Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಿನ ಭವಿಷ್ಯ: ಆಗಸ್ಟ್ 15,ಈ ದಿನ ದ್ವಾದಶ ರಾಶಿಗಳ ರಾಶಿಫಲ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ದಿನ ದ್ವಾದಶ ರಾಶಿಗಳಿಗೆ ಹೇಗಿದೆ?
ಮೇಷ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ. ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣವಾಗಲಿದೆ. ವ್ಯಾಪಾರಿಗಲಿಗು ಈ ದಿನ ಧನ ಲಾಭವಾಗಲಿದೆ.ವೈವಾಹಿಕ ಬದುಕು, ಕುಟುಂಬವ ಜೀವನ ಚೆನ್ನಾಗಿರಲಿದೆ. ಈ ದಿನ ಆರೋಗ್ಯವೂ ಉತ್ತಮವಾಗಿರಲಿದೆ.

ವೃಷಭ ರಾಶಿ
ಈ ದಿನ ನೀವು ಅರ್ಥಿಕ ವಿಷಯದಲ್ಲಿ ಜಾಗ್ರತೆವಹಿಸಬೇಕು. ಆತುರವು ದೊಡ್ಡ ನಷ್ಟವನ್ನು ಉಂಟುಮಾಡಬಹುದು. ನಿಮ್ಮ ಕೆಲಸದ ಸ್ಥಳದಲ್ಲಿ ನೀವು ಉತ್ತಮ ಯಶಸ್ಸನ್ನು ಪಡೆಯುತ್ತೀರಿ. ವ್ಯಾಪಾರಿಗಳು ಹೂಡಿಕೆಗೆ ಮುನ್ನ ಅದರ ಬಗ್ಗೆ ಸಂಪೂರ್ಣ ತಿಳಿದು ಮಾಡುವುದು ಒಳ್ಳೆಯದು. ನಿಮ್ಮ ಹಾಗೂ ಸಂಗಾತಿಯ ನಡುವೆ ಏನಾದರೂ ಸಮಸ್ಯೆ ಇದ್ದರೆ ಶಾಂತ ರೀತಿಯಿಂದ ಬಗೆಹರಿಸಲು ಪ್ರಯತ್ನಿಸಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಗಂಟಲು ಸೊಂಕಿನ ಸಮಸ್ಯೆವಿರಬಹುದು.
ಮಿಥುನ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಹಣಕ್ಕಾಗಿ ಮಾಡುವ ಪ್ರಯತ್ನಗಳು ಯಶಸ್ವಿಯಾಗುತ್ತವೆ . ವ್ಯಾಪಾರಿಗಳಿಗೆ ತಾಳ್ಮೆಯಿಂದಿರುವಂತೆ ಸಲಹೆ ನೀಡಲಾಗುವುದು. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯವಿರಬಹುದು. ಆರೋಗ್ಯಕ್ಕಾಗಿ ಜೀವಶೈಲಿ ಕಡೆಗೆ ಗಮನಹರಿಸಬೇಕು.
ಕರ್ಕ ರಾಶಿ
ಈ ದಿನ ಪ್ರಮುಖ ಸಮಸ್ಯೆ ನಿಮ್ಮ ಆಪ್ತ ವ್ಯಕ್ತಿಯಿಂದ ಬಗೆಹರಿಯಲಿದೆ. ಕೆಲಸದ ಸ್ಥಳದಲ್ಲಿ ಕೆಲ ಸಮಸ್ಯೆಗಳು ಎದುರಾಗಬಹುದು, ಅದರೆ
ಧನಾತ್ಮಕವಾಗಿರಿ . ವ್ಯಾಪಾರದಲ್ಲಿ ಮೋಸ ಹೋಗದಂತೆ ಜಾಗ್ರತೆವಹಿಸಬೇಕು, ಇತರರ ಮಾತು ಕಣ್ಮುಚ್ಚಿ ನಂಬೇಡಿ.
ಸಿಂಹ ರಾಶಿ
ಈ ದಿನ ನಿಮಗೆ ಶುಭವಾಗಿದೆ. ಸಂಬಂಧದಲ್ಲಿದ್ದ ಭಿನ್ನಾಭಿಪ್ರಾಯ ದೂರಾಗಲಿದೆ. ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಮನೆಯ ವಾತಾವರಣದಲ್ಲಿ ಸುಧಾರಣೆ ಕಂಡುಬರಲಿದೆ. ನಿಮ್ಮ ಸಂಗಾತಿಯ ನಡವಳಿಕೆಯಲ್ಲಿ ಧನಾತ್ಮಕ ಬದಲಾವಣೆ ಇರುತ್ತದೆ. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.
ಕನ್ಯಾ ರಾಶಿ
ಕೆಲಸದ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು, ಆದ್ದರಿಂದ ನೀವು ಅತಿಯಾಗಿ ಕೆಲಸದ ಒತ್ತಡ ತೆಗೆದುಕೊಳ್ಳಬೇಡಿ. ಮನೆಯ ಹಿರಿಯರ ಜೊತೆಗೆ ಗೌರವದಿಂದ ನಡೆದುಕೊಳ್ಳಿ, ಅವರ ಸಲಹೆ ತಳ್ಳಿ ಹಾಕುವ ಪ್ರಯತ್ನ ಮಾಡಬೇಡಿ. ವ್ಯಾಪಾರಿಗಳಿಗೆ ಹಣದ ಸಮಸ್ಯೆವಿರಬಹುದು. ಕುಟುಂಬ ಜೀವನ ಚೆನ್ನಾಗಿರಲಿದೆ. ಅರೋಗ್ಯದ ಕಡೆಗೆ ಗಮನಹರಿಸಿ.
ತುಲಾ ರಾಶಿ
ಪ್ರತಿಕೂಲ ಸಂದರ್ಭಗಳಲ್ಲಿ ತಾಳ್ಮೆಯಿಂದಿರಿ ಇಲ್ಲದಿದ್ದರೆ ನಿಮ್ಮ ಸಮಸ್ಯೆಗಳು ಮತ್ತಷ್ಟು ಹೆಚ್ಚಾಗಬಹುದು. ವ್ಯಾಪಾರಿಗಳಿಗೆ ಕೆಲಸದ ಜಾಗದಲ್ಲಿ ನಿರ್ಲಕ್ಷ್ಯ ದುಬಾರಿಯಾಗಬಹುದು. ಸಂಬಂಧಗಳನ್ನು ಸುಧಾರಿಸುವ ನಿಮ್ಮ ಪ್ರಯತ್ನಗಳು ಯಶಸ್ವಿಯಾಗುತ್ತವೆ. ನಿಮ್ಮ ನಡುವೆ ಎಲ್ಲವೂ ಸರಿಯಾಗಲಿದೆ. ಆರೋಗ್ಯದ ಬಗ್ಗೆ ಗಮನಹರಿಸಬೇಕು.
ವೃಶ್ಚಿಕ ರಾಶಿ
ಕೆಲಸಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ ಹೆಚ್ಚಾಗಬಹುದು, ಬೇಡದ ವಿಷಯಗಳಲ್ಲಿ ನಿಮ್ಮ ಸಮಯವನ್ನು ವ್ಯರ್ಥ ಮಾಡುವ ಬದಲು, ನಿಮ್ಮ ಪ್ರಮುಖ ಕಾರ್ಯಗಳ ಮೇಲೆ ಕೇಂದ್ರೀಕರಿಸಿ. ಆರೋಗ್ಯ ಸಂಬಂಧಿ ಸಮಸ್ಯೆಗಳಿರಬಹುದು. ಹಣದ ವಿಷಯಗಳಲ್ಲಿ ನೀವು ಹೆಚ್ಚು ಜಾಗರೂಕರಾಗಿರಬೇಕು. ಉದ್ಯೋಗ: ಬಡ್ತಿಯನ್ನು ಸಾಧಿಸಲು ಹೆಚ್ಚು ಶ್ರಮಿಸಬೇಕಾಗುತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಈ ದಿನ ಆರ್ಥಿಕವಾಗಿ ಉತ್ತಮವಲ್ಲ, ಅಲ್ಲದೆ ಕೆಲಸದ ಜಾಗದಲ್ಲಿಯೂ ಸವಾಲುಗಳು ಎದುರಾಗಬಹುದು. ವ್ಯಾಪಾರಿಗಳು
ದೊಡ್ಡ ಲಾಭಕ್ಕಾಗಿ ಸಣ್ಣ ಲಾಭವನ್ನು ನಿರ್ಲಕ್ಷಿಸಬೇಡಿ. ಹೂಡಿಕೆ ಇತ್ಯಾದಿಗಳಿಗೆ ಈ ಸಮಯ ಸೂಕ್ತವಲ್ಲ. ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮುನ್ನ ಹಿರಿಯರ ಜೊತೆ ಚರ್ಚಿಸುವುದು ಒಳ್ಳೆಯದು. ಆರೋಗ್ಯದ ಕಡೆ ಗಮನಹರಿಸಿ.
ಮಕರ ರಾಶಿ
ಯಾವುದೇ ಹೊಸ ವ್ಯಾಪಾರ ಯೋಜನೆಯನ್ನು ಕಾರ್ಯಗತಗೊಳಿಸಲು ಸರಿಯಾದ ಸಮಯ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯಾಗುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಲಾಭವಾಗಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯ ಸಮಸ್ಯೆ ಇದ್ದರೆ ಸುಧಾರಣೆ ಕಂಡು ಬರಲಿದೆ.
ಕುಂಭ ರಾಶಿ
ಕೆಲಸದ ಸ್ಥಳದಲ್ಲಿ ನೀವು ಜಾಗರೂಕರಾಗಿರಬೇಕು. ವ್ಯಾಪಾರಿಗಳಿಗೆ ಅಡೆತಡೆ ಇರಬಹುದು. ಈ ದಿನ ನಿಮ್ಮ ನಿರ್ಧಾರಗಳನ್ನು ನೀವು ಬಹಳ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಬೇಕಾಗುತ್ತದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಅತಿಯಾದ ಕರಿದ ಮತ್ತು ಮಸಾಲೆಯುಕ್ತ ಆಹಾರ ಆರೋಗ್ಯ ಹದಗೆಡಿಸುತ್ತೆ.
ಮೀನ ರಾಶಿ
ನೀವು ಅನಗ್ಯತ ಚಿಂತೆ ಮಾಡದೆ ಕೆಲಸದ ಕಡೆಗೆ ಗಮನಹರಿಸಿ. ಖರ್ಚು ಹೆಚ್ಚಾಗಲಿದೆ, ಖರ್ಚು ನಿಯಂತ್ರಿಸುವುದು ಒಳ್ಳೆಯದು. ಕುಟುಂಬ ಜೀವನದಲ್ಲಿ ಖುಷಿ, ನೆಮ್ಮದಿ ಇರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಅಹಾರಕ್ರಮದತ್ತ ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications