Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಮೇ 14 ದಿನ ಭವಿಷ್ಯ : ಮಂಗಳವಾರದ ಈ ದಿನ 12 ರಾಶಿಗಳಿಗೆ ಹೇಗಿರಲಿದೆ?
ಮೇ 14, ಮಂಗಳವಾರದ ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ ನೋಡೋಣ:
ಮೇಷ ರಾಶಿ
ನಿಮಗೆ ಶೀಘ್ರದಲ್ಲಿಯೇ ಮನೆಯ ಕನಸು ನನಸಾಗಲಿದೆ, ಆದರೆ ಅದೃಷ್ಟ ಮಾತ್ರ ನಂಬಿ ಕೂರದೆ, ನೀವು ಕೆಲಸದ ಕಡೆಗೆ ಗಮನಹರಿಸಿ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ನೀವು ಆಹಾರಕ್ರಮದ ಕಡೆಗೆ ಗಮನಹರಿಸಿ.

ವೃಷಭ ರಾಶಿ
ನಿಮ್ಮ ಒಡಹುಟ್ಟಿದವರು ಸಂತೋಷ ಬಗೆಹರಿಯಲು ಪ್ರಯತ್ನಿಸಿ. ರಿಯಲ್ ಎಸ್ಟೇಟ್ ಕೆಲಸ ಮಾಡುವವರು ತುಂಬಾನೇ ಜಾಗ್ರತೆವಹಿಸಬೇಕು. ಈ ದಿನ ಖರ್ಚು ಅಧಿಕವಿರಲುದೆ, ಆರೋಗ್ಯದ ದೃಷ್ಟಿಯಿಂದ ಈ ದಿನ ಮಿಶ್ರಫಲ.
ಮಿಥುನ ರಾಶಿ
ಕೆಲಸದಲ್ಲಿ ಒತ್ತಡ ಹೆಚ್ಚಿರಲಿದೆ. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ. ಈ ದಿನ ನೀವು ಖರ್ಚಿನ ಕಡೆಗೆ ಗಮನಹರಿಸಿದರೆ ಒಳ್ಳೆಯದು. ವೈವಾಹಿಕ ಜೀವನ ಚೆನ್ನಾಗಿರಲಿದೆ. ನೀವು ಅನಾರೋಗ್ಯದ ಬಗ್ಗೆ ಚಿಂತೆ ಬಿಡಿ, ಆರೋಗ್ಯಕರ ಜೀವನಶೈಲಿಯತ್ತ ಗಮನಹರಿಸಿ.
ಕರ್ಕ ರಾಶಿ
ವೃತ್ತಿ ಬದುಕು ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ. ವೈವಾಹಿಕ ಜೀವನದ ಬಗ್ಗೆ ನೋಡುವುದಾದರೆ ನಿಮ್ಮ ಹಾಗೂ ಸಂಗಾತಿಯ ನಡುವೆ ಕೆಲ ಭಿನ್ನಾಭಿಪ್ರಾಯವಿರಬಹುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಆರೋಗ್ಯದ ಬಗ್ಗೆ ಗಮನಹರಿಸಿ.
ಸಿಂಹ ರಾಶಿ
ಈ ದಿನ ನೀವು ಯಾರಿಗೂ ಹಣ ಸಾಲ ನೀಡದಿದ್ದರೆ ಒಳ್ಳೆಯದು. ನಿಮ್ಮ ವೈಯಕ್ತಿಕ ವಿಷಯಗಳಲ್ಲಿ ಹೊರಗಿನವರು ಹೆಚ್ಚು ಹಸ್ತಕ್ಷೇಪ ಮಾಡಲು ಬಿಡಬೇಡಿ. ವ್ಯಾಪಾರಿಗಳು ಈ ದಿನ ಜಾಗ್ರತೆವಹಿಸಬೇಕು. ನೀವು ಹಳೆಯ ಆರೋಗ್ಯ ಸಮಸ್ಯೆ ಮರುಕಳಿಸದಂತೆ ಜಾಗ್ರತೆವಹಿಸಿ.
ಕನ್ಯಾ ರಾಶಿ'
ಆರ್ಥಿಕವಾಗಿ ಈ ದಿನ ಚೆನ್ನಾಗಿರಲುದೆ. ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಪ್ರಯತ್ನಿಸುತ್ತಿದ್ದರೆ ನಿಮ್ಮ ಪ್ರಯತ್ನಗಳನ್ನು ಮತ್ತಷ್ಟು ಚುರುಕುಗೊಳಿಸಬೇಕು. ವ್ಯಾಪಾರಿಗಳು ಯಾವುದೇ ಹೊಸ ವ್ಯವಹಾರ ಮಾಡಲು ಹೋಗಬೇಡಿ, ಸ್ವಲ್ಪ ಕಾಯುವುದು ಒಳ್ಳೆಯದು. ಆರೋಗ್ಯದ ದೃಷ್ಟಿಯಿಂದ ದಿನವು ಸರಾಸರಿಯಾಗಿರುತ್ತದೆ.
ತುಲಾ ರಾಶಿ
ವ್ಯಾಪಾರಸ್ಥರಿಗೆ, ಉದ್ಯಮಿಗಳಿಗೆ ಈ ದಿನ ಅನುಕೂಲಕರವಾಗಿದೆ. ಹಣದ ವಿಷಯದಲ್ಲಿ ದಿನವು ಸಾಮಾನ್ಯವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ದೊಡ್ಡ ಸುಧಾರಣೆಯನ್ನು ನೀವು ಕಾಣುತ್ತೀರಿ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯ ಉತ್ತಮವಾಗಿರಲಿದೆ.
ವೃಶ್ಚಿಕ ರಾಶಿ
ಹಣದ ವಿಷಯದಲ್ಲಿ ಜಾಗ್ರತೆವಹಿಸಬೇಕು, ಹಣ ನಷ್ಟವಾಗಬಹುದು, ಜಾಗ್ರತೆ. ಕೆಲಸದ ಜಾಗದಲ್ಲಿ ತುಂಬಾ ಜಾಗರೂಕತೆಯಿಂದ ನಡೆದುಕೊಳ್ಳಬೇಕು. ಸಂಗಾತಿಗೆ ಅನಾರೋಗ್ಯವಿದ್ದರೆ ನೀವು ಅವರ ಆರೈಕೆ ಕಡೆಗೆ ಗಮನಹರಿಸಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಸುಸ್ತು ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ನಿಮ್ಮ ಬಿಡುವಿಲ್ಲದ ದಿನಚರಿಯಿಂದಾಗಿ ನೀವು ತುಂಬಾ ದಣಿದಿರುವಿರಿ.
ಧನು ರಾಶಿ
ವೃತ್ತಿ ಜೀವನದಲ್ಲಿ ಶುಭವಾಗಿದೆ. ವ್ಯಾಪಾರಿಗಳು ಕೂಡ ಅಪೇಕ್ಷಿತ ಲಾಭವನ್ನು ಪಡೆಯಬಹುದು. ನೀವು ಹೊಸ ಆಸ್ತಿಯನ್ನು ಖರೀದಿಸಲು ಯೋಜಿಸುತ್ತಿದ್ದರೆ ನಿಮಗೆ ಈ ಅವಧಿ ಉತ್ತಮವಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ.
ಮಕರ ರಾಶಿ
ನೀವು ಉದ್ಯೋಗ ಬದಲಾಯಿಸಲು ಪ್ರಯತ್ನಿಸುತ್ತಿದ್ದರೆ ನೀವು ನಿಮ್ಮ ಕೆಲಸವನ್ನು ಚುರುಕುಗೊಳಿಸಿ. ನೀವು ವ್ಯಾಪಾರ ಮಾಡುತ್ತಿದ್ದರೆ ಇಂದು ನಿಮಗೆ ಲಾಭದಾಯಕವಾಗಿರುತ್ತದೆ. ಖರ್ಚು ಅಧಿಕವಿರಲಿದೆ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಸಾಮಾನ್ಯ ದಿನವಾಗಿರುತ್ತದೆ.
ಕುಂಭ ರಾಶಿ
ಉದ್ಯೋಗಿಗಳು ಈ ದಿನ ತಾಳ್ಮೆಯಿಂದ ಇರಬೇಕು. ಆದರೆ ನಿರಾಸೆ ಪಡಬೇಡಿ, ಶೀಘ್ರದಲ್ಲೇ ನೀವು ನಿರೀಕ್ಷಿಸಿದಂತೆ ಫಲಿತಾಂಶಗಳನ್ನು ಪಡೆಯುತ್ತೀರಿ. ವ್ಯಾಪಾರಿಗಳು ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯ ಚೆನ್ನಾಗಿರಲಿದೆ.
ಮೀನ ರಾಶಿ
ಉದ್ಯೋಗಿಗಳಿಗೆ ಈ ದಿನ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಈ ದಿನ ಚೆನ್ನಾಗಿರಲಿದೆ. ಆದರೆ ನೀವು ಕೋಪ ನಿಯಂತ್ರಿಸಿ. ಹಣಕಾಸಿನ ಪರಿಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಮೈಕೈ ನೋವು ಇರಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











