ದಿನ ಭವಿಷ್ಯ: ಜುಲೈ 12: ಆಷಾಢ ಶುಕ್ರವಾರ, ಈ ದಿನ ನಿಮ್ಮ ರಾಶಿಗೆ ಹೇಗಿರಲಿದೆ?

ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?

ಮೇಷ ರಾಶಿ

ಇಂದು ನಿಮಗೆ ನಿಮಗೆ ಶುಭವಾಗಿದೆ. ನಿಮ್ಮ ಎಲ್ಲಾ ಕೆಲಸಗಳು ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುವುದು, ಅನಗ್ಯತ ವಿಷಯಗಳ ಕಡೆ ಗಮನಹರಿಸಬೇಡಿ. ವ್ಯಾಪಾರಿಗಳು ತಮ್ಮ ವ್ಯವಹಾರ ಮತ್ತಷ್ಟು ಉತ್ತಮಗೊಳಿಸಲು ಕೆಲವೊಂದು ಬದಲಾವಣೆ ಮಾಡುವುದು ಒಳ್ಳೆಯದು. ಬೇರೆ ಕೆಲಸ ಹುಡುಕುತ್ತಿದ್ದರೆ ಇನ್ನಷ್ಟು ಶ್ರಮ ಹಾಕಿ ಹುಡುಕಿ. ವೈವಾಹಿಕ ಜೀವನದಲ್ಲಿ ಪರಿಸ್ಥಿತಿ ಅಷ್ಟೊಂದು ಚೆನ್ನಾಗಿರಲ್ಲ, ಅಲ್ಲದೆ ಆರೋಗ್ಯದ ಕಡೆಗೆ ಗಮನಹರಿಸಿ.

Dina Bhavishya

ವೃಷಭ ರಾಶಿ

ಈ ದಿನ ನಿಮಗೆ ಶುಭವಾಗಿದೆ, ಹಾಗಾಗಿ ಧನಾತ್ಮಕತೆಯನ್ನು ಅನುಭವಿಸುತ್ತೀರಿ. ವ್ಯಾಪಾರಗಳು ಮಷ್ಟ ಉಂಟಾಗದಂತೆ ಜಾಗ್ರತೆವಹಿಸಿ.
ಕೆಲಸ ಕಾರ್ಯಗಳ ಮೇಲೆ ಗಮನಹರಿಸಲು ಸಾಧ್ಯವಾಗುವುದು. ಈ ದಿನ ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ವೈವಾಹಿಕ ಬದುಕು ಕೂಡ ಚೆನ್ನಾಗಿರಲಿದೆ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಬೇಡ.

ಮಿಥುನ ರಾಶಿ

ಆರ್ಥಿಕವಾಗಿ ನೋಡುವುದಾದರೆ ಈ ದಿನ ನಿಮಗೆ ಸ್ವಲ್ಪ ಸವಾಲಿನ ದಿನ. ಖರ್ಚು ವೆಚ್ಚಗಳ ಕಡೆಗೆ ಗಮನಹರಿಸಬೇಕು. ವ್ಯಾಪಾರಿಗಳಿಗೆ ಈ ದಿನ ಸಾಮಾನ್ಯವಾಗಿರಲಿದೆ.
ಕೆಲಸದಲ್ಲಿ ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಕುಟುಂಬದ ಜೊತೆ ಸಂತೋಷವಾಗಿರುತ್ತೀರಿ. ಆದರೆ ಸಂಗಾತಿಯ ಭಾವನೆಗಳನ್ನು ನೋಯಿಸಬೇಡಿ, ಇನ್ನು ಏನಾದರೂ ಆರೋಗ್ಯ ಸಮಸ್ಯೆ ಇದ್ದರೆ ತುಂಬಾ ನಿರ್ಲಕ್ಷ್ಯ ಮಾಡಲು ಹೋಗದಿರಿ.


ಕರ್ಕ ರಾಶಿ

ಈ ದಿನ ನೀವು ತಾಳ್ಮೆಯಿಂದಿರಿ, ನಿರೀಕ್ಷಿತ ಫಲಿತಾಂಶಗಳನ್ನು ಪಡೆಯದಿದ್ದರೂ, ಧನಾತ್ಮಕವಾಗಿರಲು ಪ್ರಯತ್ನಿಸಿ. ವ್ಯಾಪಾರಿಗಳು ನಿಮ್ಮ ಪ್ಲ್ಯಾನ್‌ ಇತರರ ಜೊತೆಗೆ ಹಂಚಿಕೊಳ್ಳಲು ಹೋಗಬೇಡಿ, ಅಲ್ಲದೆ ಕೆಲಸವನ್ನು ಗಮನಹರಿಸಿ ಮಾಡಬೇಕು. ಸಂಬಂಧ ಚೆನ್ನಾಗಿರಲಿದೆ. ನಿಮ್ಮ ವೈಯಕ್ತಿಕ ಬದುಕಿನಲ್ಲಿ ಮೂರನೇಯ ವ್ಯಕ್ತಿ ಅಭಿಪ್ರಾಯ ಹೇಳಲು ಅವಕಾಶ ನೀಡದಿರಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಮೈಗ್ರೇನ್‌ ಸಮಸ್ಯೆವಿರಬಹುದು.

ಸಿಂಹ ರಾಶಿ

ಈ ದಿನ ಬಾಕಿಯಿರುವ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗುವುದು. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ.ಕೆಲಸದಲ್ಲಿ ತಪ್ಪಾಗದಂತೆ ಜಾಗ್ರತೆವಹಿಸಿ. ಸಂಗಾತಿ ಕೆಲ ಭಿನ್ನಾಭಿಪ್ರಾಯ ಉಂಟಾಗಬಹುದು. ಯಾವುದೇ ಕಾರಣಕ್ಕೆ ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಮಾಡಲು ಹೋಗದಿರಿ.

ಕನ್ಯಾ ರಾಶಿ

ನೀವು ಕಷ್ಟವನ್ನು ಸಮರ್ಥವಾಗಿ ಎದುರಿಸಲು ಪ್ರಯತ್ನಿಸಬೇಕು. ವ್ಯಾರಿಗಳ ಎಲ್ಲಾ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳುತ್ತವೆ. ಪ್ರಮುಖ ವ್ಯವಹಾರ ನಿರ್ಧಾರಗಳನ್ನು ತೆಗೆದುಕೊಳ್ಳಲು ದಿನವು ಸೂಕ್ತವಾಗಿದೆ. ಉದ್ಯೋಗಿಗಳಿಗೆ ಈ ದಿನ ತುಂಬಾನೇ ಮುಖ್ಯವಾಗಿದೆ. ನಿಮ್ಮ ಸಂಬಂಧವನ್ನು ಸುಧಾರಿಸಲು ನೀವು ಎಲ್ಲ ಪ್ರಯತ್ನಗಳನ್ನು ಮಾಡುತ್ತೀರಿ. ಅತಿಯಾದ ಚಿಂತೆ ಬಿಡಿ.

ತುಲಾ ರಾಶಿ

ಈ ಅವಧಿ ನಿಮಗೆ ಉತ್ತಮವಾಗಿದೆ, ನೀವು ನಿಮ್ಮ ನಿರ್ಧಾರಗಳನ್ನು ಆಲೋಚಿಸಿ ತೆಗೆದುಕೊಳ್ಳುವುದರಿಂದ ಉತ್ತಮ ಫಲವನ್ನೇ ಅನುಭವಿಸುತ್ತೀರಿ. ವ್ಯಾಪಾರಿಗಳ ಪ್ರಮುಖ ಅಡೆತಡೆ ನಿವಾರಣೆಯಾಗಲಿದೆ. ಈ ದಿನದ ಕೆಲಸ ಇಂದೇ ಪೂರ್ಣಗೊಳಿಸಿ, ನಾಳೆಗೆ ಅಂತ ಮುಂದೆಕ್ಕೆ ಹಾಕಬೇಡಿ. ವೈವಾಹಿಕ, ಕುಟುಂಬ ಜೀವನ ಚೆನ್ನಾಗಿರಲಿದೆ, ಅತಿಯಾದ ಓಡಾಟ ಇರುವುದರಿಂದ ಸುಸ್ತು ಇರಬಹುದು.


ವೃಶ್ಚಿಕ ರಾಶಿ

ಹಣದ ಸಮಸ್ಯೆಯನ್ನು ಹೋಗಲಾಡಿಸಲು, ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಿಕೊಂಡರೆ ತುಂಬಾ ಒಳ್ಳೆಯದು. ಕೆಲಸದ ವಿಷಯದಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳದಿರಿ. ನಿಮ್ಮ ಕೆಲಸ ಕಾರ್ಯ ಪೂರ್ಣಗೊಳಿಸುವತ್ತ ಗಮನಹರಿಸಿ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಪ್ರೇಮಿಗಳಿಗೆ ರೊಮ್ಯಾಂಟಿಕ್ ಆಗಿರಲಿದೆ.
ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಮಾಡದಿರಿ.

ಧನು ರಾಶಿ

ಅತಿಯಾದ ಕಠಿಣ ಪರಿಶ್ರಮ ನಿಮ್ಮ ಆರೋಗ್ಯದ ಮೇಲೂ ಪರಿಣಾಮ ಬೀರುವುದರಿಂದ ನೀವು ವಿಶ್ರಾಂತಿಯ ಕಡೆಗೆ ಗಮನಹರಿಸುವುದು ಒಳ್ಳೆಯದು. ವ್ಯಾಪಾರಿಗಳ ಧನ ಲಾಭವಾಗಲಿದೆ. ಉದ್ಯೋಗಿಗಳಿಗೆ ಈ ದಿನ ಶುಭವಾಗಿದೆ. ಸಂಬಂಧದಲ್ಲಿನ ಭಿನ್ನಾಭಿಪ್ರಾಯ ಹೆಚ್ಚಾಗಲು ಬಿಡದಿರಿ. ಆರೋಗ್ಯ ಸಮಸ್ಯೆ ಇದ್ದರೆ ಸುಧಾರಣೆ ಕಂಡು ಬರಲಿದೆ.

ಮಕರ ರಾಶಿ

ನೀವು ಕೋಪ ನಿಯಂತ್ರಣ ಮಾಡಿದಷ್ಟು ಒಳ್ಳೆಯದು. ಬೇಡದ ವಿಚಾರಗಳನ್ನು ತಲೆಯಿಂದ ತೆಗೆದು ಹಾಕಿ. ಹೊಸ ಕೆಲಸವನ್ನು ಪ್ರಾರಂಭ ಮಾಡಲು ಯೋಚಿಸುತ್ತಿದ್ದರೆ ಸ್ವಲ್ಪ ಸಮಯ ತಡೆಯುವುದು ಒಳ್ಳೆಯದು.. ನೀವು ಸಂಗಾತಿಯ ಆರೋಗ್ಯದ ಕಡೆಗೆ ಗಮನಹರಿಸಬೇಕು.

ಕುಂಭ ರಾಶಿ

ಈ ದಿನ ನಿಮಗೆ ಮಿಶ್ರ ಫಲಿತಾಂಶ. ಹಣದ ವಿಷಯದಲ್ಲಿ ಈ ದಿನ ತುಂಬಾ ಒಳ್ಳೆಯದು. ವ್ಯಾಪಾರಿಗಳು ನಿಮ್ಮ ವ್ಯವಹಾರದಲ್ಲಿ ಚಿಕ್ಕ ಬದಲಾವಣೆಯಾದರೂ ಗಮಹರಿಸಿದರೆ ಮುಂದೆ ಆಗುವ ನಷ್ಟ ತಡೆಯಬಹುದು, ಉದ್ಯೋಗಿಗಳ ಕೆಲಸ ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ಕುಟುಂಬದ ಸಮಸ್ಯೆಗಳನ್ನು ಶಾಂತಿಯುತವಾಗಿ ಬಗೆಹರಿಸಲು ಪ್ರಯತ್ನಿಸಿ. ನಿದ್ದೆ ಕಡಿಮೆಯಾದರೆ ಆರೋಗ್ಯ ಸಮಸ್ಯೆ ಉಂಟಾಗುವುದು.

ಮೀನ ರಾಶಿ

ಅತಿಯಾಸೆ ನಷ್ಟಕ್ಕೆ ಕಾರಣವಾಗಬಹುದು, ಆದ್ದರಿಂದ ಸಿಕ್ಕಿದ್ದರಲ್ಲಿ ತೃಪ್ತಿ ಪಡೆಯಿರಿ. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ಮನೆಯಲ್ಲಿ ಖುಷಿಯ ವಾತಾವರಣ ಇರುತ್ತದೆ. ಸಂಗಾತಿಯ ಜೊತೆ ಭಿನ್ನಾಭಿಪ್ರಾಯವಿದ್ದರೆ ದೂರಮಾಡಿ, ಆರೋಗ್ಯ ಸರಿಯಿಲ್ಲದಿದ್ದರೆ ಔಷಧಿಯನ್ನು ನಿಯಮಿತವಾಗಿ ತೆಗೆದುಕೊಳ್ಳಬೇಕು, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Daily Horoscope Prediction for 12th July 2024: Dina Bhavishya for All Zodiac Signs

Explore Dina Bhavishya (ದಿನ ಭವಿಷ್ಯ) /Daily Horoscope Prediction For Aries, Taurus, Gemini, Cancer, Leo, Virgo, Libra, Scorpio, Sagittarius, Capricorn, Aquarius, And Pisces In Kannada
Story first published: Thursday, July 11, 2024, 21:55 [IST]
X
Desktop Bottom Promotion