Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಿನ ಭವಿಷ್ಯ: ಆಗಸ್ಟ್ 16, ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು, ಈ ದಿನ ರಾಶಿಫಲ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ದಿನ ದ್ವಾದಶ ರಾಶಿಗಳಿಗೆ ಹೇಗಿದೆ?
ಮೇಷ ರಾಶಿ
ಕೆಲಸದಲ್ಲಿ ಈ ದಿನ ಜಾಗ್ರತೆವಹಿಸಿ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯಗಳಿರಬಹುದು. ಈ ದಿನ ಆರೋಗ್ಯ ಸಂಬಂಧಿ ಸಮಸ್ಯೆಗಳಿರಬಹುದು. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ವೃಷಭ ರಾಶಿ
ಈ ದಿನ ನಿಮಗೆ ಶುಭವಾಗಿದೆ. ಕೆಲಸ ಹುಡುಕುತ್ತಿದ್ದರೆ ಶೀಘ್ರವೇ ಕೆಲಸ ಸಿಗಲಿದೆ. ಆಸ್ತಿಗೆ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ. ವ್ಯಾಪಾರಿಗಳು ದೊಡ್ಡ ಹಣಕಾಸಿನ ವಹಿವಾಟು ಮಾಡದಂತೆ ಜಾಗ್ರತೆವಹಿಸಿ. ವಿವಾಹಿತರಿಗೆ ಈ ದಿನ ಉತ್ತಮವಾಗಿರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ. ಆಹಾರಕ್ರಮದ ಕಡೆಗೆ ಗಮನಹರಿಸಿ.
ಮಿಥುನ ರಾಶಿ
ವೃತ್ತಿ ಸಂಬಂಧಿಸಿದ ಸಮಸ್ಯೆ ದೂರಾಗಲಿದೆ, ವ್ಯಾಪಾರಿಗಳು ಇತ್ತೀಚೆಗೆ ಕೆಲವು ಬದಲಾವಣೆಗಳನ್ನು ಮಾಡಿದ್ದರೆ, ಅದು ಉತ್ತಮ ಫಲಿತಾಂಶಗಳನ್ನು ನೀಡಬಹುದು. ವಿವಾಹಿತರ ನಡುವೆ ಕೆಲ ಭಿನ್ನಾಭಿಪ್ರಾಯವಿರಬಹುದು, ಆದರೆ ಸಮಸ್ಯೆ ದೊಡ್ಡದಾಗಲು ಬಿಡಬೇಡಿ, ಆರೋಗ್ಯದ ಬಗ್ಗೆ ಹೇಳುವುದಾದರೆ ಬೆನ್ನು ಅಥವಾ ಭುಜಕ್ಕೆ ಸಂಬಂಧಿಸಿದ ಸಮಸ್ಯೆಗಳಿರಬಹುದು.
ಕರ್ಕ ರಾಶಿ
ಕೆಲಸದ ಕಡಡೆಗೆ ಗಮನಹರಿಸಿ, ವ್ಯಾಪಾರಿಗಳು ಲಾಭ ಗಳಿಸಲು ಅಡ್ಡಮಾರ್ಗ ಹಿಡಿಯಬೇಡಿ, ಈ ದಿನ ಪ್ರಮುಖ ನಿರ್ಧಾರವನ್ನು ಯೋಚಿಸದೆ ತೆಗೆದುಕೊಳ್ಳಬೇಡಿ. ಕುಟುಂಬದಲ್ಲಿನ ಸಮಸ್ಯೆಯತ್ತ ಗಮನಹರಿಸಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಮೈಕೈ ನೋವಿನ ಸಮಸ್ಯೆವಿರಬಹುದು.
ಸಿಂಹ ರಾಶಿ
ಈ ದಿನ ಕೆಲಸದಲ್ಲಿ ನಿಮಗೆ ಉತ್ತಮವಾಗಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ, ಪ್ರೇಮಿಗಳು ತಮ್ಮ ಪ್ರೀತಿಗೆ ಮನೆಯವರ ಒಪ್ಪಿಗೆ ಪಡೆಯಲು ಈ ಅವಧಿ ಅನುಕೂಲಕರವಾಗಿದೆ, ಆರೋಗ್ಯಕ್ಕಾಗಿ ಆರೋಗ್ಯಕರ ಜೀವನಶೈಲಿಯತ್ತ ಗಮನಹರಿಸಿ.
ಕನ್ಯಾ ರಾಶಿ
ಯಾರ ಜೀವನದಲ್ಲಿಯೂ ಹೆಚ್ಚು ಹಸ್ತಕ್ಷೇಪ ಮಾಡಬೇಡಿ. ಉದ್ಯೋಗಕ್ಕಾಗಿ ಮಾಡುವ ಪ್ರಯತ್ನಗಳು ಯಶಸ್ವಿಯಾಗಬಹುದು. ವ್ಯಾಪಾರಿಗಳಿಗೆ ಪರಿಸ್ಥಿತಿಯು ಅನುಕೂಲಕರವಾಗಿರುತ್ತದೆ, ಕುಟುಂಬದಲ್ಲಿ ವಾತಾವರಣ ಉತ್ತಮವಾಗಿರಲಿದೆ. ಮಧುಮೇಹಿಗಳು ಆಹಾರಕ್ರಮದತ್ತ ಗಮನಹರಿಸಿ.
ತುಲಾ ರಾಶಿ
ನ್ಯಾಯಾಲಯದಲ್ಲಿ ಯಾವುದೇ ಪ್ರಕರಣ ನಡೆಯುತ್ತಿದ್ದರೆ, ಆದಷ್ಟು ಬೇಗ ಅದನ್ನು ಇತ್ಯರ್ಥಪಡಿಸಲು ಪ್ರಯತ್ನಿಸಿ. ವ್ಯಾಪಾರಿಗಳು ಯಾವುದೇ ದೊಡಡ್ಡ ಹೂಡಿಕೆ ಮಾಡಬೇಡಿ.
ನೀವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ, ಖಂಡಿತವಾಗಿಯೂ ನಿಮ್ಮ ಕುಟುಂಬದ ಸದಸ್ಯರ ಅಭಿಪ್ರಾಯವನ್ನು ತೆಗೆದುಕೊಳ್ಳಿ. ವೈವಾಹಿಕ ಜೀವನ ಚೆನ್ನಾಗಿರಲಿದೆ.
ಕೆಲಸದ ಹೊರೆ ಅಧಿಕವಿರಲಿದೆ.
ವೃಶ್ಚಿಕ ರಾಶಿ
ಈ ದಿನ ಹೆಚ್ಚು ಶ್ರಮ ಇರುತ್ತದೆ, ಆರ್ಥಿಕವಾಗಿ ಉತ್ತಮವಾಗಿದೆ, ಉದ್ಯೋಗಿಗಳಿಗೆ ಕೆಲಸ-ಕಾರ್ಯಗಳು ಯೋಜನೆಯಂತೆಯೇ ನಡೆಯುವುದರಿಂದ ಖುಷಿಯಾಗಿರುತ್ತೀರಿ. ಆದರೆ ವೈವಾಹಿಕ ಬದುಕಿನ ಬಗ್ಗೆ ನೋಡುವುದಾದರೆ ಸಂಗಾತಿಯೊಂದಿಗೆ ಕೆಲ ಭಿನ್ನಾಭಿಪ್ರಾಯವಿರಬಹುದು. ಆರೋಗ್ಯ ಉತ್ತಮವಾಗಿರಲಿದೆ.
ಧನು ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ಆರ್ಥಿಕವಾಗಿಯು ಈ ದಿನ ಪ್ರಯೋಜನಕಾರಿಯಾಗಿದೆ. ಹೂಡಿಕೆಗೆ ಈ ದಿನ ಉತ್ತಮವಾಗಿದೆ. ಕುಟುಂಬಕ್ಕೆ ಸಂತೋಷದ ಸುದ್ದಿ ಸಿಗಲಿದೆ, ಕುಟುಂಬದವರ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯ ಸಮಸ್ಯೆ ಇದ್ದರೆ ಸುಧಾರಣೆ ಕಮಡು ಬರುವುದು.
ಮಕರ ರಾಶಿ
ಈ ದಿನ ಉತ್ತಮವಾಗಿರಲಿದೆ. ನಿಮ್ಮ ಎಲ್ಲಾ ಕೆಲಸಗಳು ಯೋಜನೆಯಂತೆಯೇ ಪೂರ್ಣಗೊಳ್ಳುತ್ತದೆ. ಕುಟುಂಬದ ವ್ಯವಹಾರದೊಂದಿಗೆ ನೀವು ಸಂಬಂಧ ಹೊಂದಿದ್ದರೆ ಈ ದಿನ ಲಾಭ ಗಳಿಸುತ್ತೀರಿ. ವೈವಾಹಿಕ ಬದುಕಿನ ಕಡೆಗೆ ಗಮನಹರಿಸಿ. ಆರೋಗ್ಯದ ಬಗ್ಗೆ ನೋಡುವುದಾದರೆ ಅಲರ್ಜಿ ಸಮಸ್ಯೆವಿರಬಹುದು.
ಕುಂಭ ರಾಶಿ
ಕೆಲಸದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ಈ ದಿನ ಹಣದ ಖರ್ಚು ಹೆಚ್ಚಿರಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದದೆ, ಪ್ರತಿಕೂಲ ಸಂದರ್ಭದಲ್ಲಿ ಸಂಗಾತಿಯ ಬೆಂಬಲ ಸಿಗಲಿದೆ. ಆರೋಗ್ಯದ ಕಡೆಗೆ ಹೆಎಚ್ಚಿನ ಗಮನಹರಿಸಿ.
ಮೀನ ರಾಶಿ
ಈ ದಿನ ಖುಷಿಯಾಗಿರುತ್ತೀರಿ, ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ನಡೆಯುವುದರಿಂದ ಆತ್ಮವಿಶ್ವಾಸ ಹೆಚ್ಚಾಗುವುದು. ವ್ಯಾಪಾರಿಗಳು ಈ ಅವಧಿಯಲ್ಲಿ ದೊಡ್ಡ ಹೂಡಿಕೆ ಮಾಡಬೇಡಿ. ಮನೆಯ ವಾತಾವರಣ ಚೆನ್ನಾಗಿರಲಿದೆ, ಪ್ರೇಮಿಗಳಿಗೆ ಈ ದಿನ ವಿಶೇಷವಾಗಿರಲಿದೆ. ಆರೋಗ್ಯ ಉತ್ತಮವಾಗಿರುತ್ತದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications