Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಿನ ಭವಿಷ್ಯ: ಶುಭ ದಿನ, ಜುಲೈ 16ರ ರಾಶಿಫಲ ಹೇಗಿದೆ?
ವೈದಿಕ ಶಾಸ್ತ್ರದ ಪ್ರಕಾರ ಈ ದಿನದ ರಾಶಿಫಲ ನೋಡೋಣ:
ಮೇಷ ರಾಶಿ
ನೀವು ಯಾವುದೇ ನಿರ್ಧಾರ ತೆಗೆದುಕೊಳ್ಳುವುದಾದರೆ ಹೃದಯದ ಮಾತಿಗಿಂತ ಬುದ್ಧಿಯ ಮಾತು ಕೇಳುವುದು ಒಳ್ಳೆಯದು, ಹೊರಗಿನವರನ್ನು ಅತಿಯಾಗಿ ನಂಬಬೇಡಿ.
ವ್ಯಾಪಾರಿಗಳು ಈ ದಿನ ಯಾವುದೇ ಹೂಡಿಕೆ ಮಾಡದಂತೆ ಸಲಹೆ ನೀಡಲಾಗುವುದು. ಕೆಲಸದಲ್ಲಿ ತಪ್ಪುಗಳಾಗದಂತೆ ಜಾಗ್ರತೆವಹಿಸಿ, ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯಕ್ಕಾಗಿ ನೀವು ಆಹಾರಕ್ರಮದತ್ತ ಗಮನಹರಿಸಬೇಕು.

ವೃಷಭ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಕೆಲಸ ಕಾರ್ಯಗಳಲ್ಲಿ ಯಾವುದೇ ಅಡೆತಡೆ ಉಂಟಾಗುವುದಿಲ್ಲ, ನಿಮ್ಮ ಪ್ರಯತ್ನಗಳಲ್ಲಿ ನೀವು ಯಶಸ್ಸನ್ನು ಪಡೆಯಬಹುದು. ವೈವಾಹಿಕ ಜೀವನ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಧನಾತ್ಮಕವಾಗಿದೆ, ಏನಾದರೂ ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಮಾಡಲು ಹೋಗಬೇಡಿ.
ಮಿಥುನ ರಾಶಿ
ಈ ದಿನ ಆರ್ಥಿಕವಾಗಿ ಉತ್ತಮವಲ್ಲ, ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಅಡೆತಡೆಗಳು ಇರಬಹುದು, ಆದರೆ ಈ ಸಮಸ್ಯೆ ಶೀಘ್ರದಲ್ಲೇ ದೂರವಾಗುತ್ತದೆ. ಹೊಸ ಉದ್ಯೋಗವನ್ನು ಹುಡುಕಲು ಸಮಯವು ಅನುಕೂಲಕರವಾಗಿರುತ್ತದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯ ಸಂಬಂಧಿತ ಸಮಸ್ಯೆಗಳಿರಬಹುದು.
ಕರ್ಕ ರಾಶಿ
ಈ ದಿನ ಕೋಪ ನಿಯಂತ್ರಿಸಿದಷ್ಟೂ ಒಳ್ಳೆಯದು. ವ್ಯಾಪಾರಿಗಳು ದುರಾಸೆಪಟ್ಟರೆ ನೀವು ಲಾಭದ ಬದಲು ನಷ್ಟವನ್ನು ಅನುಭವಿಸಬಹುದು. ಕೆಲಸದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ಕುಟುಂಬದಲ್ಲಿ ವಾತಾವರಣ ಅಷ್ಟೊಂದು ಚೆನ್ನಾಗಿರಲ್ಲ, ನೀವು ಕೋಪ ಪಡದೆ, ತಾಳ್ಮೆಕಳೆದುಕೊಳ್ಳದೆ ಪರಿಸ್ಥಿತಿ ನಿಭಾಯಿಸಿದರೆ ಒಳ್ಳೆಯದು.
ಸಿಂಹ ರಾಶಿ'
ಆರ್ಥಿಕವಾಗಿ ನಿಮಗೆ ಉತ್ತಮವಾಗಿದೆ, ವ್ಯವಹಾರದಲ್ಲಿ ಪ್ರಗತಿ ಕಂಡು ಬರಲಿದೆ, ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಭಿನ್ನಾಭಿಪ್ರಾಯ ಕಡಿಮೆಯಾಗಲಿದೆ. ಕೆಲಸದ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು, ಜಾಗ್ರತೆವಹಿಸಿ.
ಕನ್ಯಾ ರಾಶಿ
ಅನಗ್ಯತ ಕೋಪ ಒಳ್ಳೆಯದಲ್ಲ, ಅಲ್ಲದೆ ಖರ್ಚು ನಿಯಂತ್ರಿಸಿದರೆ ಹಣಕಾಸಿನ ಸಮಸ್ಯೆ ಉಂಟಾಗುವುದನ್ನು ತಡೆಗಟ್ಟಬಹುದು. ವ್ಯಾಪಾರಿಗಳು ಹಣಕಾಸಿನ ವಹಿವಾಟು ಮಾಡುವಾಗ ಹೆಚ್ಚು ಜಾಗರೂಕರಾಗಿರಿ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಬೇಡ.
ತುಲಾ ರಾಶಿ
ಕುಟುಂಬದಲ್ಲಿ ಸಂತೋಷ ಇರಲಿದೆ. ಭವಿಷ್ಯದಲ್ಲಿ ಹಣಕಾಸಿನ ವಹಿವಾಟುಗಳನ್ನು ಚಿಂತನಶೀಲವಾಗಿ ಮಾಡಿ. ಈ ದಿನ ಯಾವುದೇ ನಿರ್ಧಾರವಾಗಿರಲಿ ಆಲೋಚಿಸಿ ತೆಗೆದುಕೊಳ್ಳಿ. ವೃತ್ತಿ ಬದುಕಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ವೈವಾಹಿಕ ಜೀವನದಲ್ಲಿ ಖುಷಿ ಇರಲಿದೆ, ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿರಬಹುದು.
ವೃಶ್ಚಿಕ ರಾಶಿ
ನೆಗೆಟಿವ್ ಯೋಚನೆಯಿಂದ ಹೊರಬನ್ನಿ, ನಿಮ್ಮ ಸಮಸ್ಯೆಗೆ ಸಮಯ ಬಂದಾಗ ಖಂಡಿತವಾಗಿಯೂ ಉತ್ತಮ ಪರಿಹಾರ ಸಿಗಲಿದೆ. ವ್ಯಾಪಾರಿಗಳು ಯಾವುದೇ ದಾಖಲೆಗಳನ್ನು ತರಾತುರಿಯಲ್ಲಿ ಮಾಡಬೇಡಿ. ಪ್ರೇಮಿಗಳಿಗೆ ಈ ಅವಧಿ ಅನುಕೂಲಕರವಾಗಿದೆ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಧನು ರಾಶಿ
ಈ ದಿನ ಕೆಲ ಚಿಂತೆಗಳು ಕಾಡಬಹುದು, ಆದರೆ ನಿಮ್ಮ ಸಮಸ್ಯೆ ಸುಲಭವಾಗಿ ಪರಿಹರಿಸಲಾಗುವುದು. ನೀವು ದೊಡ್ಡ ಹೂಡಿಕೆ ಮಾಡಲು ಯೋಜಿಸುತ್ತಿದ್ದರೆ ಅದರ ಮೇಲೆ ಕೆಲಸ ಮಾಡಲು ದಿನವು ಅನುಕೂಲಕರವಾಗಿರುತ್ತದೆ. ನಿಮ್ಮ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಿ. ಕುಟುಂಬ ಜೀವನದಲ್ಲಿ ಭಿನ್ನಾಭಿಪ್ರಾಯ ಉಂಟಾಗದಂತೆ ಜಾಗ್ರತೆವಹಿಸಿ.
ಮಕರ ರಾಶಿ
ಬಾಕಿ ಉಳಿದಿರುವ ಪ್ರಮುಖ ಕೆಲಸಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುವುದು. ಕೆಲವೊಂದು ಪ್ರತಿಕೂಲ ಸಂದರ್ಭದಲ್ಲಿ ಬುದ್ಧಿವಂತಿಕೆಯಿಂದ ಬಗೆಹರಿಸಲು ಪ್ರಯತ್ನಿಸಿ.
ವ್ಯಾಪಾರಿಗಳಿಗೆ ಧನ ಲಾಭವಾಗುವುದು. ನೀವು ನಿರುದ್ಯೋಗಿಗಳಾಗಿದ್ದರೆ ಶೀಘ್ರದಲ್ಲಿ ಕೆಲಸ ದೊರೆಯಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯಗಳಿರಬಹುದು. ಆರೋಗ್ಯ ಸಮಸ್ಯೆ ಇದ್ದರೆಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.
ಕುಂಭ ರಾಶಿ
ನೀವು ಹಣ ಉಳಿತಾಯದ ಕಡೆಗೆ ಗಮನಹರಿಸಿ, ಕೆಲಸದ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುವುದು, ಆದ್ದರಿಂದ ವಿಶ್ರಾಂತಿ ಕಡೆಗೆ ಗಮನಹರಿಸಿ. ಕೋಪ ನಿಯಂತ್ರಿಸಿ, ಸಂಗಾತಿಯ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳಿ.
ಮೀನ ರಾಶಿ
ಇಂದು ನಿಮ್ಮ ಕೆಲಸವನ್ನು ಸುಲಭವಾಗಿ ಪೂರ್ಣಗೊಳಿಸಲು ಸಾಧ್ಯವಾಗುವುದು. ಆರ್ಥಿಕವಾಗಿಯೂ ಉತ್ತಮವಾಗಿರಲಿದೆ. ವ್ಯಾಪಾರಿಗಳಿಗೆ ಧನಲಾಭವಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ವೈವಾಹಿಕ ಬದುಕಿನಲ್ಲಿ ಹೊಂದಾಣಿಕೆ, ಪ್ರೀತಿ ಇರಲಿದೆ, ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯಬೇಡ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications