Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಿನ ಭವಿಷ್ಯ: ಶುಭ ದಿನ, ಜುಲೈ 15ರ ರಾಶಿಫಲ ಪ್ರಕಾರ ದ್ವಾದಶ ರಾಶಿಗಳಿಗೆ ಈ ದಿನ ಹೇಗಿದೆ?
ವೈದಿಕ ಶಾಸ್ತ್ರದ ಪ್ರಕಾರ ಈ ದಿನದ(ಜುಲೈ 15 ರಾಶಿಫಲ ನೋಡೋಣ:
ಮೇಷ ರಾಶಿ
ಈ ದಿನ ಕೆಲಸದ ಕಡೆಗೆ ಗಮನಹರಿಸಬೇಕು, ಇಲ್ಲದಿದ್ದರೆ ನಷ್ಟ ಉಂಟಾಗಬಹುದು, ವ್ಯಾಪಾರಿಗಳಿಗೆ ಈ ದಿನ ಧನಾತ್ಮಕವಾಗಿದೆ, ಪ್ರೀತಿಯಲ್ಲಿದ್ದರೆ ನಿಮ್ಮ ಪ್ರೀತಿಗೆ ಮನೆಯವರ ಒಪ್ಪಿಗೆ ಸಿಗಲಿದೆ, ಆರೋಗ್ಯದ ಬಗ್ಗೆ ಜಾಗೃತರಾಗಿರಿ.

ವೃಷಭ ರಾಶಿ
ಈ ದಿನ ನಿಮಗೆ ವಿಶೇಷವಾಗಿರಲಿದೆ. ಕೆಲವೊಂದು ಪ್ರಮುಖ ನಿರ್ಧಾರಗಳಲ್ಲಿ ನೀವು ಹಿರಿಯರ ಅಭಿಪ್ರಾಯ ಕೇಳಬೇಕು. ಅದರಲ್ಲಿ ಆಸ್ತಿ ಸಂಬಂಧಿತ ವ್ಯವಹಾರ ಮಾಡುವುದಾದರೆ ಗಮನಹರಿಸಿ. ನೀವು ನಕರಾತ್ಮಕ ಯೋಚನೆಗಳಿಂದ ದೂರವಿರಬೇಕು. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯಗಳಿರಬಹುದು. ಆರೋಗ್ಯವೂ ಸರಿಯಿರಲ್ಲ, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಮಿಥುನ ರಾಶಿ
ಈ ದಿನ ಖುಷಿಯ ಸುದ್ದಿ ಪಡೆಯುತ್ತೀರಿ, ಆರ್ಥಿಕವಾಗಿ ಉತ್ತಮವಾಗಿದೆ, ಮನೆಯಲ್ಲಿ ಸೌಕರ್ಯ ಹೆಚ್ಚಾಗಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ.
ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ, ಸಂಬಂಧದ ವಿಷಯಕ್ಕೆ ಬಂದರೆ ಚಿಕ್ಕ ಪುಟ್ಟ ವಿಷಯಗಳನ್ನೂ ನಿರ್ಲಕ್ಷ್ಯ ಮಾಡಬೇಡಿ. ಆರೋಗ್ಯ ಚೆನ್ನಾಗಿರಲಿದೆ, ಆರೋಗ್ಯ ಸಮಸ್ಯೆ ಇದ್ದರೆ ಆರೋಗ್ಯದಲ್ಲಿ ಸುಧಾರಣೆ ಕಂಡು ಬರಲಿದೆ.
ಕರ್ಕ ರಾಶಿ
ಈ ದಿನ ನೀವು ಸಕಾರಾತ್ಮಕತೆಯನ್ನು ಅನುಭವಿಸುವಿರಿ. ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳಲ್ಲಿ ಖುಷಿಯ ಸುದ್ದಿ ಪಡೆಯುತ್ತೀರಿ. ವೃತ್ತಿ ಬದುಕಿಗೆ ಸಂಂಧಿಸಿದ ಯಾವುದೇ ಸಮಸ್ಯೆ ಬಗೆಹರಿಯಲಿದೆ. ಕುಟುಂಬದಲ್ಲಿ ಖುಷಿಯ ವಾತಾವರಣ ಇರಲಿದೆ. ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಪರಿಹಾರ ಪಡೆಯುತ್ತೀರಿ,
ಸಿಂಹ ರಾಶಿ'
ಕುಟುಂಬ ಜೀವನ ಚೆನ್ನಾಗಿರಲಿದೆ, ಯಾವುದೇ ಚಿಂತೆ ಅಥವಾ ಸಮಸ್ಯೆವಿದ್ದರೆ ಅದು ಕಡಿಮೆಯಾಗುವುದು. ವ್ಯಾಪಾರಿಗಳಾಗಿದ್ದರೆ ಹಣಕಾಸಿನ ವ್ಯವಹಾರ ಮಾಡುವಾಗ ಜಾಗ್ರತೆವಹಿಸಬೇಕು. ಕುಟುಂಬದಲ್ಲಿ ಏನಾದರೂ ಭಿನ್ನಾಭಿಪ್ರಾಯ ಉಂಟಾಗಿದ್ದರೆ ಅದು ದೂರಾಗಲಿದೆ, ವೈವಾಹಿಕ ಜೀವನದಲ್ಲಿ ಸಮಸ್ಯೆ ಉಂಟಾಗದಂತೆ ಜಾಗ್ರತೆವಹಿಸಿ, ಅತಿಯಾದ ಓಡಾಟದಿಂದಾಗಿ ಸುಸ್ತು ಇರಲಿದೆ.
ಪ್ರೀತಿ: ನಿಮ್ಮ ಸಂಗಾತಿಯೊಂದಿಗೆ ಘರ್ಷಣೆ ಉಂಟಾಗಬಹುದು. ನಿಮ್ಮ ನಡುವಿನ ವ್ಯತ್ಯಾಸಗಳು ಆಳವಾದವು.
ಆರೋಗ್ಯ: ಅತಿಯಾಗಿ ಓಡುವುದರಿಂದ ಸುಸ್ತಾಗುವಿರಿ.
ಕನ್ಯಾ ರಾಶಿ
ರಾಜಕಾರಣಿಗಳಿಗೆ ಈ ದಿನ ಉತ್ತಮವಾಗಿದೆ, ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯಾಗುವ ಸಾಧ್ಯತೆ ಇದೆ. ಆದಾಯದಲ್ಲಿ ಹೆಚ್ಚಳವಾಗಬಹುದು. ವ್ಯಾಪಾರಿಗಳು ತಮ್ಮ ವ್ಯವಹಾರದಲ್ಲಿ ಎದುರಿಸುತ್ತಿದ್ದ ಸಮಸ್ಯೆಗಳಿದ್ದ ಪರಿಹಾರ ಪಡೆಯುತ್ತಾರೆ. ಹಣಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ. ವೈವಾಹಿಕ ಜೀವನ, ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಬೇಡ.
ತುಲಾ ರಾಶಿ
ಹಣದ ವಿಷಯದಲ್ಲಿ ಯಾವುದೇ ರೀತಿಯಲ್ಲಿ ಅಜಾಗರೂಕರಾಗಿರಬೇಡಿ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ನಿಮ್ಮ ಕೆಲಸದಲ್ಲಿ ಬರುವ ಅಡೆತಡೆಗಳು ಸಹ ನಿವಾರಣೆಯಾಗಬಹುದು. ಮನೆಯ ಹಿರಿಯರ ವಿಶ್ವಾಸವನ್ನು ಗೆಲ್ಲುವಲ್ಲಿ ನೀವು ಯಶಸ್ವಿಯಾಗುತ್ತೀರಿ. ವೈವಾಹಿಕ ಜೀವನದ ಬಗ್ಗೆ ಹೆಚ್ಚು ಗಮನ ಹರಿಸಬೇಕಾಗುತ್ತದೆ.
ಆರೋಗ್ಯದ ಬಗ್ಗೆ ಹೇಳುವುದಾದರೆ ಚರ್ಮ ಸಂಬಂಧಿತ ಸಮಸ್ಯೆವಿರಬಹುದು.
ವೃಶ್ಚಿಕ ರಾಶಿ
ಕೆಲಸಕ್ಕೆ ಸಂಬಂಧಿಸಿದ ಹೆಚ್ಚಿನ ಒತ್ತಡವನ್ನು ತೆಗೆದುಕೊಳ್ಳಬೇಡಿ, ಇದು ಆರೋಗ್ಯದ ಮೇಲೆ ಮೇಲೆ ಪರಿಣಾಮ ಬೀರುವುದು, ಆಸಕ್ತಿಗೆ ಸಂಬಂಧಿಸಿದ ಕೆಲಸದ ಮೇಲೆ ಗಮನ ಹರಿಸಲು ಈ ದಿನವು ಸೂಕ್ತವಾಗಿದೆ. ವ್ಯಾಪಾರಿಗಳು ಕಠಿಣ ಪರಿಶ್ರಮಕ್ಕೆ ತಕ್ಕ ಫಲಿತಾಂಶವನ್ನು ಪಡೆಯಬಹುದು. ಕುಟುಂಬದಲ್ಲಿ ಹಿರಿಯರಿದ್ದರೆ ಅವರಿಗೆ ಆರೋಗ್ಯ ಸಂಬಂಧಿಸಿದ ಸಮಸ್ಯೆಗಳಿರಬಹುದು. ಆರೋಗ್ಯದ ಕಡೆಗೆ ಗಮನಹರಿಸಿ.
ಧನು ರಾಶಿ
ಹಣದ ವಿಷಯದಲ್ಲಿ ಗಮನಹರಿಸಿ, ವ್ಯಾಪಾರಿಗಳು ತಮ್ಮ ವಿರೋಧಿಗಳ ಬಗ್ಗೆ ಜಾಗರೂಕರಾಗಿರಿ ಇಲ್ಲದಿದ್ದರೆ ನೀವು ನಷ್ಟವನ್ನು ಅನುಭವಿಸಬಹುದು. ಇಂದು ನೀವು ಅನಗತ್ಯವಾಗಿ ಓಡಾಡಬೇಕಾಗಬಹುದು. ಉದ್ಯೋಗಿಗಳ ಕೆಲಸ ಕಾರ್ಯವು ಪೂರ್ಣಗೊಳ್ಳಲಿದೆ. ನಿಮ್ಮ ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರಲಿದೆ. ಅವಾಹಿತರಿಗೆ ಮದುವೆ ಪ್ರಸ್ತಾಪ ಬರಲಿದೆ.
ಮಕರ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಅದೃಷ್ಟದ ಬೆಂಬಲ ಇರುವುದರಿಂದ ಎಲ್ಲಾ ಬಾಕಿ ಕೆಲಸಗಳು ಪೂರ್ಣಗೊಳ್ಳುತ್ತವೆ. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಬೇಡ. ಹಣದ ವಿಷಯದಲ್ಲಿ ಯಾರನ್ನೂ ಹೆಚ್ಚು ನಂಬಬೇಡಿ, ಇಲ್ಲದಿದ್ದರೆ ನೀವು ಮೋಸ ಹೋಗಬಹುದು. ಸಂಗಾತಿ ಕೋಪಗೊಂಡಿದ್ದರೆ ಅವರ ಮನವೊಲಿಸಲು ಪ್ರಯತ್ನಿಸಿ.
ಕುಂಭ ರಾಶಿ
ಬೇರೆಯವರ ಮಾತಿಗೆ ಮರುಳಾಗಿ ಮೋಸ ಹೋಗದಂತೆ ಜಾಗ್ರತೆವಹಿಸಿ. ವ್ಯಾಪಾರಿಗಳು ನಿರ್ಧಾರಗಳನ್ನು ನೀವು ಪೂರ್ಣ ವಿಶ್ವಾಸದಿಂದ ತೆಗೆದುಕೊಳ್ಳುತ್ತೀರಿ. ಉದ್ಯೋಗಿಗಳ ಕೆಲವು ಪ್ರಮುಖ ಕೆಲಸಗಳು ಅಪೂರ್ಣವಾಗಿ ಉಳಿಯುತ್ತವೆ. ಮನೆಯ ವಾತಾವರಣ ಚೆನ್ನಾಗಿರಲಿದೆ, ವೈವಾಹಿಕ ಜೀವನದಲ್ಲಿ ನಡೆಯುತ್ತಿರುವ ಸಮಸ್ಯೆಗಳು ಬಗೆಹರಿಯಲಿವೆ. ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ.
ಮೀನ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಆರ್ಥಿಕ ಪರಿಸ್ಥಿತಿ ಬಲವಾಗಿರುತ್ತದೆ. ನಿಮ್ಮ ಕುಟುಂಬದ ವ್ಯವಹಾರದೊಂದಿಗೆ ನೀವು ಸಂಬಂಧ ಹೊಂದಿದ್ದರೆ, ನಿಮ್ಮ ಜವಾಬ್ದಾರಿಗಳನ್ನು ನೀವು ಉತ್ತಮವಾಗಿ ನಿರ್ವಹಿಸುತ್ತೀರಿ. ಕಛೇರಿಯಲ್ಲಿ ನೀವು ನಿಮ್ಮ ಕೆಲಸವನ್ನು ಬಹಳ ಎಚ್ಚರಿಕೆಯಿಂದ ಮಾಡಬೇಕಾಗುತ್ತದೆ. ವಿವಾಹಿತರಿಗೆ ಈ ದಿನವು ಸ್ವಲ್ಪ ಕಷ್ಟಕರವಾಗಿರುತ್ತದೆ. ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ. ಆರೋಗ್ಯದ ಕಡೆಗೆ ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications