Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಆಗಸ್ಟ್ 12 ದಿನ ಭವಿಷ್ಯ: ಈ ದಿನ ದ್ವಾದಶ 12 ರಾಶಿಗಳ ರಾಶಿಫಲ ಹೇಗಿದೆ?
ಜ್ಯೋತಿಷ್ಯ ಪ್ರಕಾರ ಈ ದಿನದ ( ಆಗಸ್ಟ್ 12)ಭವಿಷ್ಯ ನೋಡೋಣ:
ಮೇಷ ರಾಶಿ
ಕೌಟುಂಬಿಕ ಜೀವನದ ಕಡೆಗೆ ಗಮನಹರಿಸಬೇಕು, ಇಲ್ಲದಿದ್ದರೆ ಸಮಸ್ಯೆ ಉಂಟಾಗುವುದು. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಪ್ರೇಮಿಗಳಿಗೆ, ವಿವಾಹಿತರಿಗೆ ಈ ದಿನ ಉತ್ತಮವಾಗಿದೆ. ಆರೋಗ್ಯ ಚೆನ್ನಾಗಿರಲಿದೆ.

ವೃಷಭ ರಾಶಿ
ಈ ದಿನ ಉತ್ತಮವಾಗಿರಲಿದೆ. ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ, ವೈವಾಹಿಕ ಜೀವನದಲ್ಲಿ ಹೊಂದಾಣಿಕೆ ಇರಲಿದೆ. ಆದರೆ ಈ ದಿನ ಕೋಪ ನಿಯಂತ್ರಿಸಿ, ಆರೋಗ್ಯದ ಕಡೆಗೆ ಗಮನಹರಿಸುತ್ತೀರಿ.
ಮಿಥುನ ರಾಶಿ
ಈ ದಿನ ಪ್ರತಿಕೂಲ ಸಂದರ್ಭದಲ್ಲಿ ತಾಳ್ಮೆಯಿಂದಿರಿ. ಉದ್ಯೋಗದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ಹಣಕ್ಕೆ ಸಂಬಂಧಿಸಿದ ಚಿಂತೆಗಳು ದೂರವಾಗುತ್ತವೆ. ಸ್ಥಗಿತಗೊಂಡ ಕೆಲಸವನ್ನು ಪೂರ್ಣಗೊಳಿಸಬಹುದು. ಕುಟುಂಬ ಜೀವನ ಚೆನ್ನಾಗಿರಲಿದೆ, ವೈವಾಹಿಕ ಬದುಕು ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಕರ್ಕ ರಾಶಿ
ರಾಜಕಾರಣಿಗಳಿಗೆ ಈ ದಿನ ಉತ್ತಮವಾಗಿದೆ, ನಿಮ್ಮ ಗೌರವ ಮತ್ತಷ್ಟು ಹೆಚ್ಚಾಗಲಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ, ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ವಾಹನವನ್ನು ಜಾಗ್ರತೆಯಿಂದ ಚಲಾಯಿಸಿ.
ಸಿಂಹ ರಾಶಿ
ಈ ದಿನ ನಿಮಗೆ ಅನುಕೂಲಕರ, ನಿಮ್ಮ ಸಮಸ್ಯೆಗೆ ಪರಿಹಾರ ಸಿಗಲಿದೆ, ಆದರೆ ಆರೋಗ್ಯದ ಕಡೆಗೆ ಗಮನಹರಿಸಬೇಕು. ವ್ಯಾಪಾರಿಗಳಿಗೆ ಈ ದಿನ ಜಾಗ್ರತೆವಹಿಸಿ ಎಂದು ಸಲಹೆ ನೀಡಲಾಗುವುದು, ಪಾಲುದಾರಿಕೆಯ ವ್ಯವಹಾರ ಮಾಡುತ್ತಿದ್ದಾರೆ ವ್ಯವಹಾರದ ಕಡೆಗೆ ಗಮನಹರಿಸದಿದ್ದರೆ ನಷ್ಟವಾಗಬಹುದು. ಕುಟುಂಬ ಜೀವನ, ವೈವಾಹಿಕ ಜೀವನ ಚೆನ್ನಾಗಿರಲಿದೆ, ಆದರೆ ಪ್ರೇಮಿಗಳಿಗೆ ಈ ದಿನ ಅನುಕೂಲಕರವಲ್ಲ, ಆರೋಗ್ಯ ಸಮಸ್ಯೆಯನ್ನು ನಿರ್ಲಕ್ಷ್ಯ ಮಾಡಬೇಡಿ.
ಕನ್ಯಾ ರಾಶಿ
ಈ ದಿನ ನೀವು ಹಣದ ವಿಚಾರದಲ್ಲಿ ಜಾಗ್ರತೆವಹಿಸಬೇಕು, ಇಲ್ಲದಿದ್ದರೆ ನಷ್ಟ ಸಂಭವಿಸಬಹುದು. ಕೆಲಸದ ಕಡೆಗೆ ಗಮನಹರಿಸಿ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಸಂಬಂಧದ ಬಗ್ಗೆ ಹೇಳುವುದಾದರೆ ಆಲೋಚಿಸಿ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು, ಆರೋಗ್ಯದಲ್ಲಿ ಏರಳಿತವಿರಬಹುದು.
ತುಲಾ ರಾಶಿ
ಈ ದಿನ ಸಂಬಂಧದ ವಿಷಯದಲ್ಲಿ ಅನುಕೂಲಕರವಲ್ಲ, ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯವಿರಬಹುದು, ನೀವು ಅವರನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸುವುದು ಒಳ್ಳೆಯದು, ಕೆಲಸದಲ್ಲಿ ಅತೃಪ್ತಿ ಇರಬಹುದು, ಉದ್ಯೋಗ ಬದಲಾವಣೆಯ ಬಗ್ಗೆ ಆಲೋಚಿಸುತ್ತಿರಬಹುದು, ನಿಮಗೆ ಒಳ್ಳೆಯ ಅವಕಾಶ ಕೂಡಿ ಬರಲಿದೆ. ಆರೋಗ್ಯ ಸಮಸ್ಯೆಗಳಿದ್ದರೆ ಸೂಕ್ತ ವೈದ್ಯರನ್ನು ಕಾಣುವುದು ಒಳ್ಳೆಯದು.
ವೃಶ್ಚಿಕ ರಾಶಿ
ಪ್ರಯಾಣ ಮಾಡುವಾಗ ಜಾಗ್ರತೆ, ನಿಮ್ಮ ಅಮೂಲ್ಯ ವಸ್ತುಗಳ ಬಗ್ಗೆ ಜಾಗ್ರತೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ಕೆಲಸದಲ್ಲಿ ತಪ್ಉಗಳಾಗದಂತೆ ಜಾಗ್ರತೆವಹಿಸಿ, ಇಲ್ಲದಿದ್ದರೆ ನಿಮ್ಮ ಪ್ರಗತಿಗೆ ಅಡ್ಡವಾಗುವುದು, ಮನೆಯ ವಾತಾವರಣ ಚೆನ್ನಾಗಿರಲಿದೆ, ಆರೋಗ್ಯವೂ ಉತ್ತಮವಾಗಿರಲಿದೆ.
ಧನು ರಾಶಿ
ಈ ದಿನ ಅನಗ್ಯತ ವಿವಾದಗಳಿಂದ ದೂರವಿರಲು ಪ್ರಯತ್ನಿಸಿ, ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರಗಳಿಗೆ ಸಂಬಂಧಿಸಿದ ಜನರಿಗೆ ಸಮಯ ಅನುಕೂಲಕರವಾಗಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ಮನೆಯ ವಾತಾವರಣ ಚೆನ್ನಾಗಿರಲಿದೆ, ಆರೋಗ್ಯದಲ್ಲಿ ಏರಳಿತವಿರಬಹುದು, ಆರೋಗ್ಯದ ಕಡೆಗೆ ಗಮನಹರಿಸಿ.
ಮಕರ ರಾಶಿ
ಆರೋಗ್ಯದ ದೃಷ್ಟಿಯಿಂದ ಈ ದಿನ ನೀವು ಹೆಚ್ಚು ಜಾಗ್ರತೆವಹಿಸಬೇಕು, ಹಣಕ್ಕೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗುತ್ತವೆ ಮತ್ತು ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ವ್ಯಾಪಾರಿಗಳು ಆತುರದಿಂದ ಹೂಡಿಕೆ ಮಾಡದಂತೆ ಸಲಹೆ ನೀಡಲಾಗುವುದು. ಸಂಗಾತಿ ಜೊತೆ ವಿವಾದಾತ್ಮಕ ವಿಷಯಗಳನ್ನು ಚರ್ಚಿಸಬೇಡಿ, ಆಯಾಸ ಹೆಚ್ಚಾಗಿದ್ದರೆ ಆರೋಗ್ಯದ ಕಡೆಗೆ ಗಮಹರಿಸಿ.
ಕುಂಭ ರಾಶಿ
ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಿ, ಅಲ್ಲದೆ ನಿಮ್ಮ ಕೋಪ ನಿಯಂತ್ರಿಸಿದರೆ ತುಂಬಾ ಸಮಸ್ಯೆ ನಿಯಂತ್ರಿಸಬಹುದು. ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ. ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಹೆಚ್ಚಾಗಬಹುದು, ಆರೋಗ್ಯದ ಬಗ್ಗೆ ಹೇಳುವುದಾದರೆ ನೀವು ಆಹಾರಕ್ರಮದ ಕಡೆಗೆ ಗಮನಹರಿಸಬೇಕು.
ಮೀನ ರಾಶಿ
ನೀವು ಸಮಸ್ಯೆಗಳನ್ನು ಕೋಪದ ಬದಲಿಗೆ ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಿದರೆ ಒಳ್ಳೆಯದು. ಹಣದ ವಿಷಯದಲ್ಲಿ ಯಾರನ್ನೂ ಹೆಚ್ಚು ನಂಬಬೇಡಿ, ಇಲ್ಲದಿದ್ದರೆ ನೀವು ನಷ್ಟವನ್ನು ಅನುಭವಿಸಬಹುದು. ಸಂಗಾತಿ ಜೊತೆಗಿನ ಬಾಂಧವ್ಯ ಚೆನ್ನಾಗಿರಲಿದೆ, ಆರ್ಥಿಕವಾಗಿ ದೊಡ್ಡ ಸಮಸ್ಯೆಯಿಲ್ಲ,
ನಿಮ್ಮ ಆರೋಗ್ಯವನ್ನು ನಿರ್ಲಕ್ಷಿಸಬೇಡಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










