Latest Updates
-
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ!
ದಿನ ಭವಿಷ್ಯ, ಆಗಸ್ಟ್ 17: 12 ರಾಶಿಗಳಿಗೆ ಈ ದಿನ ಹೇಗಿರಲಿದೆ?
ವೈದಿಕಶಾಸ್ತ್ರದ ಪ್ರಕಾರ ಆಗಸ್ಟ್ 17 ದ್ವಾದಶ ರಾಶಿಗಳಿಗೆ ಹೇಗಿದೆ ಎಂದು ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ. ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ, ಹಣದ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ಕೆಲಸದಲ್ಲಿ ವಿಷಯದಲ್ಲಿ ನಿರ್ಲಕ್ಷ್ಯ ಮಾಡಲು ಹೋಗಬೇಡಿ. ಮನೆಯ ವಾತಾವರಣ ಚೆನ್ನಾಗಿರಲಿದೆ. ಆರೋಗ್ಯ ಸಮಸ್ಯೆಯಿದ್ದರೆ ಸುಧಾರಣೆ ಕಂಡು ಬರಲಿದೆ.

ವೃಷಭ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಕೆಲಸ ಕಾರ್ಯಗಳು ಉತ್ತಮವಾಗಿದೆ, ವ್ಯಾಪಾರಿಗಳಿಗೆ ದನ ಲಾಭವಾಗಲಿದೆ. ಮನೆಯಲ್ಲಿ ಕೆಲ ವಿಷಯಕ್ಕೆ ಉಂಟಾದ ಭಿನ್ನಾಭಿಪ್ರಾಯ ಹೆಚ್ಚಾಗಬಹುದು, ನೀವು ಪರಸ್ಪರ ಮಾತನಾಡಿ ಬಗೆಹರಿಸಿಕೊಳ್ಳುವುದು ಒಳ್ಳೆಯದು.
ಮಿಥುನ ರಾಶಿ
ನೀವು ಬೇರೆಯವರ ಮಾತುಗಳನ್ನು ಕೇಳಿ ಮೋಸ ಹೋಗದಂತೆ ಜಾಗ್ರತೆವಹಿಸಿ. ಕೆಲಸ-ಕಾರ್ಯಗಳಿಗೆ ಸಂಬಂಧಿಸಿದ ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ವ್ಯಾಪಾರಿಗಳು ಈ ದಿನ ಗ್ರಾಹಕರ ಜೊತೆ ಕಿರಿಕ್ ಮಾಡಿಕೊಳ್ಳಬೇಡಿ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಚಿಕ್ಕ ಪುಟ್ಟ ಅರೋಗ್ಯ ಸಮಸ್ಯೆಗಳಿರಬಹುದು.
ಕರ್ಕ ರಾಶಿ
ಈ ದಿನ ನಿಮಗೆ ಅಷ್ಟೊಂದು ಅನುಕೂಲಕರವಲ್ಲ, ವೈಯಕ್ತಿಕ ಸಮಸ್ಯೆಗಳು ನಿಮ್ಮ ಕೆಲಸದ ಮೇಲೆ ಕೂಡ ಪ್ರಭಾವ ಬೀರಬಹುದು, ಆರ್ಥಿಕ ಪರಿಸ್ಥಿತಿ ಚೆನ್ನಾಗಿರಲಿದೆ. ಹೂಡಿಕೆ ವಿಷಯದಲ್ಲಿ ಆತುರ ಬೇಡ. ಆಹಾರದ ಅಸ್ವಸ್ಥತೆಗಳಿಂದ ಆರೋಗ್ಯ ಸಂಬಂಧಿತ ಸಮಸ್ಯೆಗಳು ಉಂಟಾಗಬಹುದು.
ಸಿಂಹ ರಾಶಿ
ವೆಚ್ಚಗಳ ನಿರಂತರ ಹೆಚ್ಚಳದಿಂದಾಗಿ, ಹಣಕಾಸಿನ ಪರಿಸ್ಥಿತಿಯು ಹದಗೆಡಬಹುದು. ಇಂದು ಕೆಲಸದ ಸ್ಥಳದಲ್ಲಿ ಯೋಚಿಸದೆ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ.
ಉದ್ಯೋಗಿಗಳಿಗೆ ಹೆಚ್ಚಿನ ಕೆಲಸದ ಒತ್ತಡ ತೆಗೆದುಕೊಳ್ಳದಂತೆ ಜಾಗ್ರತೆವಹಿಸಿ. ಕುಟುಂಬದಲ್ಲಿ ಕೆಲ ಭಿನ್ನಾಭಿಪ್ರಾಯಗಳಿರಬಹುದು. ಬಿಡುವಿಲ್ಲದ ಕೆಲಸದಿಂದ ಅಯಾಸಕಾಡಬಹುದು.
ಕನ್ಯಾ ರಾಶಿ
ಕೆಲವು ಪೂರ್ವಜರ ಆಸ್ತಿಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರೆ ಈ ಅವಧಿ ಶುಭವಾಗಿದೆ. ವ್ಯಾಪಾರಿಗಳಿಗೆ ತುಂಬಾನೇ ಆರ್ಥಿಕ ಲಾಭ ದೊರೆಯಲಿದೆ.
ನಿಮ್ಮ ಸಂಗಾತಿಯೊಂದಿಗಿನ ಸಂಬಂಧದಲ್ಲಿ ಪ್ರೀತಿ ಮತ್ತು ಮಾಧುರ್ಯ ಹೆಚ್ಚಾಗುತ್ತದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಖಾಲಿ ಹೊಟ್ಟೆಯಲ್ಲಿ ತುಮಬಾ ಹೊತ್ತು ಇರಬೇಡಿ.
ತುಲಾ ರಾಶಿ
ನಿಮ್ಮ ಕೆಲಸದ ಕ್ಷೇತ್ರದಲ್ಲಿ ಉತ್ತಮ ಯಶಸ್ಸನ್ನು ಪಡೆದ ನಂತರ ನೀವು ತುಂಬಾ ಧನಾತ್ಮಕ ಭಾವನೆ ಹೊಂದುತ್ತೀರಿ. ಹಣಕ್ಕೆ ಸಂಬಂಧಿಸಿದ ಚಿಂತೆಗಳು ದೂರವಾಗುತ್ತವೆ. ಆರ್ಥಿಕ ಲಾಭದ ಸಾಧ್ಯತೆಗಳಿವೆ. ಸಾಲ ಪಡೆಯುವುದಾದರೆ ಹೆಚ್ಚಿನ ಹಣ ಪಡೆಯಬೇಡಿ. ಮನೆಯಲ್ಲಿ ಹಿರಿಯರ ಮನಸ್ಸು ನೋಯಿಸಬೇಡಿ. ಆರೋಗ್ಯ ಸುಧಾರಿಸುತ್ತದೆ.
ವೃಶ್ಚಿಕ ರಾಶಿ
ಈ ದಿನ ನೀವು ತಾಳ್ಮೆಯಿಂದಿರಬೇಕು. ಕೆಲಸದ ಸ್ಥಳದಲ್ಲಿ ಕೆಲಸ ಸಮಸ್ಯೆವಿರಬಹುದು, ಕೆಲಸದ ಹೊರೆಯಿಂದ ಮಾನಸಿಕ ಒತ್ತಡ ಹೆಚ್ಚಾಗುವುದು, ಕುಟುಂಬ ಜೀವನದಲ್ಲಿಯೂ ಸಂಗಾತಿಯ ಜೊತೆ ಕೋಪದಿಂದ ವರ್ತಿಸಬೇಡಿ. ಆರೋಗ್ಯದ ಕಡೆಗೆ ಗಮನಹರಿಸಿ.
ಧನು ರಾಶಿ
ನೀವಾಡುವ ಮಾತಿನಿಂದ ಇತರರ ಮನಸ್ಸು ನೋಯಿಸಬೇಡಿ. ಕಾನೂನು ವಿಷಯಗಳಲ್ಲಿ ನಿರ್ಲಕ್ಷ್ಯ ಬೇಡ. ಮನೆಯಲ್ಲಿ ಉತ್ತಮ ವಾತಾವರಣ ಇರುತ್ತದೆ. ಪ್ರಣಯ ಜೀವನದಲ್ಲಿ ನಡೆಯುತ್ತಿರುವ ಸಮಸ್ಯೆಗಳು ಪರಿಹರಿಸಲ್ಪಡುತ್ತವೆ ಮತ್ತು ನಿಮ್ಮ ಸಂಬಂಧವು ಸುಧಾರಿಸುತ್ತದೆ. ಆರೋಗ್ಯ ಸಮಸ್ಯೆಗಳಿರಬಹುದು.
ಮಕರ ರಾಶಿ
ಮನೆಯಲ್ಲಿ ಉತ್ತಮ ವಾತಾವರಣ ಇರುತ್ತದೆ. ಆರೋಗ್ಯದ ಕಡೆಗೆ ತುಂಬಾ ಗಮನಹರಿಸಿ. ಒಡಹುಟ್ಟಿದವರೊಂದಿಗಿನ ಸಂಬಂಧದಲ್ಲಿ ಮಾಧುರ್ಯ ಹೆಚ್ಚಾಗುತ್ತದೆ.
ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.
ಕುಂಭ ರಾಶಿ
ನಿಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ನಡುವೆ ನೀವು ಸಮತೋಲನವನ್ನು ಕಾಯ್ದುಕೊಳ್ಳಬೇಕು. ಉದ್ಯೋಗಿಗಳಿಗೆ ದಿನವು ಸವಾಲಿನ ದಿನವಾಗಿರುತ್ತದೆ. ರಸ್ಥಗಿತಗೊಂಡ ಹಣಕಾಸಿನ ವಹಿವಾಟುಗಳನ್ನು ಪೂರ್ಣಗೊಳಿಸಬಹುದು. ಲಾಭ ಗಳಿಸುವ ಅವಕಾಶವೂ ಇರುತ್ತದೆ.
ವೈವಾಹಿಕ ಜೀವನದಲ್ಲಿ ಏರಿಳಿತಗಳಿರಬಹುದು, ಆರೋಗ್ಯದ ಕಡೆಗೆ ಗಮನಹರಿಸಿ.
ಮೀನ ರಾಶಿ
ಈ ದಿನ ನಿಮಗೆ ಶುಭವಾಗಿದೆ. ವ್ಯಾಪಾರಿಗಳಿಗೆ ಈ ದಿನ ತುಂಬಾ ಶುಭವಾಗಿದೆ, ಧನಲಾಭವಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಈ ದಿನ ನಿಮ್ಮ ಆರೋಗ್ಯ ಕೂಡ ಉತ್ತಮವಾಗಿರುತ್ತದೆ. ಈ ದಿನವನ್ನು ನೀವು ಲವಲವಿಕೆಯಿಂದ ನಡೆದುಕೊಳ್ಳುತ್ತೀರಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











