಕ್ಕ ಫಲಿತಾಂಶ ಸಿಗಲಿದೆ.
ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕುಟುಂಬ ಸದಸ್ಯರೊಂದಿಗಿನ ಸಂಬಂಧಗಳಲ್ಲಿ ಉತ್ತಮ ಸಮನ್ವಯವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಿ. ಸಂಗಾತಿ ಜೊತೆ ಪ್ರಾಮಾಣಿಕವಾಗಿರಿ, ಆರೋಗ್ಯದ ಕಡೆಗೆ ಗಮನಹರಿಸಿ.
ಕುಂಭ ರಾಶಿ
ನಕಾರಾತ್ಮಕ ವಿಷಯಗಳನ್ನು ಮರೆಉವುದು ಒಳ್ಳೆಯದು. ಅನಗತ್ಯ ಖರ್ಚು ಮಾಡುವುದನ್ನು ತಪ್ಪಿಸಿ. ಉಳಿತಾಯದ ಕಡೆ ಹೆಚ್ಚು ಗಮನ ಕೊಡಿ. ಉದ್ಯಮಿಗಳಿಗೆ ಸಮಯವು ಪ್ರತಿಕೂಲವಾಗಿದೆ.ಕುಟುಂಬದ ಸಮಸ್ಯೆಗಳನ್ನು ಹೊರಗಿನವರೊಂದಿಗೆ ಹಂಚಿಕೊಳ್ಳಬೇಡಿ, ಇಲ್ಲದಿದ್ದರೆ ನಿಮ್ಮ ಸಮಸ್ಯೆಗಳು ಮತ್ತಷ್ಟು ಹೆಚ್ಚಾಗಬಹುದು. ಪ್ರೇಮಿಗಳು ಭಿನ್ನಾಭಿಪ್ರಾಯ ಉಂಟಾಗದಂತೆ ಜಾಗ್ರತೆವಹಿಸಿ. ಆರೋಗ್ಯ ಚೆನ್ನಾಗಿರುತ್ತದೆ.
ಮೀನ ರಾಶಿ
ನಿಮ್ಮ ಹಣಕಾಸಿನ ಪ್ರಯತ್ನಗಳು ಯಶಸ್ವಿಯಾದರೆ ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಆರೋಗ್ಯ ದುರ್ಬಲವಾಗಿರುತ್ತದೆ. ವ್ಯಾಪಾರಿಗಳು ತಾಳ್ಮೆಯಿಂದಿರಬೇಕು. ಬೇರೆಯವರ ಕೆಲಸದ ಕಡೆಗೆ ಗಮನಹರಿಸಿ, ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಯಾಸ್, ಅಜೀರ್ಣ, ಅಸಿಡಿಟಿ ಮುಂತಾದ ಸಮಸ್ಯೆಗಳಿರಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










